ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ಹೊಸ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಕಂಪನಿಯು ನೆಕ್ಸಾನ್ ಬಿಡುಗಡೆ ಮಾಡಿದ ಐದು ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಗುರಿತಲುಪಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ಗ್ರಾಹಕರ ವಿಶ್ವಾಸದಂತೆ ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಕಾರು ಉತ್ಪಾದನೆಯಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ನೆಕ್ಸಾನ್ ಫೇಸ್‌ಲಿಫ್ಟ್ ಮಾದರಿಯ ಬಿಡುಗಡೆಯ ನಂತರ ಹೊಸ ಕಾರಿನ ಮಾರಾಟದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ಹೊಸ ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ ಪಡೆದ ನಂತರ ಕಾರು ಮಾರಾಟವು ನಿರಂತವಾಗಿ ಏರಿಕೆಯಾಗುತ್ತಿದ್ದು, ಸ್ವದೇಶಿ ಕಂಪನಿಗಳ ನಿರ್ಮಿತ ವಾಹನ ಬಳಕೆಗೆ ಗ್ರಾಹಕರ ಒಲವು ತೋರುತ್ತಿರುವುದು ಕೂಡಾ ಟಾಟಾ ಕಾರುಗಳ ಮಾರಾಟ ಬೆಳವಣಿಗೆ ಮತ್ತೊಂದು ಪ್ರಮುಖ ಕಾರಣವಾಗಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ಟಾಟಾ ಮೋಟಾರ್ಸ್ ಕಾರುಗಳ ಮಾರಾಟವು 2020ರ ಮಧ್ಯಂತರದಿಂದ ಭಾರತದಲ್ಲಿ ನಿರಂತರವಾಗಿ ಹೆಚ್ಚಳವಾಗಿದ್ದು, ಇದರಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಅಗ್ರಸ್ಥಾನ ಕಾಯ್ದಕೊಂಡಿದೆ. 2017ರ ಕೊನೆಯಲ್ಲಿ ಬಿಡುಗಡೆಯಾಗಿದ್ದ ನೆಕ್ಸಾನ್ ಕಾರು ಕಳೆದ ವರ್ಷದ ಅವಧಿಯಲ್ಲಿ ಸುಮಾರು 2.50 ಲಕ್ಷ ಯುನಿಟ್ ಮಾರಾಟಗೊಂಡಿದ್ದು, ಇದೀಗ ಉತ್ಪಾದನಾ ಪ್ರಮಾಣವು 4 ಲಕ್ಷ ಯುನಿಟ್‌ಗೆ ತಲುಪಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ನೆಕ್ಸಾನ್ ಕಾರು ಮೊದಲ ಬಾರಿಗೆ ಬಿಡುಗಡೆಯಾದ ಸಂದರ್ಭದಲ್ಲಿ ಪ್ರತಿ ತಿಂಗಳು 2 ಸಾವಿರದಿಂದ 3 ಸಾವಿರ ಯುನಿಟ್ ಮಾತ್ರ ಮಾರಾಟ ಸಂಖ್ಯೆ ಹೊಂದಿತ್ತು. ಆದರೆ ಫೇಸ್‌ಲಿಫ್ಟ್ ಮಾದರಿಯೊಂದಿಗೆ ನೆಕ್ಸಾನ್ ಬೇಡಿಕೆಯು ನಿರಂತರವಾಗಿ ಹೆಚ್ಚುತ್ತಿದ್ದು, ಇದೀಗ ಪ್ರತಿ ತಿಂಗಳು ಸರಾಸರಿಯಾಗಿ 10 ಸಾವಿರದಿಂದ 15 ಸಾವಿರ ಯುನಿಟ್‌ಗೆ ತಲುಪಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

