Just In
- 3 min ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 1 hr ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 16 hrs ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
- 17 hrs ago
ಭಾರತದಲ್ಲಿ ಹೊಸ ಕವಾಸಕಿ ನಿಂಜಾ 400 ಸೂಪರ್ಸ್ಪೋರ್ಟ್ ಬೈಕ್ ಬಿಡುಗಡೆ
Don't Miss!
- Sports
IND vs IRE: ಮೊದಲ ಟಿ20 ಪಂದ್ಯಕ್ಕೂ ವಿಶ್ವಕಪ್ ಬಗ್ಗೆ ಹಾರ್ದಿಕ್ ಪಾಂಡ್ಯ ಮಹತ್ವದ ಹೇಳಿಕೆ
- News
ಪಾಟ್ನಾ: ಡ್ರಗ್ ಇನ್ಸ್ಪೆಕ್ಟರ್ ಮನೆ ಮೇಲೆ ದಾಳಿ: ನೋಟು ಎಣಿಸಲು ಯಂತ್ರ ಆರ್ಡರ್
- Movies
ನವೀನ್ ಸಜ್ಜು ಮೈಸೂರು ಮನೆ ಹೇಗಿದೆ ಗೊತ್ತಾ?
- Technology
LED ಡಿಸ್ಪ್ಲೇ ಹೊಂದಿರುವ ಅತ್ಯುತ್ತಮ ಪವರ್ಬ್ಯಾಂಕ್ಗಳ ಲಿಸ್ಟ್ ಇಲ್ಲಿದೆ!
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Finance
ಜೂನ್ 26: ಕಚ್ಚಾತೈಲ ದರ ಚೇತರಿಕೆ, ಭಾರತದಲ್ಲಿ ಇಂಧನ ದರ ಆಗಿಲ್ಲ ಏರಿಕೆ!
- Education
SSC MTS Admit Card 2022 : ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ನಾಲ್ಕು ಹೊಸ ಕಾರು ಮಾದರಿಗಳಿಗಾಗಿ ಟ್ರೇಡ್‌ಮಾರ್ಕ್ ಸಲ್ಲಿಸಿದ ಟಾಟಾ ಮೋಟಾರ್ಸ್
ಪ್ರಯಾಣಿಕರ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಭವಿಷ್ಯ ಯೋಜನೆಗಳಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಕಾರು ಮಾರಾಟದಲ್ಲಿ ಸದ್ಯ ಟಾಟಾ ಮೋಟಾರ್ಸ್ ಕಂಪನಿಯು ಮಾರುತಿ ಸುಜುಕಿ ಮತ್ತು ಹ್ಯುಂಡೈ ನಂತರ ಮೂರನೇ ಸ್ಥಾನದಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿದ್ದು, ಇತ್ತೀಚೆಗೆ ಬಿಡುಗಡೆಯಾದ ಹೊಸ ಕಾರು ಮಾದರಿಗಳೊಂದಿಗೆ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ. ಹೀಗಾಗಿ ಭವಿಷ್ಯದಲ್ಲಿ ಹೊಸ ತಲೆಮಾರಿನ ಮತ್ತಷ್ಟು ವಿನೂತನ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಕಂಪನಿಯು ಇತ್ತೀಚೆಗೆ ಹೊಸ ಕಾರು ಮಾದರಿಗಳಾಗಿ ಕೇಂದ್ರ ಸಾರಿಗೆ ಇಲಾಖೆಯಲ್ಲಿ ಟ್ರೇಡ್‌ಮಾರ್ಕ್ ಸಲ್ಲಿಸಿದೆ.

ವಿವಿಧ ಕಾರು ವಿಭಾಗದಲ್ಲಿ ಹೊಸ ತಲೆಮಾರಿನ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿರುವ ಟಾಟಾ ಮೋಟಾರ್ಸ್ ಕಂಪನಿಯು ಸಾಮಾನ್ಯ ಕಾರುಗಳ ಜೊತೆಗೆ ಇವಿ ಕಾರು ಮಾದರಿಗಳನ್ನು ಸಹ ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳು ಆಕರ್ಷಕವಾದ ನೇಮ್‌ಪ್ಲೇಟ್ ಹೊಂದಿರಲಿವೆ.

