Just In
- 15 min ago Hyundai: ಹ್ಯುಂಡೈ ಎಕ್ಸ್ಟರ್ ಮೊದಲ ಅಪಘಾತ: ಮುಗಿಬಿದ್ದು ಖರೀದಿಸಿದವರು ಇದನ್ನೊಮ್ಮೆ ನೋಡಿ
- 26 min ago Maruti Suzuki: 1 ವರ್ಷದಲ್ಲಿಯೇ ಹೊಸ ದಾಖಲೆ.. 134,735 ಫ್ರಾಂಕ್ಸ್ ಕಾರುಗಳು ಮಾರಾಟ, ಬೆಲೆ ರೂ.7.51 ಲಕ್ಷ
- 1 hr ago ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- 2 hrs ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
Don't Miss!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- News ಡಾ.ಮಂಜುನಾಥ್ ಅವರಿಗೆ ಕೇಂದ್ರ ಸಚಿವ ಸ್ಥಾನ: ಸುಳಿವು ಕೊಟ್ಟ ಹೆಚ್ ಡಿ ದೇವೇಗೌಡ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Movies "ಸದಾ ನನ್ನ ಹಿಂಭಾಗವನ್ನೇ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಹುನೀರಿಕ್ಷಿತ ಸ್ಲಾವಿಯಾ ಸೆಡಾನ್ ಉತ್ಪಾದನೆಗೆ ಅಧಿಕೃತ ಚಾಲನೆ ನೀಡಿದ ಸ್ಕೋಡಾ
ಸ್ಕೋಡಾ(Skoda) ಕಂಪನಿಯು ತನ್ನ ಹೊಚ್ಚ ಹೊಸ ಸ್ಲಾವಿಯಾ(Slavia) ಸೆಡಾನ್ ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಮುಂದಿನ ತಿಂಗಳು ಅಧಿಕೃತವಾಗಿ ಬಿಡುಗಡೆಗೊಳ್ಳಲಿರುವ ಹೊಸ ಕಾರಿನ ಉತ್ಪಾದನೆಗೆ ಸ್ಕೋಡಾ ಕಂಪನಿಯು ಅಧಿಕೃತವಾಗಿ ಚಾಲನೆ ನೀಡಿದೆ.
ಮಹಾರಾಷ್ಟ್ರದ ಚಾಕನ್ನಲ್ಲಿರುವ ಫೋಕ್ಸ್ವ್ಯಾಗನ್-ಸ್ಕೋಡಾ ಆಟೋ ಕಾರು ಉತ್ಪಾದನಾ ಘಟಕದಲ್ಲಿ ಹೊಸ ಸ್ಲಾವಿಯಾ ಕಾರಿನ ಉತ್ಪಾದನೆಗೆ ಚಾಲನೆ ನೀಡಲಾಗಿದ್ದು, ಹೊಸ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಮತ್ತು ಆಕರ್ಷಕ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.
ಸಂಪೂರ್ಣ ಹೊಸ ಕಾರು ಮಾದರಿಯಾಗಿರುವ ಸ್ಲಾವಿಯಾ ಸೆಡಾನ್ ಆವೃತ್ತಿಯು ಸ್ಕೋಡಾ ಮತ್ತು ಫೋಕ್ಸ್ವ್ಯಾಗನ್ ಕಂಪನಿಗಳ ಸಹಭಾಗಿತ್ವ ಯೋಜನೆ ಅಡಿ ಅಭಿವೃದ್ದಿಗೊಂಡಿದ್ದು, ಇಂಡಿಯಾ 2.0 ಪ್ರೊಜೆಕ್ಟ್ ಯೋಜನೆ ಅಡಿಯಲ್ಲಿ ಅಭಿವೃದ್ದಿಗೊಂಡಿರುವ ಹೊಸ ಸ್ಲಾವಿಯಾ ಕಾರು ಮಧ್ಯಮ ಶ್ರೇಣಿಯಲ್ಲಿನ ಪ್ರಮುಖ ಸೆಡಾನ್ ಮಾದರಿಗಳಿಂತಲೂ ಉತ್ತಮ ಫೀಚರ್ಸ್ ಹೊಂದಿರಲಿದೆ.