2022ರ ಅಗಸ್ಟ್ ತಿಂಗಳಿನಲ್ಲಿ ಗರಿಷ್ಠ 15 ಯುನಿಟ್ ಮಾರಾಟ ದಾಖಲೆ ಹೊಂದಿರುವ ನೆಕ್ಸಾನ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಒಟ್ಟು 29 ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಬದಲಾವಣೆಗಳೊಂದಿಗೆ ಕಾರು ಉತ್ಪನ್ನಗಳನ್ನು ಉನ್ನತೀಕರಿಸುತ್ತಿರುವ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳುತ್ತಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ನೆಕ್ಸಾನ್ ಕಾರು ಮಾದರಿಗಾಗಿ ಮತ್ತಷ್ಟು ಹೊಸ ಬದಲಾವಣೆ ಮತ್ತು ಸುಧಾರಿತ ವೈಶಿಷ್ಟ್ಯತೆಗಳನ್ನು ಜೋಡಣೆ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ಬಿಎಸ್-6 ಎಮಿಷನ್ ನಂತರ ಹಲವಾರು ಬದಲಾವಣೆಗಳೊಂದಿಗೆ ಮಾರಾಟವಾಗುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.60 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.08 ಲಕ್ಷ ಬೆಲೆ ಹೊಂದಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರುವ ನೆಕ್ಸಾನ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಟಾಪ್ 3 ಮಾದರಿಯಾಗಿ ಗುರುತಿಸಿಕೊಂಡಿದ್ದು, ನೆಕ್ಸಾನ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ನೆಕ್ಸಾನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಇತ್ತೀಚೆಗೆ ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗಿದ್ದು, ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.75 ಲಕ್ಷ ಬೆಲೆ ಹೊಂದಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ಹೊಸ ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್‌ನಲ್ಲಿ ಕಂಪನಿಯು ಎಲೆಕ್ಟ್ರಿಕ್ ಸನ್‌ರೂಫ್, 7-ಇಂಚಿನ ಫ್ಲೋಟಿಂಗ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಜೊತೆಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಸಿಸ್ಟಂ, ಕೂಲ್ಡ್ ಗ್ಲೋವ್ ಬಾಕ್ಸ್, ರಿಯರ್ ಎಸಿ ವೆಂಟ್‌ಗಳು, ರೈನ್-ಸೆನ್ಸಿಂಗ್ ವೈಪರ್‌ಗಳು, ಆಟೋ ಹೆಡ್‌ಲ್ಯಾಂಪ್ ಸೌಲಭ್ಯಗಳನ್ನು ನೀಡಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ಹಾಗೆಯೇ ಹೊಸ ವೆರಿಯೆಂಟ್‌ನಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಡ್ರೈವ್ ಮೋಡ್, 12V ರಿಯರ್ ಪವರ್ ಸಾಕೆಟ್ ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಸಹ ಜೋಡಿಸಲಾಗಿದ್ದು, ಆರಂಭಿಕ ವೆರಿಯೆಂಟ್‌ನಲ್ಲಿ ಹೆಚ್ಚಿನ ಫೀಚರ್ಸ್ ಬಯಸುವ ಗ್ರಾಹಕರಿಗೆ ಇದು ಉತ್ತಮ ಆಯ್ಕೆಯಾಗಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ಎಕ್ಸ್ಎಂ ಎಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ನಡುವಿನ ಸ್ಥಾನ ಹೊಂದಿರುವ ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್‌ನಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್ ತೆಗೆದುಹಾಕುವ ಮೂಲಕ ಕೈಗೆಟುವ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಗ್ರಾಹಕರಿಗೆ ಇನ್ನು ಹೆಚ್ಚಿನ ಫೀಚರ್ಸ್ ಬಯಸುವ ಗ್ರಾಹಕರು ಎಕ್ಸ್‌ಜೆಡ್ ಪ್ಲಸ್ ಖರೀದಿಸಬಹುದಾಗಿದೆ.

ಕೇವಲ 5 ವರ್ಷಗಳಲ್ಲಿ 4 ಲಕ್ಷ ಯುನಿಟ್ ಉತ್ಪಾದನೆ ಮೈಲಿಗಲ್ಲು ಸಾಧಿಸಿದ ಟಾಟಾ ನೆಕ್ಸಾನ್

ಹೊಸ ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ ಪಡೆದ ನಂತರ ಕಾರು ಮಾರಾಟವು ನಿರಂತವಾಗಿ ಏರಿಕೆಯಾಗುತ್ತಿದ್ದು, ಸ್ವದೇಶಿ ಕಂಪನಿಗಳ ನಿರ್ಮಿತ ವಾಹನ ಬಳಕೆಗೆ ಗ್ರಾಹಕರ ಒಲವು ತೋರುತ್ತಿರುವುದು ಕೂಡಾ ಟಾಟಾ ಕಾರುಗಳ ಮಾರಾಟ ಬೆಳವಣಿಗೆ ಮತ್ತೊಂದು ಕಾರಣವಾಗಿದೆ.

Article Published On: Wednesday, September 21, 2022, 13:17 [IST]
English summary
Tata motors achieved 4 lakh units production milestone details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+