ನೆಕ್ಸಾನ್ ಇವಿ ನಂತರ ಟಿಗೋರ್ ಇವಿ ಬೆಲೆ ಹೆಚ್ಚಿಸಿದ ಟಾಟಾ ಮೋಟಾರ್ಸ್
ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ್ದು, ಹೊಸ ದರ ಪಟ್ಟಿಯಲ್ಲಿ ನೆಕ್ಸಾನ್ ಇವಿ ಜೊತೆ ಟಿಗೋರ್ ಇವಿ ಕೂಡಾ ತುಸು ದುಬಾರಿಯಾಗಿದೆ.

ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಬಿಡಿಭಾಗಗಳ ನಿರ್ವಹಣಾ ವೆಚ್ಚ ಸರಿದೂಗಿಸಲು ಪ್ರಮುಖ ಕಾರು ಕಂಪನಿಗಳು ತಮ್ಮ ಪ್ರಮುಖ ವಾಹನಗಳ ಬೆಲೆ ಹೆಚ್ಚಿಸುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಸಹ ತನ್ನ ಹೊಸ ಕಾರುಗಳ ಬೆಲೆಯಲ್ಲಿ ಹೆಚ್ಚಳ ಮಾಡಿದೆ. ವಿವಿಧ ವೆರಿಯೆಂಟ್‌ಗಳ ಬೆಲೆಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಶೇ.1 ರಿಂದ ಶೇ.2 ರಷ್ಟು ಹೆಚ್ಚಳ ಮಾಡಿದ್ದು, ಹೊಸ ದರ ಪಟ್ಟಿಯಲ್ಲಿ ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ ದರಗಳು ಕೂಡಾ ಏರಿಕೆಯಾಗಿವೆ.

ಹೊಸ ದರ ಪಟ್ಟಿಯಲ್ಲಿ ನೆಕ್ಸಾನ್ ಇವಿ ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 25 ಸಾವಿರದಷ್ಟು ದುಬಾರಿಯಾಗಿದ್ದರೆ ಟಿಗೋರ್ ಇವಿ ಮಾದರಿಯ ಬೆಲೆಯಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ.40 ಸಾವಿರದಷ್ಟು ದರ ಹೆಚ್ಚಳವಾಗಿದೆ.

ಹೊಸ ದರ ಪಟ್ಟಿಯಲ್ಲಿ ನೆಕ್ಸಾನ್ ಇವಿ ಮಾದರಿಯು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 25 ಸಾವಿರದಷ್ಟು ದುಬಾರಿಯಾಗಿದ್ದರೆ ಟಿಗೋರ್ ಇವಿ ಮಾದರಿಯ ಬೆಲೆಯಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ.40 ಸಾವಿರದಷ್ಟು ದರ ಹೆಚ್ಚಳವಾಗಿದೆ.

ದರ ಹೆಚ್ಚಳದ ನಂತರ ನೆಕ್ಸಾನ್ ಎಲೆಕ್ಟ್ರಿಕ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14.54 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.15 ಲಕ್ಷ ಬೆಲೆ ಹೊಂದಿದ್ದು, ಟಿಗೋರ್ ಇವಿ ಮಾದರಿಯು ಆರಂಭಿಕವಾಗಿ ರೂ. 12.24 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.39 ಲಕ್ಷ ಬೆಲೆ ಹೊಂದಿದೆ.

ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಕಳೆದ ತಿಂಗಳಿನಿಂದ ಕಂಪನಿಯು ಇವಿ ಕಾರು ಮಾರಾಟದಲ್ಲಿ ಹೆಚ್ಚಿನ ಬೇಡಿಕೆ ಪಡೆದುಕೊಂಡಿದೆ.

ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕರ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಕಂಪನಿಯು ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯ ಮುಲಕ ಕ್ಯಾಬ್ ಸೇವಾ ವಿಭಾಗದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ ನಂತರ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಇವಿ ವಾಹನಗಳ ಮೂಲಕ ಉತ್ತಮ ಬೇಡಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗುತ್ತಿದೆ.

