ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಸ್ಕೋಡಾ(Skoda) ಕಂಪನಿಯು ತನ್ನ ಹೊಚ್ಚ ಹೊಸ ಕುಶಾಕ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಹಲವಾರು ದಾಖಲೆಗಳಿಗೆ ಕಾರಣವಾಗಿದ್ದು, ಕಂಪನಿಯು ಕುಶಾಕ್ ಮಾದರಿಯಲ್ಲಿ ಶೀಘ್ರದಲ್ಲೇ ವಿಶೇಷ ಆವೃತ್ತಿಯೊಂದನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಪ್ರಸ್ತುತ ಮಾರುಕಟ್ಟೆಯಲ್ಲಿ ತನ್ನ ಕಾರು ಮಾದರಿಗಳಲ್ಲಿ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿರುವ ಮಾಂಟೆ ಕಾರ್ಲೊ ಎಡಿಷನ್ ಮಾರಾಟ ಹೊಂದಿರುವ ಸ್ಕೋಡಾ ಕಂಪನಿಯು ಇದೀಗ ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೂ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಎಡಿಷನ್‌ನಲ್ಲಿ ಸ್ಟ್ಯಾಂಡರ್ಡ್ ಟಾಪ್ ಎಂಡ್ ವೆರಿಯೆಂಟ್‌ಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಜೊತೆ ಆಕರ್ಷಕ ಗ್ರಾಫಿಕ್ಸ್ ಮತ್ತು ಸ್ಪೋರ್ಟಿ ಬ್ಯಾಡ್ಜ್ ಹೊಂದಿರಲಿದೆ.

ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಮಾಂಟೆ ಕಾರ್ಲೊ ವಿಶೇಷ ಆವೃತ್ತಿಗಳು ಸ್ಕೋಡಾ ವಿವಿಧ ಕಾರುಗಳಲ್ಲಿ ಸ್ಪೋರ್ಟಿ ಲುಕ್ ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿದ್ದು, ಇದೀಗ ಕುಶಾಕ್ ಮಾದರಿಯಲ್ಲೂ ಹೊಸ ಎಡಿಷನ್ ಬಿಡುಗಡೆಗೆ ಸಿದ್ದಗೊಂಡಿದೆ.

ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಕುಶಾಕ್ ಮಾದರಿಯು ಸದ್ಯ ಆಕ್ಟಿವ್, ಆ್ಯಂಬಿನೇಷನ್ ಮತ್ತು ಸ್ಟೈಲ್ ಎನ್ನುವ ಮೂರು ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸದಾಗಿ ಬಿಡುಗಡೆಯಾಗಲಿರುವ ಮಾಂಟೆ ಕಾರ್ಲೊ ಮಾದರಿಯು ಸ್ಟೈಲ್ ಮಾದರಿಗಿಂತಲೂ ತುಸು ದುಬಾರಿ ಬೆಲೆಯೊಂದಿಗೆ ಹೆಚ್ಚುವರಿಯಾಗಿ ಹೊಸ ಬಣ್ಣದ ಆಯ್ಕೆ ಜೊತೆ ಹೊಸ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ರೂಫ್ ಲೈನರ್, ರೆಡ್ ಕಾಟ್ರಾಸ್ಟ್ ಸೇರಿದಂತೆ ಮತ್ತಷ್ಟು ಹೊಸ ಫೀಚರ್ಸ್ ಹೊಂದಿರಲಿದೆ.

ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಕುಶಾಕ್ ಕಾರು ಮಾದರಿಯು ಸದ್ಯ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿದ್ದು, ಹೊಸ ಕಾರು ಇದುವರೆಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗಾಗಿ ಬುಕಿಂಗ್ ಪಡೆದುಕೊಂಡಿದೆ.

ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಕಳೆದ ತಿಂಗಳು ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಆರಂಭಿಕ ಮಾದರಿಯಲ್ಲಿ ಕೆಲವು ಸ್ಟ್ಯಾಂಡರ್ಡ್ ಫೀಚರ್ಸ್ ಅಳವಡಿಕೆಯೊಂದಿಗೆ ಬೆಲೆ ಹೆಚ್ಚಳ ಮಾಡಲಾಗಿದೆ.

ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಜೊತೆಗೆ ಪ್ರತಿಸ್ಪರ್ಧಿಗಳಿಂತಲೂ ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಲಿರುವ ಕುಶಾಕ್ ಕಾರು ಮಾದರಿಯು ಬೆಲೆ ಏರಿಕೆಯ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 10.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.19 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದೆ.

ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಹೊಸ ಕುಶಾಕ್ ಕಾರಿನಲ್ಲಿ ಸ್ಕೋಡಾ ಕಂಪನಿಯು 1.-0-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಮತ್ತು ಹೈ ಎಂಡ್ ಮಾದರಿಯಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಪ್ರತಿ ವೆರಿಯೆಂಟ್‌ನಲ್ಲೂ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು ಹೈ ಎಂಡ್ ಮಾದರಿಯಲ್ಲಿ 7-ಸ್ಪೀಡ್ ಡಿಎಸ್‌ಜಿ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಹೊಸ ಕಾರು ಸ್ಕೋಡಾ ಬಟರ್ ಪ್ಲೈ ಗ್ರಿಲ್‌ನೊಂದಿಗೆ ಆಕರ್ಷಕವಾದ ಮುಂಭಾಗದ ವಿನ್ಯಾಸ ಹೊಂದಿದ್ದು, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟೈಲ್‌ಲ್ಯಾಂಪ್, 17-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಇಂಟ್ರಾಗ್ರೆಟೆಡ್ ರೂಫ್ ರೈಲ್ಸ್‌ನೊಂದಿಗೆ ಬಲಿಷ್ಠ ಮಾದರಿಯಾಗಿ ಹೊರಹೊಮ್ಮಿದೆ.

ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಕುಶಾಕ್ ಕಾರಿನ ಒಳಭಾಗದ ವಿನ್ಯಾಸವು ಕೂಡಾ ಆಕರ್ಷಕವಾಗಿದ್ದು, ವಿಶಾಲವಾದ ಕ್ಯಾಬಿನ್‌ನೊಂದಿಗೆ ವರ್ಚುವಲ್ ಕಾಕ್‌ಪಿಟ್‌ ಹೊಂದಿದೆ. ಇದರಲ್ಲಿ ಟು ಸ್ಪೋಕ್ ಸ್ಟೀರಿಂಗ್ ವೀಲ್ಹ್, ವೆಂಟಿಲೆಟೆಡ್ ಲೆದರ್ ಆಸನಗಳು, ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ ಸರ್ಪೊಟ್ ಮಾಡುವ 10.1 ಇಂಚಿನ ಇನ್ಟೋಟೈನ್‌ಮೆಂಟ್ ಸ್ಕ್ರೀನ್ ಸೌಲಭ್ಯವಿದೆ.

ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಹಾಗೆಯೇ ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್, ಆ್ಯಂಬಿಯೆಂಟ್ ಲೈಟಿಂಗ್ಸ್, ಮಲ್ಟಿ ಫಂಕ್ಷನಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಎಲೆಕ್ಟ್ರಿಕ್ ಸನ್‌ರೂಫ್, ಮೈ ಸ್ಕೋಡಾ ಕಾರ್ ಕನೆಕ್ಟ್ ಆ್ಯಪ್, ಸ್ಮಾರ್ಟ್ ಬಾಟಲ್ ಹೋಲ್ಡರ್ ಮತ್ತು ಸ್ಕೋಡಾ ಸೌಂಡ್ ಸಿಸ್ಟಂ ಸೌಲಭ್ಯವಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ.

ವಿನೂತನ ಫೀಚರ್ಸ್ ಪ್ರೇರಿತ ಕುಶಾಕ್ ಮಾಂಟೆ ಕಾರ್ಲೊ ಎಡಿಷನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಹೊಸ ಕಾರಿನಲ್ಲಿ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಮಲ್ಟಿ ಕೂಲಿಷನ್ ಕಂಟ್ರೋಲ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಏರ್‌ಬ್ಯಾಗ್, ರಿಯರ್ ವ್ಯೂ ಕ್ಯಾಮೆರಾ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

More from DriveSpark

Article Published On: Tuesday, March 22, 2022, 8:50 [IST]
English summary
Skoda to launch kushaq monte carlo edition soon details
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+