Just In
- 1 hr ago
ಭಾರತದಲ್ಲಿ ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಗೆ ಸಿದ್ದವಾದ ಎಲೆಕ್ಟ್ರಾನ್ ಇವಿ
- 14 hrs ago
ಆಕರ್ಷಕ ವಿನ್ಯಾಸದ 2022ರ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯ ವಿಶೇಷತೆಗಳು
- 15 hrs ago
ಪಾಸ್ಫೋರ್ಟ್ ಪ್ರಯೋಜನಗಳೇನು? ಏಕೆ ವಿವಿಧ ಬಣ್ಣಗಳಲ್ಲಿ ಲಭ್ಯವಿರುತ್ತವೆ ನೋಡಿ..
- 15 hrs ago
ಬ್ರೇಕ್ ಫೇಲ್ ಆದಾಗ ಕೇವಲ 8 ಸೆಕೆಂಡುಗಳಲ್ಲಿ ಕಾರು ನಿಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಸಲಹೆ
Don't Miss!
- Education
UGC Scholarship : ಯುಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
- News
ಆಗಸ್ಟ್ 17ರಂದು ಭಾರತದ ನಿಮ್ಮ ನಗರದಲ್ಲಿ ಪೆಟ್ರೋಲ್-ಡೀಸೆಲ್ ದರ ತಿಳಿಯಿರಿ
- Movies
ಮಗಳಿಗೆ ದುಬಾರಿ ಗಿಫ್ಟ್ ಕೊಟ್ಟ ನಟ ದುನಿಯಾ ವಿಜಯ್!
- Lifestyle
ಶನಿದೋಷ ನಿವಾರಣೆ ಹಾಗೂ ಸಂಪತ್ತು ವೃದ್ಧಿಗೆ ಕೃಷ್ಣ ಜನ್ಮಾಷ್ಟಮಿಗೆ ಮಾಡಿ ಈ ವಿಶೇಷ ಪರಿಹಾರ
- Technology
ಧಮಾಕಾ ಕೊಡುಗೆ!..ಭರ್ಜರಿ ಡಿಸ್ಕೌಂಟ್ನಲ್ಲಿ ಹೊಸ ಸ್ಮಾರ್ಟ್ಟಿವಿ ನಿಮ್ಮದಾಗಿಸಿಕೊಳ್ಳಿ!
- Finance
ಆಗಸ್ಟ್ 17: ಭಾರತದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು
- Sports
ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಖರೀದಿಸುತ್ತೇನೆ ಎಂದ ಎಲಾನ್ ಮಸ್ಕ್!
- Travel
ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಆನೆಗಳ ಶಿಬಿರಕ್ಕೆ ಭೇಟಿ ಕೊಡಿ
ಜೂನ್ ಅವಧಿಯ ಪ್ರಯಾಣಿಕರ ಕಾರು ಮಾರಾಟದಲ್ಲಿ ಶೇ.88ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್(Tata Motors) ಕಂಪನಿಯು ಪ್ರಯಾಣಿಕರ ಕಾರು ಮಾರಾಟದಲ್ಲಿ ಭರ್ಜರಿಯಾಗಿ ಮುನ್ನಡೆ ಕಾಯ್ದುಕೊಳ್ಳುತ್ತಿದ್ದು, 2022ರ ಜೂನ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.87.46 ರಷ್ಟು ಬೆಳವಣಿಯೊಂದಿಗೆ ಸುಮಾರು 45,197 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ.

ಸೆಮಿಕಂಡಕ್ಟರ್ ಪೂರೈಕೆಯಲ್ಲಿನ ಕೊರತೆ ಮತ್ತು ಆರ್ಥಿಕ ಏರಿಳಿತದ ನಡುವೆಯೂ ಕಳೆದ ವರ್ಷದ ಜೂನ್‌ನಲ್ಲಿ 24,110 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ತಿಂಗಳ ಜೂನ್ ಅವಧಿಯಲ್ಲಿ 45,197 ಕಾರುಗಳ ಮಾರಾಟದ ಮೂಲಕ ಶೇ. 87.46 ರಷ್ಟು ಬೆಳವಣಿಗೆ ಸಾಧಿಸಿದೆ.

ಕಾರು ಮಾರಾಟ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಜೂನ್ ಅವಧಿಯಲ್ಲಿ ಒಟ್ಟು 79,606 ಯುನಿಟ್ ವಾಹನಗಳನ್ನು ಮಾರಾಟ ಮಾಡಿದ್ದು, ಪ್ರಯಾಣಿಕರ ಕಾರು ಮಾರಾಟದಲ್ಲಿ ಮಾತ್ರವಲ್ಲದೆ ವಾಣಿಜ್ಯ ವಾಹನಗಳ ಮಾರಾಟದಲ್ಲೂ ಉತ್ತಮ ಬೆಳವಣಿಗೆ ಸಾಧಿಸಿದೆ.

2022ರ ಜೂನ್ ಅವಧಿಯಲ್ಲಿನ ಒಟ್ಟು ವಾಹನ ಮಾರಾಟದಲ್ಲಿ ಶೇ. 82 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು 45,197 ಯುನಿಟ್ ಪ್ರಯಾಣಿಕರ ಕಾರುಗಳನ್ನು ಮತ್ತು 37,265 ಯುನಿಟ್ ವಾಣಿಜ್ಯ ವಾಹನಗಳನ್ನು ಮಾರಾಟ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ಎರಡೂವರೆ ವರ್ಷಗಳಿಂದ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಬದಲಾವಣೆ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

2022-23ರ ಮೊದಲ ಹಣಕಾಸು ತ್ರೈಮಾಸಿಕ ಅವಧಿಯ ಪ್ರಯಾಣಿಕ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 1,30,125 ಯುನಿಟ್ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದು ಕಳೆದ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿನ 64,386 ಯುನಿಟ್ ಕಾರುಗಳ ಮಾರಾಟಕ್ಕಿಂತಲೂ ಶೇ. 102 ರಷ್ಟು ಹೆಚ್ಚಳವಾಗಿದೆ.

ಹಾಗೆಯೇ ವಾಣಿಜ್ಯ ವಾಹನ ಮಾರಾಟದಲ್ಲೂ 2022-23ರ ಮೊದಲ ಹಣಕಾಸು ತ್ರೈಮಾಸಿಕ ಅವಧಿಯಲ್ಲಿ ಕಂಪನಿಯು 1,00,921 ಯನಿಟ್ ವಾಣಿಜ್ಯ ವಾಹನಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿನ 50,145 ಯುನಿಟ್ ವಾಹನಗಳ ಮಾರಾಟಕ್ಕಿಂತಲೂ ಶೇ. 101 ರಷ್ಟು ಹೆಚ್ಚಳವಾಗಿದೆ.

ಟಾಟಾ ಕಂಪನಿಯ ಕಾರು ಮಾರಾಟದಲ್ಲಿ ಸದ್ಯ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಅಗ್ರಸ್ಥಾನದಲ್ಲಿದ್ದು, ತದನಂತರದಲ್ಲಿ ಆಲ್‌ಟ್ರೊಜ್, ಟಿಯಾಗೋ, ಟಿಗೋರ್, ಪಂಚ್, ಹ್ಯಾರಿಯರ್ ಮತ್ತು ಸಫಾರಿ ಕಾರು ಮಾದರಿಗಳು ಸಹ ಉತ್ತಮ ಬೇಡಿಕೆ ಪಡೆದುಕೊಂಡಿವೆ.

ನಿಕಟ ಪ್ರತಿಸ್ಪರ್ಧಿಯಾಗಿರುವ ಹ್ಯುಂಡೈ ಕಂಪನಿಗೆ ನಿರಂತರವಾಗಿ ಉತ್ತಮ ಪೈಪೋಟಿ ನೀಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಭಾರತದಲ್ಲಿ ಕಾರು ಉತ್ಪಾದನೆಯನ್ನು ಆರಂಭಿಸಿದ 32 ವರ್ಷಗಳ ನಂತರ ಕಂಪನಿಯು ವಾರ್ಷಿಕವಾಗಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದೆ.

ಟಾಟಾ ಮೋಟಾರ್ಸ್ ಹೊಸ ಪಂಚ್ ಮೈಕ್ರೊ ಎಸ್‌ಯುವಿ ಮತ್ತು ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ನೆಕ್ಸಾನ್ ನಂತರ ಟಾಟಾ ನಿರ್ಮಾಣದ ಎರಡನೇ ಅತಿ ಹೆಚ್ಚು ಬೇಡಿಕೆಯ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ನೆಕ್ಸಾನ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸ್ವದೇಶಿ ಕಾರು ತಯಾರಕರಾದ ಟಾಟಾ ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ 2017ರಲ್ಲಿ ಬಿಡುಗಡೆಗೊಳಿಸಲಾಗಿದೆ.

ಟಾಟಾ ನೆಕ್ಸಾನ್ 2017 ರಲ್ಲಿ ಪ್ರಾರಂಭವಾದಾಗಿನಿಂದ ಭಾರತೀಯ ವಾಹನ ತಯಾರಕರಿಗೆ ವಾಲ್ಯೂಮ್ ಜನರೇಟರ್ ಆಗಿದೆ. ವಾಸ್ತವವಾಗಿ, ಸಬ್‌ಕಾಂಪ್ಯಾಕ್ಟ್ ಸತತ ಆರನೇ ತಿಂಗಳಿಗೆ ಅತಿ ಹೆಚ್ಚು ಮಾರಾಟವಾಗುವ ಸಬ್ -4 ಮೀಟರ್ ಎಸ್‌ಯುವಿಯಾಗಿ ಮುಂದುವರೆದಿದೆ. 2022ರ ಮೇ ತಿಂಗಳಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಸ್‍ಯುವಿಯ 14,614 ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಕಳೆದ ವರ್ಷದ ಮೇ ತಿಂಗಳಿನಲ್ಲಿ 6,439 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ 127 ಪ್ರತಿಶತದಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಟಾಟಾ ನೆಕ್ಸಾನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ ಮತ್ತು ಹ್ಯುಂಡೈ ಕ್ರೆಟಾದಂತಹ ಕಾರುಗಳನ್ನು ಹಿಂದಿಕ್ಕಿ ಸಬ್‌ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದ ಮಾರಾಟದಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.

ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ. ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆದುಕೊಂಡಿತು.