Just In
Don't Miss!
- Sports
ವಿಂಡೀಸ್ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ, ಸಂಜು ಸ್ಯಾಮ್ಸನ್ಗೆ ಸಿಗಲಿದೆ ಮತ್ತೊಂದು ಅವಕಾಶ?
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Technology
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
160 ಹೊಸ ಸರ್ವಿಸ್ ಸೆಂಟರ್‌ಗಳಿಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್
ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಮಾರಾಟ ಮಳಿಗೆಗಳ ಹೆಚ್ಚಳದೊಂದಿಗೆ ಮಾರಾಟ ನಂತರದ ಸೇವಾ ಜಾಲವನ್ನು ಸಹ ವಿಸ್ತರಿಸುತ್ತಿದೆ.

ಹೊಸ ಕಾರುಗಳ ನಂತರ ಗ್ರಾಹಕರ ಸೇವೆಗಳ ಕುರಿತಂತೆ ಗ್ರಾಹಕರಿಂದ ಅಸಮಾಧಾನದ ಬಗೆಗೆ ಗಮನಹರಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರಿಗೆ ನಿಗದಿತ ಅವಧಿಯಲ್ಲಿ ಗುಣಮಟ್ಟದ ಸೇವೆಗಳನ್ನು ಒದಗಿಸಲು ಹಲವಾರು ಸುಧಾರಣಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದ್ದು, ಈ ವರ್ಷಾಂತ್ಯಕ್ಕೆ ಕಂಪನಿಯು ತನ್ನ ಅಧಿಕೃತ ಸೇವಾ ಕೇಂದ್ರಗಳ ಸಂಖ್ಯೆಯನ್ನು 705ಕ್ಕೆ ಹೆಚ್ಚಿಸುವ ಗುರಿಹೊಂದಿದೆ.

ಇದೀಗ ಹೊಸದಾಗಿ 160 ಅಧಿಕೃತ ಸೇವಾ ಕೇಂದ್ರಗಳೊಂದಿಗೆ 485 ನಗರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ವಾಹನಗಳು ಹೆಚ್ಚಿದಂತೆ ಅದಕ್ಕೆ ಪೂರಕವಾಗಿ ಸೇವಾ ಕೇಂದ್ರ ಕಾರ್ಯಕ್ಷಮತೆಯನ್ನು ಸುಧಾರಿಸುತ್ತಿದೆ.

ಇದರ ಜೊತೆಗೆ ಕಂಪನಿಯು ಇಜೆಡ್‌ಸರ್ವ್(EzServe) ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದು, ಇದು ವಿಶಿಷ್ಟವಾದ ಗ್ರಾಹಕ ಸ್ನೇಹಿ ದ್ವಿಚಕ್ರ ವಾಹನ ಆಧಾರಿತ ಸೇವೆಯಾಗಿದೆ. ಇದು ಗ್ರಾಹಕರಿಗೆ ಅವರ ಮನೆ ಬಾಗಿಲಿಗೆ ಸುರಕ್ಷಿತ ಮತ್ತು ತೊಂದರೆ-ಮುಕ್ತ ಸೇವಾ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಇಜೆಡ್‌ಸರ್ವ್ ಗ್ರಾಹಕರಿಗೆ ಹಲವಾರು ಪ್ರಯೋಜನಗಳನ್ನು ನೀಡಲಿದ್ದು, ಇದು ಅವರ ಆದ್ಯತೆಯ ಸ್ಥಳದಲ್ಲಿ ಸೇವೆ, ರಿಪೇರಿ ಮತ್ತು ಹೆಚ್ಚಿನವುಗಳನ್ನು ಒಳಗೊಂಡಿರುತ್ತದೆ. ಪ್ರತಿಯೊಂದು ಇಜೆಡ್‌ಸರ್ವ್ ಘಟಕವು ಬೈಕ್‌ನ ಹಿಂಭಾಗದಲ್ಲಿ ಅಳವಡಿಸಲಾಗಿರುವ 3 ಯುಟಿಲಿಟಿ ಬಾಕ್ಸ್‌ಗಳನ್ನು ಒಳಗೊಂಡಿರುವ ಸಮಗ್ರ ಕಿಟ್‌ನೊಂದಿಗೆ ಬರುತ್ತದೆ.

ಯುಟಿಲಿಟಿ ಬಾಕ್ಸ್‌ಗಳಲ್ಲಿ ಬಿಡಿಭಾಗಗಳು, ವ್ಯಾಕ್ಯೂಮ್ ಕ್ಲೀನರ್, ಜ್ಯಾಕ್ ಮತ್ತು ಜ್ಯಾಕ್ ಸ್ಟ್ಯಾಂಡ್ ಮತ್ತು ಹಲವಾರು ಸಣ್ಣ ಉಪಕರಣಗಳನ್ನು ಒಳಗೊಂಡಿರಲಿದ್ದು, ಯುನಿಕ್ ಐಡಿ ಕಾರ್ಡ್‌ಗಳ ಮೂಲಕ ಕಂಪನಿಯು ನುರಿತ ತಂತ್ರಜ್ಞರ ಸೇವೆಯನ್ನು ಖಚಿತಪಡಿಸುತ್ತದೆ.

