ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಸ್ಕೋಡಾ ಕಂಪನಿಯು ತನ್ನ ಹೊಸ ಸ್ಲಾವಿಯಾ ಸೆಡಾನ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ ವಿತರಣೆ ಆರಂಭಿಸಿದ್ದು, ಹೊಸ ಕಾರು ಪ್ರಮುಖ ಎರಡು ಎಂಜಿನ್ ಆಯ್ಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಸ್ಲಾವಿಯಾ ಮಾದರಿಯ 1.0 ಲೀಟರ್ ಮಾದರಿಯನ್ನು ಸದ್ಯ ಬಿಡುಗಡೆ ಮಾಡಿ ವಿತರಣೆ ಆರಂಭಿಸಿರುವ ಸ್ಕೋಡಾ ಕಂಪನಿಯು ಮಾರ್ಚ್ 3 ರಂದು ಸ್ಲಾವಿಯಾ ಕಾರಿನ 1.5 ಲೀಟರ್ ಮಾದರಿಯನ್ನು ಬಿಡುಗಡೆ ಮಾಡಲಿದ್ದು, ಬುಕ್ಕಿಂಗ್ ಪ್ರಮಾಣವನ್ನು ಆಧರಿಸಿ ಕಂಪನಿಯು ಈಗಾಗಲೇ ಪ್ರಮುಖ ನಗರಗಳಲ್ಲಿ ಕಾರು ವಿತರಣೆ ಆರಂಭಿಸಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಭಾರತದಲ್ಲಿ ರ‍್ಯಾಪಿಡ್ ಸೆಡಾನ್ ಮಾದರಿಯ ಮಾರಾಟವನ್ನು ಕೊನೆಗೊಳಿಸುವ ಉದ್ದೇಶದಿಂದ ಹೊಸ ಸ್ಲಾವಿಯಾ ಪರಿಚಯಿಸಲಾಗಿದ್ದು, ಸ್ಲಾವಿಯಾ ಕಾರು ಬಿಡುಗಡೆಯಾಗಿರುವುದರಿಂದ ಶೀಘ್ರದಲ್ಲಿಯೇ ರ‍್ಯಾಪಿಡ್ ಸೆಡಾನ್ ಮಾರಾಟವು ಸ್ಥಗಿತಗೊಳ್ಳಲಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ರ‍್ಯಾಪಿಡ್ ಮಾದರಿಗಿಂತಲೂ ಹೆಚ್ಚು ಸುಧಾರಿತ ತಂತ್ರಜ್ಞಾನ ಮತ್ತು ಬಲಿಷ್ಠ ಎಂಜಿನ್ ಆಯ್ಕೆ ಹೊಂದಿರುವ ಸ್ಲಾವಿಯಾ ಮಾದರಿಯು ಪ್ರಮುಖ ಮಧ್ಯಮ ಕ್ರಮಾಂಕದ ಸೆಡಾನ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಸ್ಕೋಡಾ ಕಂಪನಿಯು ಸ್ಲಾವಿಯಾ ಸೆಡಾನ್ ಮಾದರಿಯನ್ನು 1.0-ಲೀಟರ್ ಟಿಎಸ್ಐ ಮತ್ತು 1.5 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಸದ್ಯಕ್ಕೆ 1.0-ಲೀಟರ್ ಮಾದರಿಯನ್ನು ಬಿಡುಗಡೆ ಮಾಡಿರುವ ಸ್ಕೋಡಾ ಕಂಪನಿಯು ಮಾರ್ಚ್ 3ರಂದು 1.5 ಲೀಟರ್ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಸ್ಲಾವಿಯಾ 1.0 ಲೀಟರ್ ಮಾದರಿಯು ಪ್ರಮುಖ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಆಕ್ಟಿವಾ, ಆ್ಯಂಬಿಷನ್ ಮತ್ತು ಸ್ಟೈಲ್ ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15.39 ಲಕ್ಷ ಬೆಲೆ ಹೊಂದಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಆಕ್ಟಿವಾ ಮಾದರಿಯು 1.0 ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಿದ್ದು, 115 ಬಿಹೆಚ್‍ಪಿ ಪವರ್ ಮತ್ತು 178 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಸ್ಲಾವಿಯಾ ಸೆಡಾನ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವೆರ್ನಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರು 4,541 ಎಂಎಂ ಉದ್ದ, 1,752 ಅಗಲ ಮತ್ತು 1,487 ಎಂಎಂ ಎತ್ತರ ಮತ್ತು 2,651 ಎಂಎಂ ವ್ಹೀಲ್‌ಬೇಸ್‌ನೊಂದಿಗೆ 560 ಲೀಟರ್ ನಷ್ಟು ಬೂಟ್‌‌ಸ್ಪೆಸ್ ಹೊಂದಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಹೊಸ ಕಾರು ಟೊರ್ನಾಟ್ ರೆಡ್, ಕ್ರಿಸ್ಟಲ್ ಬ್ಲ್ಯೂ, ಕ್ಯಾಂಡಿ ವೈಟ್, ರೆಫ್ಲೆಕ್ಸರ್ ಸಿಲ್ವರ್ ಮತ್ತು ಕಾರ್ಬನ್ ಸ್ಟೀಲ್ ಬಣ್ಣದಲ್ಲಿ ಖರೀದಿಗೆ ಲಭ್ಯವಿರಲಿದ್ದು, ಸಿಗ್ನಿಚೆರ್ ಬಟರ್‌ಪ್ಲೈ ಗ್ರಿಲ್, ಸ್ಲಿಕ್ ಹೆಡ್‌ಲ್ಯಾಂಪ್, ಎಲ್ ಆಕಾರದಲ್ಲಿರುವ ಡೇ ಟೈಮ್ ರನ್ನಿಂಗ್ ಲ್ಯಾಂಪ್ ಸ್ಟ್ರೀಪ್, ಸ್ಪೋರ್ಟಿ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್ ಹೌಸ್, ಎಲ್ಇಡಿ ಟೈಲ್ ಲೈಟ್ಸ್‌ನೊಂದಿಗೆ ಒಳಾಂಗಣವು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಹೊಸ ಕಾರಿನ ಒಳಾಂಗಣ ಸೌಲಭ್ಯವು ಆಕ್ಟಿವಿಯಾ ಸೆಡಾನ್ ಮಾದರಿಯನ್ನು ನೆನಪಿಸಲಿದ್ದು, 10 ಇಂಚಿನ ಇನ್ಪೋಟೈನ್‌ಮೆಂಟ್, 8 ಇಂಚಿನ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮೈ ಸ್ಕೋಡಾ ಕಾರ್ ಕನೆಕ್ಟೆಡ್ ನೊಂದಿಗೆ ವೆಂಟಿಲೆಟೆಡ್ ಲೆದರ್ ಆಸನಗಳು, ಎಲೆಕ್ಟ್ರಿಕ್ ಸನ್‌ರೂಫ್, ವೈರ್‌ಲೆಸ್ ಚಾರ್ಜರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ, ಆಟೋ ಡಿಮ್ಮಿಂಗ್ ಹೊಂದಿರುವ ರಿಯರ್ ವ್ಯೂ ಮಿರರ್ ಸೇರಿದಂತೆ ಪ್ರಮುಖ ಪ್ರೀಮಿಯಂ ಫೀಚರ್ಸ್ ಹೊಂದಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದ್ದು, ಸ್ಲಾವಿಯಾ ಹೈ ಎಂಡ್ ಮಾದರಿಯಲ್ಲಿ ಆರು ಏರ್‌ಬ್ಯಾಗ್‌ಗಳು ಇಎಸ್‌ಸಿ, ಇಡಿಎಸ್, ಟೈರ್ ಪ್ರೆಷರ್ ಮಾನಿಟರ್, ಹಿಲ್ ಹೋಲ್ಡ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಮಲ್ಟಿ ಕೂಲಿಷನ್ ಬ್ರೇಕ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ಸ್, ರೈನ್ ಸೆನ್ಸಿಂಗ್ ವೈಪ್ಸ್ ಸೇರಿದಂತೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಸ್ಕೋಡಾ ಕಂಪನಿಯು 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಹೈ ಎಂಡ್ ಸ್ಲಾವಿಯಾದಲ್ಲಿ 1.0 ಲೀಟರ್ ಮಾದರಿಗಿಂತಲೂ ಇನ್ನು ಹೆಚ್ಚಿನ ಮಟ್ಟದ ಕೆಲವು ಫೀಚರ್ಸ್‌ಗಳನ್ನು ಜೋಡಣೆ ಮಾಡಲಿದ್ದು, ಬೆಲೆಯೂ ಕೂಡಾ 1.0 ಲೀಟರ್ ಮಾದರಿಗಿಂತಲೂ ತುಸು ದುಬಾರಿಯಾಗಿಲಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

ಹೈ ಎಂಡ್ ಮಾದರಿಯಾಗಿ ಬಿಡುಗಡೆಯಾಗಲಿರುವ 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 7 ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್ ಆಯ್ಕೆ ಹೊಂದಿರಲಿದ್ದು, 1.5-ಲೀಟರ್ ಎಂಜಿನ್ ಮಾದರಿಯು 150 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಹೊಸ ಸ್ಲಾವಿಯಾ 1.0 ಲೀಟರ್ ವರ್ಷನ್ ವಿತರಣೆ ಆರಂಭಿಸಿದ ಸ್ಕೋಡಾ

1.5 ಲೀಟರ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಲಿದ್ದು, ಹೊಸ ಕಾರು ಪ್ರಮುಖ ಪ್ರತಿಸ್ಪರ್ಧಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

More from DriveSpark

Article Published On: Tuesday, March 1, 2022, 16:00 [IST]
English summary
Skoda slavia sedan first batch deliveries start details
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+