Just In
- 3 hrs ago
ಎಲೆಕ್ಟ್ರಿಕ್, ಹೈಬ್ರಿಡ್ ಕಾರುಗಳಲ್ಲಿ ಮಾತ್ರ ರಿಜನರೇಟಿವ್ ಬ್ರೇಕಿಂಗ್ ಏಕೆ ಲಭ್ಯವಿದೆ: ಇದರ ಉಪಯೋಗವೇನು?
- 3 hrs ago
ಹೊಸ ನವೀಕರಣಗಳೊಂದಿಗೆ ಸಿಎಫ್ಮೋಟೋ 150ಎನ್ಕೆ ಬೈಕ್ ಬಿಡುಗಡೆ
- 5 hrs ago
ಏಪ್ರಿಲ್ ತಿಂಗಳ ಟಿವಿಎಸ್ ವಾಹನ ಮಾರಾಟ ವರದಿ: ರಫ್ತಿನಲ್ಲಿ ದಾಖಲೆ ನಿರ್ಮಾಣ
- 5 hrs ago
ಎಲೆಕ್ಟ್ರಿಕ್ ಕಾರ್ ಆಗಿ ಪರಿವರ್ತನೆಗೊಂಡು ಮಿಂಚುತ್ತಿದೆ 1954ರ ಫಿಯೆಟ್ ಕಾರು
Don't Miss!
- News
ಶಿವಮೊಗ್ಗ: ಮಳೆಯಲ್ಲಿ ಸಿಲುಕಿದ್ದ 150 ಮಂದಿಗೆ ಆಪತ್ಭಾಂಧವರಾದ ಅಗ್ನಿಶಾಮಕ ದಳ
- Sports
MI ಆಡುವ 11ರ ಬಳಗದಲ್ಲಿ ಮಗನಿಗೆ ಅವಕಾಶ ಸಿಗದ ಕುರಿತು ಸಚಿನ್ ತೆಂಡೂಲ್ಕರ್ ಹೇಳಿದ್ದೇನು?
- Lifestyle
ಮೇ. 30ಕ್ಕೆ ಶನಿ ಜಯಂತಿ: ಶನಿ ಧೈಯ್ಯಾ, ಶನಿ ದೋಷವಿದ್ದರೆ ಈ ಪರಿಹಾರಗಳನ್ನು ಮಾಡಿ
- Finance
ಮೇ 24ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
'ಯುಗಾಂತರ' ಧಾರಾವಾಹಿಗೆ ಪ್ರಾಮಾಣಿಕ ಐಎಎಸ್ ಅಧಿಕಾರಿ ಪ್ರೇರಣೆ: ವಾಹಿನಿ ಮುಖ್ಯಸ್ಥರ ಸ್ಪಷ್ಟನೆಯೇನು?
- Technology
ಭಾರತದಲ್ಲಿ ಎಲ್ಜಿ OLED 2022 ಸ್ಮಾರ್ಟ್ ಟಿವಿ ಸರಣಿ ಅನಾವರಣ!
- Education
BSF Recruitment 2022 : 281 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಲ್‌ಟ್ರೊಜ್ ಡಿಸಿಟಿ ಆವೃತ್ತಿಗಾಗಿ ಅಧಿಕೃತ ಬುಕ್ಕಿಂಗ್ ಆರಂಭಿಸಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾದರಿಯಾದ ಆಲ್‌ಟ್ರೊಜ್ ಆವೃತ್ತಿಯಲ್ಲಿ ಡಿಸಿಟಿ ಆಟೋಮ್ಯಾಟಿಕ್ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಆವೃತ್ತಿಗಾಗಿ ಕಂಪನಿಯು ಇದೀಗ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಆಲ್‌ಟ್ರೊಜ್ ಡಿಸಿಟಿ ಆಟೋಮ್ಯಾಟಿಕ್ ಆವೃತ್ತಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿರುವ ಟಾಟಾ ಮೋಟಾರ್ಸ್ ಕಂಪನಿಯು ಆಸಕ್ತ ಗ್ರಾಹಕರಿಂದ ರೂ.21 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಸ್ವಿಕರಿಸುತ್ತಿದ್ದು, ಆಸಕ್ತ ಗ್ರಾಹಕರು ಆನ್‌ಲೈನ್ ಮೂಲಕ ಇಲ್ಲವೇ ನೇರವಾಗಿ ಶೋರೂಂಗಳಲ್ಲೂ ಬುಕ್ಕಿಂಗ್ ಸಲ್ಲಿಸಬಹುದಾಗಿದೆ.

ಟಾಟಾ ಕಂಪನಿಯು ಆಲ್‌ಟ್ರೊಜ್ ಕಾರು ಮಾದರಿಯ ಎಕ್ಸ್‌ಟಿ, ಎಕ್ಸ್‌ಜೆಡ್ ಮತ್ತು ಎಕ್ಸ್‌ಜೆಡ್ ಪ್ಲಸ್ ಮಾದರಿಗಳ 1.2 ಲೀಟರ್ ಪೆಟ್ರೋಲ್ ಆವೃತ್ತಿಯಲ್ಲಿ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.

ಹೊಸ ಆಟೋಮ್ಯಾಟಿಕ್ ಆವೃತ್ತಿಗಳು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಮ್ಯಾನುವಲ್ ಮಾದರಿಗಿಂತಲೂ ರೂ. 15 ಸಾವಿರದಿಂದ ರೂ.30 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿರಲಿದ್ದು, ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿ ಯಶಸ್ವಿ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಹೊಸ ಮಾದರಿಯನ್ನು ಬಿಡುಗಡೆ ಮಾಡಲಾಗುತ್ತಿದೆ.

ಆಲ್‌ಟ್ರೊಜ್ ಕಾರು ಮಾದರಿಯ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರು ಮಾದಿರಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಪ್ರತಿ ಎರಡು ತಿಂಗಳಿಗೆ ಒಂದು ಬಾರಿಗೆ ವೆರಿಯೆಂಟ್‌ಗಳ ಉನ್ನತೀಕರಣ ಮತ್ತು ಹೊಸ ವೆರಿಯೆಂಟ್ ಅಭಿವೃದ್ದಿಗೊಳಿಸುವ ಪ್ರಕ್ರಿಯೆ ಕೈಗೊಂಡಿದೆ.

ಇದೀಗ ಆಲ್‌ಟ್ರೊಜ್ ಮಾದರಿಯಲ್ಲಿ ಆಟೋಮ್ಯಾಟಿಕ್ ಆವೃತ್ತಿಯ ಬಿಡುಗಡೆಗಾಗಿ ಸಿದ್ದವಾಗಿದ್ದು, 1.2 ಲೀಟರ್ ರೆವೊಟ್ರಾನ್ ಪೆಟ್ರೋಲ್ ಮಾದರಿಯ ಹೈ ಎಂಡ್ ಮಾದರಿಗಳಲ್ಲಿ ಮಾತ್ರ ಎಎಂಟಿ ಆಯ್ಕೆ ಲಭ್ಯವಿರಲಿದೆ.

ಆಲ್‌ಟ್ರೊಜ್ ಕಾರು ಮಾದರಿಯು ಸದ್ಯ ಎಕ್ಸ್‌ಇ ಪ್ಲಸ್ ಜೊತೆಗೆ ಎಕ್ಸ್‌ಇ, ಎಕ್ಸ್ಎಂ ಪ್ಲಸ್, ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಆಪ್ಷನ್ ಮತ್ತು ಎಕ್ಸ್‌ಜೆಡ್ ಅರ್ಬನ್ ವೆರಿಯೆಂಟ್‌ಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದೆ.

ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಎಲ್ಲಾ ರೂಪಾಂತರಗಳಲ್ಲೂ 1.2 ಲೀಟರ್ ರೆವೊಟ್ರಾನ್ ಪೆಟ್ರೋಲ್ ಮತ್ತು 1.5 ಲೀಟರ್ ಟರ್ಬೊ ಚಾರ್ಜ್ಡ್ ರೆವೊಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಸದ್ಯಕ್ಕೆ ಆಲ್‌ಟ್ರೊಜ್ ಕಾರಿನಲ್ಲಿ ಕೇವಲ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರ ನೀಡಲಾಗುತ್ತಿದೆ.

ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದೆ.

ಇದೀಗ ಬಿಡುಗಡೆಯಾಗಲಿರುವ 5-ಸ್ಪೀಡ್ ಆಟೋಮ್ಯಾಟಿಕ್ ಆವೃತ್ತಿಯನ್ನು ಪಂಚ್ ಮಾದರಿಯೊಂದಿಗೆ ಹಂಚಿಕೊಳ್ಳಲಿದ್ದು, ನಗರ ಪ್ರದೇಶಗಳಲ್ಲಿ ಚಾಲನೆಯನ್ನು ಸುಲಭವಾಗಿಸಲು ಎಎಂಟಿ ಮಾದರಿಯು ಹೆಚ್ಚಿನ ಬೇಡಿಕೆ ಪಡೆದುಕೊಳ್ಳಲಿದೆ.

ಜೊತೆಗೆ ಆಲ್‌ಟ್ರೊಜ್ ಆಟೋಮ್ಯಾಟಿಕ್ ಆವೃತ್ತಿಗಳಿಗಾಗಿ ವಿಶೇಷ ಬಣ್ಣದ ಆಯ್ಕೆ ನೀಡಲಾಗಿದ್ದು, ಹೊಸ ಒಪೆರಾ ಬ್ಲ್ಯೂ ಬಣ್ಣವನ್ನು ಹೊಸ ಎಎಂಟಿ ಮಾದರಿಗಳಿಗಾಗಿ ನೀಡಲಾಗಿದೆ.

ಆಲ್‌ಟ್ರೊಜ್ ಮಾದರಿಯಲ್ಲಿ ಟಾಟಾ ಕಂಪನಿಯು ಕಳೆದ ಒಂದು ವರ್ಷದಲ್ಲಿ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಸದ್ಯ ಆರಂಭಿಕವಾಗಿ ರೂ.6 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10 ಲಕ್ಷ ಬೆಲೆ ಹೊಂದಿದೆ.

ಇದೀಗ ಬಿಡುಗಡೆಯಾಗಲಿರುವ ಆಟೋಮ್ಯಾಟಿಕ್ ಮಾದರಿಯು ಪೆಟ್ರೋಲ್ ಮಾದರಿಯಲ್ಲಿ ಜೋಡಣೆ ಮಾಡಲಾಗುತ್ತಿದ್ದು, ಟಾಪ್ ಎಂಡ್ ಮಾದರಿಗಳಲ್ಲಿ ಮಾತ್ರ ಖರೀದಿಗೆ ಲಭ್ಯವಾಗಲಿರುವ ಆಟೋಮ್ಯಾಟಿಕ್ ಆವೃತ್ತಿಯು ಮ್ಯಾನುವಲ್ ಮಾದರಿಗಿಂತಲೂ ತುಸು ದುಬಾರಿಯಾಗಿರಲಿವೆ.

ನಗರಪ್ರದೇಶಗಳಲ್ಲಿ ಕಾರು ಚಾಲನೆಗೆ ಹೆಚ್ಚಿನ ಗ್ರಾಹಕರು ಮ್ಯಾನುವಲ್‌ಗಿಂತಲೂ ಹೆಚ್ಚು ಆಟೋಮ್ಯಾಟಿಕ್ ಆವೃತ್ತಿಗಳ ಖರೀದಿಗೆ ಆದ್ಯತೆ ನೀಡುತ್ತಿದ್ದು, ಆಟೋಮ್ಯಾಟಿಕ್ ಆವೃತ್ತಿಯ ನಂತರ ಹೊಸ ಕಾರು ಹ್ಯುಂಡೈ ಐ20 ಮಾದರಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.