ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಟಾಟಾ ಮೋಟಾರ್ಸ್(Tata Motors) ನಿರ್ಮಾಣದ ನೆಕ್ಸಾನ್(Nexon) ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಉತ್ಪಾದನೆಯಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಕಾರಿನ 3 ಲಕ್ಷ ಯುನಿಟ್ ಉತ್ಪಾದನೆಯನ್ನು ಪೂರ್ಣಗೊಳಿಸಿ ಹೊಸ ಮೈಲಿಗಲ್ಲು ಸಾಧಿಸಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಗ್ರಾಹಕರ ವಿಶ್ವಾಸದಂತೆ ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ನೆಕ್ಸಾನ್ ಫೇಸ್‌ಲಿಫ್ಟ್ ಮಾದರಿಯ ಬಿಡುಗಡೆಯ ನಂತರ ಹೊಸ ಕಾರಿನ ಮಾರಾಟದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಹೊಸ ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ ಪಡೆದ ನಂತರ ಕಾರು ಮಾರಾಟವು ನಿರಂತವಾಗಿ ಏರಿಕೆಯಾಗುತ್ತಿದ್ದು, ಸ್ವದೇಶಿ ಕಂಪನಿಗಳ ನಿರ್ಮಿತ ವಾಹನ ಬಳಕೆಗೆ ಗ್ರಾಹಕರ ಒಲವು ತೋರುತ್ತಿರುವುದು ಕೂಡಾ ಟಾಟಾ ಕಾರುಗಳ ಮಾರಾಟ ಬೆಳವಣಿಗೆ ಮತ್ತೊಂದು ಪ್ರಮುಖ ಕಾರಣವಾಗಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಟಾಟಾ ಮೋಟಾರ್ಸ್ ಕಾರುಗಳ ಮಾರಾಟವು 2020ರ ಮಧ್ಯಂತರದಿಂದ ಭಾರತದಲ್ಲಿ ನಿರಂತರವಾಗಿ ಹೆಚ್ಚಳವಾಗಿದ್ದು, ಇದರಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಅಗ್ರಸ್ಥಾನ ಕಾಯ್ದಕೊಂಡಿದೆ. 2017ರ ಕೊನೆಯಲ್ಲಿ ಬಿಡುಗಡೆಯಾಗಿದ್ದ ನೆಕ್ಸಾನ್ ಕಾರು ಕಳೆದ ವರ್ಷದ ಅವಧಿಯಲ್ಲಿ ಸುಮಾರು 1.50 ಲಕ್ಷ ಯುನಿಟ್ ಮಾರಾಟಗೊಂಡಿದ್ದು, ಇದೀಗ ಉತ್ಪಾದನಾ ಪ್ರಮಾಣವು 3 ಲಕ್ಷ ಯುನಿಟ್‌ಗೆ ತಲುಪಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ನೆಕ್ಸಾನ್ ಕಾರು ಮೊದಲ ಬಾರಿಗೆ ಬಿಡುಗಡೆಯಾದ ಸಂದರ್ಭದಲ್ಲಿ ಪ್ರತಿ ತಿಂಗಳು 2 ಸಾವಿರದಿಂದ 3 ಸಾವಿರ ಯುನಿಟ್ ಮಾತ್ರ ಮಾರಾಟ ಸಂಖ್ಯೆ ಹೊಂದಿತ್ತು. ಆದರೆ ಫೇಸ್‌ಲಿಫ್ಟ್ ಮಾದರಿಯೊಂದಿಗೆ ನೆಕ್ಸಾನ್ ಬೇಡಿಕೆಯು ನಿರಂತರವಾಗಿ ಹೆಚ್ಚಿದ್ದು ಹೊಸ ಕಾರಿನ ಮಾರಾಟವು ಇದೀಗ ಪ್ರತಿ ತಿಂಗಳು ಸರಾಸರಿಯಾಗಿ 9 ಸಾವಿರದಿಂದ 11 ಸಾವಿರ ಯುನಿಟ್‌ಗೆ ತಲುಪಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