ಟಾಟಾ ಮೋಟಾರ್ಸ್ ಕಂಪನಿಯು ಇತ್ತೀಚೆಗೆ ಭಾರತದಲ್ಲಿ ಕರ್ವ್ ಇವಿ ಕಾನ್ಸೆಪ್ಟ್ ಮತ್ತು ಅವಿನ್ಯಾ ಇವಿ ಕಾನ್ಸೆಪ್ಟ್ ಅನಾವರಣಗೊಳಿಸಿದ ಬೆನ್ನಲ್ಲೇ ಹೊಸ ಟ್ರೇಡ್‌ಮಾರ್ಕ್ ಸಲ್ಲಿಸಿದ್ದು, 2030ರ ವೇಳೆಗೆ ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಮತ್ತಷ್ಟು ಬೇಡಿಕೆಯ ನೀರಿಕ್ಷೆಯೊಂದಿಗೆ ಪ್ರಮುಖ ಮೂರು-ಪ್ಲಾಟ್‌ಫಾರ್ಮ್‌ಗಳಲ್ಲೂ ವಾಹನ ಉತ್ಪಾದನೆ ಕೈಗೊಳ್ಳುತ್ತಿದೆ.

ಹೊಸ ಟ್ರೇಡ್‌ಮಾರ್ಕ್ ಪಟ್ಟಿಯಲ್ಲಿ ಸ್ಟೈಜರ್, ಬೊವಿಟಾ, ಅರೋರ್ ಮತ್ತು ಕ್ಸಿಯೋಮಾರಾ ಎನ್ನುವ ನಾಲ್ಕು ಹೊಸ ಕಾರು ಮಾದರಿಗಳ ಅಭಿವೃದ್ದಿಗೆ ಎದುರುನೋಡುತ್ತಿದ್ದು, ಶೀಘ್ರದಲ್ಲಿ ಹೊಸ ಕಾನ್ಸೆಪ್ಟ್ ಮಾದರಿಗಳ ಅಭಿವೃದ್ದಿ ಚಾಲನೆ ನೀಡಲಿದೆ.

ಸದ್ಯ ಒಂದೇ ತಲೆಮಾರಿನ ಇವಿ ಕಾರುಗಳನ್ನು ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು 2024ರಿಂದ ಎರಡನೇ ತಲೆಮಾರಿನ ಇವಿ ಕಾರುಗಳನ್ನು ಮತ್ತು 2026ರಿಂದ ಮೂರನೇ ತಲೆಮಾರಿನ ಇವಿ ಕಾರುಗಳನ್ನು ರಸ್ತೆಗಿಳಿಸಲಿದೆ.

ಸದ್ಯ ಇವಿ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಒಟ್ಟು 5 ಹೊಸ ಇವಿ ಕಾರು ಮಾದರಿಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಹೊಸ ಯೋಜನೆಗಾಗಿ ಇವಿ ವಾಹನಗಳ ಅಭಿವೃದ್ದಿ, ಉತ್ಪಾದನೆ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಕೂಡಾ ಆರಂಭಿಸಿದೆ.

ಇವಿ ಕಾರುಗಳನ್ನು ಟಾಟಾ ಕಂಪನಿಯು ಸದ್ಯ ಸಾಮಾನ್ಯ ಕಾರುಗಳ ಉತ್ಪಾದನಾ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸುತ್ತಿದ್ದು, ಭವಿಷ್ಯದ ಬೃಹತ್ ಯೋಜನೆಗಳಿಗಾಗಿ ಪ್ರತ್ಯೇಕ ನಿಯಂತ್ರಣ ಹೊಂದಿರುವ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್ (TPEML) ಅಂಗಸಂಸ್ಥೆಯನ್ನು ಸಹ ಆರಂಭಿಸಿದೆ.

ಟಾಟಾ ಮೋಟಾರ್ಸ್ ಕಂಪನಿಯ ಹೊಸ ಅಂಗಸಂಸ್ಥೆಯನ್ನು ರೂ.1,500 ಕೋಟಿ ರೂಪಾಯಿ ಆರಂಭಿಕ ಹೂಡಿಕೆಯೊಂದಿಗೆ ಆರಂಭಗೊಳಿಸಿದ್ದು, ಪ್ರತ್ಯೇಕ ಪ್ಲ್ಯಾಟ್‌ಫಾರ್ಮ ಮೂಲಕ ಇವಿ ವಾಹನಗಳ ಮೇಲೆ ಹೆಚ್ಚಿನ ಗಮನಹರಿಸಲು ನಿರ್ಧರಿಸಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಸದ್ಯ ಐಸಿ ಎಂಜಿನ್ ಪರಿವರ್ತಿತ ಪ್ಲ್ಯಾಟ್‌ಫಾರ್ಮ್ ಬಳಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಭವಿಷ್ಯದ ಇವಿ ಮಾದರಿಗಳಿಗಾಗಿ ಸಿಗ್ಮಾ ಆರ್ಕಿಟೆಕ್ಚರ್ ಮತ್ತು ಸ್ಕೇಟ್‌ಬೋರ್ಡ್ ಪ್ಲ್ಯಾಟ್‌ಫಾರ್ಮ್ ತೆರೆಯುತ್ತಿದೆ.

