YouTube

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ ತನ್ನ ಜನಪ್ರಿಯ ಎಸ್‌ಯುವಿ ಮಾದರಿಯಾದ ಹ್ಯಾರಿಯರ್ ಫೇಸ್‌ಲಿಫ್ಟ್ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಹೊಸ ಕಾರು ಬಿಡುಗಡೆಗಾಗಿ ಕಂಪನಿಯು ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಪ್ರಸ್ತುತ ಮಾರುಕಟ್ಟೆಯಲ್ಲಿ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟವು ಸಾಕಷ್ಟು ಏರಿಕೆ ಕಾಣುತ್ತಿದ್ದು, ಮಧ್ಯಮ ಗಾತ್ರದ ಎಸ್‌ಯುವಿಯಲ್ಲಿ ಎಕ್ಸ್‌ಯುವಿ700 ಸದ್ಯ ಮುಂಚೂಣಿಯಲ್ಲಿದ್ದರೆ ಪ್ರತಿಸ್ಪರ್ಧಿಯಾದ ಹ್ಯಾರಿಯರ್ ಮತ್ತು ಸಫಾರಿ ಕೂಡಾ ಉತ್ತಮ ಬೇಡಿಕೆ ಹೊಂದಿವೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಎಕ್ಸ್‌ಯುವಿ700 ಮಾದರಿಗೆ ಹೆಚ್ಚಿನ ಬೇಡಿಕೆಯಿದ್ದರೂ ಪ್ರತಿಸ್ಪರ್ಧಿ ಮಾದರಿಯಾಗಿರುವ ಹ್ಯಾರಿಯರ್ ಮತ್ತು ಸಫಾರಿ ಎಸ್‌ಯುವಿಯ ಬೇಡಿಕೆಯು ಅನುಪಾತ ಸಾಕಷ್ಟು ಕಡಿಮೆಯಿದ್ದು, ಎಕ್ಸ್‌ಯುವಿ700 ಮಾದರಿಯಲ್ಲಿ ಫೀಚರ್ಸ್‌ಗಳನ್ನು ಹ್ಯಾರಿಯರ್ ಮತ್ತು ಸಫಾರಿಯಲ್ಲಿ ಬಯಸುವ ಗ್ರಾಹಕರು ಸಂಖ್ಯೆ ಕೂಡಾ ಹೆಚ್ಚಳವಾಗುತ್ತಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಹೀಗಾಗಿ ಎಕ್ಸ್‌ಯುವಿ700 ಮಾದರಿಗೆ ಪೈಪೋಟಿಯಾಗಿ ಕಂಪನಿಯು ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಮಾದರಿಯನ್ನು ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡುತ್ತಿದ್ದು, ಹೊಸ ಫೇಸ್‌ಲಿಫ್ಟ್ ಆವೃತ್ತಿಯು ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೌಲಭ್ಯದೊಂದಿಗೆ 4x4 ಡ್ರೈವ್ ಸಿಸ್ಟಂ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಜೊತೆಗೆ ಹೊಸ ಕಾರಿನಲ್ಲಿ ಕಂಪನಿಯು ಮರುವಿನ್ಯಾಸಗೊಳಿಸಲಾದ ಫ್ರಂಟ್ ಎಲ್ಇಡಿ ಹೆಡ್‌ಲ್ಯಾಂಡ್ ಡಿಸೈನ್, ಫ್ರಂಟ್ ಗ್ರಿಲ್ ಮತ್ತು ಟೈಲ್ ಲ್ಯಾಂಪ್ ಸೌಲಭ್ಯಗಳನ್ನು ನೀಡಲಿದ್ದು, ಒಳಭಾಗದಲ್ಲಿ 360 ಡಿಗ್ರಿ ಕ್ಯಾಮೆರಾ ಸೌಲಭ್ಯಕ್ಕಾಗಿ ದೊಡ್ಡದಾದ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಬಹುದಾಗಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಹೊಸದಾಗಿ ನೀಡಲಾಗುತ್ತಿರುವ ಎಡಿಎಎಸ್ ಸೌಲಭ್ಯವು ಕಾರಿನ ಮತ್ತಷ್ಟು ಸುರಕ್ಷತೆ ನೀಡುವುದರ ಜೊತೆಗೆ ಪ್ರೀಮಿಯಂ ಅನುಭವ ನೀಡಲು ಸಹಕಾರಿಯಾಗಿದ್ದು, ಎಡಿಎಎಸ್‌ನಲ್ಲಿ ಹ್ಯಾಂಡ್ ಫ್ರೀ ಪಾರ್ಕಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಎಮರ್ಜೆನ್ಸಿ ಬ್ರೇಕಿಂಗ್, ಟ್ರಾಫಿಕ್ ಸೈನ್ ರೆಕಾಗ್ನಿಶನ್, ಬೈಂಡ್ ಸ್ಪಾಟ್ ಮಾನಿಟರಿಂಗ್, ರಿಯರ್ ಕ್ರಾಸ್ ಟ್ರಾಫಿಕ್ ಅಲರ್ಟ್ ಸೌಲಭ್ಯಗಳಿವೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಇದಲ್ಲದೆ ಟಾಟಾ ಮೋಟಾರ್ಸ್ ಕಂಪನಿಯು ಹ್ಯಾರಿಯರ್ ಫೇಸ್‌ಲಿಫ್ಟ್ ಮಾದರಿಯಲ್ಲಿ ಹೊಸದಾಗಿ ಪೆಟ್ರೋಲ್ ಆವೃತ್ತಿಯನ್ನು ಸಹ ಪರಿಚಯಿಸುವ ಯೋಜನೆಯಲ್ಲಿದ್ದು, ಪೆಟ್ರೋಲ್ ಮಾದರಿಗಾಗಿ ಕಂಪನಿಯು ಕಳೆದ ವರ್ಷದಿಂದಲೇ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಹ್ಯಾರಿಯರ್ ಕಾರು ಪ್ರಮುಖ ವೆರಿಯೆಂಟ್‌ಗಳೊಂದಿಗೆ ಡಾರ್ಕ್, ಕಾಜಿರಂಗ, ಜೆಟ್ ವಿಶೇಷ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14.70 ಲಕ್ಷದಿಂದ ಆರಂಭಿಕವಾಗಿ ಟಾಪ್ ಎಂಡ್ ಮಾದರಿಯು ರೂ. 22.20 ಲಕ್ಷ ಬೆಲೆ ಹೊಂದಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

