Just In
- 1 hr ago
ಭಾರತದಲ್ಲಿ ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಗೆ ಸಿದ್ದವಾದ ಎಲೆಕ್ಟ್ರಾನ್ ಇವಿ
- 14 hrs ago
ಆಕರ್ಷಕ ವಿನ್ಯಾಸದ 2022ರ ಹ್ಯುಂಡೈ ಟ್ಯೂಸಾನ್ ಎಸ್ಯುವಿಯ ವಿಶೇಷತೆಗಳು
- 15 hrs ago
ಪಾಸ್ಫೋರ್ಟ್ ಪ್ರಯೋಜನಗಳೇನು? ಏಕೆ ವಿವಿಧ ಬಣ್ಣಗಳಲ್ಲಿ ಲಭ್ಯವಿರುತ್ತವೆ ನೋಡಿ..
- 15 hrs ago
ಬ್ರೇಕ್ ಫೇಲ್ ಆದಾಗ ಕೇವಲ 8 ಸೆಕೆಂಡುಗಳಲ್ಲಿ ಕಾರು ನಿಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಸಲಹೆ
Don't Miss!
- News
Breaking: ಮಹಾರಾಷ್ಟ್ರದಲ್ಲಿ ಗೂಡ್ಸ್ ಮತ್ತು ಪ್ಯಾಸೆಂಜರ್ ರೈಲು ಡಿಕ್ಕಿ
- Travel
ವಿಶ್ವದ ಅತ್ಯಂತ ತೇವವಾದ ಸ್ಥಳಗಳು: ಭೂಮಿಯ ಮೇಲಿನ ಮಳೆಯ ಸ್ಥಳಗಳ ಪಟ್ಟಿ
- Education
UGC Scholarship : ಯುಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
- Movies
ಮಗಳಿಗೆ ದುಬಾರಿ ಗಿಫ್ಟ್ ಕೊಟ್ಟ ನಟ ದುನಿಯಾ ವಿಜಯ್!
- Lifestyle
ಶನಿದೋಷ ನಿವಾರಣೆ ಹಾಗೂ ಸಂಪತ್ತು ವೃದ್ಧಿಗೆ ಕೃಷ್ಣ ಜನ್ಮಾಷ್ಟಮಿಗೆ ಮಾಡಿ ಈ ವಿಶೇಷ ಪರಿಹಾರ
- Technology
ಧಮಾಕಾ ಕೊಡುಗೆ!..ಭರ್ಜರಿ ಡಿಸ್ಕೌಂಟ್ನಲ್ಲಿ ಹೊಸ ಸ್ಮಾರ್ಟ್ಟಿವಿ ನಿಮ್ಮದಾಗಿಸಿಕೊಳ್ಳಿ!
- Finance
ಆಗಸ್ಟ್ 17: ಭಾರತದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು
- Sports
ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಖರೀದಿಸುತ್ತೇನೆ ಎಂದ ಎಲಾನ್ ಮಸ್ಕ್!
ಜೂನ್ ಅವಧಿಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನದೊಂದಿಗೆ ಟಾಟಾ ಮೋಟಾರ್ಸ್ ಹೊಸ ದಾಖಲೆ
ಟಾಟಾ ಮೋಟಾರ್ಸ್(Tata Motors) ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸುತ್ತಿದ್ದು, ಕಂಪನಿಯು ಸಾಮಾನ್ಯ ಕಾರುಗಳ ಮಾರಾಟದ ಜೊತೆಗೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಸಹ ಮುಂಚೂಣಿಯಲ್ಲಿದೆ.