ಹೊಸ ಯೋಜನೆ ಅಡಿ ಸ್ಕೋಡಾ ಮತ್ತು ಫೋಕ್ಸ್ವ್ಯಾಗನ್ ಕಂಪನಿಗಳು ಒಟ್ಟು ನಾಲ್ಕು ಹೊಸ ಕಾರುಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಯೋಜನೆ ಅಡಿ ಈಗಾಗಲೇ ಕುಶಾಕ್, ಟೈಗುನ್ ಕಂಪ್ಯಾಕ್ಟ್ ಎಸ್ಯುವಿ ಬಿಡುಗಡೆ ನಂತರ ಇದೀಗ ಮೂರನೇ ಕಾರು ಮಾದರಿಯಾಗಿ ಸ್ಲಾವಿಯಾ ಬಿಡುಗಡೆ ಮಾಡಲಾಗುತ್ತಿದೆ.
ಸ್ಲಾವಿಯಾ ಕಾರು ಕುಶಾಕ್ ಮಾದರಿಯಂತೆ ಪ್ರಮುಖ ಮೂರು ವೆರಿಯೆಂಟ್ಗಳೊಂದಿಗೆ 1.0-ಲೀಟರ್ ಟಿಎಸ್ಐ ಮೂರು-ಸಿಲಿಂಡರ್ ಎಂಜಿನ್ ಮತ್ತು 1.5-ಲೀಟರ್ ನಾಲ್ಕು-ಸಿಲಿಂಡರ್ ಟಿಎಸ್ಐ ಎಂಜಿನ್ ಜೊತೆಗೆ ಎರಡೂ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿರಲಿದೆ.
ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಆಕ್ಟಿವಾ, ಆಂಬಿಷನ್ ಮತ್ತು ಸ್ಟೈಲ್ ವೆರಿಯೆಂಟ್ ಹೊಂದಿದ್ದು, ಕಂಪನಿಯು ಆಕ್ಟಿವಾ ಮತ್ತು ಆಂಬಿಷನ್ ಮಾದರಿಗಳಲ್ಲಿ 1.0 ಲೀಟರ್ ಪೆಟ್ರೋಲ್ ಮಾದರಿಯನ್ನು ಮತ್ತು ಸ್ಟೈಲ್ ವೆರಿಯೆಂಟ್ನಲ್ಲಿ ಮಾತ್ರವೇ 1.0 ಲೀಟರ್ ಮತ್ತು 1.5 ಲೀಟರ್ ಪೆಟ್ರೋಲ್ ಮಾದರಿಯನ್ನು ಮಾರಾಟ ಮಾಡಲಿದೆ.
ಆಕ್ಟಿವಾ ಮಾದರಿಯು 1.0 ಲೀಟರ್ ಪೆಟ್ರೋಲ್ ಎಂಜಿನ್ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದು, ಆಂಬಿಷನ್ ಮಾದರಿಯು 1.0-ಲೀಟರ್ ಪೆಟ್ರೋಲ್ ಎಂಜಿನ್ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿರಲಿದೆ. ಇದರಲ್ಲಿ ಟಾಪ್ ಎಂಡ್ ಮಾದರಿಯಾಗಿರುವ ಸ್ಟೈಲ್ ಮಾದರಿಯಲ್ಲಿ ಮಾತ್ರವೇ 1.0-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ನೊಂದಿಗೆ ಮ್ಯಾನುವಲ್ ಅಥವಾ 7 ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್ಮಿಷನ್ ಆಯ್ಕೆ ಹೊಂದಿರಲಿದೆ.
