ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಉನ್ನತೀಕರಣಗೊಂಡ ಆಲ್‌ಟ್ರೊಜ್ ಡಾರ್ಕ್ ಎಡಿಷನ್
ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಪ್ರಮುಖ ಕಾರುಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ನಿರಂತವಾಗಿ ಉನ್ನತೀಕರಿಸುತ್ತಿದ್ದು, ಕಂಪನಿಯು ಇದೀಗ ಆಲ್‌ಟ್ರೊಜ್ ಕಾರಿನ ಡಾರ್ಕ್ ಎಡಿಷನ್ ಅನ್ನು ಪ್ರಮುಖ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆ ಮಾಡಿದೆ.

ಆಲ್‌ಟ್ರೊಜ್ ಡಾರ್ಕ್ ಎಡಿಷನ್‌ನಲ್ಲಿರುವ ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಪ್ಲಸ್ ಡೀಸೆಲ್ ಮಾದರಿಯನ್ನು ಕೆಲವು ಪ್ರಮುಖ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಉನ್ನತೀಕರಿಸಲಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಉನ್ನತೀಕರಿಸಿದ ಮಾದರಿಗಳಲ್ಲಿ ವೆಂಟಿಲೆಟೆಡ್ ಲೆದರ್ ಆಸನಗಳು, ಹಿಂಭಾಗದ ಆಸನಗಳಲ್ಲೂ ಆರ್ಮ್‌ರೆಸ್ಟ್, ಡಾರ್ಕ್ ಟಿಂಟ್ ಹೈಪರ್-ಸ್ಟೈಲ್ ಚಕ್ರಗಳನ್ನು ನೀಡಲಾಗಿದೆ.

ಜೊತೆಗೆ ಉನ್ನತೀಕರಿಸಿದ ಡಾರ್ಕ್ ಎಡಿಷನ್‌ಗಳಲ್ಲಿ ಎತ್ತರವನ್ನು ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್, ಹಿಂಭಾಗದಲ್ಲೂ ಹೆಡ್‌ರೆಸ್ಟ್, ಮುಂಭಾಗದಲ್ಲಿ ಹೊಂದಾಣಿಕೆಯ ಸೀಟ್ ಬೆಲ್ಟ್‌ಗಳು, ಲೆದರ್‌ನೊಂದಿಗೆ ಸುತ್ತಲಾಗಿರುವ ಸ್ಟೀರಿಂಗ್ ಚಕ್ರಗಳು, ಲೆದರ್‌ನಿಂದ ಸುತ್ತಲಾದ ಗೇರ್ ನಾಬ್ ಸೇರಿದಂತೆ ಪ್ರಮುಖ ಪ್ರೀಮಿಯಂ ವೈಶಿಷ್ಟ್ಯತೆಗಳನ್ನು ನೀಡಲಾಗಿದೆ.

ಆಲ್‌ಟ್ರೊಜ್ ಎಕ್ಸ್‌ಟಿ ವೆರಿಯೆಂಟ್‌ನಲ್ಲಿ ಪ್ರಮುಖ ಫೀಚರ್ಸ್‌ಗಳ ಜೊತೆಗೆ ಹೊರಭಾಗದಲ್ಲಿ ಮತ್ತು ಒಳಭಾಗದಲ್ಲಿ ಡಾರ್ಕ್ ಥೀಮ್ ಆಕರ್ಷಕವಾಗಿದ್ದು, ಇದರ ಜೊತೆಗೆ ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ ಸಹ ಹೊಸ ಕಾರಿಗೆ ಮತ್ತಷ್ಟು ಸುರಕ್ಷತೆಯನ್ನು ಖಾತ್ರಿಪಡಿಸುತ್ತದೆ.

ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿ ಯಶಸ್ವಿ ಎರಡು ವರ್ಷಗಳನ್ನು ಪೂರೈಸಿದ್ದು, ಹೊಸ ಕಾರು ಬಿಡುಗಡೆ ಮಾಡಿದ ಎರಡನೇ ವರ್ಷದ ಸಂಭ್ರಮಕ್ಕಾಗಿ ಡಾರ್ಕ್ ಎಡಿಷನ್‌ನಲ್ಲಿರುವ ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಪ್ಲಸ್ ಡೀಸೆಲ್ ಮಾದರಿಯನ್ನು ಉನ್ನತೀಕರಿಸಿ ಬಿಡುಗಡೆ ಮಾಡಿದೆ.

