Just In
- 1 hr ago
ಭಾರತದಲ್ಲಿ ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಗೆ ಸಿದ್ದವಾದ ಎಲೆಕ್ಟ್ರಾನ್ ಇವಿ
- 14 hrs ago
ಆಕರ್ಷಕ ವಿನ್ಯಾಸದ 2022ರ ಹ್ಯುಂಡೈ ಟ್ಯೂಸಾನ್ ಎಸ್ಯುವಿಯ ವಿಶೇಷತೆಗಳು
- 15 hrs ago
ಪಾಸ್ಫೋರ್ಟ್ ಪ್ರಯೋಜನಗಳೇನು? ಏಕೆ ವಿವಿಧ ಬಣ್ಣಗಳಲ್ಲಿ ಲಭ್ಯವಿರುತ್ತವೆ ನೋಡಿ..
- 15 hrs ago
ಬ್ರೇಕ್ ಫೇಲ್ ಆದಾಗ ಕೇವಲ 8 ಸೆಕೆಂಡುಗಳಲ್ಲಿ ಕಾರು ನಿಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಸಲಹೆ
Don't Miss!
- News
Breaking: ಮಹಾರಾಷ್ಟ್ರದಲ್ಲಿ ಗೂಡ್ಸ್ ಮತ್ತು ಪ್ಯಾಸೆಂಜರ್ ರೈಲು ಡಿಕ್ಕಿ
- Travel
ವಿಶ್ವದ ಅತ್ಯಂತ ತೇವವಾದ ಸ್ಥಳಗಳು: ಭೂಮಿಯ ಮೇಲಿನ ಮಳೆಯ ಸ್ಥಳಗಳ ಪಟ್ಟಿ
- Education
UGC Scholarship : ಯುಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
- Movies
ಮಗಳಿಗೆ ದುಬಾರಿ ಗಿಫ್ಟ್ ಕೊಟ್ಟ ನಟ ದುನಿಯಾ ವಿಜಯ್!
- Lifestyle
ಶನಿದೋಷ ನಿವಾರಣೆ ಹಾಗೂ ಸಂಪತ್ತು ವೃದ್ಧಿಗೆ ಕೃಷ್ಣ ಜನ್ಮಾಷ್ಟಮಿಗೆ ಮಾಡಿ ಈ ವಿಶೇಷ ಪರಿಹಾರ
- Technology
ಧಮಾಕಾ ಕೊಡುಗೆ!..ಭರ್ಜರಿ ಡಿಸ್ಕೌಂಟ್ನಲ್ಲಿ ಹೊಸ ಸ್ಮಾರ್ಟ್ಟಿವಿ ನಿಮ್ಮದಾಗಿಸಿಕೊಳ್ಳಿ!
- Finance
ಆಗಸ್ಟ್ 17: ಭಾರತದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು
- Sports
ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಖರೀದಿಸುತ್ತೇನೆ ಎಂದ ಎಲಾನ್ ಮಸ್ಕ್!
ಜುಲೈ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಸಂಭಾವ್ಯ ಗ್ರಾಹಕರಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದೆ.
ಹೊಸ ಆಫರ್‌ಗಳು ಈ ತಿಂಗಳ ಕೊನೆಯ ತನಕ ಲಭ್ಯವಿರಲಿದ್ದು, ಆಯ್ದು ಮಾದರಿಗಳ ಮಾತ್ರ ಹೊಸ ಆಫರ್ ಲಭ್ಯವಿರಲಿದೆ.

ಸೆಮಿಕಂಡಕ್ಟರ್ ಕೊರತೆಯ ನಡುವೆಯೂ ಹೊಸ ಕಾರುಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ವಿವಿಧ ಕಾರುಗಳ ಖರೀದಿ ಹೆಚ್ಚಿಸಲು ಆಕರ್ಷಕ ಆಫರ್‌ಗಳನ್ನು ಸಹ ಘೋಷಣೆ ಮಾಡುತ್ತಿದೆ. ಟಿಯಾಗೊ, ಟಿಗೋರ್, ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಮತ್ತು ನೆಕ್ಸಾನ್ ಕಾರುಗಳ ಮೇಲೆ ವಿಶೇಷ ಆಫರ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್‌ಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ.6 ಸಾವಿರದಿಂದ ಗರಿಷ್ಠ ರೂ. 45 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಟಾಟಾ ಹೊಸ ಆಫರ್‌ಗಳಲ್ಲಿ ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ಕಂಪನಿಯು ರೂ.20 ಸಾವಿರ ತನಕ ಆಫರ್ ಘೋಷಿಸಿದ್ದು, ರೂ. 20 ಸಾವಿರ ಮೌಲ್ಯದ ಆಫರ್‌ನಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 10 ಸಾವಿರ ಎಕ್ಸ್‌ಚೆಂಜ್ ಆಫರ್ ಮತ್ತು ಆಯ್ದ ಮಾದರಿಗಳ ಮೇಲೆ ರೂ. 3 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಸಹ ನೀಡುತ್ತಿದೆ.

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ. ಟಿಗೋರ್ ಕಾರು ಖರೀದಿಯ ಮೇಲೂ ಗ್ರಾಹಕರು ಗರಿಷ್ಠ ರೂ.23 ಸಾವಿರ ತನಕ ಉಳಿತಾಯ ಮಾಡಬಹುದಾಗಿದ್ದು, ರೂ. 23 ಸಾವಿರದಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.10 ಸಾವಿರ ತನಕ ಎಕ್ಸ್‌ಚೆಂಜ್ ಆಫರ್ ಮತ್ತು ಆಯ್ದ ಮಾದರಿಗಳ ಮೇಲೆ ರೂ. 3 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಸಿಗಲಿದೆ.

