ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಸಬ್-ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಾದ ನೆಕ್ಸಾನ್‌ನಲ್ಲಿ ಗ್ರಾಹಕರ ಬೇಡಿಕೆ ಆಧರಿಸಿ ಹೊಸ ವೆರಿಯೆಂಟ್ ಒಂದನ್ನು ಬಿಡುಗಡೆ ಮಾಡಿದ್ದು, ಹೊಸ ಮಾದರಿಯು ವಿವಿಧ ಎಂಜಿನ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ನೆಕ್ಸಾನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಸುಮಾರು 29 ವೆರಿಯೆಂಟ್‌ಗಳನ್ನು ಹೊಂದಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಒಟ್ಟು ನಾಲ್ಕು ವೆರಿಯೆಂಟ್‌ಗಳನ್ನು ಹೊಂದಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.75 ಲಕ್ಷ ಬೆಲೆ ಹೊಂದಿದ್ದು, ಹೊಸ ವೆರಿಯೆಂಟ್‌ನಲ್ಲಿ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಹೊಸ ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್‌ನಲ್ಲಿ ಕಂಪನಿಯು ಎಲೆಕ್ಟ್ರಿಕ್ ಸನ್‌ರೂಫ್, 7-ಇಂಚಿನ ಫ್ಲೋಟಿಂಗ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಜೊತೆಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಸಿಸ್ಟಂ, ಕೂಲ್ಡ್ ಗ್ಲೋವ್ ಬಾಕ್ಸ್, ರಿಯರ್ ಎಸಿ ವೆಂಟ್‌ಗಳು, ರೈನ್-ಸೆನ್ಸಿಂಗ್ ವೈಪರ್‌ಗಳು, ಆಟೋ ಹೆಡ್‌ಲ್ಯಾಂಪ್ ಸೌಲಭ್ಯಗಳನ್ನು ನೀಡಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಹಾಗೆಯೇ ಹೊಸ ವೆರಿಯೆಂಟ್‌ನಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಡ್ರೈವ್ ಮೋಡ್, 12V ರಿಯರ್ ಪವರ್ ಸಾಕೆಟ್ ಮತ್ತು ಶಾರ್ಕ್ ಫಿನ್ ಆಂಟೆನಾವನ್ನು ಸಹ ಜೋಡಿಸಲಾಗಿದ್ದು, ಆರಂಭಿಕ ವೆರಿಯೆಂಟ್‌ನಲ್ಲಿ ಹೆಚ್ಚಿನ ಫೀಚರ್ಸ್ ಬಯಸುವ ಗ್ರಾಹಕರಿಗೆ ಇದು ಉತ್ತಮ ಆಯ್ಕೆಯಾಗಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಎಕ್ಸ್ಎಂ ಎಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ನಡುವಿನ ಸ್ಥಾನ ಹೊಂದಿರುವ ಎಕ್ಸ್ಎಂ ಪ್ಲಸ್ ಎಸ್ ವೆರಿಯೆಂಟ್‌ನಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್ ತೆಗೆದುಹಾಕುವ ಮೂಲಕ ಕೈಗೆಟುವ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಗ್ರಾಹಕರಿಗೆ ಇನ್ನು ಹೆಚ್ಚಿನ ಫೀಚರ್ಸ್ ಬಯಸುವ ಗ್ರಾಹಕರು ಎಕ್ಸ್‌ಜೆಡ್ ಪ್ಲಸ್ ಖರೀದಿಸಬಹುದಾಗಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಈ ಮೂಲಕ ನೆಕ್ಸಾನ್ ಮಾದರಿಯು ಇದೀಗ 34 ವೆರಿಯೆಂಟ್‌ಗಳನ್ನು ಹೊಂದಿದಂತಾಗಿದ್ದು, ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಹುತೇಕ ವೆರಿಯೆಂಟ್‌ಗಳಲ್ಲಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಲಭ್ಯವಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಹೊಸ ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ ಪಡೆದ ನಂತರ ಕಾರು ಮಾರಾಟವು ನಿರಂತವಾಗಿ ಏರಿಕೆಯಾಗುತ್ತಿದ್ದು, ಸ್ವದೇಶಿ ಕಂಪನಿಗಳ ನಿರ್ಮಿತ ವಾಹನ ಬಳಕೆಗೆ ಗ್ರಾಹಕರ ಒಲವು ತೋರುತ್ತಿರುವುದು ಕೂಡಾ ಟಾಟಾ ಕಾರುಗಳ ಮಾರಾಟ ಬೆಳವಣಿಗೆ ಮತ್ತೊಂದು ಕಾರಣವಾಗಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಗ್ರಾಹಕರ ವಿಶ್ವಾಸದಂತೆ ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಮುಂಬರುವ ದಿನಗಳಲ್ಲಿ ಹೊಸ ಕಾರುಗಳೊಂದಿಗೆ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಬಿಎಸ್-6 ಎಮಿಷನ್ ನಂತರ ಹಲವಾರು ಬದಲಾವಣೆಗಳೊಂದಿಗೆ ಮಾರಾಟವಾಗುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದು, ಕಳೆದ ಕೆಲ ತಿಂಗಳಿನಿಂದ ಪ್ರತಿ ತಿಂಗಳು ಸರಾಸರಿಯಾಗಿ 10 ಸಾವಿರದಿಂದ 12 ಸಾವಿರ ಯುನಿಟ್ ಮಾರಾಟಗೊಳ್ಳುತ್ತಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರುವ ನೆಕ್ಸಾನ್ ಕಾರು ಮಾದರಿಯು ವಿವಿಧ ವೆರಿಯೆಂಟ್ ಹೊಂದಿದ್ದು, ಮಧ್ಯಮ ಕ್ರಮಾಂಕದಲ್ಲಿರುವ ಮಾದರಿಗಳನ್ನು ಸಾಕಷ್ಟು ಹೊಸ ಬದಲಾವಣೆಯೊಂದಿಗೆ ಅತ್ಯಧಿಕ ಬೇಡಿಕೆ ಪಡೆದುಕೊಳ್ಳುತ್ತಿವೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಟಾಟಾ ಕಂಪನಿಯು ಹೊಸ ಕಾರುಗಳನ್ನು OMEGA ಕಾರು ಉತ್ಪಾದನಾ ತಂತ್ರಜ್ಞಾನದಡಿಯಲ್ಲಿ ಕಾರು ಅಭಿವೃದ್ದಿ ಮಾಡುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿನ ನೆಕ್ಸಾನ್ ಕಾರು ಮಾದರಿಯು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಇದರೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಬದಲಾವಣೆಗಳೊಂದಿಗೆ ಕಾರು ಉತ್ಪನ್ನಗಳನ್ನು ಉನ್ನತೀಕರಿಸುತ್ತಿರುವ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳುತ್ತಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ನೆಕ್ಸಾನ್ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.60 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.13.95 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಸ್ಟ್ಯಾಂಡರ್ಡ್, ಡಾರ್ಕ್ ಮತ್ತು ಕಾಜಿರಂಗ ಎಡಿಷನ್‌ಗಳಲ್ಲಿ ಮಾರಾಟಗೊಳ್ಳುತ್ತಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಹೊಸ ವೆರಿಯೆಂಟ್ ಬಿಡುಗಡೆ

ಹೊಸ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಹ್ಯುಂಡೈ ವೆನ್ಯೂ ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳನ್ನು ಹಿಂದಿಕ್ಕಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದು, ನೆಕ್ಸಾನ್ ಅಟ್ಲಾಸ್ ಬ್ಲ್ಯಾಕ್, ಪೊಲಿಜ್ ಗ್ರೀನ್, ಕ್ಯಾಲ್ಗರಿ ವೈಟ್, ಫ್ಲೇಮ್ ರೆಡ್ ಮತ್ತು ಡೇಟೋನಾ ಗ್ರೇ ಎಂಬ ಬಣ್ಣಗಳಲ್ಲಿ ಲಭ್ಯವಿರಲಿದೆ.

Most Read Articles

Kannada
English summary
Tata motors launched nexon xm plus s variant details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X