ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ್ದು, ಹೊಸ ದರ ಪಟ್ಟಿಯಲ್ಲಿ ವಿವಿಧ ಮಾದರಿಗಳಿಗೆ ಅನುಸಾರವಾಗಿ ಗರಿಷ್ಠ ಶೇ. 0.55 ರಿಂದ ಶೇ. 1.50 ರಷ್ಟು ದರ ಹಚ್ಚಿಸಲಾಗಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಹೆಚ್ಚುತ್ತಿರುವ ಬಿಡಿಭಾಗಗಳ ನಿರ್ವಹಣಾ ವೆಚ್ಚ ಹಿನ್ನಲೆಯಲ್ಲಿ ಪ್ರಮುಖ ಕಾರು ಕಂಪನಿಗಳು ತಮ್ಮ ಪ್ರಮುಖ ವಾಹನಗಳ ಬೆಲೆಯಲ್ಲಿ ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಸಹ ತನ್ನ ಹೊಸ ಕಾರುಗಳ ಬೆಲೆಯಲ್ಲಿ ಹೆಚ್ಚಳ ಘೋಷಿಸಿದೆ. ಇದು ಈ ವರ್ಷದಲ್ಲಿ ಮೂರನೇ ಬಾರಿಗೆ ದರ ಹೆಚ್ಚಳವಾಗಿದ್ದು, ಹೊಸ ದರ ಪಟ್ಟಿಯಲ್ಲಿ ಪ್ರಮುಖ ಬೆಲೆಯಲ್ಲಿ ಹೆಚ್ಚಳವಾಗಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಧ್ಯಮ ಕ್ರಮಾಂಕದ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಸಹ ಇದೀಗ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಕಳೆದ ಮಾರ್ಚ್‌ನಲ್ಲಿ ಪ್ರತಿ ಕಾರು ಬೆಲೆಯಲ್ಲಿ ಶೇ. 1ರಿಂದ ಶೇ.2 ರಷ್ಟು ಹೆಚ್ಚಳ ಘೋಷಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಜುಲೈ 9ರಿಂದ ಜಾರಿಗೆ ಬರುವಂತೆ ವಿವಿಧ ಕಾರುಗಳ ಬೆಲೆಯಲ್ಲಿ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ. 0.55ರಿಂದ ಶೇ.1.50 ರಷ್ಟು ಬೆಲೆ ಏರಿಕೆ ಮಾಡಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಲೇ ಇದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಹೊಸ ದರ ಪಟ್ಟಿಯಲ್ಲಿ ವಿವಿಧ ರೂಪಾಂತರಗಳ ಆಧಾರದ ಮೇಲೆ ರೂ. 17 ಸಾವಿರ ತನಕ ಬೆಲೆ ಹೆಚ್ಚಿಸಲಾಗಿದ್ದು, ನೆಕ್ಸಾನ್‌ ಮಾದರಿಯಲ್ಲಿ ಗರಿಷ್ಠ ರೂ 17 ಸಾವಿರ ತನಕ ದರ ಹೆಚ್ಚಿಸಲಾಗಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಸಫಾರಿ ಬೆಲೆಯ ಬಗ್ಗೆ ಮಾತನಾಡುವುದಾದರೇ ವಿವಿಧ ರೂಪಾಂತರವನ್ನು ಆಧರಿಸಿ ರೂ. 15 ಸಾವಿರ ತನಕ ಬೆಲೆ ಹೆಚ್ಚಿಸಲಾಗಿದ್ದು, ಆಲ್‌ಟ್ರೊಜ್ ಬೆಲೆಯಲ್ಲಿ ರೂ. 12 ಸಾವಿರ ತನಕ ಮತ್ತು ಪಂಚ್ ಹಾಗೂ ಹ್ಯಾರಿಯರ್ ಬೆಲೆಯಲ್ಲಿ ರೂ. 10 ಸಾವಿರ ಹೆಚ್ಚಿಸಲಾಗಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಟಿಯಾಗೊ, ಟಿಯಾಗೊ ಎನ್‌ಆರ್‌ಜಿ ಮತ್ತು ಟಿಗೊರ್ ಶ್ರೇಣಿಗಳ ಬೆಲೆಯಲ್ಲೂ ಸಹ ರೂ. 5 ಸಾವಿರ ಬೆಲೆ ಹೆಚ್ಚಿಸಲಾಗಿದ್ದು, ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಬೆಲೆ ಏರಿಕೆ ಪಡೆದುಕೊಂಡಿವೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ಕಾರುಗಳ ಬೆಲೆಯಲ್ಲೂ ಶೇ. 