ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಪ್ರಯಾಣಿಕರ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಸಂಭಾವ್ಯ ಗ್ರಾಹಕರಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ವಿವಿಧ ಆಫರ್‌ಗಳನ್ನು ನೀಡುತ್ತಿದ್ದು, ಹೊಸ ಆಫರ್‌ಗಳು ಮೇ 31ರ ತನಕ ಲಭ್ಯವಿರಲಿವೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಸೆಮಿಕಂಡಕ್ಟರ್ ಕೊರತೆಯ ನಡುವೆಯೂ ಕಾರುಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರು ಮಾದರಿಗಳೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ವಿವಿಧ ಕಾರುಗಳ ಖರೀದಿ ಹೆಚ್ಚಿಸಲು ಆಕರ್ಷಕ ಆಫರ್‌ಗಳನ್ನು ಘೋಷಣೆ ಮಾಡುತ್ತಿದೆ. ಟಿಯಾಗೊ, ಟಿಗೋರ್, ಆಲ್‌ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಮತ್ತು ನೆಕ್ಸಾನ್ ಕಾರುಗಳ ಮೇಲೆ ವಿಶೇಷ ಆಫರ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಪಡೆದುಕೊಳ್ಳಬಹುದಾಗಿದೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಟಾಟಾ ಮೋಟಾರ್ಸ್ ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ.13 ಸಾವಿರದಿಂದ ಗರಿಷ್ಠ ರೂ. 45 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಟಾಟಾ ಹೊಸ ಆಫರ್‌ಗಳಲ್ಲಿ ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ಕಂಪನಿಯು ರೂ.23 ಸಾವಿರ ತನಕ ಆಫರ್ ಘೋಷಿಸಿದ್ದು, ರೂ. 20 ಸಾವಿರ ಮೌಲ್ಯದ ಆಫರ್‌ನಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 10 ಸಾವಿರ ಎಕ್ಸ್‌ಚೆಂಜ್ ಆಫರ್ ಮತ್ತು ಆಯ್ದ ಮಾದರಿಗಳ ಮೇಲೆ ರೂ. 3 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಸಹ ನೀಡುತ್ತಿದೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ. ಟಿಗೋರ್ ಕಾರು ಖರೀದಿಯ ಮೇಲೂ ಗ್ರಾಹಕರು ಗರಿಷ್ಠ ರೂ.23 ಸಾವಿರ ತನಕ ಉಳಿತಾಯ ಮಾಡಬಹುದಾಗಿದ್ದು, ರೂ. 23 ಸಾವಿರದಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.10 ಸಾವಿರ ತನಕ ಎಕ್ಸ್‌ಚೆಂಜ್ ಆಫರ್ ಮತ್ತು ಆಯ್ದ ಮಾದರಿಗಳ ಮೇಲೆ ರೂ. 3 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಪಡೆಯಬಹುದಾಗಿದೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಹೊಸ ಆಫರ್‌ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಮಾದರಿಗಳ ಎಕ್ಸ್ಇ, ಎಕ್ಸ್ಎಂ ಮತ್ತು ಎಕ್ಸ್‌ಟಿ ಮಾದರಿಗಳ ಮೇಲೆ ಕನಿಷ್ಠ ಆಫರ್ ಲಭ್ಯವಿದ್ದರೆ ಎಕ್ಸ್‌ಜೆಡ್ ಮಾದರಿಗಳ ಮೇಲೆ ಹೆಚ್ಚಿನ ಆಫರ್ ನೀಡಲಾಗುತ್ತಿದೆ. ಆದರೆ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಸದ್ಯ ಟಿಯಾಗೋ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.22 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.67 ಲಕ್ಷ ಬೆಲೆ ಹೊಂದಿದ್ದರೆ ಟಿಗೋರ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.82 ಲಕ್ಷದಿಂದ ರೂ. 8.44 ಲಕ್ಷ ಬೆಲೆ ಹೊಂದಿದೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಟಾಟಾ ಹೊಸ ಆಫರ್‌ಗಳಲ್ಲಿ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಆವೃತ್ತಿಯ ಮಾದರಿಯ ಡೀಸೆಲ್ ಆವೃತ್ತಿಯ ಮೇಲೆ ಮಾತ್ರವೇ ಕಂಪನಿಯು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ಮತ್ತು ರೂ. 