Just In
- 53 min ago
ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ನವೀಕೃತ ಮಾರುತಿ ಆಲ್ಟೊ ಕೆ10 ಸಿಎನ್ಜಿ
- 1 hr ago
ಪೊಲೀಸರಿಗ್ಯಾಕೆ ಬುಲೆಟ್ ಪ್ರೂಫ್ ವಾಹನವಿಲ್ಲ: ಗಣ್ಯರಿಗಿರುವ ಭದ್ರತೆ ಆರಕ್ಷಕರಿಗಿಲ್ಲವೇ? ಕಾರಣ ಇಲ್ಲಿದೆ...
- 1 hr ago
ಕಡಿಮೆ ಮೊತ್ತಕ್ಕೆ ಲೀಸ್ಗೆ ಸಿಗಲಿದೆ ಫೋಕ್ಸ್ವ್ಯಾಗನ್ ವರ್ಟಸ್ ಕಾರು
- 4 hrs ago
ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್
Don't Miss!
- News
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದದ್ದು ತಪ್ಪು: ಆದರೆ..
- Sports
Anil Kumble: ಪಂಜಾಬ್ ಕಿಂಗ್ಸ್ ಕೋಚ್ ಸ್ಥಾನದಿಂದ ಕನ್ನಡಿಗ ಕುಂಬ್ಳೆ ಔಟ್; ಬೇರೆ ಕೋಚ್ ಆಯ್ಕೆ!
- Technology
ಲೆನೊವೊ ಲೀಜನ್ Y70 ಸ್ಮಾರ್ಟ್ಫೋನ್ ಬಿಡುಗಡೆ!..68W ವೇಗದ ಚಾರ್ಜಿಂಗ್!
- Education
Karnataka High Court Recruitment 2022 : 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ವಂಡರ್ಲಾ ಬೆಂಗಳೂರಿನಲ್ಲಿರುವ ವಿಶಿಷ್ಟ ಅಮ್ಯೂಸ್ಮೆಂಟ್ ಪಾರ್ಕ್ ಆಗಿದೆ.
- Finance
ಫೋನ್ ಪೇ, ಗೂಗಲ್ ಪೇ, ಭೀಮ್ App ಬಳಕೆಗೆ ಪೇಮೆಂಟ್ ಶುಲ್ಕ?
- Movies
ಅಪ್ಪು- ದರ್ಶನ್ ಸ್ನೇಹದ ಬಗ್ಗೆ ಹೇಳಿದ ರಾಘಣ್ಣ!
- Lifestyle
ಕಾಲಿನಲ್ಲಿ ಈ 10 ಲಕ್ಷಣಗಳು ಕಂಡು ಬಂದರೆ ಹುಷಾರು! ಮಧುಮೇಹ ತುಂಬಾ ಹೆಚ್ಚಿದೆ ಎಂದು ಸೂಚಿಸುವ ಲಕ್ಷಣಗಳಿವು
ಹೊಸ ಬಣ್ಣ ಆಯ್ಕೆಯೊಂದಿಗೆ ದುಬಾರಿ ಬೆಲೆ ಪಡೆದುಕೊಂಡ ಟಾಟಾ ಹ್ಯಾರಿಯರ್
ಹೆಚ್ಚುತ್ತಿರುವ ಬಿಡಿಭಾಗಗಳ ನಿರ್ವಹಣಾ ವೆಚ್ಚ ಹಿನ್ನಲೆಯಲ್ಲಿ ಪ್ರಮುಖ ಕಾರು ಕಂಪನಿಗಳು ತಮ್ಮ ಪ್ರಮುಖ ವಾಹನಗಳ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಿಸುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಸಹ ತನ್ನ ಪ್ರಮುಖ ಕಾರುಗಳ ಬೆಲೆಯಲ್ಲಿ ಶೇ.1 ರಿಂದ ಶೇ. 2 ರಷ್ಟು ದರ ಹೆಚ್ಚಿಸಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಾರುಗಳ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಲೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಧ್ಯಮ ಕ್ರಮಾಂಕದ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಸಹ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯನ್ನು ಹೆಚ್ಚಿಸಿದೆ.

