ಮೇ ಅವಧಿಯ ಇವಿ ಕಾರು ಮಾರಾಟದಲ್ಲಿ ಶೇ.626 ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್(Tata Motors) ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಸತತ ಮುನ್ನಡೆ ಸಾಧಿಸುತ್ತಿದ್ದು, ಕಂಪನಿಯು ಸಾಮಾನ್ಯ ಕಾರುಗಳ ಮಾರಾಟದ ಜೊತೆಗೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಭರ್ಜರಿ ಬೇಡಿಕೆ ಕಾಯ್ದುಕೊಂಡಿದೆ.

ಪ್ರಯಾಣಿಕರ ಕಾರು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಕಂಪನಿಯು ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಹ್ಯುಂಡೈ ಕಂಪನಿಯು ಮುಂದುವರೆದಿದೆ. ತದನಂತರ ಮೂರನೇ ಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಹ್ಯುಂಡೈ ಕಂಪನಿಯ ಕಾರುಗಳ ಮಾರಾಟಕ್ಕೆ ತೀವ್ರ ಪೈಪೋಟಿ ನೀಡುತ್ತಿದ್ದು, ಇವಿ ಕಾರುಗಳ ಮಾರಾಟದಲ್ಲಿ ಮಾತ್ರ ಇತರೆ ಕಂಪನಿಗಳನ್ನು ಹಿಂದಿಕ್ಕಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಟಾಟಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ ಮ್ಯಾಕ್ಸ್, ನೆಕ್ಸಾನ್ ಇವಿ, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಟಾಟಾ ಕಂಪನಿಯು ನೆಕ್ಸಾನ್ ಇವಿ, ನೆಕ್ಸಾನ್ ಇವಿ ಮ್ಯಾಕ್ಸ್ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕರ ಬಳಕೆಯ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯು ಕೂಡಾ ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಮೇ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 43,341 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 3,454 ಯುನಿಟ್ ಎಲೆಕ್ಟ್ರಿಕ್ ಕಾರು ಮಾದರಿಗಳಾಗಿವೆ. ಮೇ ಅವಧಿಯಲ್ಲಿನ ಇವಿ ಕಾರು ಮಾರಾಟವು ಕಳೆದ ವರ್ಷದ ಮೇ ಅವಧಿಯಲ್ಲಿನ 476 ಯುನಿಟ್ ಮಾರಾಟಕ್ಕೆ ಹೋಲಿಕೆ ಮಾಡಿದರೆ ಕಳೆದ ತಿಂಗಳು ಶೇ.626 ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ಮೇ ಅವಧಿಯಲ್ಲಿನ ಇವಿ ಕಾರು ಮಾರಾಟದಲ್ಲಿ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳು 2 ಸಾವಿರಕ್ಕಿಂತಲೂ ಹೆಚ್ಚು ಯುನಿಟ್ ಮಾರಾಟಗೊಂಡಿದ್ದು, ತದನಂತರ ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದುಕೊಂಡಿವೆ.

ಸದ್ಯ ನೆಕ್ಸಾನ್ ಸ್ಟ್ಯಾಂಡರ್ಡ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ.

ನೆಕ್ಸಾನ್ ಇವಿ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 95kW ಎಲೆಕ್ಟ್ರಿಕ್ ಮೋಟಾರ್ ಮತ್ತು 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಿದ್ದು, ಇತ್ತೀಚೆಗೆ ಬಿಡುಗಡೆಯಾಗಿರುವ ಹೊಸ ತಂತ್ರಜ್ಞಾನ ಪ್ರೇರಿತ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ 40.5kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಜೊತೆ ಹಳೆಯ ಮಾದರಿಯಾದ ನೆಕ್ಸಾನ್ ಇವಿ ಮಾರಾಟವನ್ನು ಸಹ ಮುಂದುವರಿಸಲಾಗಿದ್ದು, ಮೈಲೇಜ್ ಹೆಚ್ಚಳ ಬಯಸುವ ಗ್ರಾಹಕರು ಹೈ ಎಂಡ್ ಮಾದರಿಯನ್ನು ಖರೀದಿಸಬಹುದಾಗಿದೆ.

ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸದಂತೆ ನೆಕ್ಸಾನ್ ಇವಿ ಕಾರು ಇಕೋ ಡ್ರೈವ್ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಇನ್ನು ಟಿಗೋರ್ ಇವಿ ಮಾದರಿಯು ಆರಂಭಿಕವಾಗಿ ರೂ. 12.24 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.64 ಲಕ್ಷ ಬೆಲೆ ಹೊಂದಿದ್ದು, ಟಿಗೋರ್ ಇವಿ ಮಾದರಿಯು ಹೊಸ ತಂತ್ರಜ್ಞಾನ ಪ್ರೇರಿತ 55kW ಎಲೆಕ್ಟ್ರಿಕ್ ಮೋಟಾರ್‌ ಮತ್ತು 26kWh ಲೀಥಿಯಂ ಅಯಾನ್ ಜೋಡಣೆ ಹೊಂದಿದೆ.

ಹೊಸ ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆಯು ಕಾರಿನ ಕಾರ್ಯಕ್ಷಮತೆ ಹೆಚ್ಚಳದೊಂದಿಗೆ ಮೈಲೇಜ್‌ನಲ್ಲೂ ಸಾಕಷ್ಟು ಸುಧಾರಣೆಗೊಂಡಿದ್ದು, ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 306 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವನ್ನು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೊಸ ಪವರ್‌ಟ್ರೈನ್‌ನಲ್ಲಿ ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳಿಂದ ಕೂಡಿದೆ.

ನೀರು ಮತ್ತು ಧೂಳಿನಿಂದ ರಕ್ಷಣೆ ಹೊಂದಿರುವ ಹೊಸ ಪವರ್‌ಟ್ರೈನ್ ಮೇಲೆ ಟಾಟಾ ಕಂಪನಿಯು 8 ವರ್ಷ ಅಥವಾ 1.60 ಲಕ್ಷ ಕಿ.ಮೀ ಮೇಲೆ ಸ್ಟ್ಯಾಂಡರ್ಡ್ ವಾರಂಟಿ ನೀಡುತ್ತಿದ್ದು, ನವೀಕೃತ ಮಾದರಿಯಲ್ಲಿ ಹೊಸ ಪವರ್‌ಟ್ರೈನ್ ಜೊತೆ ವಿನ್ಯಾಸ ಮತ್ತು ತಾಂತ್ರಿಕ ಸೌಲಭ್ಯಗಳು ಸಹ ಬದಲಾವಣೆಗೊಂಡಿವೆ.

Article Published On: Thursday, June 2, 2022, 8:45 [IST]
English summary
Tata motors may 2022 electric cars sales report
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+