ದರ ಹೆಚ್ಚಳ: ಟಾಟಾ ಕಾರುಗಳ ಖರೀದಿ ಇದೀಗ ಮತ್ತಷ್ಟು ದುಬಾರಿ!
ಹೆಚ್ಚುತ್ತಿರುವ ಬಿಡಿಭಾಗಗಳ ನಿರ್ವಹಣಾ ವೆಚ್ಚ ಸರಿದೂಗಿಸಲು ಪ್ರಮುಖ ಕಾರು ಕಂಪನಿಗಳು ತಮ್ಮ ಪ್ರಮುಖ ವಾಹನಗಳ ಬೆಲೆ ಹೆಚ್ಚಿಸುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಸಹ ತನ್ನ ಹೊಸ ಕಾರುಗಳ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಧ್ಯಮ ಕ್ರಮಾಂಕದ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಸಹ ಇದೀಗ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯನ್ನು ಹೆಚ್ಚಿಸಿದೆ.

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಲೇ ಇದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಇದೀಗ ಟಾಟಾ ಪ್ರಮುಖ ಕಾರುಗಳ ವಿವಿಧ ವೆರಿಯೆಂಟ್‌ಗಳ ಬೆಲೆಯಲ್ಲಿ ಶೇ.1 ರಷ್ಟು ಹೆಚ್ಚಳ ಮಾಡಲಾಗಿದ್ದು, 2022ರಲ್ಲಿ ಇದು ಎರಡನೇ ಬಾರಿ ದರ ಹೆಚ್ಚಳವಾಗಿದೆ.

ಹೊಸ ದರಪಟ್ಟಿಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.3 ಸಾವಿರದಷ್ಟು ದರ ಹೆಚ್ಚಿಸಲಾಗಿದ್ದು, ದರ ಹೆಚ್ಚಳ ಕುರಿತಾಗಿ ಯಾವುದೇ ನಿಖರ ಮಾಹಿತಿ ಹಂಚಿಕೊಂಡಿಲ್ಲವಾದರೂ ಹೊಸ ಕಾರುಗಳ ದರಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಡೆಟ್ ಮಾಡಲಾಗಿದೆ.

ಹೊಸ ದರಪಟ್ಟಿಯಲ್ಲಿ ಟಿಯಾಗೋ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.22 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.32 ಲಕ್ಷ ಬೆಲೆ ಹೊಂದಿದ್ದರೆ ಟಿಗೋರ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.82 ಲಕ್ಷದಿಂದ ರೂ. 8.14 ಲಕ್ಷ ಬೆಲೆ ಹೊಂದಿದೆ.

ಹಾಗೆಯೇ ಟಿಯಾಗೋ ಎನ್‌ಆರ್‍ಜಿ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.65 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.20 ಲಕ್ಷ ಬೆಲೆ ಹೊಂದಿದ್ದರೆ ಟಿಯಾಗೋ ಸಿಎನ್‌ಜಿ ಮತ್ತು ಟಿಗೋರ್ ಸಿಎನ್‌ಜಿ ಕಾರು ಮಾದರಿಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.12 ಲಕ್ಷದಿಂದ ರೂ. 8.44 ಲಕ್ಷ ಬೆಲೆ ಹೊಂದಿವೆ.

ಹೊಸ ದರಪಟ್ಟಿಯಲ್ಲಿ ಆಲ್‌ಟ್ರೊಜ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.5.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10 ಲಕ್ಷ ಬೆಲೆ ಹೊಂದಿದ್ದು, ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.42 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.74 ಲಕ್ಷ ಬೆಲೆ ಹೊಂದಿದೆ.

ಇದರೊಂದಿಗೆ ಪಂಚ್ ಕಾರು ಮಾದರಿಯು ಹೊಸ ದರಪಟ್ಟಿಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.5.67 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.49 ಲಕ್ಷ ಬೆಲೆ ಹೊಂದಿದ್ದು, ಹ್ಯಾರಿಯರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.53 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.81 ಲಕ್ಷ ಬೆಲೆ ಹೊಂದಿದೆ.

ಇತ್ತೀಚೆಗೆ ಬಿಡುಗಡೆಯಾದ ಸಫಾರಿ ಎಸ್‌ಯುವಿ ಮಾದರಿಯು ಬಿಡುಗಡೆಯಾದ ಒಂದು ವರ್ಷದ ಅಂತರದಲ್ಲಿ ಸಮಾರು ಮೂರು ಬಾರಿ ಬೆಲೆ ಪಡೆದುಕೊಂಡಿದ್ದು, ಹೊಸ ದರ ಪಟ್ಟಿಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.02 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.33 ಲಕ್ಷ ಬೆಲೆ ಹೊಂದಿದೆ.

ದರ ಏರಿಕೆ ಹೊರತಾಗಿಯೂ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಸಂಭಾವ್ಯ ಗ್ರಾಹಕರಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ನೀಡುತ್ತಿದ್ದು, ಹೊಸ ಆಫರ್‌ಗಳು ಮಾರ್ಚ್ ಕೊನೆಯ ತನಕವೂ ಲಭ್ಯವಿರಲಿವೆ.

ಸೆಮಿಕಂಡಕ್ಟರ್ ಕೊರತೆಯ ನಡುವೆಯೂ ಕಾರುಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು 2022ರಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳೊಂದಿಗೆ ಗ್ರಾಹಕರ ಬೇಡಿಕೆ ಹೆಚ್ಚಳ ನೀರಿಕ್ಷೆಯಲ್ಲಿದ್ದು, ವಿವಿಧ ಕಾರುಗಳ ಮೇಲೆ ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡುತ್ತಿದೆ. ಟಿಯಾಗೊ, ಟಿಗೋರ್, ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಮತ್ತು ನೆಕ್ಸಾನ್ ಕಾರುಗಳ ಮೇಲೆ ವಿಶೇಷ ಆಫರ್ ಲಭ್ಯವಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಪಡೆದುಕೊಳ್ಳಬಹುದಾಗಿದೆ.

ಟಾಟಾ ಮೋಟಾರ್ಸ್ ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ.15 ಸಾವಿರದಿಂದ ಗರಿಷ್ಠ ರೂ. 40 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.


Click it and Unblock the Notifications