Just In
- 29 min ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 2 hrs ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 16 hrs ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
- 17 hrs ago
ಭಾರತದಲ್ಲಿ ಹೊಸ ಕವಾಸಕಿ ನಿಂಜಾ 400 ಸೂಪರ್ಸ್ಪೋರ್ಟ್ ಬೈಕ್ ಬಿಡುಗಡೆ
Don't Miss!
- News
ಶೀಘ್ರವೇ ಭಾರತ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ: ಪಿಯೂಷ್ ಗೋಯಲ್
- Sports
IND vs IRE: ಮೊದಲ ಟಿ20 ಪಂದ್ಯಕ್ಕೂ ಮುನ್ನ ವಿಶ್ವಕಪ್ ಬಗ್ಗೆ ಹಾರ್ದಿಕ್ ಪಾಂಡ್ಯ ಮಹತ್ವದ ಹೇಳಿಕೆ
- Movies
ನವೀನ್ ಸಜ್ಜು ಮೈಸೂರು ಮನೆ ಹೇಗಿದೆ ಗೊತ್ತಾ?
- Technology
LED ಡಿಸ್ಪ್ಲೇ ಹೊಂದಿರುವ ಅತ್ಯುತ್ತಮ ಪವರ್ಬ್ಯಾಂಕ್ಗಳ ಲಿಸ್ಟ್ ಇಲ್ಲಿದೆ!
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Finance
ಜೂನ್ 26: ಕಚ್ಚಾತೈಲ ದರ ಚೇತರಿಕೆ, ಭಾರತದಲ್ಲಿ ಇಂಧನ ದರ ಆಗಿಲ್ಲ ಏರಿಕೆ!
- Education
SSC MTS Admit Card 2022 : ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಟಾಟಾ ಹ್ಯಾರಿಯರ್ ಎಸ್ಯುವಿಯಲ್ಲಿ ವಿನೂತನ ಫೀಚರ್ಸ್ ಒಳಗೊಂಡಿರುವ ಎಕ್ಸ್ಜೆಡ್ಎಸ್ ವೆರಿಯೆಂಟ್ ಬಿಡುಗಡೆ
ಟಾಟಾ ಮೋಟಾರ್ಸ್ ಕಂಪನಿಯು ಹ್ಯಾರಿಯರ್ ಎಸ್ಯುವಿ ಕಾರು ಮಾದರಿಯಲ್ಲಿ ಬಿಎಸ್-6 ವರ್ಷನ್ ಬಿಡುಗಡೆ ನಂತರ ಗ್ರಾಹಕರ ಬೇಡಿಕೆಯೆಂತೆ ಹಲವಾರು ಬದಲಾವಣೆಗಳನ್ನು ಪರಿಚಯಿಸಿದ್ದು, ಇದೀಗ ಹೊಸ ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ವೊಂದನ್ನು ಬಿಡುಗಡೆ ಮಾಡಿದೆ.

ಹ್ಯಾರಿಯರ್ ಮಾದರಿಯ ಟಾಪ್ ಎಂಡ್ ವೆರಿಯೆಂಟ್ಗಳನ್ನು ಆಧರಿಸಿ ಕಂಪನಿಯು ಎಕ್ಸ್ಜೆಡ್ಎಸ್ ಎನ್ನುವ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಹೊಸ ವೆರಿಯೆಂಟ್ ಎಕ್ಸ್ಜೆಡ್ ಮತ್ತು ಎಕ್ಸ್ಜೆಡ್ ಪ್ಲಸ್ ನಡುವಿನ ಸ್ಥಾನ ಪಡೆದುಕೊಂಡಿದೆ. ಹೊಸ ವೆರಿಯೆಂಟ್ ಗ್ರಾಹಕರ ಬೇಡಿಕೆಯೆಂತೆ ಸಿಂಗಲ್ ಟೋನ್, ಡ್ಯುಯಲ್ ಟೋನ್, ಡಾರ್ಕ್ ಎಡಿಷನ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಮಾದರಿಯು ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20 ಲಕ್ಷ ಬೆಲೆ ಹೊಂದಿದೆ.

ಹೊಸ ಎಕ್ಸ್ಜೆಡ್ಎಸ್ ವೆರಿಯೆಂಟ್ನಲ್ಲಿ ವಿವಿಧ ಮಾದರಿಗಳನ್ನು ಆಧರಿಸಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20 ಲಕ್ಷದಿಂದ ಟಾಪ್ ಎಂಡ್ ಮಾದರಿಯು 21.30 ಲಕ್ಷ ಬೆಲೆ ಪಡೆದುಕೊಂಡಿದ್ದು, ಇದು ಎಕ್ಸ್ಜೆಡ್ ಮಾದರಿಗಿಂತ ರೂ. 1.30 ಲಕ್ಷದಷ್ಟು ದುಬಾರಿಯಾಗಿದ್ದರೆ ಎಕ್ಸ್ಜೆಡ್ ಪ್ಲಸ್ ಮಾದರಿಗಿಂತ ರೂ.35 ಸಾವಿರದಷ್ಟು ಕಡಿಮೆ ಬೆಲೆ ಹೊಂದಿದೆ.

