ಬೆಲೆ ಹೆಚ್ಚಳ: ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಟಾಟಾ ಮೋಟಾರ್ಸ್(Tata Motors) ಕಂಪನಿಯು ಹೊಸ ವರ್ಷದಲ್ಲಿ ತನ್ನ ಪ್ರಮುಖ ಕಾರುಗಳ ಬೆಲೆ ಹೆಚ್ಚಳ ಮಾಡಿರುವುದಾಗಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ಜನವರಿ 1ರಿಂದಲೇ ಹೊಸ ದರ ಅನ್ವಯಿಸುವಂತೆ ಬೆಲೆ ಏರಿಕೆ ಮಾಡಿರುವುದಾಗಿ ಘೋಷಣೆ ಮಾಡಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಧ್ಯಮ ಕ್ರಮಾಂಕದ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಕೂಡಾ ಇದೀಗ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಕೂಡಾ ಇದೀಗ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದೆ. ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ.0.50 ರಿಂದ ಶೇ. 0.90 ರಷ್ಟು ಹೆಚ್ಚಳ ಮಾಡಲಾಗಿದ್ದು, ಹೊಸ ವರ್ಷದಲ್ಲಿ 2022ರ ಕಾರು ಮಾದರಿಗಳ ಖರೀದಿ ಯೋಜನೆಯಲ್ಲಿದ್ದ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಹೊಸ ದರ ಪಟ್ಟಿ ಪ್ರಕಾರ ಹ್ಯಾರಿಯರ್ ಎಸ್‌ಯುವಿ ಮಾದರಿಯು ಹೆಚ್ಚಿನ ಮಟ್ಟದ ದರ ಏರಿಕೆ ಪಡೆದುಕೊಂಡರೆ ಟಿಗೋರ್ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಅಲ್ಪ ಪ್ರಮಾಣದ ದರ ಏರಿಕೆ ಮಾಡಲಾಗಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 4,500 ರಿಂದ ರೂ.21 ಸಾವಿರದಷ್ಟು ದರ ಹೆಚ್ಚಿಸಲಾಗಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ದರ ಹೆಚ್ಚಳದ ನಡುವೆಯೂ ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ತನ್ನ ಸಂಭಾವ್ಯ ಗ್ರಾಹಕರಿಗೆ ಹೊಸ ವರ್ಷದ ಆರಂಭದಲ್ಲಿ ವಿವಿಧ ಆಫರ್‌ಗಳನ್ನು ಸಹ ನೀಡುತ್ತಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಕೋವಿಡ್ ಸಂಕಷ್ಟದ ನಡುವೆಯೂ ಕಾರುಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ವರ್ಷದಲ್ಲಿ ಗ್ರಾಹಕರ ಬೇಡಿಕೆ ಹೆಚ್ಚಳ ನೀರಿಕ್ಷೆಯೊಂದಿಗೆ ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಕಂಪನಿಯು ಟಿಯಾಗೊ, ಟಿಗೋರ್, ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಮತ್ತು ನೆಕ್ಸಾನ್ ಕಾರುಗಳ 2021ರ ಮಾದರಿಗಳ ಮೇಲೆ ವಿಶೇಷ ಆಫರ್ ನೀಡುತ್ತಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ.10 ಸಾವಿರದಿಂದ ಗರಿಷ್ಠ ರೂ.85 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಹೊಸ ಆಫರ್‌ಗಳಲ್ಲಿ ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ಕಂಪನಿಯು ರೂ. 30 ಸಾವಿರ ತನಕ ಆಫರ್ ಘೋಷಿಸಿದ್ದು, 2021ರ ಮಾದರಿಯನ್ನು ಖರೀದಿಸುವ ಗ್ರಾಹಕರಿಗೆ ರೂ. 30 ಸಾವಿರದಲ್ಲಿ ರೂ. 25 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 5 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಆಫರ್ ನೀಡುತ್ತಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ. ಟಿಗೋರ್ ಕಾರು ಖರೀದಿಯ ಮೇಲೂ ಗ್ರಾಹಕರು ರೂ.35 ಸಾವಿರ ತನಕ ಉಳಿತಾಯ ಮಾಡಬಹುದಾಗಿದ್ದು, ರೂ. 