ಹೊಸ ನೆಕ್ಸಾನ್ ಇವಿ ಮ್ಯಾಕ್ಸ್‌ನೊಂದಿಗೆ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಪ್ರಮುಖ ಇವಿ ಮಾದರಿಗಳೊಂದಿಗೆ ಮುಂಚೂಣಿ ಸಾಧಿಸುತ್ತಿದ್ದು, ಕಳೆದ ತಿಂಗಳು ಅಗಸ್ಟ್‌ನಲ್ಲೂ ಉತ್ತಮ ಮಾರಾಟ ದಾಖಲಿಸಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ಪ್ರಯಾಣಿಕರ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಮತ್ತು ಹ್ಯುಂಡೈ ನಂತರ ಮೂರನೇ ಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮಾತ್ರ ಇತರೆ ಕಂಪನಿಗಳನ್ನು ಹಿಂದಿಕ್ಕಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಅಗಸ್ಟ್‌ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 47,166 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 3,845 ಯುನಿಟ್ ಎಲೆಕ್ಟ್ರಿಕ್ ಕಾರು ಮಾದರಿಗಳಾಗಿವೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ಈ ಮೂಲಕ ತಿಂಗಳ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಶೇ.276 ರಷ್ಟು ಬೆಳವಣಿಗೆ ಸಾಧಿಸಿದ್ದು, ನೆಕ್ಸಾನ್ ಇವಿ, ನೆಕ್ಸಾನ್ ಇವಿ ಮ್ಯಾಕ್ಸ್, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಮಾದರಿಗಳಿಂದ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ, ನೆಕ್ಸಾನ್ ಇವಿ ಮ್ಯಾಕ್ಸ್ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಟಾಟಾ ಕಂಪನಿಯು ಪ್ರಯಾಣಿಕರ ಬಳಕೆಯ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯು ಕೂಡಾ ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ಇನ್ನು ನೆಕ್ಸಾನ್ ಇವಿ ಮಾದರಿಯು 2019ರಲ್ಲಿ ಮೊದಲ ಬಿಡುಗಡೆಯಾದ ನಂತರ ಹಲವಾರು ಹೊಸ ಬದಲಾಣೆಗಳೊಂದಿಗೆ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದಕೊಂಡಿದ್ದು, ಬಿಡುಗಡೆಯ ನಂತರ ನೆಕ್ಸಾನ್ ಇವಿ ಇದುವರೆಗೆ ಸುಮಾರು 40 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮಾದರಿಯಲ್ಲಿ ಹೆಚ್ಚುವರಿ ಮೈಲೇಜ್ ಪ್ರೇರಿತ ನೆಕ್ಸಾನ್ ಇವಿ ಮ್ಯಾಕ್ಸ್ ವರ್ಷನ್ ಬಿಡುಗಡೆ ನಂತರ ಹೆಚ್ಚಿನ ಬೇಡಿಕೆ ದಾಖಲಿಸುತ್ತಿದ್ದು, ಗ್ರಾಹಕರು ಇದೀಗ ತಮ್ಮ ಬೇಡಿಕೆಗೆ ಅನುಗುಣವಾಗಿ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸಾಮಾನ್ಯ ನೆಕ್ಸಾನ್ ಇವಿ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಂಡಿದ್ದು, ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ಕಾರಿಗಾಗಿ ಮ್ಯಾಕ್ಸ್ ನೇಮ್‌ಪ್ಲೆಮ್ ಬಳಕೆ ಮಾಡಲಾಗಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ಎನ್ನುವ ವೆರಿಯೆಂಟ್‌ಗಳನ್ನು ಹೊಂದಿದ್ದು, ಆರಂಭಿಕವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 17.74 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 19.54 ಲಕ್ಷ ಬೆಲೆ ಹೊಂದಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ ಕಂಪನಿಯು ಎರಡು ಮಾದರಿಯ ಚಾರ್ಜಿಂಗ್ ಆಯ್ಕೆಗಳನ್ನು ನೀಡಿದ್ದು, 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳು ಸಾಮಾನ್ಯ ಮಾದರಿಗಿಂತಲೂ ತುಸು ಹೆಚ್ಚುವರಿ ಬೆಲೆ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾಗಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