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಪ್ರಯಾಣಿಕರ ಕಾರು ಮಾರಾಟದಲ್ಲಿ ತಿಂಗಳಿನಿಂದ ತಿಂಗಳಿಗೆ ಹೆಚ್ಚಿನ ಮಟ್ಟದ ಬೆಳವಣಿಗೆ ಸಾಧಿಸುತ್ತಿದ್ದು, 2022ರ ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣಿಯೊಂದಿಗೆ ಸುಮಾರು 42 ಸಾವಿರ ಕಾರುಗಳನ್ನು ಮಾರಾಟ ಮಾಡಿದೆ.

ಸೆಮಿಕಂಡಕ್ಟರ್ ಕೊರತೆ ಮತ್ತು ಕೋವಿಡ್‌ನಿಂದ ಉಂಟಾಗುತ್ತಿರುವ ಆರ್ಥಿಕ ಏರಿಳಿತದ ನಡುವೆಯೂ ಕಳೆದ ಕೆಲ ತಿಂಗಳಿನಿಂದ ಹೊಸ ಕಾರುಗಳ ಮಾರಾಟವು ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಮಾರ್ಚ್ ಅವಧಿಯಲ್ಲಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಶೇ.43 ರಷ್ಟು ಬೆಳವಣಿಯೊಂದಿಗೆ ಪ್ರಮುಖ ಕಾರು ಕಂಪನಿಗಳಿಗೆ ಭರ್ಜರಿ ಪೈಪೋಟಿ ನೀಡಿದೆ.

ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು 42,293 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿ ಮಾರಾಟಗೊಂಡಿದ್ದ 29,654 ಕಾರು ಮಾರಾಟಕ್ಕಿಂತ ಶೇ.43 ರಷ್ಟು ಹೆಚ್ಚಳವಾಗಿದೆ.

2022ರ ಮಾರ್ಚ್ ಅವಧಿಯಲ್ಲಿನ ಒಟ್ಟು ವಾಹನ ಮಾರಾಟದಲ್ಲಿ ಶೇ.30 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಬರೋಬ್ಬರಿ 86,718 ವಾಹನಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿ ಮಾರಾಟ ಮಾಡಿದ್ದ 66,462 ಯನಿಟ್ ವಾಹನಗಳಿಂತಲೂ ಶೇ.30 ರಷ್ಟು ಹೆಚ್ಚಳವಾಗಿದೆ.

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ಒಂದು ವರ್ಷದಿಂದ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಪ್ರಯಾಣಿಕ ಕಾರು ಮಾರಾಟದಲ್ಲಿ ಮಾತ್ರವಲ್ಲದೆ ವಾಣಿಜ್ಯ ವಾಹನ ಮಾರಾಟದಲ್ಲೂ ಶೇ.16 ರಷ್ಟು ಮುನ್ನಡೆ ಸಾಧಿಸಿದೆ.

ಮಾರ್ಚ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 47,050 ಯುನಿಟ್ ವಾಣಿಜ್ಯ ವಾಹನಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 2,625 ವಾಣಿಜ್ಯ ವಾಹನಗಳನ್ನು ವಿದೇಶಿ ಮಾರುಕಟ್ಟೆಗೆ ರಫ್ತುಗೊಳಿಸಿದೆ.

ಈ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು 2021-22ರ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ(ಜನವರಿಯಿಂದ ಮಾರ್ಚ್) ಒಟ್ಟು 2,33,078 ವಾಹನಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿನ ವಾಹನ ಮಾರಾಟಕ್ಕಿಂತ ಶೇ.28 ರಷ್ಟು ಹೆಚ್ಚಳವಾಗಿದೆ.

ಹಾಗೆಯೇ ಕಂಪನಿಯು 2021-22ರ ಆರ್ಥಿಕ ವರ್ಷದಲ್ಲಿ ಒಟ್ಟು 6,92,554 ವಾಹನಗಳನ್ನು ಮಾರಾಟ ಮಾಡಿ ಶೇ.49 ರಷ್ಟು ಬೆಳವಣಿಗೆ ಸಾಧಿಸಿದ್ದು, ಇದರಲ್ಲಿ 3,70,372 ಪ್ರಯಾಣಿಕ ಕಾರು ಮಾದರಿಗಳ ಮಾರಾಟದ ಮೂಲಕ ಕಳೆದ ವರ್ಷಕ್ಕಿಂತ ಶೇ.67 ರಷ್ಟು ಬೆಳವಣಿಗೆ ಸಾಧಿಸಿದೆ.