ಈ ಮೂಲಕ ಹೊಸ ಕಾರಿನ 1.0-ಲೀಟರ್ ಟಿಎಸ್ಐ ಮೂರು-ಸಿಲಿಂಡರ್ ಎಂಜಿನ್ 115 ಬಿಹೆಚ್ಪಿ ಪವರ್ ಮತ್ತು 178 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದ್ದರೆ 1.5-ಲೀಟರ್ ಎಂಜಿನ್ ಮಾದರಿಯು 150 ಬಿಹೆಚ್ಪಿ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ರ್ಯಾಪಿಡ್ ಸೆಡಾನ್ ಮಾದರಿಯು ಮೊದಲ ಬಾರಿಗೆ ಬಿಡುಗಡೆಯ ನಂತರವು ಕೆಲವೇ ಕೆಲವು ಬದಲಾವಣೆಗಳ ಹೊರತಾಗಿ ಯಾವುದೇ ಹೊಸ ತಲೆಮಾರಿನ ಆವೃತ್ತಿಯನ್ನು ಬಿಡುಗಡೆಗೊಳಿಸದ ಸ್ಕೋಡಾ ಕಂಪನಿಯು ಹೊಸ ತಲೆಮಾರಿನ ರ್ಯಾಪಿಡ್ ಬದಲಾಗಿ ಹೊಸ ಪ್ಲ್ಯಾಟ್ಫಾರ್ಮ್ ಆಧರಿಸಿರುವ ಸ್ಲಾವಿಯಾ ಬಿಡುಗಡೆ ಮಾಡುತ್ತಿದೆ.
ಹೀಗಾಗಿ ರ್ಯಾಪಿಡ್ ಮಾದರಿಯಲ್ಲಿ ಯಾವುದೇ ಹೊಸ ಬದಲಾವಣೆಗಳನ್ನು ತರದೆ ಮಾರಾಟ ಮಾಡುತ್ತಿರುವ ಸ್ಕೋಡಾ ಕಂಪನಿಯು ಸ್ಲಾವಿಯಾ ಬಿಡುಗಡೆ ನಂತರ ಸ್ಥಗಿತಗೊಳಿಸಲು ನಿರ್ಧರಿಸಿದ್ದು, ಹೊಸ ಸ್ಲಾವಿಯಾ ಕಾರು ವಿವಿಧ ಎಂಜಿನ್ ಆಯ್ಕೆ, ಪ್ರೀಮಿಯಂ ಫೀಚರ್ಸ್ಗಳು ಮತ್ತು ಗರಿಷ್ಠ ಮಟ್ಟದ ಸೇಫ್ಟಿ ಫೀಚರ್ಸ್ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.
ಸ್ಲಾವಿಯಾ ಸೆಡಾನ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಹೋಂಡಾ ಸಿಟಿ, ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವೆರ್ನಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ರ್ಯಾಪಿಡ್ಗಿಂತಲೂ ಆಕರ್ಷಕ ವಿನ್ಯಾಸದೊಂದಿಗೆ ಲಾಂಗ್ವೀಲ್ಹ್ ಬೆಸ್ ಪಡೆದುಕೊಂಡಿದೆ.
ಹೊಸ ಕಾರು 4,541 ಎಂಎಂ ಉದ್ದ, 1,752 ಅಗಲ ಮತ್ತು 1,487 ಎಂಎಂ ಎತ್ತರ ಮತ್ತು 2,651 ಎಂಎಂ ವ್ಹೀಲ್ಬೇಸ್ನೊಂದಿಗೆ 560 ಲೀಟರ್ ಬೂಟ್ಸ್ಪೆಸ್ ಹೊಂದಿದ್ದು, ಹೊಸ ಕಾರು ಹೋಂಡಾ ಸಿಟಿ ಸೆಡಾನ್ ಮಾದರಿಯಷ್ಟೇ ಉದ್ದಳತೆಯೊಂದಿಗೆ ತುಸು ಅಗಲವಾಗಿರುವುದಲ್ಲದೆ 51 ಎಂಎಂ ನಷ್ಟು ಹೆಚ್ಚುವರಿ ವ್ಹೀಲ್ ಬೆಸ್ ಹಾಗೂ ಹೆಚ್ಚುವರಿ 15 ಲೀಟರ್ನಷ್ಟು ಬೂಟ್ಸ್ಪೆಸ್ ಹೊಂದಿದೆ.
ಹಾಗೆಯೇ ಹೊಸ ಕಾರು ಸಿಗ್ನಿಚೆರ್ ಬಟರ್ಪ್ಲೈ ಗ್ರಿಲ್, ಸ್ಲಿಕ್ ಹೆಡ್ಲ್ಯಾಂಪ್, ಎಲ್ ಆಕಾರದಲ್ಲಿರುವ ಡೇ ಟೈಮ್ ರನ್ನಿಂಗ್ ಲ್ಯಾಂಪ್ ಸ್ಟ್ರೀಪ್, ಸ್ಪೋರ್ಟಿ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್ ಹೌಸ್, ಎಲ್ಇಡಿ ಟೈಲ್ ಲೈಟ್ಸ್ನೊಂದಿಗೆ ಒಳಾಂಗಣವು ಕೂಡಾ ಸಾಕಷ್ಟು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.
ಹೊಸ ಕಾರಿನ ಒಳಾಂಗಣ ಸೌಲಭ್ಯವು ಆಕ್ಟಿವಿಯಾ ಮಾದರಿಯನ್ನು ನೆನಪಿಸಲಿದ್ದು, 10 ಇಂಚಿನ ಇನ್ಪೋಟೈನ್ಮೆಂಟ್, 8 ಇಂಚಿನ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮೈ ಸ್ಕೋಡಾ ಕಾರ್ ಕನೆಕ್ಟೆಡ್ ನೊಂದಿಗೆ ವೆಂಟಿಲೆಟೆಡ್ ಲೆದರ್ ಆಸನಗಳು, ಎಲೆಕ್ಟ್ರಿಕ್ ಸನ್ರೂಫ್, ವೈರ್ಲೆಸ್ ಚಾರ್ಜರ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಕೀ ಲೆಸ್ ಎಂಟ್ರಿ, ಆಟೋ ಡಿಮ್ಮಿಂಗ್ ಹೊಂದಿರುವ ರಿಯರ್ ವ್ಯೂ ಮಿರರ್ ಸೇರಿದಂತೆ ಪ್ರಮುಖ ಪ್ರೀಮಿಯಂ ಫೀಚರ್ಸ್ ಹೊಂದಿದೆ.
ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದ್ದು, ಸ್ಲಾವಿಯಾ ಹೈ ಎಂಡ್ ಮಾದರಿಯಲ್ಲಿ ಆರು ಏರ್ಬ್ಯಾಗ್ಗಳು ಇಎಸ್ಸಿ, ಇಡಿಎಸ್, ಟೈರ್ ಪ್ರೆಷರ್ ಮಾನಿಟರ್, ಹಿಲ್ ಹೋಲ್ಡ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಮಲ್ಟಿ ಕೂಲಿಷನ್ ಬ್ರೇಕ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ಸ್ ಸೇರಿದಂತೆ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಲಾಗಿದೆ.
ಹೊಸ ಕಾರು ಟೊರ್ನಾಟ್ ರೆಡ್, ಕ್ರಿಸ್ಟಲ್ ಬ್ಲ್ಯೂ, ಕ್ಯಾಂಡಿ ವೈಟ್, ರೆಫ್ಲೆಕ್ಸರ್ ಸಿಲ್ವರ್ ಮತ್ತು ಕಾರ್ಬನ್ ಸ್ಟೀಲ್ ಬಣ್ಣದಲ್ಲಿ ಖರೀದಿಗೆ ಲಭ್ಯವಿರಲಿದ್ದು, ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ಸಾಧ್ಯತೆಗಳಿವೆ.