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಮಾದರಿಯಲ್ಲಿ 17 ಇಂಚಿನ ಡ್ಯುಯಲ್ ಟೋನ್ ಅಲಾಯ್ ವ್ಹೀಲ್, ಆಟೋ ಡಿಮ್ಮಿಂಗ್ ಐಆರ್ವಿಎಂ, 6 ಹಂತಗಳಲ್ಲಿ ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಸೌಲಭ್ಯವನ್ನು ಮತ್ತು ಪನೊರಮಿಕ್ ಸನ್ರೂಫ್ ಹೊಂದಿದೆ.

ಜೊತಗೆ ಹೊಸ ಮಾದರಿಯಲ್ಲಿ ಜೆಕ್ಸಾನ್ ಹೆಚ್ಡಿಐ ಪ್ರೊಜೆಕ್ಟರ್ ಹೆಡ್ಲ್ಯಾಂಪ್, 9-ಸ್ಪೀಕರ್ಸ್ ಜೆಬಿಎಲ್ ಸೌಂಡ್ ಸಿಸ್ಟಂ, 8.8 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ವೈರ್ಲೆಸ್ ಅಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ಪ್ಲೇ, ರಿಯರ್ ಪಾರ್ಕಿಂಗ್ ಕ್ಯಾಮೆರಾ, 6 ಏರ್ಬ್ಯಾಗ್, ಆಟೋಮ್ಯಾಟಿಕ್ ಎಸಿ ಮತ್ತು ರೈನ್ ಸೆನ್ಸಿಂಗ್ ವೈಪರ್, ಹೆಡ್ಲ್ಯಾಂಪ್ ಸೌಲಭ್ಯ ಹೊಂದಿದೆ.

ಆದರೆ ಹೈ ಎಂಡ್ ಮಾದರಿಗೆ ಹತ್ತಿರವಾಗಿದ್ದರೂ ಕೆಲವು ಪ್ರಮುಖ ಪ್ರೀಮಿಯಂ ಫೀಚರ್ಸ್ಗಳನ್ನು ಹೊಸ ವೆರಿಯೆಂಟ್ನಲ್ಲಿ ಕೈಬಿಡಲಾಗಿದ್ದು, ಐರಾ(iRA) ಕಾರ್ ಕನೆಕ್ಟ್ ಟೆಕ್ನಾಲಜಿ, ವೆಂಟಿಲೆಟೆಡ್ ಸೀಟ್ ಸೌಲಭ್ಯಗಳನ್ನು ನೀಡಲಾಗಿಲ್ಲ.

ಇದರ ಹೊರತಾಗಿ ಹೊಸ ಮಾದರಿಯಲ್ಲಿ ಇನ್ನುಳಿದ ಮಾದರಿಯಲ್ಲಿರುವಂತೆ ಎಂಜಿನ್ ಮತ್ತು ಇತರೆ ಫೀಚರ್ಸ್ಗಳನ್ನು ಮುಂದುವರಿಸಲಾಗಿದ್ದು, ಸ್ಟ್ಯಾಂಡರ್ಡ್ ಹ್ಯಾರಿಯರ್ ಮಾದರಿಯ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.65 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.21.95 ಲಕ್ಷ ಬೆಲೆ ಹೊಂದಿದೆ.

