Just In
- 8 hrs ago
ಕ್ರ್ಯಾಶ್ ಟೆಸ್ಟ್ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
- 8 hrs ago
ಕೇವಲ 40 ಸಾವಿರ ರೂ. ಬೆಲೆಗೆ ಬಿಡುಗಡೆಯಾಗಿದೆ 100 ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್
- 10 hrs ago
ಎರ್ಟಿಗಾದಲ್ಲಿ ಹೊಸ ಸಿಎನ್ಜಿ ರೂಪಾಂತರಗಳನ್ನು ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- 10 hrs ago
ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್
Don't Miss!
- Sports
IPL 2022: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ಟ್ರೋಫಿ ಕನಸು ಜೀವಂತ
- News
ವಿಮಾನ ಇಂಧನ ತೆರಿಗೆ ಕಡಿತ ಮಾಡುತ್ತಾ ಕೇಂದ್ರ ಸರ್ಕಾರ?
- Movies
ಹಿಜಾಬ್ ಧರಿಸಿ ಮುಸ್ಲಿಂ ಮಹಿಳೆಯರ ಪಾತ್ರ ಮಾಡುತ್ತಿರುವ ಸ್ಟಾರ್ ನಟಿಯರಿವರು
- Lifestyle
12 ಲಕ್ಷ ಖರ್ಚು ಮಾಡಿದ ನಾಯಿಯಾದ ಜಪಾನಿನ ವ್ಯಕ್ತಿ!
- Finance
ಮೇ 25ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Technology
ಅಪ್ಲಿಕೇಶನ್ ಡೆವಲಪರ್ಗಳಿಗೆ ಮತ್ತೊಮ್ಮೆ ಸಂದೇಶ ಕಳುಹಿಸಿದ ಆಪಲ್ ಕಂಪೆನಿ!
- Education
ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೂ ಮುನ್ನ ಸ್ಕೋಡಾ ಸ್ಲಾವಿಯಾ ಸೆಡಾನ್ ಕಾರಿನ ಬೆಲೆ ಮಾಹಿತಿ ಬಹಿರಂಗ
ಸ್ಕೋಡಾ(Skoda) ಕಂಪನಿಯು ಸ್ಲಾವಿಯಾ(Slavia) ಸೆಡಾನ್ ಮಾದರಿಯನ್ನು ಇದೇ ತಿಂಗಳು 28ರಂದು ಬಿಡುಗಡೆಯಾಗುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಹೊಸ ಕಾರಿನ ಬೆಲೆ ಮಾಹಿತಿಯು ಸೋರಿಕೆಯಾಗಿದೆ.

ಹೊಸ ಸ್ಲಾವಿಯಾ ಸೆಡಾನ್ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಮತ್ತು ಆಕರ್ಷಕ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಸ್ಲಾವಿಯಾ ಸೆಡಾನ್ ಆವೃತ್ತಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಜೊತೆಗೆ ತುಸು ದುಬಾರಿಯಾಗಿರಲಿದೆ.

ಲಭ್ಯವಿರುವಾಗಿರುವ ಮಾಹಿತಿಯಂತೆ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.80 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.70 ಲಕ್ಷ ಬೆಲೆ ಹೊಂದಿರಲಿದೆ ಎನ್ನಲಾಗಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಪ್ರೀಮಿಯಂ ಮಾದರಿಯಾಗಿರಲಿದೆ.

ಸ್ಲಾವಿಯಾ ಕಾರು ಹೊಸದಾಗಿ ಬಿಡುಗಡೆಯಾಗಿರುವ ಕುಶಾಕ್ ಮಾದರಿಯಂತೆ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ 1.0-ಲೀಟರ್ ಟಿಎಸ್ಐ ಮೂರು-ಸಿಲಿಂಡರ್ ಎಂಜಿನ್ ಮತ್ತು 1.5-ಲೀಟರ್ ನಾಲ್ಕು-ಸಿಲಿಂಡರ್ ಟಿಎಸ್ಐ ಎಂಜಿನ್ ಜೊತೆಗೆ ಎರಡೂ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿರಲಿದೆ.