ದಿನೇ ದಿನೇ ದುಬಾರಿಯಾಗುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿ ಯೋಜನೆಯಲ್ಲಿರುವ ಗ್ರಾಹಕರು ಇವಿ ವಾಹನ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.

ಟಾಟಾ ಮೋಟಾರ್ಸ್ ಕಂಪನಿಯು 2019ರಲ್ಲಿ ಮೊದಲ ಬಾರಿಗೆ ಪ್ರಯಾಣಿಕ ಬಳಕೆಯ ಎಲೆಕ್ಟ್ರಿಕ್ ಕಾರು ಪರಿಚಯಿಸಿದ ನಂತರ ಟಾಟಾ ಕಂಪನಿಯು ಇದುವರೆಗೆ ಸುಮಾರು 20 ಸಾವಿರಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ನೆಕ್ಸಾನ್ ಇವಿ ಕಾರು ಕಂಪನಿಯ ಇವಿ ವಾಹನ ಉತ್ಪಾದನಾ ಯೋಜನೆಗೆ ಹೊಸ ಆಯಾಮ ನೀಡಿದೆ.

ಆರಂಭದಲ್ಲಿ ಟಿಗೋರ್ ಇವಿ ಪರಿಚಯಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ತದನಂತರ ನೆಕ್ಸಾನ್ ಇವಿ ಮಾದರಿಯನ್ನು ಪರಿಚಯಿಸಿದ್ದು, ಕಂಪನಿಯು ಇತ್ತೀಚೆಗೆ ವಾಣಿಜ್ಯ ಬಳಕೆದಾರರಿಗಾಗಿ ಹೊಸದಾಗಿ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯ ಮಾರಾಟಕ್ಕೆ ಚಾಲನೆ ನೀಡಿದೆ.

ಟಿಗೋರ್ ಇವಿ ಮಾದರಿಯನ್ನು ಇತ್ತೀಚೆಗೆ ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಲಾಗಿದ್ದು, ಟಿಗೋರ್ ಇವಿ ಕಾರು ನೆಕ್ಸಾನ್ ಇವಿ ಮಾದರಿಯಲ್ಲೇ ಅತ್ಯುತ್ತಮ ಮೈಲೇಜ್, ಪರ್ಫಾಮೆನ್ಸ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ.

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಕಂಪನಿಯು ಇವಿ ವಾಹನಗಳ ಅಭಿವೃದ್ದಿ, ಉತ್ಪಾದನೆ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಆರಂಭಿಸಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಇವಿ ಕಾರುಗಳನ್ನು ಸಾಮಾನ್ಯ ಕಾರುಗಳ ಉತ್ಪಾದನಾ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಭವಿಷ್ಯದ ಬೃಹತ್ ಯೋಜನೆಗಳಿಗಾಗಿ ಇದೀಗ ಪ್ರತ್ಯೇಕ ನಿಯಂತ್ರಣ ಹೊಂದಿರುವ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್ (TPEML) ಅಂಗಸಂಸ್ಥೆಯನ್ನು ಆರಂಭಿಸಿದೆ.

ಟಾಟಾ ಮೋಟಾರ್ಸ್ ಕಂಪನಿಯ ಹೊಸ ಅಂಗಸಂಸ್ಥೆಯನ್ನು ರೂ. 700 ಕೋಟಿ ರೂಪಾಯಿ ಆರಂಭಿಕ ಹೂಡಿಕೆಯೊಂದಿಗೆ ಆರಂಭಗೊಳಿಸಿದ್ದು, ಪ್ರತ್ಯೇಕ ಪ್ಲ್ಯಾಟ್‌ಫಾರ್ಮ ಮೂಲಕ ಇವಿ ವಾಹನಗಳ ಮೇಲೆ ಹೆಚ್ಚಿನ ಗಮನಹರಿಸಲು ನಿರ್ಧರಿಸಿದೆ.


Click it and Unblock the Notifications