2021ರ ಡಿಸೆಂಬರ್ ತಿಂಗಳಿನಲ್ಲಿ ಗರಿಷ್ಠ 12,899 ಯುನಿಟ್ ಮಾರಾಟ ದಾಖಲೆ ಹೊಂದಿರುವ ನೆಕ್ಸಾನ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಒಟ್ಟು 36 ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಬದಲಾವಣೆಗಳೊಂದಿಗೆ ಕಾರು ಉತ್ಪನ್ನಗಳನ್ನು ಉನ್ನತೀಕರಿಸುತ್ತಿರುವ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳುತ್ತಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ನೆಕ್ಸಾನ್ ಕಾರು ಮಾದರಿಗಾಗಿ ಮತ್ತಷ್ಟು ಹೊಸ ಬದಲಾವಣೆ ಮತ್ತು ಸುಧಾರಿತ ವೈಶಿಷ್ಟ್ಯತೆಗಳನ್ನು ಜೋಡಣೆ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು 2022ರ ಮಾದರಿಗಾಗಿ ಹೊಸ ಬಣ್ಣದ ಆಯ್ಕೆ, ಹೊಸ ವಿನ್ಯಾಸದ 16 ಇಂಚಿನ ಅಲಾಯ್ ವೀಲ್ಹ್ ಮತ್ತು ವಾಯ್ಸ್ ಅಸಿಸ್ಟ್ ಸಿಸ್ಟಂ ಸೌಲಭ್ಯದಲ್ಲೂ ಗುರುತರ ಬದಲಾವಣೆ ತರಲು ಸಿದ್ದವಾಗುತ್ತಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಬಿಎಸ್-6 ಎಮಿಷನ್ ನಂತರ ಹಲವಾರು ಬದಲಾವಣೆಗಳೊಂದಿಗೆ ಮಾರಾಟವಾಗುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.39 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.74 ಲಕ್ಷ ಬೆಲೆ ಹೊಂದಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರುವ ನೆಕ್ಸಾನ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಟಾಪ್ 3 ಮಾದರಿಯಾಗಿ ಗುರುತಿಸಿಕೊಂಡಿದ್ದು, ನೆಕ್ಸಾನ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಇತ್ತೀಚೆಗೆ ನೆಕ್ಸಾನ್ ಕಾರಿನಲ್ಲಿ ಹೊಸ ಕಾಜಿರಂಗ ಎಡಿಷನ್‌ನೊಂದಿಗೆ ಬಿಡುಗಡೆಯಾಗಿದ್ದು, ವಿವಿಧ ವೆರಿಯೆಂಟ್‌ಗಳೊಂದಿಗೆ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಕಾಜಿರಂಗ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.74 ಲಕ್ಷ ಬೆಲೆ ಹೊಂದಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಕಾಜಿರಂಗ ಆವೃತ್ತಿಗಳಿಗೆ ಮೆಟೆರಿಯಲ್ ಬ್ರೋಂಜ್ ಬಣ್ಣದ ಆಯ್ಕೆ ನೀಡಲಾಗಿದ್ದು, ಹೊಸ ಬಣ್ಣದ ಜೊತೆಗೆ ಕಾರಿನ ಹಿಂಬದಿಯ ಟೈಲ್‌ಗೇಟ್, ವ್ಹೀಲ್, ಫೆಂಡರ್‌ಗಳು ಮತ್ತು ಇಂಟಿರಿಯರ್‌ನಲ್ಲಿ ರೈನೊ ಬ್ಯಾಜ್ಡ್ ಜೊತೆಗೆ ಕಾರಿನ ಇಂಟಿರಿಯರ್‌ನಲ್ಲಿ ರೈನೊ ಮೋಟಿಫ್ ಜೋಡಿಸಲಾಗಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಹೊಸ ಆವೃತ್ತಿಗಳು ಆಕರ್ಷಕ ಬಣ್ಣದ ಆಯ್ಕೆ ಜೊತೆಗೆ ಕೆಲವು ಕೆಲವು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಇನ್ನುಳಿದಂತೆ ಎಲ್ಲಾ ತಾಂತ್ರಿಕ ಸೌಲಭ್ಯಗಳು ಸಾಮಾನ್ಯ ಮಾದರಿಯಲ್ಲಿರುವಂತೆಯೇ ಇರಲಿವೆ. ಕಾಜಿರಂಗ ಮಾದರಿಯನ್ನು ಹೊರತುಪಡಿಸಿ ಸ್ಟ್ಯಾಂಡರ್ಡ್ ನೆಕ್ಸಾನ್ ಮಾದರಿಯಲ್ಲೂ ಹಲವಾರು ಹೊಸ ಸೌಲಭ್ಯಗಳಿದ್ದು, 2022ರ ಮಾದರಿಯೊಂದಿಗೆ ಶೀಘ್ರದಲ್ಲಿಯೇ ಮಾರುಕಟ್ಟೆ ಪ್ರವೇಶಿಸಲಿದೆ.

ಟಾಟಾ ಕಾರು ಉತ್ಪಾದನೆಯಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಜೊತೆಗೆ 2022ರ ಏಪ್ರಿಲ್ 1ರಿಂದ ಕೇಂದ್ರ ಸರ್ಕಾರವು ಕಡ್ಡಾಯಗೊಳಿಸಿರುವ ಹೊಸ ಎಮಿಷನ್‌ಗೆ ಅನುಗುಣವಾಗಿ ಎಂಜಿನ್ ಉನ್ನತೀಕರಣಗೊಳಿಸಲಾಗಿದ್ದು, ಹೊಸ ಎಮಿಷನ್ ನಿಯಮಗಳಿಂದಾಗಿ ಕನಿಷ್ಠ ಪ್ರಮಾಣದ ಮಾಲಿನ್ಯ ಹೊರಸೂಸುವಿಕೆ ಜೊತೆಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿವೆ.

Article Published On: Tuesday, March 1, 2022, 8:55 [IST]
English summary
Tata motors achieved 3 lakh units production milestone
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+