ಐಸಿ ಎಂಜಿನ್ ಪರಿವರ್ತಿತ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿಯೇ ಟಿಗೋರ್ ಇವಿ, ನೆಕ್ಸಾನ್ ಇವಿ ಮಾದರಿಗಳನ್ನು ಅಭಿವೃದ್ದಿಗೊಳಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಸಿಗ್ಮಾ ಪ್ಲಾಟ್‌ಫಾರ್ಮ್ ಮೂಲಕ ಸಂಪೂರ್ಣವಾಗಿ ಇವಿ ವಾಹನಗಳ ಉತ್ಪಾದನೆಗಾಗಿ ಮೀಸಲಿರಿಸಿದೆ.

ಸಿಗ್ಮಾ ಪ್ಲಾಟ್‌ಫಾರ್ಮ್ ಮೂಲಕ ಮೊದಲ ಇವಿ ಕಾರು ಮಾದರಿಯಾಗಿ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಸಿಯೆರಾ ಇವಿ ಸೇರಿದಂತೆ ಪ್ರಮುಖ ಇವಿ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಸಿಗ್ಮಾ ಪ್ಲಾಟ್‌ಫಾರ್ಮ್ ಅಡಿಯಲ್ಲಿ ನಿರ್ಮಾಣವಾಗುವ ಇವಿ ಕಾರುಗಳು ಐಸಿ ಎಂಜಿನ್ ಪರಿವರ್ತಿತ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಇವಿ ಕಾರುಗಳಿಂತಲೂ ಹೆಚ್ಚು ಹಗುರ ಮತ್ತು ಹೆಚ್ಚಿನ ಕಾರ್ಯಕ್ಷಮತೆ ಪಡೆದುಕೊಂಡಿವೆ.

ಹಾಗೆಯೇ ಕಂಪನಿಯ ಮತ್ತೊಂದು ಸ್ಕೇಟ್‌ಬೋರ್ಡ್ ಪ್ಲ್ಯಾಟ್‌ಫಾರ್ಮ್ ಅಡಿ ಅಭಿವೃದ್ದಿಗೊಳ್ಳಲಿರುವ ಇವಿ ಕಾರುಗಳು ಇನ್ನು ಹೆಚ್ಚಿನ ಮಟ್ಟದ ತಂತ್ರಜ್ಞಾನ ಪ್ರೇರಣೆ ಹೊಂದಿರಲಿದ್ದು, ಸದ್ಯಕ್ಕೆ ಐಸಿ ಎಂಜಿನ್ ಪರಿವರ್ತಿತ ಪ್ಲ್ಯಾಟ್‌ಫಾರ್ಮ್ ನಿಂದ ಸಿಗ್ಮಾ ಪ್ಲಾಟ್‌ಫಾರ್ಮ್‌ಗೆ ಬದಲಾಗುತ್ತಿರುವ ಕಂಪನಿಯು ಸ್ಕೇಟ್‌ಬೋರ್ಡ್ ಪ್ಲ್ಯಾಟ್‌ಫಾರ್ಮ್ ಅನ್ನು ಇನ್ನು ಕೆಲವು ವರ್ಷಗಳ ನಂತರ ಬಳಕೆಗೆ ಯೋಜನೆ ರೂಪಿಸಿದೆ.

ಹೊಸ ಅವಿನ್ಯಾ ಇವಿ ಕಾನ್ಸೆಪ್ಟ್ ಮಾದರಿಯನ್ನು ಕಂಪನಿಯು ಸಂಪೂರ್ಣವಾಗಿ ಡಿಜಿಟಲ್ ಡಿಸೈನ್ ಲಾಂಗ್ವೆಜ್ ಆಧರಿಸಿ ಅಭಿವೃದ್ದಿಗೊಳಿಸುತ್ತಿದ್ದು, 2026ರ ವೇಳೆಗೆ ಹೊಸ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಹಾಗೆಯೇ ಹೊಸ ಕರ್ವ್ ಕಾನ್ಸೆಪ್ಟ್ ಮಾದರಿಯನ್ನು ಮೊದಲು ಇವಿ ಮಾದರಿಯಾಗಿ ಮಾರಾಟ ಮಾಡಲಿರುವ ಟಾಟಾ ಮೋಟಾರ್ಸ್ ಕಂಪನಿಯು ಆಸಕ್ತ ಗ್ರಾಹಕರಿಗಾಗಿ ಸಾಮಾನ್ಯ ಮಾದರಿಯಲ್ಲೂ ಪರಿಚಯಿಸುವ ಯೋಜನೆಯಲ್ಲಿದ್ದು, ಹೊಸ ಕಾರಿನ ಅಧಿಕೃತ ಹೆಸರು ಮುಂಬರುವ ದಿನಗಳಲ್ಲಿ ಬಹಿರಂಗವಾಗಲಿದೆ.