ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಜನಪ್ರಿಯ ಮತ್ತು ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ವೈವಿಧ್ಯಮಯ ಕಾರುಗಳನ್ನು ಮಾರಾಟ ಮಾಡಲಾಗುತ್ತಿದೆ. ಇತ್ತೀಚೆಗೆ ಟಾಟಾ ಕಾರುಗಳು ಭರ್ಜರಿಯಾಗಿ ಮಾರಾಟವಾಗುತ್ತಿದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಹೊಸ ವೈಶಿಷ್ಟ್ಯಗಳು, ರೂಪಾಂತರಗಳು ಮತ್ತು ಆವೃತ್ತಿಗಳ ಸೇರ್ಪಡೆಯೊಂದಿಗೆ ಟಾಟಾ ಮೋಟಾರ್ಸ್ ತನ್ನ ಅಸ್ತಿತ್ವದಲ್ಲಿರುವ ಮಾದರಿ ಶ್ರೇಣಿಯನ್ನು ನವೀಕರಿಸುತ್ತಲೇ ಇದೆ. ಹೊಸ ವರದಿಗಳ ಪ್ರಕಾರ, ಕಂಪನಿಯು ತನ್ನ ಅತ್ಯಂತ ಜನಪ್ರಿಯ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್ ಎಸ್‍ಯುವಿಗಳಿಗೆ ಶೀಘ್ರದಲ್ಲೇ ಹೊಸ ಫೀಚರ್ಸ್ ಗಳನ್ನು ಪರಿಚಯಿಸಬಹುದು. ಎರಡೂ ಮಾದರಿಗಳು ವೈರ್‌ಲೆಸ್ ಚಾರ್ಜಿಂಗ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಕನೆಕ್ಟಿವಿಟಿ ಮತ್ತು ವೆಂಟಿಲೇಟೆಡ್ ಫ್ರಂಟ್ ಮತ್ತು ರಿಯರ್ ಸೀಟ್‌ಗಳನ್ನು ಸ್ಟ್ಯಾಂಡರ್ಡ್ ಫಿಟ್‌ಮೆಂಟ್‌ಗಳಾಗಿ ಸ್ವೀಕರಿಸುವ ಸಾಧ್ಯತೆಯಿದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ನೆಕ್ಸಾನ್ ಮತ್ತು ಹ್ಯಾರಿಯರ್‌ಗಳು ತಮ್ಮ ಕಾಜಿರಂಗ ಆವೃತ್ತಿಗಳಿಂದ ವಿಶಿಷ್ಟ ವೈಶಿಷ್ಟ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆಯಬಹುದು ಎಂದು ವರದಿಯು ಹೇಳುತ್ತದೆ. ನಿಮಗೆ ತಿಳಿದಿರುವಂತೆ, ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್ ಕಾಜಿರಂಗ ಆವೃತ್ತಿಗಳು ಕಪ್ಪು ಮತ್ತು ಅರ್ಥಿ ಬೀಜ್ ಡ್ಯುಯಲ್-ಟೋನ್ ಇಂಟೀರಿಯರ್ ಥೀಮ್ ಜೊತೆಗೆ ಲೆಥೆರೆಟ್ ಅಪ್ಹೋಲ್ಸ್ಟರಿ ಮತ್ತು ಡೋರ್ ಕಾರ್ಡ್‌ಗಳು ಮತ್ತು ಫಾಕ್ಸ್ ವುಡ್ ಇನ್ಸರ್ಟ್‌ನೊಂದಿಗೆ ಬರುತ್ತವೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಆಟೋ ಡಿಮ್ಮಿಂಗ್ ಇಂಟೀರಿಯರ್ ರಿಯರ್ ವ್ಯೂ ಮಿರರ್ (IRVM), ಇನ್ ಬಿಲ್ಡ್ ಏರ್ ಪ್ಯೂರಿಫೈಯರ್ ಮತ್ತು ಟಾಟಾದ iRA ಕನೆಕ್ಟಿವಿಟಿ ಕಾರ್ ತಂತ್ರಜ್ಞಾನದಂತಹ ವೈಶಿಷ್ಟ್ಯಗಳು ಸಹ ಹೊಸ ಆನ್-ಬೋರ್ಡ್ ಆಗಿದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲ, ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಟಾಟಾ ಹ್ಯಾರಿಯರ್ ಎಸ್‍ಯುವಿಯು ಒಮೆಗಾ (ಆಪ್ಟಿಮಲ್ ಮಾಡ್ಯುಲರ್ ಎಫಿಶಿಯಂಟ್ ಗ್ಲೋಬಲ್ ಅಡ್ವಾನ್ಸ್ಡ್) ಪ್ಲಾಟ್‌ಫಾರ್ಮ್‌ನಿಂದ ಅಭಿವೃದ್ದಿ ಪಡಿಸಲಾಗಿದೆ. ಈ ಟಾಟಾ ಹ್ಯಾರಿಯರ್ ಮಿಡ್ ಎಸ್‍ಯುವಿಯಲ್ಲಿ 2.0 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಈ ಎಂಜಿನ್ 170 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇನ್ನು ಈ ಹ್ಯಾರಿಯರ್ ಎಸ್‍ಯುವಿಯಲ್ಲಿ ಹೊಸದಾಗಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಕೂಡ ನೀಡಲಾಗಿದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಟಾಟಾ ತನ್ನ ಹ್ಯಾರಿಯರ್ ಎಸ್‍ಯುವಿ ಡ್ಯುಯಲ್ ಫಂಕ್ಷನ್ ಎಲ್ಇಡಿ ಡಿಆರ್ಎಲ್, ಬಂಪರ್ ನಲ್ಲಿ ಅಳವಡಿಸಲಾದ ಹೆಡ್ ಲ್ಯಾಂಪ್ ಮತ್ತು ಮಸ್ಕ್ಯುಲರ್ ಫ್ರಂಟ್ ಗ್ರಿಲ್ ಎಲ್ಲವೂ ಆಕರ್ಷಕ ಮತ್ತು ಬೋಲ್ಡ್ ಲುಕ್ ನೀಡುತ್ತದೆ. ಇನ್ನು ಈ ಹ್ಯಾರಿಯರ್ ಎಸ್‍ಯುವಿಯು ಪ್ರೀಮಿಯಂ ಇಂಟಿರಿಯರ್ ಅನ್ನು ಹೊಂದಿದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಇದರಲ್ಲಿ ಒನ್-ಟಚ್ ಸನ್‌ರೂಫ್, ಲೇಯರ್ಡ್ ಡ್ಯಾಶ್‌ಬೋರ್ಡ್, ಡ್ರೈವ್ ಮೋಡ್‌ಗಳು, ಹೊಂದಾಣಿಕೆ ಮಾಡಬಹುದಾದ ಹೆಡ್‌ರೆಸ್ಟ್‌ಗಳು ಮತ್ತು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ..

