ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಮೋಟಾರ್ಸ್(Tata Motors) ಕಂಪನಿಯು ಸದ್ಯ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ತನ್ನ ಸಂಭಾವ್ಯ ಗ್ರಾಹಕರಿಗೆ ಹೊಸ ವರ್ಷದ ಆರಂಭದಲ್ಲಿ ವಿವಿಧ ಡಿಸ್ಕೌಂಟ್ ಆಫರ್ ನೀಡುತ್ತಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಕೋವಿಡ್ ಸಂಕಷ್ಟದ ನಡುವೆಯೂ ಕಾರುಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ವರ್ಷದಲ್ಲಿ ಗ್ರಾಹಕರ ಬೇಡಿಕೆ ಹೆಚ್ಚಳ ನೀರಿಕ್ಷೆಯೊಂದಿಗೆ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದು, ಟಿಯಾಗೊ, ಟಿಗೋರ್, ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಮತ್ತು ನೆಕ್ಸಾನ್ ಕಾರುಗಳ ಮೇಲೆ ವಿಶೇಷ ಆಫರ್ ನೀಡುತ್ತಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ.10 ಸಾವಿರದಿಂದ ಗರಿಷ್ಠ ರೂ.85 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ಆಫರ್‌ಗಳಲ್ಲಿ ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ಕಂಪನಿಯು ರೂ. 30 ಸಾವಿರ ತನಕ ಆಫರ್ ಘೋಷಿಸಿದ್ದು, 2021ರ ಮಾದರಿಯನ್ನು ಖರೀದಿಸುವ ಗ್ರಾಹಕರಿಗೆ ರೂ. 30 ಸಾವಿರದಲ್ಲಿ ರೂ. 25 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 5 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಆಫರ್ ನೀಡುತ್ತಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ. ಟಿಗೋರ್ ಕಾರು ಖರೀದಿಯ ಮೇಲೂ ಗ್ರಾಹಕರು ರೂ.35 ಸಾವಿರ ತನಕ ಉಳಿತಾಯ ಮಾಡಬಹುದಾಗಿದ್ದು, ರೂ. 35 ಸಾವಿರದಲ್ಲಿ ರೂ.25 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ.10 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಆಫರ್ ನೀಡುತ್ತಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಸದ್ಯ ಟಿಯಾಗೋ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.12 ಲಕ್ಷ ಬೆಲೆ ಹೊಂದಿದ್ದರೆ ಟಿಗೋರ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.67 ಲಕ್ಷದಿಂದ ರೂ. 7.84 ಲಕ್ಷ ಬೆಲೆ ಹೊಂದಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಹೊಸ ಆಫರ್‌ಗಳಲ್ಲಿ ಮೊದಲ ಬಾರಿಗೆ ಆಲ್‌ಟ್ರೊಜ್ ಮಾದರಿಯ ಮೇಲೂ ರೂ.10 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಆಫರ್ ನೀಡಲಾಗುತ್ತಿದ್ದು, 1.2 ಲೀಟರ್ ಪೆಟ್ರೋಲ್ ಮತ್ತು 1.5 ಡೀಸೆಲ್ ಎಂಜಿನ್ ಹೊಂದಿರುವ ಆಲ್‌ಟ್ರೊಜ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.89 ಲಕ್ಷದಿಂದ ರೂ. 