ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್(Tata Motors) ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸುತ್ತಿದ್ದು, ಕಂಪನಿಯು ಸಾಮಾನ್ಯ ಕಾರುಗಳ ಮಾರಾಟದ ಜೊತೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಮುಂಚೂಣಿ ಸಾಧಿಸಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಪ್ರಯಾಣಿಕರ ಕಾರು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಕಂಪನಿಯು ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಹ್ಯುಂಡೈ ಕಂಪನಿಯು ಮುಂದುವರೆದಿದೆ. ಮೂರನೇ ಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಹ್ಯುಂಡೈ ಕಂಪನಿಯ ಕಾರು ಮಾರಾಟಕ್ಕೆ ತೀವ್ರ ಪೈಪೋಟಿ ನೀಡುತ್ತಿದ್ದು, ಇವಿ ಕಾರುಗಳ ಮಾರಾಟದಲ್ಲಿ ಇತರೆ ಕಂಪನಿಗಳನ್ನು ಹಿಂದಿಕ್ಕಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ(Nexon EV), ಟಿಗೋರ್ ಇವಿ(Tigor EV) ಮತ್ತು ಎಕ್ಸ್‌ಪ್ರೆಸ್-ಟಿ ಇವಿ(XPres-T EV) ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯು ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಜನವರಿ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 40,777 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 2,892 ಯುನಿಟ್ ಎಲೆಕ್ಟ್ರಿಕ್ ಕಾರು ಮಾದರಿಗಳಾಗಿವೆ. ಜನವರಿ ಅವಧಿಯಲ್ಲಿನ ಇವಿ ಕಾರು ಮಾರಾಟವು ಕಳೆದ ವರ್ಷದ ಜನವರಿ ಅವಧಿಯಲ್ಲಿನ 514 ಯುನಿಟ್ ಮಾರಾಟಕ್ಕೆ ಹೋಲಿಕೆ ಮಾಡಿದರೆ ಶೇ. 463 ರಷ್ಟು ಹೆಚ್ಚು ಬೆಳವಣಿಗೆ ಕಂಡುಬಂದಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಜನವರಿ ಅವಧಿಯಲ್ಲಿನ ಇವಿ ಕಾರು ಮಾರಾಟದಲ್ಲಿ ನೆಕ್ಸಾನ್ ಇವಿ ಮಾದರಿಯು 2 ಸಾವಿರಕ್ಕಿಂತಲೂ ಹೆಚ್ಚು ಯುನಿಟ್ ಮಾರಾಟಗೊಂಡಿದ್ದು, ತದನಂತರ ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದುಕೊಂಡಿವೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮಾದರಿಯು 2019ರಲ್ಲಿ ಮೊದಲ ಬಿಡುಗಡೆಯ ನಂತರ ಹಲವಾರು ಹೊಸ ಬದಲವಾಣೆಗಳೊಂದಿಗೆ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದಕೊಂಡಿದ್ದು, ಬಿಡುಗಡೆಯ ನಂತರ ನೆಕ್ಸಾನ್ ಇವಿ ಇದುವರೆಗೆ ಸುಮಾರು 13,500 ಯುನಿಟ್ ಮಾರಾಟಗೊಂಡಂತಾಗಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ದಿನೇ ದಿನೇ ದುಬಾರಿಯಾಗುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿ ಯೋಜನೆಯಲ್ಲಿರುವ ಗ್ರಾಹಕರು ಇವಿ ವಾಹನ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಆರಂಭದಲ್ಲಿ ಟಿಗೋರ್ ಇವಿ ಪರಿಚಯಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ತದನಂತರ ನೆಕ್ಸಾನ್ ಇವಿ ಮಾದರಿಯನ್ನು ಪರಿಚಯಿಸಿತ್ತು. ಕಂಪನಿಯು ಇತ್ತೀಚೆಗೆ ವಾಣಿಜ್ಯ ಬಳಕೆದಾರರಿಗಾಗಿ ಹೊಸದಾಗಿ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯ ಮಾರಾಟಕ್ಕೆ ಚಾಲನೆ ನೀಡಿದ್ದು, ಟಿಗೋರ್ ಇವಿ ಹೊಸ ಮಾದರಿಯು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಿಗೋರ್ ಇವಿ ಮಾದರಿಯನ್ನು ಇತ್ತೀಚೆಗೆ ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಲಾಗಿದ್ದು, ಟಿಗೋರ್ ಇವಿ ಕಾರು ನೆಕ್ಸಾನ್ ಇವಿ ಮಾದರಿಯಲ್ಲೇ ಅತ್ಯುತ್ತಮ ಮೈಲೇಜ್, ಪರ್ಫಾಮೆನ್ಸ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಕಂಪನಿಯು ಇವಿ ವಾಹನಗಳ ಅಭಿವೃದ್ದಿ, ಉತ್ಪಾದನೆ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಆರಂಭಿಸಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಸದ್ಯ ಮಾರುಕಟ್ಟೆಯಲ್ಲಿರುವ ಇವಿ ಕಾರುಗಳನ್ನು ಸಾಮಾನ್ಯ ಕಾರುಗಳ ಉತ್ಪಾದನಾ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಭವಿಷ್ಯದ ಬೃಹತ್ ಯೋಜನೆಗಳಿಗಾಗಿ ಇದೀಗ ಪ್ರತ್ಯೇಕ ನಿಯಂತ್ರಣ ಹೊಂದಿರುವ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್ (TPEML) ಅಂಗಸಂಸ್ಥೆಯನ್ನು ಆರಂಭಿಸಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯ ಹೊಸ ಅಂಗಸಂಸ್ಥೆಯನ್ನು ರೂ. 700 ಕೋಟಿ ರೂಪಾಯಿ ಆರಂಭಿಕ ಹೂಡಿಕೆಯೊಂದಿಗೆ ಆರಂಭಗೊಳಿಸಿದ್ದು, ಪ್ರತ್ಯೇಕ ಪ್ಲ್ಯಾಟ್‌ಫಾರ್ಮ ಮೂಲಕ ಇವಿ ವಾಹನಗಳ ಮೇಲೆ ಹೆಚ್ಚಿನ ಗಮನಹರಿಸಲು ನಿರ್ಧರಿಸಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್ ಕಂಪನಿಯು ಇವಿ ವಾಹನಗಳ ಎಂಜಿನ್‌, ಮೋಟಾರ್‌, ಬಿಡಿಭಾಗಗಳು, ಪರಿಕರಗಳು, ಪರಿಕರಗಳ ಸ್ಥಾಪನೆ, ಸ್ವಾಧೀನಪಡಿಸಿಕೊಳ್ಳುವಿಕೆ, ಜೊತೆಗೆ ಜೋಡಣೆ, ನಿರ್ಮಾಣ, ತಯಾರಿಕೆ, ಮಾರಾಟ, ಮಾರಾಟದ ನಂತರದ ಸೇವೆಗಳು, ಮಾರ್ಕೆಟಿಂಗ್ ಮತ್ತು ಸೇವಾ ಸೌಲಭ್ಯಗಳನ್ನು ಪ್ರತ್ಯೇಕವಾಗಿ ನಿರ್ವಹಿಸಲಿದೆ.

ಜನವರಿ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ, ಉತ್ಪಾದನೆ ಮತ್ತು ಮಾರಾಟಕ್ಕಾಗಿ ಬಹುತೇಕ ವಾಹನ ಕಂಪನಿಗಳು ಪ್ರತ್ಯೇಕ ವಿಭಾಗಗಳನ್ನು ತೆರೆಯುತ್ತಿದ್ದು, ಟಾಟಾ ಮೋಟಾರ್ಸ್ ಕೂಡಾ ಇದೀಗ ಅಂಗಸಂಸ್ಥೆಯ ಮೂಲಕ ಇವಿ ಕಾರುಗಳ ಮಾರಾಟದಲ್ಲಿ ಮತ್ತಷ್ಟು ಮುಂಚೂಣಿ ಸಾಧಿಸಲಿದೆ.

More from DriveSpark

Article Published On: Friday, February 4, 2022, 9:59 [IST]
English summary
Tata motors january 2022 electric cars sales report
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+