ಹೊಸ ಆಫರ್‌ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಮಾದರಿಗಳ ಎಕ್ಸ್ಇ, ಎಕ್ಸ್ಎಂ ಮತ್ತು ಎಕ್ಸ್‌ಟಿ ಮಾದರಿಗಳ ಮೇಲೆ ಕನಿಷ್ಠ ಆಫರ್ ಲಭ್ಯವಿದ್ದರೆ ಎಕ್ಸ್‌ಜೆಡ್ ಮಾದರಿಗಳ ಮೇಲೆ ಹೆಚ್ಚಿನ ಆಫರ್ ನೀಡಲಾಗುತ್ತಿದೆ. ಆದರೆ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ.

ಸದ್ಯ ಟಿಯಾಗೋ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.37 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.45 ಲಕ್ಷ ಬೆಲೆ ಹೊಂದಿದ್ದರೆ ಟಿಗೋರ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.97 ಲಕ್ಷದಿಂದ ರೂ. 8.26 ಲಕ್ಷ ಬೆಲೆ ಹೊಂದಿದೆ.

ಟಾಟಾ ಹೊಸ ಆಫರ್‌ಗಳಲ್ಲಿ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಆವೃತ್ತಿಯ ಮೇಲೆ ಗರಿಷ್ಠ ರೂ. 5 ಕಾರ್ಪೊರೇಟ್ ಡಿಸ್ಕೌಂಟ್ ಮಾತ್ರ ಘೋಷಣೆ ಮಾಡಲಾಗಿದ್ದು, ಹೊಸ ಆಫರ್ ನಲ್ಲಿ ಪೆಟ್ರೋಲ್ ವೆರಿಯೆಂಟ್‌ಗಳ ಮೇಲೆ ಕಡಿಮೆ ಆಫರ್ ಲಭ್ಯವಿವೆ.

ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.55 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.90 ಲಕ್ಷ ಬೆಲೆ ಹೊಂದಿದೆ.

ಇನ್ನು ಟಾಟಾ ಕಂಪನಿಯು ತನ್ನ ಹೊಸ ಆಫರ್‌ಗಳಲ್ಲಿ ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ರೂ.45 ಸಾವಿರ ತನಕ ಆಫರ್ ನೀಡುತ್ತಿದ್ದು, ಎಲ್ಲಾ ವೆರಿಯೆಂಟ್‌ಗಳಿಗೂ ಅನ್ವಯಿಸುವಂತೆ ರೂ.40 ಸಾವಿರ ತನಕ ಎಕ್ಸ್‌ಚೆಂಜ್ ಆಫರ್ ಮತ್ತು ರೂ. 5 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ನೀಡುತ್ತಿದೆ.

ಹೊಸ ಆಫರ್‌ಗಳಲ್ಲಿ ಕಂಪನಿಯು ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಮೇಲೂ ರೂ.40 ಸಾವಿರ ಮೌಲ್ಯದ ಆಫರ್ ಘೋಷಣೆ ಮಾಡಿದ್ದು, ಸಫಾರಿಯಲ್ಲಿ ಯಾವುದೇ ಮಾದರಿಗೂ ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗಿಲ್ಲ.

ಹೆಚ್ಚುತ್ತಿರುವ ಬಿಡಿಭಾಗಗಳ ನಿರ್ವಹಣಾ ವೆಚ್ಚ ಹಿನ್ನಲೆಯಲ್ಲಿ ಪ್ರಮುಖ ಕಾರು ಕಂಪನಿಗಳು ತಮ್ಮ ಪ್ರಮುಖ ವಾಹನಗಳ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಿಸುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಸಹ ತನ್ನ ಹೊಸ ಕಾರುಗಳ ಬೆಲೆಯಲ್ಲಿ ತುಸು ಏರಿಕೆ ಮಾಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಧ್ಯಮ ಕ್ರಮಾಂಕದ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಸಹ ಇದೀಗ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯನ್ನು ಹೆಚ್ಚಿಸಿದೆ.

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಪ್ರಯಾಣಿಕರ ಕಾರು ಮಾರಾಟದಲ್ಲಿ ಭರ್ಜರಿಯಾಗಿ ಮುನ್ನಡೆ ಕಾಯ್ದುಕೊಳ್ಳುತ್ತಿದ್ದು, 2022ರ ಜೂನ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.87.46 ರಷ್ಟು ಬೆಳವಣಿಯೊಂದಿಗೆ ಸುಮಾರು 45,197 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ.

ಸೆಮಿಕಂಡಕ್ಟರ್ ಪೂರೈಕೆಯಲ್ಲಿನ ಕೊರತೆ ಮತ್ತು ಆರ್ಥಿಕ ಏರಿಳಿತದ ನಡುವೆಯೂ ಕಳೆದ ವರ್ಷದ ಜೂನ್‌ನಲ್ಲಿ 24,110 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ತಿಂಗಳ ಜೂನ್ ಅವಧಿಯಲ್ಲಿ 45,197 ಕಾರುಗಳ ಮಾರಾಟದ ಮೂಲಕ ಶೇ. 87.46 ರಷ್ಟು ಬೆಳವಣಿಗೆ ಸಾಧಿಸಿದೆ.