ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಅಕ್ಟೋಬರ್ ಅವಧಿಯ ಆಫರ್ ಘೋಷಣೆ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಸಂಭಾವ್ಯ ಗ್ರಾಹಕರಿಗೆ ದೀಪಾವಳಿ ಪ್ರಯುಕ್ತ ಪ್ರಮುಖ ಕಾರುಗಳ ಖರೀದಿ ಮೇಲೆ ಅಕ್ಟೋಬರ್ ಅವಧಿಯ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಆಯ್ದು ಮಾದರಿಗಳ ಮೇಲೆ ಹೊಸ ಆಫರ್ ಲಭ್ಯವಿರಲಿದೆ.

ಪ್ರಯಾಣಿಕರ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ವಿವಿಧ ಕಾರುಗಳ ಖರೀದಿ ಹೆಚ್ಚಿಸಲು ಆಕರ್ಷಕ ಆಫರ್‌ಗಳನ್ನು ಸಹ ಘೋಷಣೆ ಮಾಡಿದೆ. ಟಿಯಾಗೊ, ಟಿಗೋರ್, ಟಿಗೋರ್ ಸಿಎನ್‌ಜಿ, ಹ್ಯಾರಿಯರ್ ಮತ್ತು ಸಫಾರಿ ಕಾರುಗಳ ಮೇಲೆ ವಿಶೇಷ ಆಫರ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್‌ಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ. 20 ಸಾವಿರದಿಂದ ಗರಿಷ್ಠ ರೂ. 40 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಟಾಟಾ ಹೊಸ ಆಫರ್‌ಗಳಲ್ಲಿ ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ಕಂಪನಿಯು ರೂ. 20 ಸಾವಿರ ತನಕ ಆಫರ್ ಘೋಷಿಸಿದ್ದು, ರೂ. 20 ಸಾವಿರ ಮೌಲ್ಯದ ಆಫರ್‌ನಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 10 ಸಾವಿರ ಎಕ್ಸ್‌ಚೆಂಜ್ ಆಫರ್ ಪಡೆಯಬಹುದಾಗಿದೆ.

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ. ಟಿಗೋರ್ ಕಾರು ಖರೀದಿಯ ಮೇಲೂ ಗ್ರಾಹಕರು ಗರಿಷ್ಠ ರೂ.20 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ರೂ. 20 ಸಾವಿರದಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.10 ಸಾವಿರ ತನಕ ಎಕ್ಸ್‌ಚೆಂಜ್ ಆಫರ್ ಮತ್ತು ಆಯ್ದ ಮಾದರಿಗಳ ಮೇಲೆ ರೂ. 3 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್‌ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಮಾದರಿಗಳ ಎಕ್ಸ್ಇ, ಎಕ್ಸ್ಎಂ ಮತ್ತು ಎಕ್ಸ್‌ಟಿ ಮಾದರಿಗಳ ಮೇಲೆ ಕನಿಷ್ಠ ಆಫರ್ ಲಭ್ಯವಿದ್ದರೆ ಎಕ್ಸ್‌ಜೆಡ್ ಮಾದರಿಗಳ ಮೇಲೆ ಹೆಚ್ಚಿನ ಆಫರ್ ನೀಡಲಾಗುತ್ತಿದ್ದು, ಟಿಗೋರ್ ಸಿಎನ್‌ಜಿ ಮಾದರಿಯ ಮೇಲೆ ಕಂಪನಿಯು ರೂ. 20 ಸಾವಿರ ಮೌಲ್ಯದ ಆಫರ್ ನೀಡುತ್ತಿದೆ.

ಹೊಸ ಆಫರ್‌ಗಳಲ್ಲಿ ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ರೂ.40 ಸಾವಿರ ತನಕ ಆಫರ್ ನೀಡುತ್ತಿದ್ದು, ಎಲ್ಲಾ ವೆರಿಯೆಂಟ್‌ಗಳಿಗೂ ಅನ್ವಯಿಸುವಂತೆ ರೂ.40 ಸಾವಿರ ತನಕ ಎಕ್ಸ್‌ಚೆಂಜ್ ಆಫರ್ ಮತ್ತು ರೂ. 5 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ನೀಡುತ್ತಿದೆ.

ಹೊಸ ಆಫರ್‌ಗಳಲ್ಲಿ ಕಂಪನಿಯು ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಮೇಲೂ ರೂ.40 ಸಾವಿರ ಮೌಲ್ಯದ ಆಫರ್ ಘೋಷಣೆ ಮಾಡಿದ್ದು, ಸಫಾರಿ ಮಾದರಿಗಾಗಿ ಯಾವುದೇ ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗಿಲ್ಲ.

ಇನ್ನು ಹೊಸ ಕಾರುಗಳಲ್ಲಿ ನಿರಂತರವಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳ ಉನ್ನತೀಕರಣದೊಂದಿಗೆ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ತಿಂಗಳು ಸೆಪ್ಟೆಂಬರ್ ಅವಧಿಯಲ್ಲಿನ ಕಾರು ಮಾರಾಟ ವರದಿಯನ್ನು ಪ್ರಕಟಿಸಿದ್ದು, ಕಂಪನಿಯು ಶೇ. 85.21 ರಷ್ಟು ಬೆಳವಣಿಗೆಯೊಂದಿಗೆ 47,654 ಕಾರುಗಳನ್ನು ಮಾರಾಟ ಮಾಡಿದೆ.

ಸೆಮಿಕಂಡಕ್ಟರ್ ಪೂರೈಕೆಯಲ್ಲಿನ ಕೊರತೆ ನಡುವೆಯೂ ಕಳೆದ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ 25,730 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ಈ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ 47,654 ಯುನಿಟ್ ಕಾರುಗಳ ಮಾರಾಟದ ಮೂಲಕ ಶೇ. 85.21 ರಷ್ಟು ಬೆಳವಣಿಗೆ ಸಾಧಿಸಿದೆ.

ಕಾರು ಮಾರಾಟ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಪ್ರಯಾಣಿಕರ ಕಾರು ಮಾರಾಟದಲ್ಲಿ ಮಾತ್ರವಲ್ಲದೆ ವಾಣಿಜ್ಯ ವಾಹನಗಳ ಮಾರಾಟದಲ್ಲೂ ಉತ್ತಮ ಬೆಳವಣಿಗೆ ಸಾಧಿಸಿದೆ.

2022ರ ಮೂರನೇ ತ್ರೈಮಾಸಿಕ ಅವಧಿಯಲ್ಲಿ ಒಟ್ಟು ವಾಹನ ಮಾರಾಟದಲ್ಲಿ ಶೇ. 69.58 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು 1,42,330 ಯುನಿಟ್ ಪ್ರಯಾಣಿಕರ ಕಾರುಗಳನ್ನು ಮಾರಾಟ ಮಾಡಿದ್ದು,ಇದು ಕಳೆದ ವರ್ಷದ ಮೂರನೇ ತ್ರೈಮಾಸಿಕ ಅವಧಿಯಲ್ಲಿನ 83,931 ಯುನಿಟ್ ಕಾರುಗಳ ಮಾರಾಟಕ್ಕಿಂತ ಶೇ. 69.58 ರಷ್ಟು ಹೆಚ್ಚಳವಾಗಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ಎರಡೂವರೆ ವರ್ಷಗಳಿಂದ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಬದಲಾವಣೆ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.


Click it and Unblock the Notifications