1 ರಷ್ಟು ದರ ಹೆಚ್ಚಿಸಲಾಗಿದ್ದು, ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ದರ ಪರಿಷ್ಕರಣೆ ಮಾಡಲಾಗುತ್ತಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಇದರೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಸಬ್-ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ನೆಕ್ಸಾನ್‌ನಲ್ಲಿ ಗ್ರಾಹಕರ ಬೇಡಿಕೆ ಆಧರಿಸಿ ಹೊಸ ವೆರಿಯೆಂಟ್ ಒಂದನ್ನು ಬಿಡುಗಡೆ ಮಾಡಿದ್ದು, ಹೊಸ ಮಾದರಿಯು ವಿವಿಧ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ನೆಕ್ಸಾನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಸುಮಾರು 29 ವೆರಿಯೆಂಟ್‌ಗಳನ್ನು ಹೊಂದಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಒಟ್ಟು ನಾಲ್ಕು ವೆರಿಯೆಂಟ್‌ಗಳನ್ನು ಹೊಂದಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.75 ಲಕ್ಷ ಬೆಲೆ ಹೊಂದಿದ್ದು, ಹೊಸ ವೆರಿಯೆಂಟ್‌ನಲ್ಲಿ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಹೊಸ ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್‌ನಲ್ಲಿ ಕಂಪನಿಯು ಎಲೆಕ್ಟ್ರಿಕ್ ಸನ್‌ರೂಫ್, 7-ಇಂಚಿನ ಫ್ಲೋಟಿಂಗ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಜೊತೆಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಸಿಸ್ಟಂ, ಕೂಲ್ಡ್ ಗ್ಲೋವ್ ಬಾಕ್ಸ್, ರಿಯರ್ ಎಸಿ ವೆಂಟ್‌ಗಳು, ರೈನ್-ಸೆನ್ಸಿಂಗ್ ವೈಪರ್‌ಗಳು, ಆಟೋ ಹೆಡ್‌ಲ್ಯಾಂಪ್ ಸೌಲಭ್ಯಗಳನ್ನು ನೀಡಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಹಾಗೆಯೇ ಹೊಸ ವೆರಿಯೆಂಟ್‌ನಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಡ್ರೈವ್ ಮೋಡ್, 12V ರಿಯರ್ ಪವರ್ ಸಾಕೆಟ್ ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಸಹ ಜೋಡಿಸಲಾಗಿದ್ದು, ಆರಂಭಿಕ ವೆರಿಯೆಂಟ್‌ನಲ್ಲಿ ಹೆಚ್ಚಿನ ಫೀಚರ್ಸ್ ಬಯಸುವ ಗ್ರಾಹಕರಿಗೆ ಇದು ಉತ್ತಮ ಆಯ್ಕೆಯಾಗಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಎಕ್ಸ್ಎಂ ಎಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ನಡುವಿನ ಸ್ಥಾನ ಹೊಂದಿರುವ ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್‌ನಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್ ತೆಗೆದುಹಾಕುವ ಮೂಲಕ ಕೈಗೆಟುವ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಗ್ರಾಹಕರಿಗೆ ಇನ್ನು ಹೆಚ್ಚಿನ ಫೀಚರ್ಸ್ ಬಯಸುವ ಗ್ರಾಹಕರು ಎಕ್ಸ್‌ಜೆಡ್ ಪ್ಲಸ್ ಖರೀದಿಸಬಹುದಾಗಿದೆ.

ಮತ್ತೊಮ್ಮೆ ಹೊಸ ಕಾರುಗಳ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್

ಈ ಮೂಲಕ ನೆಕ್ಸಾನ್ ಮಾದರಿಯು ಇದೀಗ 34 ವೆರಿಯೆಂಟ್‌ಗಳನ್ನು ಹೊಂದಿದಂತಾಗಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಹುತೇಕ ವೆರಿಯೆಂಟ್‌ಗಳಲ್ಲಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಲಭ್ಯವಿದೆ.

Most Read Articles

Kannada
English summary
Tata cars price hiked again up to rs 17000
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X