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಲೇ ಇದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

ಟಾಟಾ ಕಂಪನಿಯ ಹೊಸ ದರಪಟ್ಟಿಯಲ್ಲಿ ಹ್ಯಾರಿಯರ್ ಎಸ್‌ಯುವಿ ಸಹ ಹೆಚ್ಚಿನ ಬೆಲೆ ಏರಿಕೆ ಪಡೆದುಕೊಂಡಿದ್ದು, ಬೆಲೆ ಹೆಚ್ಚಳದೊಂದಿಗೆ ಕಂಪನಿಯು ಹ್ಯಾರಿಯರ್ ಎಸ್‌ಯುವಿಯಲ್ಲಿ ಹೊಸ ಬಣ್ಣದ ಆಯ್ಕೆಯನ್ನು ನೀಡಿದೆ.

ಹೊಸ ದರಪಟ್ಟಿಯಲ್ಲಿ ಹ್ಯಾರಿಯರ್ ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 9,600 ರಿಂದ ರೂ.18,400 ತನಕ ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ಹ್ಯಾರಿಯರ್ ಮಾದರಿಯಲ್ಲಿ ಇದೀಗ ರಾಯಲ್ ಬ್ಲ್ಯೂ ಮತ್ತು ಟೊಪಿಕಲ್ ಮಿಸ್ಟ್ ಎನ್ನುವ ಎರಡು ಹೊಸ ಬಣ್ಣಗಳ ಆಯ್ಕೆಯನ್ನು ನೀಡಲಾಗಿದೆ.

ಇನ್ನು ಕಾರುಗಳ ಮಾರಾಟದಲ್ಲಿ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿರುವ ಟಾಟಾ ಮೋಟಾರ್ಸ್ ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಬಿಡುಗಡೆಯಾಗಲಿರುವ ಟಾಟಾ ಹೊಸ ಕಾರುಗಳಲ್ಲಿ ಹ್ಯಾರಿಯರ್ ಪೆಟ್ರೋಲ್ ಮಾದರಿಯು ಸಹ ಪ್ರಮುಖವಾಗಿದೆ.

ಸದ್ಯ ಮಾರುಕಟ್ಟೆಯಲ್ಲಿ ಡೀಸೆಲ್ ಕಾರುಗಳಿಂತ ಪೆಟ್ರೋಲ್ ಕಾರು ಮಾದರಿಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಹ್ಯಾರಿಯರ್ ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಕಿಯಾ ಸೆಲ್ಟೊಸ್, ಹ್ಯುಂಡೈ ಕ್ರೆಟಾ ಮತ್ತು ಎಂಜಿ ಹೆಕ್ಟರ್ ಮತ್ತು ಸಫಾರಿ ಪ್ರತಿಸ್ಪರ್ಧಿ ಕಾರುಗಳಾದ ಎಕ್ಸ್‌ಯುವಿ700, ಹೆಕ್ಟರ್ ಪ್ಲಸ್ ಮಾರಾಟದಲ್ಲೂ ಪೆಟ್ರೋಲ್ ಕಾರುಗಳ ಮಾರಾಟವೇ ಅಗ್ರಸ್ಥಾನದಲ್ಲಿದೆ.

ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ಕಂಪನಿಯು ಹ್ಯಾರಿಯರ್ ಜೊತೆಗೆ ಸಫಾರಿ ಕಾರಿನಲ್ಲೂ ಪೆಟ್ರೋಲ್ ಎಂಜಿನ್ ಮಾದರಿಯನ್ನು ಬಿಡುಗಡೆಗೊಳಿಸಲು ಸಿದ್ದತೆ ನಡೆಸುತ್ತಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಮಾಹಿತಿಗಳ ಪ್ರಕಾರ, ಹ್ಯಾರಿಯರ್ ಮತ್ತು ಸಫಾರಿ ಪೆಟ್ರೋಲ್ ಮಾದರಿಗಳು 1.5-ಲೀಟರ್ ಡೈರೆಕ್ಟ್-ಇಂಜೆಕ್ಷನ್ ಟರ್ಬೋ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಪರ್ಫಾಮೆನ್ಸ್(150ಬಿಎಚ್‌ಪಿ) ಜೊತೆಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.

ಹೊಸ ಎಂಜಿನ್ ಆಯ್ಕೆ ಪಡೆದುಕೊಂಡಿರುವ ಹ್ಯಾರಿಯರ್ ಮತ್ತು ಸಫಾರಿ ಪೆಟ್ರೋಲ್ ಮಾದರಿಗಳನ್ನು ಸದ್ಯ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಟಾಟಾ ಕಂಪನಿಯು ಹೊಸ ಮಾದರಿಗಳನ್ನು 2022ರ ಮಾದರಿಗಳಲ್ಲಿ ಬಿಡುಗಡೆ ಮಾಡಬಹುದಾಗಿದೆ.

