ಮೇ ಅವಧಿಯಲ್ಲಿನ ಪ್ರಯಾಣಿಕರ ಕಾರು ಮಾರಾಟದಲ್ಲಿ ಶೇ.185ರಷ್ಟು ಬೆಳವಣಿಗೆ ಸಾಧಿಸಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್(Tata Motors) ಕಂಪನಿಯು ಪ್ರಯಾಣಿಕರ ಕಾರು ಮಾರಾಟದಲ್ಲಿ ಭರ್ಜರಿಯಾಗಿ ಬೆಳವಣಿಗೆ ಸಾಧಿಸುತ್ತಿದ್ದು, 2022ರ ಮೇ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.185 ರಷ್ಟು ಬೆಳವಣಿಯೊಂದಿಗೆ ಸುಮಾರು 43 ಸಾವಿರ ಕಾರುಗಳನ್ನು ಮಾರಾಟ ಮಾಡಿದೆ.

ಸೆಮಿಕಂಡಕ್ಟರ್ ಕೊರತೆ ಮತ್ತು ಕೋವಿಡ್‌ನಿಂದ ಉಂಟಾಗಿದ್ದ ಆರ್ಥಿಕ ಏರಿಳಿತದ ನಡುವೆ ಕಳೆದ ವರ್ಷದ ಮೇ ನಲ್ಲಿ 15,181 ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ತಿಂಗಳ ಮೇ ಅವಧಿಯಲ್ಲಿ 43,341 ಕಾರುಗಳ ಮಾರಾಟದ ಮೂಲಕ ಶೇ.185 ರಷ್ಟು ಬೆಳವಣಿ ಸಾಧಿಸಿದೆ.

ಕಾರು ಮಾರಾಟ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಮೇ ಅವಧಿಯಲ್ಲಿ ಒಟ್ಟು 74,755 ಯುನಿಟ್ ವಾಹನಗಳನ್ನು ಮಾರಾಟ ಮಾಡಿದ್ದು, ಪ್ರಯಾಣಿಕರ ಕಾರು ಮಾರಾಟದಲ್ಲಿ ಮಾತ್ರವಲ್ಲದೆ ವಾಣಿಜ್ಯ ವಾಹನಗಳ ಮಾರಾಟದಲ್ಲೂ ಉತ್ತಮ ಬೆಳವಣಿಗೆ ಸಾಧಿಸಿದೆ.

2022ರ ಮೇ ಅವಧಿಯಲ್ಲಿನ ಒಟ್ಟು ವಾಹನ ಮಾರಾಟದಲ್ಲಿ ಶೇ. 204 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು 43,341 ಯುನಿಟ್ ಪ್ರಯಾಣಿಕರ ಕಾರುಗಳನ್ನು ಮತ್ತು 32,818 ಯುನಿಟ್ ವಾಣಿಜ್ಯ ವಾಹನಗಳನ್ನು ಮಾರಾಟ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ಎರಡೂವರೆ ವರ್ಷಗಳಿಂದ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಬದಲಾವಣೆ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಟಾಟಾ ಕಂಪನಿಯ ಕಾರು ಮಾರಾಟದಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಅಗ್ರಸ್ಥಾನದಲ್ಲಿದ್ದು, ತದನಂತರದಲ್ಲಿ ಆಲ್‌ಟ್ರೊಜ್, ಟಿಯಾಗೋ, ಟಿಗೋರ್, ಪಂಚ್, ಹ್ಯಾರಿಯರ್ ಮತ್ತು ಸಫಾರಿ ಕಾರು ಮಾದರಿಗಳು ಸಹ ಉತ್ತಮ ಬೇಡಿಕೆ ಪಡೆದುಕೊಂಡಿವೆ.