ಕಂಪನಿಯು ಆಕ್ಟಿವಾ ಮತ್ತು ಆಂಬಿಷನ್ ಮಾದರಿಗಳಲ್ಲಿ 1.0 ಲೀಟರ್ ಪೆಟ್ರೋಲ್ ಮಾದರಿಯನ್ನು ಮತ್ತು ಸ್ಟೈಲ್ ವೆರಿಯೆಂಟ್‌ನಲ್ಲಿ ಮಾತ್ರವೇ 1.0 ಲೀಟರ್ ಮತ್ತು 1.5 ಲೀಟರ್ ಪೆಟ್ರೋಲ್ ಮಾದರಿಯನ್ನು ಮಾರಾಟ ಮಾಡಲಿದೆ.

ಆಕ್ಟಿವಾ ಮಾದರಿಯು 1.0 ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, ಆಂಬಿಷನ್ ಮಾದರಿಯು 1.0-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರಲಿದೆ. ಇದರಲ್ಲಿ ಟಾಪ್ ಎಂಡ್ ಮಾದರಿಯಾಗಿರುವ ಸ್ಟೈಲ್ ಮಾದರಿಯಲ್ಲಿ ಮಾತ್ರವೇ 1.0-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಅಥವಾ 7 ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್ ಆಯ್ಕೆ ಹೊಂದಿರಲಿದೆ.

ಈ ಮೂಲಕ ಹೊಸ ಕಾರಿನ 1.0-ಲೀಟರ್ ಟಿಎಸ್ಐ ಮೂರು-ಸಿಲಿಂಡರ್ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 178 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದ್ದರೆ 1.5-ಲೀಟರ್ ಎಂಜಿನ್ ಮಾದರಿಯು 150 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

1.0-ಲೀಟರ್ ಟರ್ಬೊ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.80 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15.75 ಲಕ್ಷ ಬೆಲೆ ಹೊಂದಿದ್ದರೆ 1.5 ಲೀಟರ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.70 ಲಕ್ಷ ಬೆಲೆ ಹೊಂದಿದೆ.

ಸ್ಲಾವಿಯಾ ಕಾರು ಮಾದರಿಗಾಗಿ ಈಗಾಗಲೇ ಬುಕ್ಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಮುಂದಿನ ವಾರವೇ ಅಧಿಕೃತವಾಗಿ ಟೆಸ್ಟ್ ಡ್ರೈವ್ ಲಭ್ಯವಾಗಲಿದ್ದು, ಮಾರ್ಚ್ ಮಧ್ಯಂತರದಲ್ಲಿ ಹೊಸ ಕಾರುಗಳ ವಿತರಣೆಯು ಆರಂಭವಾಗಲಿದೆ.

ಹೊಸ ಕಾರು ಆಕ್ಟಿವಾ, ಆಂಬಿಷನ್ ಮತ್ತು ಸ್ಟೈಲ್ ಎನ್ನುವ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಸ್ಲಾವಿಯಾ ಸೆಡಾನ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವೆರ್ನಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಹೊಸ ಕಾರು 4,541 ಎಂಎಂ ಉದ್ದ, 1,752 ಅಗಲ ಮತ್ತು 1,487 ಎಂಎಂ ಎತ್ತರ ಮತ್ತು 2,651 ಎಂಎಂ ವ್ಹೀಲ್‌ಬೇಸ್‌ನೊಂದಿಗೆ 560 ಲೀಟರ್ ಬೂಟ್‌ಸ್ಪೆಸ್ ಹೊಂದಿದ್ದು, ಹೊಸ ಕಾರು ಹೋಂಡಾ ಸಿಟಿ ಸೆಡಾನ್ ಮಾದರಿಯಷ್ಟೇ ಉದ್ದಳತೆಯೊಂದಿಗೆ ತುಸು ಅಗಲವಾಗಿರುವುದಲ್ಲದೆ 51 ಎಂಎಂ ನಷ್ಟು ಹೆಚ್ಚುವರಿ ವ್ಹೀಲ್ ಬೆಸ್ ಹಾಗೂ ಹೆಚ್ಚುವರಿ 15 ಲೀಟರ್‌ನಷ್ಟು ಬೂಟ್‌ಸ್ಪೆಸ್ ಹೊಂದಿದೆ.