5 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ನೀಡುತ್ತಿದ್ದು, ಹೊಸ ಆಫರ್ ನಲ್ಲಿ ಪೆಟ್ರೋಲ್ ಮಾದರಿಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಸ್ಟ್ಯಾಂಡರ್ಡ್ ಡೀಸೆಲ್ ವೆರಿಯೆಂಟ್‌ಗಳ ಮೇಲೆ ಆಫರ್ ಘೋಷಣೆ ಮಾಡಿದೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.42 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.73 ಲಕ್ಷ ಬೆಲೆ ಹೊಂದಿದೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಇನ್ನು ಟಾಟಾ ಕಂಪನಿಯು ತನ್ನ ಹೊಸ ಆಫರ್‌ಗಳಲ್ಲಿ ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ರೂ.45 ಸಾವಿರ ತನಕ ಆಫರ್ ನೀಡುತ್ತಿದ್ದು, ಎಲ್ಲಾ ವೆರಿಯೆಂಟ್‌ಗಳಿಗೂ ಅನ್ವಯಿಸುವಂತೆ ರೂ.40 ಸಾವಿರ ತನಕ ಎಕ್ಸ್‌ಚೆಂಜ್ ಆಫರ್ ಮತ್ತು ರೂ. 5 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ನೀಡುತ್ತಿದೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಹೊಸ ಆಫರ್‌ಗಳಲ್ಲಿ ಕಂಪನಿಯು ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಮೇಲೂ ರೂ.40 ಸಾವಿರ ಮೌಲ್ಯದ ಆಫರ್ ಘೋಷಣೆ ಮಾಡಿದ್ದು, ಸಫಾರಿಯಲ್ಲಿ ಯಾವುದೇ ಮಾದರಿಗೂ ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗಿಲ್ಲ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಹೆಚ್ಚುತ್ತಿರುವ ಬಿಡಿಭಾಗಗಳ ನಿರ್ವಹಣಾ ವೆಚ್ಚ ಹಿನ್ನಲೆಯಲ್ಲಿ ಪ್ರಮುಖ ಕಾರು ಕಂಪನಿಗಳು ತಮ್ಮ ಪ್ರಮುಖ ವಾಹನಗಳ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಿಸುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಸಹ ತನ್ನ ಹೊಸ ಕಾರುಗಳ ಬೆಲೆಯಲ್ಲಿ ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ದರ ಹೆಚ್ಚಳ ಘೋಷಿಸಿದೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಧ್ಯಮ ಕ್ರಮಾಂಕದ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಸಹ ಇದೀಗ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯನ್ನು ಹೆಚ್ಚಿಸಿದೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಕಳೆದ ತಿಂಗಳು ಫೆಬ್ರವರಿ ಆರಂಭದಲ್ಲಿ ಪ್ರತಿ ಕಾರು ಬೆಲೆಯಲ್ಲಿ ಶೇ. 1ರಿಂದ ಶೇ.2 ಹೆಚ್ಚಳ ಘೋಷಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಏಪ್ರಿಲ್ 23ರಿಂದ ಜಾರಿಗೆ ಬರುವಂತೆ ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಶೇ.1.1 ರಷ್ಟು ಬೆಲೆ ಏರಿಕೆ ಮಾಡಿದೆ.

ಮೇ ಅವಧಿಯಲ್ಲಿ ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಲೇ ಇದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ.

Article Published On: Tuesday, May 10, 2022, 13:14 [IST]
English summary
Tata motors may discounts 2022 save up to rs 45 000
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+