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಈ ಟಾಟಾ ಹ್ಯಾರಿಯರ್ ಎಸ್‌ಯುವಿಯಲ್ಲಿ ಸುರಕ್ಷತೆಗಾಗಿ ಏರ್‍‍ಬ್ಯಾಗ್‍ಗಳು, ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸಿಸ್ಟ್ ಎಂಬ ಫೀಚರ್ ಗಳನ್ನು ಹೊಂದಿವೆ. ಈ ಟಾಟಾ ಹ್ಯಾರಿಯರ್ ಭಾರತದಲ್ಲಿ ಸುರಕ್ಷಿತ ಎಸ್‍ಯುವಿಗಳಲ್ಲಿ ಇದು ಕೂಡ ಒಂದಾಗಿದೆ,

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಟಾಟಾ ಹ್ಯಾರಿಯರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ 500, ಎಂಜಿ ಹೆಕ್ಟರ್, ಹ್ಯುಂಡೈ ಕ್ರೆಟಾ ಮತ್ತು ಜೀಪ್ ಕಂಪಾಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತಿದೆ. ಒಟ್ಟಿನಲ್ಲಿ ಟಾಟಾ ಹ್ಯಾರಿಯರ್ ಎಸ್‍ಯುವಿಯು ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆಯನ್ನು ಸಾಧಿಸಿದೆ ಮತ್ತು ಕಂಪನಿಗೆ ಮಾರಾಟದಲ್ಲಿ ಉತ್ತಮ ಕೊಡುಗೆಯನ್ನು ನೀಡುತ್ತಿದೆ. ಇನ್ನು ಈ ವರ್ಷ ಟಾಟಾ ಹ್ಯಾರಿಯರ್ ಮಾದರಿಯನ್ನು ಹೊಸ ನವೀಕರಣಗಳನ್ಮು ನಡೆಸಬಹುದು.

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಇನ್ನು ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ. ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು. 2

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

2020ರ ಆರಂಭದಲ್ಲಿ ಫೇಸ್ ಲಿಫ್ಟ್ ನೆಕ್ಸಾನ್ ಆಗಮನವು ಮಾರಾಟವನ್ನು ಮತ್ತಷ್ಟು ಹೆಚ್ಚಿಸಿತು. ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೇಡಿಕೆಯು ಹೆಚ್ಚಾಗುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಜನಪ್ರಿಯ ಮಾದರಿಗಳ ನಡುವೆ ಪೈಪೋಟಿ ಹೆಚ್ಚಾಗಿದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಇದರಿಂದ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಹೊಸ ಅಪ್‌ಡೇಟ್ ಗಳನ್ನು ಪಡೆಯಲಿದೆ. ಟಾಟಾ ನೆಕ್ಸಾನ್ ಕಾರಿನ ಎಂಜಿನ್ ಬಗ್ಗೆ ಹೇಳುವುದಾದರೆ, ಇದರಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಇದರ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ನೀಡಲಾಗಿದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಹೊಸ ಫೀಚರ್ಸ್‌ಗಳನ್ನು ಪಡೆಯಲಿವೆ ಟಾಟಾ ನೆಕ್ಸಾನ್ ಮತ್ತು ಹ್ಯಾರಿಯರ್

ಇನ್ನು ಸಾಮಾನ್ಯ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯು ಕೂಡ ಉತ್ತಮವಾಗಿ ಮಾರಾಟವಾಗುತ್ತಿದೆ. ಇದಕ್ಕೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಒಟ್ಟಿನಲ್ಲಿ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯು ಮಾರಾಟದಲ್ಲಿ ಕಂಪನಿಗೆ ಹೆಚ್ಚಿನ ಕೊಡುಗೆ ನೀಡುತ್ತಿದೆ,

Most Read Articles

Kannada
English summary
Tata motors likely to introduce new features for nexon and harrier models details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X