9.64 ಲಕ್ಷ ಬೆಲೆ ಹೊಂದಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಹೊಸ ಆಫರ್‌ಗಳಲ್ಲಿ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಆವೃತ್ತಿಯ ಮಾದರಿಯ ಮೇಲೆ ಕಂಪನಿಯು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡುತ್ತಿದ್ದು, ಹೊಸ ಆಫರ್ ನಲ್ಲಿ ನೆಕ್ಸಾನ್ ಡಾರ್ಕ್ ಎಡಿಷನ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಸ್ಟ್ಯಾಂಡರ್ಡ್ ಡೀಸೆಲ್ ವೆರಿಯೆಂಟ್‌ಗಳ ಮೇಲೆ ಆಫರ್ ಘೋಷಣೆ ಮಾಡಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.29 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.34 ಲಕ್ಷ ಬೆಲೆ ಹೊಂದಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ನೆಕ್ಸಾನ್ ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಮಾರಾಟಗೊಳ್ಳುತ್ತಿದ್ದು, ಹೊಸ ಕಾರಿನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿರುವ ಡಾರ್ಕ್ ಎಡಿಷನ್ ಉನ್ನತ ಮಾದರಿಯಾಗಿ ಮಾರಾಟಗೊಳ್ಳುತ್ತಿದೆ. ಆದರೆ ಡಾರ್ಕ್ ಎಡಿಷನ್ ಮೇಲೆ ಯಾವುದೇ ಆಫರ್ ನೀಡಲಾಗುತ್ತಿಲ್ಲ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಕಂಪನಿಯು ತನ್ನ ಹೊಸ ಆಫರ್‌ಗಳಲ್ಲಿ ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ರೂ. 85 ಸಾವಿರ ತನಕ ಆಫರ್ ನೀಡುತ್ತಿದ್ದು, 2021ರ ಹ್ಯಾರಿಯರ್ ಸ್ಟ್ಯಾಂಡರ್ಡ್ ಮಾದರಿಗಳ ಮೇಲೆ ರೂ. 60 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 25 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಆಫರ್ ನೀಡುತ್ತಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ಆಫರ್‌ಗಳಲ್ಲಿ ಕಂಪನಿಯು ನ್ಯೂ ಜನರೇಷನ್ ಸಫಾರಿ ಮೇಲೂ ಆಫರ್ ನೀಡುತ್ತಿದ್ದು, 2021ರ ಮಾದರಿಯನ್ನು ಖರೀದಿಸುವ ಗ್ರಾಹಕರಿಗೆ ಕಂಪನಿಯು ರೂ.60 ಸಾವಿರದಷ್ಟು ಕ್ಯಾಶ್ ಡಿಸ್ಕೌಂಟ್ ಮತ್ತು ಎಕ್ಸ್‌ಚೆಂಜ್ ಆಫರ್ ನೀಡುತ್ತಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಹೊಸ ಆಫರ್‌ಗಳಲ್ಲಿ ಟಿಯಾಗೋ ಎನ್ಆರ್‌ಜಿ, ನೆಕ್ಸಾನ್ ಇವಿ, ಪಂಚ್ ಆವೃತ್ತಿಗಳ ಮೇಲೆ ಯಾವುದೇ ಆಫರ್ ನೀಡುತ್ತಿಲ್ಲವಾದರೂ ಡೀಲರ್ಸ್ ಮಟ್ಟದಲ್ಲಿ ಸಂಕ್ರಾಂತಿ ವಿಶೇಷವಾಗಿ ವಿವಿಧ ಆಫರ್‌ಗಳು ಲಭ್ಯವಿದ್ದು, ಹೊಸ ಕಾರುಗಳ ಬೇಡಿಕೆಗೆ ಅನುಗುಣವಾಗಿ ಟಾಟಾ ಕಂಪನಿಯು ಮತ್ತಷ್ಟು ಹೊಸ ಕಾರುಗಳನ್ನು ರಸ್ತೆಗಿಳಿಸುತ್ತಿದೆ.

ಹೊಸ ವರ್ಷ ಸಂಭ್ರಮಕ್ಕಾಗಿ ಟಾಟಾ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಒಂದು ವರ್ಷದಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ವರ್ಷದ ಕಾರು ಮಾರಾಟ ಪ್ರಮಾಣಕ್ಕಿಂತಲೂ ಇದೀಗ ಮೂರು ಪಟ್ಟು ಹೆಚ್ಚಳವಾಗಿದೆ. ಹೊಸ ಕಾರು ಮಾರಾಟದಲ್ಲಿ ಸದ್ಯ ನಿಕಟ ಪ್ರತಿಸ್ಪರ್ಧಿ ಹ್ಯುಂಡೈ ಕಂಪನಿಗೆ ಭರ್ಜರಿ ಪೈಪೋಟಿ ನೀಡಿದ್ದು, ಡಿಸೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಮೂರನೇ ಸ್ಥಾನದಿಂದ ಎರಡನೇ ಸ್ಥಾನ ಪಡೆದುಕೊಂಡಿದೆ.

Most Read Articles

Kannada
English summary
Tata cars new year offers discounts for january 2022 details
Story first published: Saturday, January 8, 2022, 23:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X