35 ಸಾವಿರದಲ್ಲಿ ರೂ.25 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ.10 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಆಫರ್ ನೀಡುತ್ತಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಟಾಟಾ ಹೊಸ ಆಫರ್‌ಗಳಲ್ಲಿ ಮೊದಲ ಬಾರಿಗೆ ಆಲ್‌ಟ್ರೊಜ್ ಮಾದರಿಯ ಮೇಲೂ ರೂ.10 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಆಫರ್ ನೀಡಲಾಗುತ್ತಿದ್ದು, ನೆಕ್ಸಾನ್ ಆವೃತ್ತಿಯ ಮಾದರಿಯ ಮೇಲೆ ಕಂಪನಿಯು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡುತ್ತಿದೆ. ಹೊಸ ಆಫರ್ ನಲ್ಲಿ ನೆಕ್ಸಾನ್ ಡಾರ್ಕ್ ಎಡಿಷನ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಸ್ಟ್ಯಾಂಡರ್ಡ್ ಡೀಸೆಲ್ ವೆರಿಯೆಂಟ್‌ಗಳ ಮೇಲೆ ಆಫರ್ ಘೋಷಣೆ ಮಾಡಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಟಾಟಾ ಕಂಪನಿಯು ತನ್ನ ಹೊಸ ಆಫರ್‌ಗಳಲ್ಲಿ ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ರೂ. 85 ಸಾವಿರ ತನಕ ಆಫರ್ ನೀಡುತ್ತಿದ್ದು, 2021ರ ಹ್ಯಾರಿಯರ್ ಸ್ಟ್ಯಾಂಡರ್ಡ್ ಮಾದರಿಗಳ ಮೇಲೆ ರೂ. 60 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 25 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಆಫರ್ ನೀಡುತ್ತಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಹೊಸ ಆಫರ್‌ಗಳಲ್ಲಿ ಕಂಪನಿಯು ನ್ಯೂ ಜನರೇಷನ್ ಸಫಾರಿ ಮೇಲೂ ಆಫರ್ ನೀಡುತ್ತಿದ್ದು, 2021ರ ಮಾದರಿಯನ್ನು ಖರೀದಿಸುವ ಗ್ರಾಹಕರಿಗೆ ಕಂಪನಿಯು ರೂ.60 ಸಾವಿರದಷ್ಟು ಕ್ಯಾಶ್ ಡಿಸ್ಕೌಂಟ್ ಮತ್ತು ಎಕ್ಸ್‌ಚೆಂಜ್ ಆಫರ್ ನೀಡುತ್ತಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಹೊಸ ಆಫರ್‌ಗಳಲ್ಲಿ ಟಿಯಾಗೋ ಎನ್ಆರ್‌ಜಿ, ನೆಕ್ಸಾನ್ ಇವಿ, ಪಂಚ್ ಆವೃತ್ತಿಗಳ ಮೇಲೆ ಯಾವುದೇ ಆಫರ್ ನೀಡುತ್ತಿಲ್ಲವಾದರೂ ಡೀಲರ್ಸ್ ಮಟ್ಟದಲ್ಲೂ ಕೆಲವು ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದ್ದು, ಹೊಸ ಕಾರುಗಳ ಬೇಡಿಕೆಗೆ ಅನುಗುಣವಾಗಿ ಟಾಟಾ ಕಂಪನಿಯು ಮತ್ತಷ್ಟು ಹೊಸ ಕಾರುಗಳನ್ನು ರಸ್ತೆಗಿಳಿಸುತ್ತಿದೆ.

ಹೊಸ ವರ್ಷದಲ್ಲಿ ಟಾಟಾ ಕಾರುಗಳ ಖರೀದಿ ಮತ್ತಷ್ಟು ದುಬಾರಿ

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಒಂದು ವರ್ಷದಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ವರ್ಷದ ಕಾರು ಮಾರಾಟ ಪ್ರಮಾಣಕ್ಕಿಂತಲೂ ಇದೀಗ ಮೂರು ಪಟ್ಟು ಹೆಚ್ಚಳವಾಗಿದೆ. ಹೊಸ ಕಾರು ಮಾರಾಟದಲ್ಲಿ ಸದ್ಯ ನಿಕಟ ಪ್ರತಿಸ್ಪರ್ಧಿ ಹ್ಯುಂಡೈ ಕಂಪನಿಗೆ ಭರ್ಜರಿ ಪೈಪೋಟಿ ನೀಡಿದ್ದು, ಡಿಸೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಮೂರನೇ ಸ್ಥಾನದಿಂದ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ.

Article Published On: Tuesday, January 18, 2022, 18:12 [IST]
English summary
Tata cars price hike announced upto rs 21 000 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+