ಪ್ರಯಾಣಿಕರ ಕಾರು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಕಂಪನಿಯು ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಹ್ಯುಂಡೈ ಕಂಪನಿಯು ಮುಂದುವರೆದಿದೆ. ತದನಂತರ ಮೂರನೇ ಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಹ್ಯುಂಡೈ ಕಂಪನಿಯ ಕಾರುಗಳ ಮಾರಾಟಕ್ಕೆ ತೀವ್ರ ಪೈಪೋಟಿ ನೀಡುತ್ತಿದ್ದು, ಇವಿ ಕಾರುಗಳ ಮಾರಾಟದಲ್ಲಿ ಇತರೆ ಕಂಪನಿಗಳನ್ನು ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ ಮ್ಯಾಕ್ಸ್(Nexon EV Max) ನೆಕ್ಸಾನ್ ಇವಿ(Nexon EV), ಟಿಗೋರ್ ಇವಿ(Tigor EV) ಮತ್ತು ಎಕ್ಸ್ಪ್ರೆಸ್-ಟಿ ಇವಿ(XPres-T EV) ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಟಾಟಾ ಕಂಪನಿಯು ನೆಕ್ಸಾನ್ ಇವಿ, ನೆಕ್ಸಾನ್ ಇವಿ ಮ್ಯಾಕ್ಸ್ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕರ ಬಳಕೆಯ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್ಪ್ರೆಸ್-ಟಿ ಇವಿ ಮಾದರಿಯು ಕೂಡಾ ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಜೂನ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 45,197 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 3,507 ಯುನಿಟ್ ಎಲೆಕ್ಟ್ರಿಕ್ ಕಾರು ಮಾದರಿಗಳಾಗಿವೆ. ಜೂನ್ ಅವಧಿಯಲ್ಲಿನ ಇವಿ ಕಾರು ಮಾರಾಟವು ಕಳೆದ ವರ್ಷದ ಜೂನ್ ಅವಧಿಯಲ್ಲಿನ 658 ಯುನಿಟ್ ಮಾರಾಟಕ್ಕೆ ಹೋಲಿಕೆ ಮಾಡಿದರೆ ಕಳೆದ ತಿಂಗಳು ಶೇ.433 ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ಜೂನ್ ಅವಧಿಯಲ್ಲಿನ ಇವಿ ಕಾರು ಮಾರಾಟದಲ್ಲಿ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳೇ 3 ಸಾವಿರಕ್ಕಿಂತಲೂ ಹೆಚ್ಚು ಯುನಿಟ್ ಮಾರಾಟಗೊಂಡಿದ್ದು, ತದನಂತರ ಟಿಗೋರ್ ಇವಿ ಮತ್ತು ಎಕ್ಸ್ಪ್ರೆಸ್-ಟಿ ಇವಿ ಎರಡನೇ ಮತ್ತು ಮೂರು ಮತ್ತು ನಾಲ್ಕು ಸ್ಥಾನ ಪಡೆದುಕೊಂಡಿವೆ.

ಈ ಮೂಲಕ ಕಂಪನಿಯು 2022-23ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಒಟ್ಟು 9,283 ಯುನಿಟ್ ಇವಿ ಕಾರು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಇದೇ ಅವಧಿಯಲ್ಲಿನ ಇವಿ ಕಾರು ಮಾರಾಟಕ್ಕಿಂತ ಶೇ.441 ರಷ್ಟು ಬೆಳವಣಿಗೆ ಸಾಧಿಸಿದಂತಾಗಿದೆ.

ಇನ್ನು ನೆಕ್ಸಾನ್ ಇವಿ ಮಾದರಿಯು 2019ರಲ್ಲಿ ಮೊದಲ ಬಿಡುಗಡೆಯಾದ ನಂತರ ಹಲವಾರು ಹೊಸ ಬದಲಾವರಣೆಗಳೊಂದಿಗೆ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದಕೊಂಡಿದ್ದು, ಬಿಡುಗಡೆಯ ನಂತರ ನೆಕ್ಸಾನ್ ಇವಿ ಇದುವರೆಗೆ ಸುಮಾರು 30 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ.

