ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಟಾಟಾ ಹೊಸ ಮೈಲಿಗಲ್ಲು- ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಣೆ!

ಟಾಟಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಇವಿ ಕಾರುಗಳ ಮಾರಾಟದಲ್ಲಿ ದಿನದಿಂದ ದಿನಕ್ಕೆ ಹಲವಾರು ಹೊಸ ದಾಖಲೆಗಳೊಂದಿಗೆ ಮುನ್ನುತ್ತಿದ್ದು, ಟಾಟಾ ಇವಿ ಕಾರುಗಳ ವಿತರಣೆಯನ್ನು ಹೊಸ ದಾಖಲೆಯೊಂದಿಗೆ ನಿರ್ಮಾಣವಾಗಿದೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ಭಾರತದಲ್ಲಿ ಸದ್ಯ ಇವಿ ವಾಹನಗಳ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಇವಿ ವಾಹನಗಳ ಮಾರಾಟ ಸಂಖ್ಯೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಹಲವಾರು ಹೊಸ ದಾಖಲೆಗಳಿಗೆ ಕಾರಣವಾಗಿದೆ. ಇತ್ತೀಚೆಗೆ ಕಂಪನಿಯು ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದ ಪ್ರಮುಖ ಡೀಲರ್ಸ್‌ಗಳಲ್ಲಿ ಒಂದೇ ದಿನ ಬರೋಬ್ಬರಿ 712 ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳನ್ನು ವಿತರಿಸಲಾಗಿದೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ವಿತರಣೆ ಮಾಡಲಾದ 712 ಕಾರುಗಳಲ್ಲಿ 564 ನೆಕ್ಸಾನ್ ಇವಿ ಮತ್ತು 148 ಟಿಗೋರ್ ಇವಿ ಮಾದರಿಗಳನ್ನು ಒಳಗೊಂಡಿದ್ದು, ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಣಾಮ ಹೊಸ ಕಾರು ಖರೀದಿದಾರರು ಇವಿ ಮಾದರಿಗಳಿಗೆ ಆದ್ಯತೆ ನೀಡುತ್ತಿದ್ದಾರೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ಸದ್ಯ ಮಾರುಕಟ್ಟೆಯಲ್ಲಿ ಇತರೆ ಕಾರು ಉತ್ಪಾದನಾ ಕಂಪನಿಗಳಿಂತ ಟಾಟಾ ಮೋಟಾರ್ಸ್ ಕಂಪನಿಯು ಇವಿ ವಾಹನಗಳ ಮೇಲೆ ಹೆಚ್ಚಿನ ಗಮನಹರಿಸಿರುವುದರಿಂದ ಇತರೆ ಇವಿ ಕಾರು ಕಂಪನಿಗಳನ್ನು ಹಿಂದಿಕ್ಕಿ ಗ್ರಾಹಕರನ್ನು ಸೆಳೆಯುತ್ತಿದೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ದೇಶಿಯ ಮಾರುಕಟ್ಟೆಯಲ್ಲಿನ ಇವಿ ಕಾರುಗಳ ಮಾರಾಟದಲ್ಲಿ ಸದ್ಯ ಶೇ.80 ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಅಗ್ರಸ್ಥಾನ ಕಾಯ್ದುಕೊಂಡಿದ್ದು, ಮುಂಬರುವ ದಿನಗಳಲ್ಲಿ ಸಾಮಾನ್ಯ ಕಾರು ಮಾದರಿಗಳನ್ನು ಆಧರಸಿ ಮತ್ತಷ್ಟು ಹೊಸ ಮಾದರಿಗಳನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿದೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ಸಾಮಾನ್ಯ ಮಾದರಿಯ ಪ್ರಯಾಣಿಕರ ಕಾರು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಕಂಪನಿಯು ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಹ್ಯುಂಡೈ ಕಂಪನಿಯು ಮುಂದುವರೆದಿದೆ. ತದನಂತರ ಮೂರನೇ ಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಹ್ಯುಂಡೈ ಕಂಪನಿಯ ಕಾರುಗಳ ಮಾರಾಟಕ್ಕೆ ತೀವ್ರ ಪೈಪೋಟಿ ನೀಡುತ್ತಿದ್ದು, ಇವಿ ಕಾರು ಮಾದರಿಗಳ ಮೂಲಕ ಮತ್ತಷ್ಟು ಹೊಸ ಮೈಲಿಗಲ್ಲು ಸಾಧಿಸುವ ತವಕದಲ್ಲಿದೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ , ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ಟಾಟಾ ಕಂಪನಿಯು ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕರ ಬಳಕೆಯ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯು ಕೂಡಾ ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ಮಾರ್ಚ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 42,293 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 3,357 ಯುನಿಟ್ ಎಲೆಕ್ಟ್ರಿಕ್ ಕಾರು ಮಾದರಿಗಳಾಗಿವೆ. ಮಾರ್ಚ್ ಅವಧಿಯಲ್ಲಿನ ಇವಿ ಕಾರು ಮಾರಾಟವು ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿನ 492 ಯುನಿಟ್ ಮಾರಾಟಕ್ಕೆ ಹೋಲಿಕೆ ಮಾಡಿದರೆ ಕಳೆದ ತಿಂಗಳು ಶೇ.432 ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ನೆಕ್ಸಾನ್ ಇವಿ ಸದ್ಯ ಅಗ್ರಸ್ಥಾನದಲ್ಲಿದ್ದು ನಂತರ ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದುಕೊಂಡಿವೆ. ಹೊಸ ಕಾರು ಮಾದರಿಗಳ ಜೊತೆಗೆ ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳು ಇವಿ ಮಾದರಿಗಳಲ್ಲಿ ಸೇರ್ಪಡೆಗೊಳ್ಳಲಿದ್ದು, ನೆಕ್ಸಾನ್ ಇವಿ ಮಾದರಿಯೊಂದಿಗೆ ಇದುವರೆಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ದಿನೇ ದಿನೇ ದುಬಾರಿಯಾಗುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿ ಯೋಜನೆಯಲ್ಲಿರುವ ಗ್ರಾಹಕರು ಇವಿ ವಾಹನ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ನೆಕ್ಸಾನ್ ಇವಿ ಮೂಲಕ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ 2022ರ ನೆಕ್ಸಾನ್ ಇವಿ ಆವೃತ್ತಿಯನ್ನು ಹಲವು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಲು ಸಿದ್ದಗೊಳ್ಳುತ್ತಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಳ್ಳಲಿದೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ಸದ್ಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ. ನೆಕ್ಸಾನ್ ಇವಿ ಕಾರಿನಲ್ಲಿ 95kW ಎಲೆಕ್ಟ್ರಿಕ್ ಮೋಟಾರ್ ಮತ್ತು 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದ್ದು, 2020ರ ಆವೃತ್ತಿಯು 40kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಬಹುದಾಗಿದೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸದಂತೆ 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರುವ ನೆಕ್ಸಾನ್ ಇವಿ ಕಾರು ಇಕೋ ಡ್ರೈವ್ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 2022ರ ಆವೃತ್ತಿಯಲ್ಲಿ ಮೈಲೇಜ್ ರೇಂಜ್ ಪ್ರಮಾಣವು ಪ್ರತಿ ಚಾರ್ಜ್ 400 ಕಿ.ಮೀ ಗೆ ಹೆಚ್ಚಳವಾಗುವ ಸಾಧ್ಯತೆಗಳಿವೆ.

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇವಿ ಕಾರು ವಿತರಿಸಿದ ಟಾಟಾ

ಹೊಸ ನೆಕ್ಸಾನ್ ಇವಿ ಮಾದರಿಯಲ್ಲಿ ಹೆಚ್ಚಿನ ಮೈಲೇಜ್ ರೇಂಜ್ ಹೊಂದಿರುವ ಮಾದರಿಗಾಗಿ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಕಂಪನಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಸಿದ್ದಪಡಿಸಿದೆ.

More from DriveSpark

Article Published On: Tuesday, April 5, 2022, 8:45 [IST]
English summary
Tata delivers 712 ev cars in maharashtra and goa on one single day
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+