ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಸ್ಲಾವಿಯಾ ಸೆಡಾನ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಕಾರು ಪ್ರಮುಖ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಭಾರತದಲ್ಲಿ ರ‍್ಯಾಪಿಡ್ ಸೆಡಾನ್ ಮಾದರಿಯ ಮಾರಾಟ ಕೊನೆಗೊಳಿಸುವ ಉದ್ದೇಶದಿಂದ ಹೊಸ ಸ್ಲಾವಿಯಾ ಪರಿಚಯಿಸಲಾಗಿದ್ದು, ಸ್ಲಾವಿಯಾ ಕಾರು ಬಿಡುಗಡೆಯಾಗಿರುವುದರಿಂದ ಶೀಘ್ರದಲ್ಲಿಯೇ ರ‍್ಯಾಪಿಡ್ ಸೆಡಾನ್ ಮಾರಾಟವು ಸ್ಥಗಿತಗೊಳ್ಳಲಿದೆ. ರ‍್ಯಾಪಿಡ್ ಮಾದರಿಗಿಂತಲೂ ಹೆಚ್ಚು ಸುಧಾರಿತ ತಂತ್ರಜ್ಞಾನ ಮತ್ತು ಬಲಿಷ್ಠ ಎಂಜಿನ್ ಆಯ್ಕೆ ಹೊಂದಿರುವ ಸ್ಲಾವಿಯಾ ಮಾದರಿಯು ಪ್ರಮುಖ ಮಧ್ಯಮ ಕ್ರಮಾಂಕದ ಸೆಡಾನ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಸ್ಕೋಡಾ ಕಂಪನಿಯು ಸ್ಲಾವಿಯಾ ಸೆಡಾನ್ ಮಾದರಿಯನ್ನು 1.0-ಲೀಟರ್ ಟಿಎಸ್ಐ ಮತ್ತು 1.5 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಗ್ರಾಹಕರು ತಮ್ಮ ಆದ್ಯತೆಗೆ ಅನುಗುಣವಾಗಿ ವಿವಿಧ ಎಂಜಿನ್ ಮಾದರಿಗಳನ್ನು ಆಯ್ಕೆ ಮಾಡಬಹುದಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಸ್ಲಾವಿಯಾ ಕಾರು ಮಾದರಿಯು ಆಕ್ಟಿವಾ, ಆ್ಯಂಬಿಷನ್ ಮತ್ತು ಸ್ಟೈಲ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರುಗಳಲ್ಲಿ 1.0 ಲೀಟರ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15.39 ಲಕ್ಷ ಬೆಲೆ ಹೊಂದಿದ್ದರೆ 1.5 ಲೀಟರ್ ಮಾದರಿಯು ಆರಂಭಿಕವಾಗಿ ರೂ. 16.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.79 ಲಕ್ಷ ಬೆಲೆ ಹೊಂದಿದೆ.

ಸ್ಲಾವಿಯಾ 1.0 ಲೀಟರ್ ಮಾದರಿ
ವೆರಿಯೆಂಟ್ ಬೆಲೆ
ಆಕ್ಟಿವಾ ಮ್ಯಾನುವಲ್ ರೂ. 10.69 ಲಕ್ಷ
ಆ್ಯಂಬಿಷನ್ ಮ್ಯಾನುವಲ್ ರೂ. 12.39 ಲಕ್ಷ
ಆ್ಯಂಬಿಷನ್ ಆಟೋಮ್ಯಾಟಿಕ್ ರೂ. 13.59 ಲಕ್ಷ
ಸ್ಟೈಲ್ ಮ್ಯಾನುವಲ್ ರೂ. 13.59 ಲಕ್ಷ
ಸ್ಟೈಲ್ ಮ್ಯಾನುವಲ್ ಜೊತೆ ಸನ್‌ರೂಫ್ ರೂ. 13.99 ಲಕ್ಷ
ಸ್ಟೈಲ್ ಆಟೋಮ್ಯಾಟಿಕ್ ಜೊತೆ ಸನ್‌ರೂಫ್ ರೂ. 15.39 ಲಕ್ಷ
ಸ್ಲಾವಿಯಾ 1.5 ಲೀಟರ್ ಮಾದರಿ
ವೆರಿಯೆಂಟ್ ಬೆಲೆ
ಸ್ಟೈಲ್ ಮ್ಯಾನುವಲ್ ಜೊತೆ ಸನ್‌ರೂಫ್ ರೂ. 16.19 ಲಕ್ಷ
ಸ್ಟೈಲ್ ಆಟೋಮ್ಯಾಟಿಕ್ ಜೊತೆ ಸನ್‌ರೂಫ್ ರೂ. 17.79 ಲಕ್ಷ
ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

1.0 ಲೀಟರ್ ಮಾದರಿಯು ಆಕ್ಟಿವಾ, ಆ್ಯಂಬಿಷನ್ ಮತ್ತು ಸ್ಟೈಲ್ ವೆರಿಯೆಂಟ್‌‌ಗಳಲ್ಲಿ ಖರೀದಿಗೆ ಲಭ್ಯವಿದ್ದರೆ 1.5 ಲೀಟರ್ ಮಾದರಿಯು ಕೇವಲ ಸ್ಟೈಲ್ ವೆರಿಯೆಂಟ್‌ನಲ್ಲಿ ಖರೀದಿಗೆ ಲಭ್ಯವಿದ್ದು, 1.5 ಲೀಟರ್ ಮಾದರಿಯು 1.0 ಲೀಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಹೊಂದಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಹೊಸ ಕಾರಿನಲ್ಲಿ 1.0 ಲೀಟರ್ ಮಾದರಿಯು ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, 115 ಬಿಹೆಚ್‍ಪಿ ಪವರ್ ಮತ್ತು 178 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

1..5 ಲೀಟರ್ ಮಾದರಿಯು ನಾಲ್ಕು ಸಿಲಿಂಡರ್ ಎಂಜಿನ್‌ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 150 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಸ್ಲಾವಿಯಾ ಸೆಡಾನ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವೆರ್ನಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು 4,541 ಎಂಎಂ ಉದ್ದ, 1,752 ಅಗಲ ಮತ್ತು 1,487 ಎಂಎಂ ಎತ್ತರ ಮತ್ತು 2,651 ಎಂಎಂ ವ್ಹೀಲ್‌ಬೇಸ್‌ನೊಂದಿಗೆ 560 ಲೀಟರ್ ನಷ್ಟು ಬೂಟ್‌‌ಸ್ಪೆಸ್ ಹೊಂದಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಹೊಸ ಕಾರು ಟೊರ್ನಾಟ್ ರೆಡ್, ಕ್ರಿಸ್ಟಲ್ ಬ್ಲ್ಯೂ, ಕ್ಯಾಂಡಿ ವೈಟ್, ರೆಫ್ಲೆಕ್ಸರ್ ಸಿಲ್ವರ್ ಮತ್ತು ಕಾರ್ಬನ್ ಸ್ಟೀಲ್ ಬಣ್ಣದಲ್ಲಿ ಖರೀದಿಗೆ ಲಭ್ಯವಿರಲಿದ್ದು, ಸಿಗ್ನಿಚೆರ್ ಬಟರ್‌ಪ್ಲೈ ಗ್ರಿಲ್, ಸ್ಲಿಕ್ ಹೆಡ್‌ಲ್ಯಾಂಪ್, ಎಲ್ ಆಕಾರದಲ್ಲಿರುವ ಡೇ ಟೈಮ್ ರನ್ನಿಂಗ್ ಲ್ಯಾಂಪ್ ಸ್ಟ್ರೀಪ್, ಸ್ಪೋರ್ಟಿ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್ ಹೌಸ್, ಎಲ್ಇಡಿ ಟೈಲ್ ಲೈಟ್ಸ್‌ನೊಂದಿಗೆ ಒಳಾಂಗಣವು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಹೊಸ ಕಾರಿನ ಒಳಾಂಗಣ ಸೌಲಭ್ಯವು ಆಕ್ಟಿವಿಯಾ ಸೆಡಾನ್ ಮಾದರಿಯನ್ನು ನೆನಪಿಸಲಿದ್ದು, 10 ಇಂಚಿನ ಇನ್ಪೋಟೈನ್‌ಮೆಂಟ್, 8 ಇಂಚಿನ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮೈ ಸ್ಕೋಡಾ ಕಾರ್ ಕನೆಕ್ಟೆಡ್ ನೊಂದಿಗೆ ವೆಂಟಿಲೆಟೆಡ್ ಲೆದರ್ ಆಸನಗಳು, ಎಲೆಕ್ಟ್ರಿಕ್ ಸನ್‌ರೂಫ್, ವೈರ್‌ಲೆಸ್ ಚಾರ್ಜರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ, ಆಟೋ ಡಿಮ್ಮಿಂಗ್ ಹೊಂದಿರುವ ರಿಯರ್ ವ್ಯೂ ಮಿರರ್ ಸೇರಿದಂತೆ ಪ್ರಮುಖ ಪ್ರೀಮಿಯಂ ಫೀಚರ್ಸ್ ಹೊಂದಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದ್ದು, ಸ್ಲಾವಿಯಾ ಹೈ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್‌ಗಳು ಇಎಸ್‌ಸಿ, ಇಡಿಎಸ್, ಟೈರ್ ಪ್ರೆಷರ್ ಮಾನಿಟರ್, ಹಿಲ್ ಹೋಲ್ಡ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಮಲ್ಟಿ ಕೂಲಿಷನ್ ಬ್ರೇಕ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ಸ್, ರೈನ್ ಸೆನ್ಸಿಂಗ್ ವೈಪ್ಸ್ ಸೇರಿದಂತೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಸ್ಕೋಡಾ ಕಂಪನಿಯು 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಹೈ ಎಂಡ್ ಸ್ಲಾವಿಯಾದಲ್ಲಿ 1.0 ಲೀಟರ್ ಮಾದರಿಗಿಂತಲೂ ಇನ್ನು ಹೆಚ್ಚಿನ ಮಟ್ಟದ ಕೆಲವು ಫೀಚರ್ಸ್‌ಗಳನ್ನು ಜೋಡಣೆ ಮಾಡಲಿದ್ದು, ಬೆಲೆಯೂ ಕೂಡಾ 1.0 ಲೀಟರ್ ಮಾದರಿಗಿಂತಲೂ ತುಸು ದುಬಾರಿಯಾಗಿಲಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಹೊಸ ಸ್ಲಾವಿಯಾ ಸೆಡಾನ್ ಆವೃತ್ತಿಯನ್ನು ಸ್ಕೋಡಾ ಕಂಪನಿಯು ಫೋಕ್ಸ್‌ವ್ಯಾಗನ್ ಕಂಪನಿ ಜೊತೆಗಿನ ಸಹಭಾಗಿತ್ವ ಯೋಜನೆ ಅಡಿ ಅಭಿವೃದ್ದಿಗೊಳಿಸಿದ್ದು, ಸ್ಕೋಡಾ ಕಂಪನಿಯು ಫೋಕ್ಸ್‌ವ್ಯಾಗನ್ ಕಂಪನಿಗಳು ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆ ಅಡಿಯಲ್ಲಿ ಒಟ್ಟು ನಾಲ್ಕು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆ ಹೊಂದಿವೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಹೊಸ ಯೋಜನೆಯಡಿ ಈಗಾಗಲೇ ಮೂರು ಕಾರು ಮಾದರಿಗಳು ಬಿಡುಗಡೆಗೊಂಡಿದ್ದು, ಸ್ಕೋಡಾ ಕಂಪನಿಯು ಕುಶಾಕ್ ಮತ್ತು ಸ್ಲಾವಿಯಾ ಮಾದರಿಯನ್ನು ಬಿಡುಗಡೆ ಮಾಡಿದೆ. ಫೋಕ್ಸ್‌ವ್ಯಾಗನ್ ಕಂಪನಿಯು ಸಹ ಹೊಸ ಯೋಜನೆಯ ಭಾಗವಾಗಿ ಟೈಗುನ್ ಮಾದರಿಯನ್ನು ಬಿಡುಗಡೆಗೊಳಿಸಿದ್ದು, ಸ್ಲಾವಿಯಾ ಮಾದರಿಯನ್ನು ಆಧರಿಸಿರುವ ವಿರ್ಟಸ್ ಕೂಡಾ ಶೀಘ್ರದಲ್ಲಿಯೇ ಮಾರುಕಟ್ಟೆ ಪ್ರವೇಶಿಸಲಿವೆ.

ವಿನೂತನ ಫೀಚರ್ಸ್‌ಗಳೊಂದಿಗೆ ಸ್ಲಾವಿಯಾ 1.5 ವರ್ಷನ್ ಬಿಡುಗಡೆ ಮಾಡಿದ ಸ್ಕೋಡಾ

ಕುಶಾಕ್, ಟೈಗುನ್ ಮತ್ತು ಸ್ಲಾವಿಯಾ, ವಿರ್ಟಸ್ ಮಾದರಿಗಳು ಬ್ರಾಂಡ್ ವಿನ್ಯಾಸ ಹೊರತುಪಡಿಸಿ ಒಂದೇ ಮಾದರಿಯ ಎಂಜಿನ್ ಆಯ್ಕೆ ಹೊಂದಿದ್ದು, ಹೊಸ ಮಾದರಿಗಳೊಂದಿಗೆ ಸ್ಕೋಡಾ ಮತ್ತು ಫೋಕ್ಸ್‌ವ್ಯಾಗನ್ ಕಂಪನಿಗಳು ಭಾರತದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

Most Read Articles

Kannada
Read more on ಸ್ಕೋಡಾ skoda
English summary
Skoda slavia 1 5 tsi version launched at rs 16 19 lakh details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X