ಆಲ್‌ಟ್ರೊಜ್ ಕಾರು ಮಾದರಿಯ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಆಲ್‌ಟ್ರೊಜ್ ಮಾದರಿಯಲ್ಲಿ ಪೆಟ್ರೋಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಸಹ ಬಿಡುಗಡೆ ಮಾಡುವ ಯೋಜನೆ ರೂಪಿಸಿದೆ.

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರು ಮಾದಿರಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಎರಡು ತಿಂಗಳಿಗೆ ಒಂದು ಬಾರಿಗೆ ವೆರಿಯೆಂಟ್‌ಗಳ ಉನ್ನತೀಕರಣ ಮತ್ತು ಹೊಸ ವೆರಿಯೆಂಟ್ ಅಭಿವೃದ್ದಿಗೊಳಿಸುವ ಪ್ರಕ್ರಿಯೆ ಕೈಗೊಂಡಿದ್ದು, ಇದೀಗ ಆಲ್‌ಟ್ರೊಜ್ ಮಾದರಿಯಲ್ಲಿ ಆಟೋಮ್ಯಾಟಿಕ್ ಆವೃತ್ತಿಯ ಮಾರಾಟಕ್ಕೆ ಸಿದ್ದವಾಗಿದೆ.

ಆಲ್‌ಟ್ರೊಜ್ ಕಾರು ಮಾದರಿಯು ಎಕ್ಸ್‌ಇ ಪ್ಲಸ್ ಜೊತೆಗೆ ಎಕ್ಸ್‌ಇ, ಎಕ್ಸ್ಎಂ ಪ್ಲಸ್, ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಆಪ್ಷನ್ ಮತ್ತು ಎಕ್ಸ್‌ಜೆಡ್ ಅರ್ಬನ್ ವೆರಿಯೆಂಟ್‌ಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದೆ.

ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಎಲ್ಲಾ ರೂಪಾಂತರಗಳಲ್ಲೂ 1.2 ಲೀಟರ್ ರೆವೊಟ್ರಾನ್ ಪೆಟ್ರೋಲ್ ಮತ್ತು 1.5 ಲೀಟರ್ ಟರ್ಬೊ ಚಾರ್ಜ್ಡ್ ರೆವೊಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಸದ್ಯಕ್ಕೆ ಆಲ್‌ಟ್ರೊಜ್ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗುತ್ತಿದೆ.

ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದ್ದು, ಬಿಡುಗಡೆಯಾಗಲಿರುವ 5-ಸ್ಪೀಡ್ ಆಟೋಮ್ಯಾಟಿಕ್ ಆವೃತ್ತಿಯನ್ನು ಪಂಚ್ ಮಾದರಿಯೊಂದಿಗೆ ಹಂಚಿಕೊಳ್ಳಲಿದೆ.

ಆಲ್‌ಟ್ರೊಜ್ ಮಾದರಿಯಲ್ಲಿ ಟಾಟಾ ಕಂಪನಿಯು ಕಳೆದ ಒಂದು ವರ್ಷದಲ್ಲಿ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಸದ್ಯ ಆರಂಭಿಕವಾಗಿ ರೂ. 5.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.99 ಲಕ್ಷ ಬೆಲೆ ಹೊಂದಿದೆ.

ಐ-ಟರ್ಬೊ ಮಾದರಿಯು ಸಿಟಿ ಮತ್ತು ಸ್ಟೋರ್ಟ್ ಡ್ರೈವಿಂಗ್ ಮೋಡ್‌ಗಳನ್ನು ನೀಡಲಾಗಿದ್ದು, ಸದ್ಯಕ್ಕೆ ಹೊಸ ಮಾದರಿಯಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಿರುವ ಕಂಪನಿಯು ಶೀಘ್ರದಲ್ಲೇ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸಹ ನೀಡಲಿದೆಯೆಂತೆ.

ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಕಾರಿನ ಟರ್ಬೊ ಮಾದರಿಗಳಲ್ಲಿ ಮತ್ತು ಸಾಮಾನ್ಯ ಪೆಟ್ರೋಲ್ ಮಾದರಿಯ ಹೈ ಎಂಡ್ ವೆರಿಯೆಂಟ್‌ಗಳಲ್ಲಿ ಕನೆಕ್ಟೆಡ್ ಟೆಕ್ನಾಲಜಿ ಬಳಕೆ ಮಾಡಿದ್ದು, ಹೊಸ ತಂತ್ರಜ್ಞಾನವು ಕಾರಿಗೆ ಗರಿಷ್ಠ ಭದ್ರತೆ ನೀಡುತ್ತದೆ.


Click it and Unblock the Notifications