ಇದೀಗ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮಾದರಿಯನ್ನು ಹೆಚ್ಚುವರಿ ಮೈಲೇಜ್ ಪ್ರೇರಿತ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ ಮಾಡಿದ್ದು, ಗ್ರಾಹಕರು ಇದೀಗ ತಮ್ಮ ಬೇಡಿಕೆಗೆ ಅನುಗುಣವಾಗಿ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸಾಮಾನ್ಯ ನೆಕ್ಸಾನ್ ಇವಿ ಮಾದರಿಗಿಂತಲೂ ಹೆಚ್ಚಿನ ಮೈಲೇಜ್ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಂಡಿದ್ದು, ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ಕಾರಿಗಾಗಿ ಮ್ಯಾಕ್ಸ್ ನೇಮ್ಪ್ಲೆಮ್ ಬಳಕೆ ಮಾಡಲಾಗಿದೆ.

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಎಕ್ಸ್ಜೆಡ್ ಪ್ಲಸ್ ಮತ್ತು ಎಕ್ಸ್ಜೆಡ್ ಪ್ಲಸ್ ಲಕ್ಸ್ ಎನ್ನುವ ವೆರಿಯೆಂಟ್ಗಳನ್ನು ಹೊಂದಿದ್ದು, ಆರಂಭಿಕವಾಗಿ ಹೊಸ ಕಾರು ಎಕ್ಸ್ಶೋರೂಂ ಪ್ರಕಾರ ರೂ. 17.74 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.19.24 ಲಕ್ಷ ಬೆಲೆ ಹೊಂದಿದೆ.

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯ ಎಕ್ಸ್ಜೆಡ್ ಪ್ಲಸ್ ಮತ್ತು ಎಕ್ಸ್ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್ಗಳಲ್ಲಿ ಕಂಪನಿಯು ಎರಡು ಮಾದರಿಯ ಚಾರ್ಜಿಂಗ್ ಆಯ್ಕೆಗಳನ್ನು ನೀಡಿದ್ದು, 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಿದೆ.

7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್ಜೆಡ್ ಪ್ಲಸ್ ಮತ್ತು ಎಕ್ಸ್ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್ಗಳು ಸಾಮಾನ್ಯ ಮಾದರಿಗಿಂತಲೂ ತುಸು ಹೆಚ್ಚುವರಿ ಬೆಲೆ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾಗಿದೆ.

3.3 kW ಚಾರ್ಜಿಂಗ್ ಆಯ್ಕೆ ಹೊಂದಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸೊನ್ನೆಯಿಂದ ಶೇ.100 ರಷ್ಟು ಚಾರ್ಜ್ ಮಾಡಲು ಕನಿಷ್ಠ 14 ರಿಂದ 15 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆಗಲು ಕನಿಷ್ಠ 5 ರಿಂದ 6 ಗಂಟೆಗಳ ಕಾಲ ಸಮಯಾವಕಾಶ ತೆಗದುಕೊಳ್ಳುತ್ತದೆ.

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಇಕೋ ಮೋಡ್ನಲ್ಲಿ 437 ಕಿ.ಮೀ ಮೈಲೇಜ್ ಹೊಂದಿದ್ದರೂ ಅದು ವಿವಿಧ ಡ್ರೈವಿಂಗ್ ಮೋಡ್ ಮತ್ತು ರಸ್ತೆ ಸೌಲಭ್ಯಕ್ಕೆ ಅನುಗುಣವಾಗಿ ರಿಯಲ್ ವರ್ಲ್ಡ್ ಮೈಲೇಜ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಲಿದ್ದು, ಇದು ವಿವಿಧ ಡ್ರೈವ್ ಮೋಡ್ ಮತ್ತು ರಸ್ತೆ ಸೌಲಭ್ಯಗಳಿಗೆ ಅನುಗುಣವಾಗಿ ಕನಿಷ್ಠ 300ರಿಂದ 320 ಕಿ.ಮೀ ಮೈಲೇಜ್ ಅನ್ನು ಅರಾಮವಾಗಿ ಪಡೆದುಕೊಳ್ಳಬಹುದಾಗಿದೆ.