ಮೈಲೇಜ್ ವಿಚಾರವಾಗಿ ಡೀಸೆಲ್ ಎಂಜಿನ್ ಮಾದರಿಗಳು ಇಷ್ಟು ದಿನ ಹೆಚ್ಚಿನ ಬೇಡಿಕೆ ಹೊಂದಿದ್ದರೂ ಡೀಸೆಲ್ ಮಾದರಿಗಿಂತಲೂ ಕಡಿಮೆ ಬೆಲೆ ಮತ್ತು ನಿರ್ವಹಣೆಯಲ್ಲೂ ಡೀಸೆಲ್ ಮಾದರಿಗಿಂತ ಕಡಿಮೆ ಖರ್ಚು ಹೊಂದಿರುವ ಪೆಟ್ರೋಲ್ ಮಾದರಿಗಳೇ ಇದೀಗ ವ್ಯಯಕ್ತಿಕ ಕಾರು ಬಳಕೆದಾರರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿವೆ.

ಟಾಟಾ ಕಂಪನಿಯು ಸದ್ಯ ಹ್ಯಾರಿಯರ್ ಮತ್ತು ಸಫಾರಿ ಎಸ್‌ಯುವಿಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಮಾತ್ರ ನೀಡುತ್ತಿದ್ದು, ಹೊಸ ಕಾರಗಳಲ್ಲಿರುವ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಮಾದರಿಯಲ್ಲಿ 6 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಆಯ್ಕೆ ಹೊಂದಿವೆ.

ಹೊಸ ಕಾರುಗಳು ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದ್ದು, ಡೀಸೆಲ್ ಕಾರುಗಳ ಮೇಲೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುತ್ತಿರುವುದು ಕೂಡಾ ಪೆಟ್ರೋಲ್ ಕಾರುಗಳ ಬಳಕೆಯು ಹೆಚ್ಚುತ್ತಿದೆ.

2018ರ ಆಟೋ ಎಕ್ಸ್‌ಫೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಹ್ಯಾರಿಯರ್ ಕಾರು ಮಾದರಿಯು 2019ರ ಜನವರಿಯಲ್ಲಿ ಅಧಿಕೃತವಾಗಿ ಬಿಡುಗಡೆಗೊಂಡಿತ್ತು. ಹೊಸ ಕಾರು ಬಿಡುಗಡೆಯ ನಂತರ ಬೇಡಿಕೆಯಲ್ಲಿ ಏರಿಳಿತದೊಂದಿಗೆ ಇದುವರೆಗೆ 60 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟ ಗುರಿತಲುಪಿದೆ.

ಬಿಎಸ್-4 ಮಾದರಿಯೊಂದಿಗೆ ಕೇವಲ 17 ಸಾವಿರ ಯುನಿಟ್ ಮಾರಾಟಗೊಂಡಿದ್ದ ಹ್ಯಾರಿಯರ್ ಕಾರು ಮಾದರಿಯು ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಣಗೊಂಡ ನಂತರ ಸುಮಾರು 33 ಸಾವಿರ ಯುನಿಟ್ ಮಾರಾಟಗೊಂಡಿದೆ.

ಹ್ಯಾರಿಯರ್ ಕಾರು ಮಾದರಿಗೆ ಮೊದಲ ಎರಡು ವರ್ಷದ ಬೇಡಿಕೆ ಪ್ರಮಾಣವು ಕಳೆದ ಹತ್ತು ತಿಂಗಳಿನಲ್ಲಿ ಬೇಡಿಕೆ ಹರಿದುಬಂದಿದ್ದು, 2020ರ ಕೊನೆಯ ತನಕವು 25 ಸಾವಿರ ಯುನಿಟ್ ಕೂಡಾ ಮಾರಾಟಗೊಂಡಿರಲಿಲ್ಲ. ಆದರೆ ಕೆಳೆದ ವರ್ಷದ ಮಧ್ಯಂತರದಿಂದ ಟಾಟಾ ಕಾರುಗಳ ಬೇಡಿಕೆಯಲ್ಲಿ ಹೊಸ ಟ್ರೆಂಡ್ ಸೃಷ್ಠಿಸಿದ್ದು, ಹ್ಯಾರಿಯರ್ ಸೇರಿದಂತೆ ಕಂಪನಿಯ ಪ್ರಮುಖ ಕಾರುಗಳ ಮಾರಾಟವು ಹಲವಾರು ಹೊಸ ದಾಖಲೆಗಳಿಗೆ ಕಾರಣವಾಗುತ್ತಿವೆ.