ಹೊಸ ಕಾರು ಟೊರ್ನಾಟ್ ರೆಡ್, ಕ್ರಿಸ್ಟಲ್ ಬ್ಲ್ಯೂ, ಕ್ಯಾಂಡಿ ವೈಟ್, ರೆಫ್ಲೆಕ್ಸರ್ ಸಿಲ್ವರ್ ಮತ್ತು ಕಾರ್ಬನ್ ಸ್ಟೀಲ್ ಬಣ್ಣದಲ್ಲಿ ಖರೀದಿಗೆ ಲಭ್ಯವಿರಲಿದ್ದು, ಸಿಗ್ನಿಚೆರ್ ಬಟರ್‌ಪ್ಲೈ ಗ್ರಿಲ್, ಸ್ಲಿಕ್ ಹೆಡ್‌ಲ್ಯಾಂಪ್, ಎಲ್ ಆಕಾರದಲ್ಲಿರುವ ಡೇ ಟೈಮ್ ರನ್ನಿಂಗ್ ಲ್ಯಾಂಪ್ ಸ್ಟ್ರೀಪ್, ಸ್ಪೋರ್ಟಿ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್ ಹೌಸ್, ಎಲ್ಇಡಿ ಟೈಲ್ ಲೈಟ್ಸ್‌ನೊಂದಿಗೆ ಒಳಾಂಗಣವು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

ಹೊಸ ಕಾರಿನ ಒಳಾಂಗಣ ಸೌಲಭ್ಯವು ಆಕ್ಟಿವಿಯಾ ಸೆಡಾನ್ ಮಾದರಿಯನ್ನು ನೆನಪಿಸಲಿದ್ದು, 10 ಇಂಚಿನ ಇನ್ಪೋಟೈನ್‌ಮೆಂಟ್, 8 ಇಂಚಿನ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮೈ ಸ್ಕೋಡಾ ಕಾರ್ ಕನೆಕ್ಟೆಡ್ ನೊಂದಿಗೆ ವೆಂಟಿಲೆಟೆಡ್ ಲೆದರ್ ಆಸನಗಳು, ಎಲೆಕ್ಟ್ರಿಕ್ ಸನ್‌ರೂಫ್, ವೈರ್‌ಲೆಸ್ ಚಾರ್ಜರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ, ಆಟೋ ಡಿಮ್ಮಿಂಗ್ ಹೊಂದಿರುವ ರಿಯರ್ ವ್ಯೂ ಮಿರರ್ ಸೇರಿದಂತೆ ಪ್ರಮುಖ ಪ್ರೀಮಿಯಂ ಫೀಚರ್ಸ್ ಹೊಂದಿದೆ.

ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದ್ದು, ಸ್ಲಾವಿಯಾ ಹೈ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್‌ಗಳು ಇಎಸ್‌ಸಿ, ಇಡಿಎಸ್, ಟೈರ್ ಪ್ರೆಷರ್ ಮಾನಿಟರ್, ಹಿಲ್ ಹೋಲ್ಡ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಮಲ್ಟಿ ಕೂಲಿಷನ್ ಬ್ರೇಕ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ಸ್, ರೈನ್ ಸೆನ್ಸಿಂಗ್ ವೈಪ್ಸ್ ಸೇರಿದಂತೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದೆ.