Just In
- 10 hrs ago
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- 12 hrs ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 14 hrs ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 1 day ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
Don't Miss!
- Sports
ಐರ್ಲೆಂಡ್-ಭಾರತ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ: ಟಾಸ್ ಗೆದ್ದಿರುವ ಟೀಂ ಇಂಡಿಯಾ
- Movies
ಅಮ್ಮನಿಂದಲೇ ಮಗಳಿಗೆ ಮಹಾ ಮೋಸ!
- News
ಮಹಾ ಬಂಡಾಯ: ಸುಪ್ರೀಂಕೋರ್ಟ್ ಅಂಗಳಕ್ಕೆ 16 ಶಾಸಕರ ಅನರ್ಹತೆ ಚೆಂಡು!
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Technology
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿ ಬೇಡಿಕೆ ಪಡೆದುಕೊಂಡ ಸ್ಕೋಡಾ ಸ್ಲಾವಿಯಾ
ಸ್ಕೋಡಾ ಇಂಡಿಯಾ ಕಂಪನಿಯು ಹೊಸ ಸ್ಲಾವಿಯಾ ಸೆಡಾನ್ ಮಾದರಿಯ ಮೂಲಕ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಬಿಡುಗಡೆಗೊಂಡ ಮೊದಲ ತಿಂಗಳಿನಲ್ಲಿಯೇ ಬರೋಬ್ಬರಿ 10 ಸಾವಿರ ಬುಕಿಂಗ್ ಪಡೆದುಕೊಂಡಿದೆ.

ಭಾರತದಲ್ಲಿ ರ‍್ಯಾಪಿಡ್ ಸೆಡಾನ್ ಬದಲಾಗಿ ಸ್ಲಾವಿಯಾ ಮಾದರಿಯನ್ನು ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಿರುವ ಸ್ಕೋಡಾ ಕಂಪನಿಯು ಹೊಸ ಕಾರನ್ನು ಬಿಡುಗಡೆ ಮಾಡಿದ ಮೊದಲ ತಿಂಗಳಿನಲ್ಲಿಯೇ ಬರೋಬ್ಬರಿ 10 ಸಾವಿರ ಬುಕಿಂಗ್ ಪಡೆದುಕೊಂಡಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿತರಣೆ ಆರಂಭಿಸಿರುವ ಕಂಪನಿಯು ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸಿದೆ.

ಹೊಸ ಕಾರನ್ನು ಸ್ಕೋಡಾ ಕಂಪನಿಯು ಫೋಕ್ಸ್‌ವ್ಯಾಗನ್ ಜೊತೆಗೂಡಿ ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆ ಅಡಿ ಬಿಡುಗಡೆ ಮಾಡಿದ್ದು, ಹೊಸ ಯೋಜನೆ ಅಡಿ ಒಟ್ಟು ನಾಲ್ಕು ಹೊಸ ಕಾರುಗಳನ್ನು ಪರಿಚಯಿಸಲಾಗಿದೆ.

ಸಹಭಾಗಿತ್ವ ಯೋಜನೆ ಅಡಿ ಬಿಡುಗಡೆ ಮಾಡಲಾದ ಕಾರುಗಳಲ್ಲಿ ಸ್ಲಾವಿಯಾ ಮಾದರಿಯು ಕೂಡಾ ಒಂದಾಗಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆಗೆ ಗರಿಷ್ಠ ಸುರಕ್ಷಾ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಸ್ಲಾವಿಯಾ ಸೆಡಾನ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವೆರ್ನಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ 1.0-ಲೀಟರ್ ಟಿಎಸ್ಐ ಮತ್ತು 1.5 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳನ್ನು ಅಭಿವೃದ್ದಿಗೊಳಿಸಲಾಗಿದೆ.

ಆಕ್ಟಿವಾ, ಆ್ಯಂಬಿಷನ್ ಮತ್ತು ಸ್ಟೈಲ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿರುವ ಸ್ಲಾವಿಯಾ ಹೊಸ ಕಾರಿನಲ್ಲಿ 1.0 ಲೀಟರ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15.39 ಲಕ್ಷ ಬೆಲೆ ಹೊಂದಿದ್ದರೆ 1.5 ಲೀಟರ್ ಮಾದರಿಯು ಆರಂಭಿಕವಾಗಿ ರೂ. 16.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.79 ಲಕ್ಷ ಬೆಲೆ ಹೊಂದಿದೆ.

1.0 ಲೀಟರ್ ಮಾದರಿಯು ಆಕ್ಟಿವಾ, ಆ್ಯಂಬಿಷನ್ ಮತ್ತು ಸ್ಟೈಲ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದರೆ 1.5 ಲೀಟರ್ ಮಾದರಿಯು ಕೇವಲ ಸ್ಟೈಲ್ ವೆರಿಯೆಂಟ್‌ನಲ್ಲಿ ಖರೀದಿಗೆ ಲಭ್ಯವಿದ್ದು, 1.5 ಲೀಟರ್ ಮಾದರಿಯು 1.0 ಲೀಟರ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಹೊಂದಿದೆ.

ಹೊಸ ಕಾರಿನಲ್ಲಿ 1.0 ಲೀಟರ್ ಮಾದರಿಯು ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, 115 ಬಿಹೆಚ್‍ಪಿ ಪವರ್ ಮತ್ತು 178 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

1.5 ಲೀಟರ್ ಮಾದರಿಯು ನಾಲ್ಕು ಸಿಲಿಂಡರ್ ಎಂಜಿನ್‌ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದು, 150 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಹೊಸ ಕಾರು ಟೊರ್ನಾಟ್ ರೆಡ್, ಕ್ರಿಸ್ಟಲ್ ಬ್ಲ್ಯೂ, ಕ್ಯಾಂಡಿ ವೈಟ್, ರೆಫ್ಲೆಕ್ಸರ್ ಸಿಲ್ವರ್ ಮತ್ತು ಕಾರ್ಬನ್ ಸ್ಟೀಲ್ ಬಣ್ಣದಲ್ಲಿ ಖರೀದಿಗೆ ಲಭ್ಯವಿರಲಿದ್ದು, ಸಿಗ್ನಿಚೆರ್ ಬಟರ್‌ಪ್ಲೈ ಗ್ರಿಲ್, ಸ್ಲಿಕ್ ಹೆಡ್‌ಲ್ಯಾಂಪ್, ಎಲ್ ಆಕಾರದಲ್ಲಿರುವ ಡೇ ಟೈಮ್ ರನ್ನಿಂಗ್ ಲ್ಯಾಂಪ್ ಸ್ಟ್ರೀಪ್, ಸ್ಪೋರ್ಟಿ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್ ಹೌಸ್, ಎಲ್ಇಡಿ ಟೈಲ್ ಲೈಟ್ಸ್‌ನೊಂದಿಗೆ ಒಳಾಂಗಣವು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

ಹೊಸ ಕಾರಿನ ಒಳಾಂಗಣ ಸೌಲಭ್ಯವು ಆಕ್ಟಿವಿಯಾ ಸೆಡಾನ್ ಮಾದರಿಯನ್ನು ನೆನಪಿಸಲಿದ್ದು, 10 ಇಂಚಿನ ಇನ್ಪೋಟೈನ್‌ಮೆಂಟ್, 8 ಇಂಚಿನ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮೈ ಸ್ಕೋಡಾ ಕಾರ್ ಕನೆಕ್ಟೆಡ್ ನೊಂದಿಗೆ ವೆಂಟಿಲೆಟೆಡ್ ಲೆದರ್ ಆಸನಗಳು, ಎಲೆಕ್ಟ್ರಿಕ್ ಸನ್‌ರೂಫ್, ವೈರ್‌ಲೆಸ್ ಚಾರ್ಜರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ, ಆಟೋ ಡಿಮ್ಮಿಂಗ್ ಹೊಂದಿರುವ ರಿಯರ್ ವ್ಯೂ ಮಿರರ್ ಸೇರಿದಂತೆ ಪ್ರಮುಖ ಪ್ರೀಮಿಯಂ ಫೀಚರ್ಸ್ ಹೊಂದಿದೆ.

ಹಾಗೆಯೇ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದ್ದು, ಸ್ಲಾವಿಯಾ ಹೈ ಎಂಡ್ ಮಾದರಿಯಲ್ಲಿ ಹೆಚ್ಚಿನ ಸಂಖ್ಯೆಯ ಸುರಕ್ಷಾ ಫೀಚರ್ಸ್ ಅಳವಡಿಸಲಾಗಿದೆ.

ಟಾಪ್ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್‌ಗಳನ್ನು ಒಳಗೊಂಡು ಇಎಸ್‌ಸಿ, ಇಡಿಎಸ್, ಟೈರ್ ಪ್ರೆಷರ್ ಮಾನಿಟರ್, ಹಿಲ್ ಹೋಲ್ಡ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಆ್ಯಂಟಿ ಥೇಪ್ಟ್ ಅಲಾರಾಂ, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಮಲ್ಟಿ ಕೂಲಿಷನ್ ಬ್ರೇಕ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ಸ್, ರೈನ್ ಸೆನ್ಸಿಂಗ್ ವೈಪ್ಸ್ ಸೇರಿದಂತೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದೆ.

ಹೊಸ ಕಾರು 4,541 ಎಂಎಂ ಉದ್ದ, 1,752 ಅಗಲ ಮತ್ತು 1,487 ಎಂಎಂ ಎತ್ತರ ಮತ್ತು 2,651 ಎಂಎಂ ವ್ಹೀಲ್‌ಬೇಸ್‌ನೊಂದಿಗೆ 560 ಲೀಟರ್ ನಷ್ಟು ಬೂಟ್‌ಸ್ಪೆಸ್ ಹೊಂದಿದ್ದು, ಪ್ರತಿಸ್ಪರ್ಧಿ ಮಾದರಿಗಿಂತಲೂ ಬೂಟ್‌ಸ್ಪೆಸ್ ಮತ್ತು ಎರಡನೇ ಸಾಲಿನಲ್ಲಿ ಹೆಚ್ಚಿನ ಸ್ಥಳಾವಕಾಶ ಹೊಂದಿದೆ.