ನಿಕಟ ಪ್ರತಿಸ್ಪರ್ಧಿಯಾಗಿರುವ ಹ್ಯುಂಡೈ ಕಂಪನಿಗೆ ಉತ್ತಮ ಪೈಪೋಟಿ ನೀಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಭಾರತದಲ್ಲಿ ಕಾರು ಉತ್ಪಾದನೆಯನ್ನು ಆರಂಭಿಸಿದ 31 ವರ್ಷಗಳ ನಂತರ ಕಂಪನಿಯು ವಾರ್ಷಿಕವಾಗಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದೆ.

ಟಾಟಾ ಮೋಟಾರ್ಸ್ ಹೊಸ ಪಂಚ್ ಮೈಕ್ರೊ ಎಸ್‌ಯುವಿ ಮತ್ತು ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ನೆಕ್ಸಾನ್ ನಂತರ ಟಾಟಾ ನಿರ್ಮಾಣದ ಎರಡನೇ ಅತಿ ಹೆಚ್ಚು ಬೇಡಿಕೆಯ ಕಾರು ಮಾದರಿಯಾಗಿ ಹೊರಹೊಮ್ಮಿದೆ.

ಪಂಚ್ ಕಾರು ಮಾದರಿಯು ಪ್ರೀಮಿಯಂ ಫೀಚರ್ಸ್, ಬಜೆಟ್ ಬೆಲೆ ಮತ್ತು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಮೈಕ್ರೊ ಎಸ್‌ಯುವಿ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಬಿಡುಗಡೆಯಾದ ಕೇವಲ ಆರು ತಿಂಗಳ ಅವಧಿಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಯುನಿಟ್ ವಿತರಣೆಗೊಂಡಿವೆ. ಕಳೆದ ವರ್ಷದ ಅಕ್ಟೋಬರ್ ಕೊನೆಯಲ್ಲಿ ವಿತರಣೆ ಆರಂಭಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ಇದುವರೆಗೆ 1 ಲಕ್ಷಕ್ಕೂ ಹೆಚ್ಚು ಬುಕಿಂಗ್ ಪಡೆದುಕೊಂಡಿದೆ.

ಪಂಚ್ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಶೇ.10ರಷ್ಟು ಪಾಲು ಹೊಂದುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಮತಹತ್ವದ ಬದಲಾವಣೆಗಳೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಹೊಸ ಪಂಚ್ ಕಾರು ಮಾದರಿಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ಎರಡು ಎಡಿಷನ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಮೈಕ್ರೊ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಭರ್ಜರಿ ಪೈಪೋಟಿ ನೀಡುತ್ತಿದೆ.

ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಸ್ಟ್ಯಾಂಡರ್ಡ್ ಮತ್ತು ಕಾಜಿರಂಗ ಎಡಿಷನ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ಮಾದರಿಗಳ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.83 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.49 ಲಕ್ಷ ಬೆಲೆ ಹೊಂದಿದೆ.

ಹೊಸ ಪಂಚ್ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಐಪಿಎಲ್ ವಿಶೇಷತೆಗಾಗಿ ಕಾಜಿರಂಗ ಎಡಿಷನ್ ಬಿಡುಗಡೆ ಮಾಡಿದ್ದು, ಸೀಮಿತ ಅವಧಿಗೆ ಖರೀದಿಗೆ ಲಭ್ಯವಿರುವ ಕಾಜಿರಂಗ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.89 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು 9.49 ಲಕ್ಷ ಬೆಲೆ ಹೊಂದಿದೆ.

ಸೆಗ್ಮೆಂಟ್ ಬೆಸ್ಟ್ ಫಿಚರ್ಸ್‌ಗಳೊಂದಿಗೆ ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿರುವ ಟಾಟಾ ಪಂಚ್ ಕಾರಿನಲ್ಲಿ ಕಂಪನಿಯು 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದೆ. 1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

ಜೊತೆಗೆ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ನಂತರ ಎಲ್ಲಾ ಕಾರು ಮಾದರಿಗಳಲ್ಲೂ ಗರಿಷ್ಠ ಸುರಕ್ಷಾ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯಲ್ಲೂ ಸಹ ಗರಿಷ್ಠ ಮಟ್ಟದ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದೆ.


Click it and Unblock the Notifications