2019ರ ಆರಂಭದಲ್ಲಿ ಬಿಎಸ್-4 ಮಾದರಿಯೊಂದಿಗೆ ಬಿಡುಗಡೆಯಾಗಿದ್ದ ಹ್ಯಾರಿಯರ್ ಕಾರು ಮಾದರಿಯು 2020ರ ಮಧ್ಯಂತರದಲ್ಲಿ ಬಿಎಸ್-6 ಆವೃತ್ತಿಯೊಂದಿಗೆ ಉನ್ನತೀಕರಣಗೊಂಡಿತ್ತು. ಬಿಎಸ್-4 ಮಾದರಿಯೊಂದಿಗೆ ಕನಿಷ್ಠ ಬೇಡಿಕೆ ಹೊಂದಿದ್ದ ಹ್ಯಾರಿಯರ್ ಕಾರು ಮಾದರಿಯು ಬಿಎಸ್-6 ಮಾದರಿಯ ಬಿಡುಗಡೆಯ ನಂತರ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಬಿಎಸ್-4 ಮಾದರಿಯೊಂದಿಗೆ ಕೇವಲ 17 ಸಾವಿರ ಯುನಿಟ್ ಮಾರಾಟಗೊಂಡಿದ್ದ ಹ್ಯಾರಿಯರ್ ಕಾರು ಮಾದರಿಯು ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಣಗೊಂಡ ನಂತರ ಸುಮಾರು 50 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಇದರೊಂದಿಗೆ ಕಂಪನಿಯು ಮುಂಬರುವ ದಿನಗಳಲ್ಲಿ 2022ರ ಮಾದರಿಗಾಗಿ ಹೆಚ್ಚುವರಿ ಬಣ್ಣಗಳನ್ನು ನೀಡಲು ಯೋಜಿಸಿದ್ದು, ಹೊಸ ಮಾದರಿಗಳ ಮೂಲಕ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಟಾಟಾ ಕಂಪನಿಯು ಸದ್ಯ ಹ್ಯಾರಿಯರ್ ಎಸ್‌ಯುವಿಯಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಮಾತ್ರ ನೀಡುತ್ತಿದ್ದು, ಹೊಸ ಕಾರಗಳಲ್ಲಿರುವ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಮಾದರಿಯಲ್ಲಿ 6 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಆಯ್ಕೆ ಹೊಂದಿವೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದ್ದು, ಡೀಸೆಲ್ ಕಾರುಗಳ ಮೇಲೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುತ್ತಿರುವ ಹಿನ್ನಲೆಯಲ್ಲಿ ಹ್ಯಾರಿಯರ್ ಮಾದರಿಯು ಶೀಘ್ರದಲ್ಲಿಯೇ ಪೆಟ್ರೋಲ್ ಮಾದರಿಯಲ್ಲೂ ಬಿಡುಗಡೆಯಾಗಲಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಡೀಸೆಲ್ ಎಂಜಿನ್ ಮಾದರಿಯಲ್ಲೇ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ ಹ್ಯಾರಿಯರ್ ಕಾರು ಶೀಘ್ರದಲ್ಲೇ ಪೆಟ್ರೋಲ್ ಮಾದರಿಯನ್ನು ಸಹ ಪಡೆದುಕೊಳ್ಳಲಿದ್ದು, ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಬಲಿಷ್ಠ ಕಾರು ಮಾದರಿಯಾಗಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಹ್ಯಾರಿಯರ್ ಫೇಸ್‌ಲಿಫ್ಟ್ ಆವೃತ್ತಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದೆ.

ಎಡಿಎಎಸ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್

ಜೊತೆಗೆ ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಹೊಸ ಕಾರಿನ ಬೆಲೆಯು ತುಸು ದುಬಾರಿಯಾಗಿದ್ದರೂ ಸಹ ಪ್ರೀಮಿಯಂ ಫೀಚರ್ಸ್‌ಗಳು ಫೇಸ್‌ಲಿಫ್ಟ್ ಕಾರಿಗೆ ಮತ್ತಷ್ಟು ಬಲಿಷ್ಠತೆ ನೀಡಲಿದ್ದು, ಎಂಜಿನ್ ಪರ್ಫಾಮೆನ್ಸ್‌ನಲ್ಲೂ ಸಾಕಷ್ಟು ಸುಧಾರಣೆ ತಂದಿರುವುದು ಮಾಲಿನ್ಯ ತಡೆಗೆ ಸಹಕಾರಿಯಾಗಿದೆ.

Source: Zigwheels

Most Read Articles

Kannada
English summary
Tata harrier suv spotted testing gets adas new design more details
Story first published: Saturday, October 1, 2022, 21:43 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X