3.3 kW ಚಾರ್ಜಿಂಗ್ ಆಯ್ಕೆ ಹೊಂದಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸೊನ್ನೆಯಿಂದ ಶೇ.100 ರಷ್ಟು ಚಾರ್ಜ್ ಮಾಡಲು ಕನಿಷ್ಠ 14 ರಿಂದ 15 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆಗಲು ಕನಿಷ್ಠ 5 ರಿಂದ 6 ಗಂಟೆಗಳ ಕಾಲ ಸಮಯಾವಕಾಶ ತೆಗದುಕೊಳ್ಳುತ್ತದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಇಕೋ ಮೋಡ್‌ನಲ್ಲಿ 437 ಕಿ.ಮೀ ಮೈಲೇಜ್ ಹೊಂದಿದ್ದರೂ ಅದು ವಿವಿಧ ಡ್ರೈವಿಂಗ್ ಮೋಡ್ ಮತ್ತು ರಸ್ತೆ ಸೌಲಭ್ಯಕ್ಕೆ ಅನುಗುಣವಾಗಿ ರಿಯಲ್ ವರ್ಲ್ಡ್ ಮೈಲೇಜ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಲಿದ್ದು, ಇದು ವಿವಿಧ ಡ್ರೈವ್ ಮೋಡ್ ಮತ್ತು ರಸ್ತೆ ಸೌಲಭ್ಯಗಳಿಗೆ ಅನುಗುಣವಾಗಿ ಕನಿಷ್ಠ 300ರಿಂದ 320 ಕಿ.ಮೀ ಮೈಲೇಜ್ ಅನ್ನು ಅರಾಮವಾಗಿ ಪಡೆದುಕೊಳ್ಳಬಹುದಾಗಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ಇನ್ನು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರಿಗೆ ವಿಶೇಷ ಸಾಲ ಸೌಲಭ್ಯಗಳನ್ನು ಘೋಷಣೆ ಮಾಡುತ್ತಿದ್ದು, ಕಂಪನಿಯು ಹೊಸ ಸಾಲ ಸೌಲಭ್ಯಕ್ಕಾಗಿ ಸ್ಟೇಟ್ ಬ್ಯಾಂಕ್ ಇಂಡಿಯಾ ಜೊತೆಗೆ ಪಾಲುದಾರಿಕೆ ಪ್ರಕಟಿಸಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ಭಾರತದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ಸ್ಟೇಟ್ ಬ್ಯಾಂಕ್ ಇಂಡಿಯಾ ಜೊತೆಗೂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಸಾಲ ಸೌಲಭ್ಯಗಳನ್ನು ಘೋಷಣೆ ಮಾಡಿದ್ದು, ಡೀಲರ್ ಫೈನಾನ್ಸ್ ಸೊಲ್ಯೂಷನ್ (e-DFS) ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಟಾಟಾ ಮೋಟಾರ್ಸ್

ತ್ವರಿತಗತಿಯಲ್ಲಿ ಇವಿ ಅಳವಡಿಕೆಗಾಗಿ ಕಂಪನಿಯು ಕಡಿಮೆ ಬಡ್ಡಿದರದೊಂದಿಗೆ ಗರಿಷ್ಠ ಅವಧಿಗಾಗಿ ಸಾಲಗಳನ್ನು ನೀಡಲಾಗುತ್ತಿದ್ದು, ಹೊಸ ಇವಿ ಕಾರು ಮಾದರಿಗಳ ಖರೀದಿಗಾಗಿ ಸುಲಭ ಹಣಕಾಸು ಸೌಲಭ್ಯಕ್ಕಾಗಿ ಕಂಪನಿಯು ಆಕ್ಸಿಸ್ ಬ್ಯಾಂಕ್ ಜೊತೆಗೂ ಸಹ ಪಾಲದಾರಿಕೆ ಘೋಷಣೆ ಮಾಡಿದೆ.

Article Published On: Saturday, September 3, 2022, 11:26 [IST]
English summary
Tata motors electric car sales in august 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+