2019 ಆರಂಭದಲ್ಲಿ ಬಿಎಸ್-4 ಮಾದರಿಯೊಂದಿಗೆ ಬಿಡುಗಡೆಯಾಗಿದ್ದ ಹ್ಯಾರಿಯರ್ ಕಾರು ಮಾದರಿಯು 2020 ಮಧ್ಯಂತರದಲ್ಲಿ ಬಿಎಸ್-6 ಆವೃತ್ತಿಯೊಂದಿಗೆ ಉನ್ನತೀಕರಣಗೊಂಡಿತ್ತು. ಬಿಎಸ್-4 ಮಾದರಿಯೊಂದಿಗೆ ಕನಿಷ್ಠ ಬೇಡಿಕೆ ಹೊಂದಿದ್ದ ಹ್ಯಾರಿಯರ್ ಕಾರು ಮಾದರಿಯು ಬಿಎಸ್-6 ಮಾದರಿಯ ಬಿಡುಗಡೆಯ ನಂತರ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಬಿಎಸ್-4 ಮಾದರಿಯೊಂದಿಗೆ ಕೇವಲ 17 ಸಾವಿರ ಯುನಿಟ್ ಮಾರಾಟಗೊಂಡಿದ್ದ ಹ್ಯಾರಿಯರ್ ಕಾರು ಮಾದರಿಯು ಬಿಎಸ್-6 ಎಂಜಿನ್ನೊಂದಿಗೆ ಉನ್ನತೀಕರಣಗೊಂಡ ನಂತರ ಸುಮಾರು 50 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ. ಇದೀಗ 2022ರ ಮಾದರಿಯಲ್ಲಿ ಮತ್ತಷ್ಟು ಹೊಸ ಬದಲಾವಣೆಗಳೊಂದಿಗೆ ಗ್ರಾಹಕರನ್ನು ಸೆಳೆಯಲು ಸಜ್ಜುಗೊಳ್ಳುತ್ತಿದ್ದು, ಹೊಸ ಬದಲಾವಣೆ ತಕ್ಕಂತೆ ತುಸು ದುಬಾರಿಯಾಗಲಿದೆ.

ಇದರೊಂದಿಗೆ ಕಂಪನಿಯು ಮುಂಬರುವ ದಿನಗಳಲ್ಲಿ 2022ರ ಮಾದರಿಗಾಗಿ ಹೆಚ್ಚುವರಿ ಬಣ್ಣಗಳನ್ನು ನೀಡಲು ಯೋಜಿಸಿದ್ದು, ಹೊಸ ಮಾದರಿಗಳ ಮೂಲಕ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಟಾಟಾ ಕಂಪನಿಯು ಸದ್ಯ ಹ್ಯಾರಿಯರ್ ಎಸ್ಯುವಿಯಲ್ಲಿ ಡೀಸೆಲ್ ಎಂಜಿನ್ ಆಯ್ಕೆ ಮಾತ್ರ ನೀಡುತ್ತಿದ್ದು, ಹೊಸ ಕಾರಗಳಲ್ಲಿರುವ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಮಾದರಿಯಲ್ಲಿ 6 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿವೆ.

ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದ್ದು, ಡೀಸೆಲ್ ಕಾರುಗಳ ಮೇಲೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುತ್ತಿರುವ ಹಿನ್ನಲೆಯಲ್ಲಿ ಹ್ಯಾರಿಯರ್ ಮಾದರಿಯು ಶೀಘ್ರದಲ್ಲಿಯೇ ಪೆಟ್ರೋಲ್ ಮಾದರಿಯಲ್ಲೂ ಬಿಡುಗಡೆಯಾಗಲಿದೆ.

ಡೀಸೆಲ್ ಎಂಜಿನ್ ಮಾದರಿಯಲ್ಲೇ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿರುವ ಹ್ಯಾರಿಯರ್ ಕಾರು ಶೀಘ್ರದಲ್ಲೇ ಪೆಟ್ರೋಲ್ ಮಾದರಿಯನ್ನು ಸಹ ಪಡೆದುಕೊಳ್ಳಲಿದ್ದು, ಮಧ್ಯಮ ಕ್ರಮಾಂಕದ ಎಸ್ಯುವಿ ಕಾರುಗಳಲ್ಲೇ ಬಲಿಷ್ಠ ಕಾರು ಮಾದರಿಯಾಗಿದೆ.

ಹ್ಯಾರಿಯರ್ ಫೇಸ್ಲಿಫ್ಟ್ ಆವೃತ್ತಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದೆ.

ಜೊತೆಗೆ ಪ್ರೀಮಿಯಂ ಫೀಚರ್ಸ್ಗಳಿಂದಾಗಿ ಹೊಸ ಕಾರಿನ ಬೆಲೆಯು ತುಸು ದುಬಾರಿಯಾಗಿದ್ದರೂ ಸಹ ಪ್ರೀಮಿಯಂ ಫೀಚರ್ಸ್ಗಳು ಫೇಸ್ಲಿಫ್ಟ್ ಕಾರಿಗೆ ಮತ್ತಷ್ಟು ಬಲಿಷ್ಠತೆ ನೀಡಲಿದ್ದು, ಎಂಜಿನ್ ಪರ್ಫಾಮೆನ್ಸ್ನಲ್ಲೂ ಸಾಕಷ್ಟು ಸುಧಾರಣೆ ತಂದಿರುವುದು ಮಾಲಿನ್ಯ ತಡೆಗೆ ಸಹಕಾರಿಯಾಗಿದೆ.