ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಬದಲಾವಣೆಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಪ್ರಯಾಣಿಕ ಕಾರು ಮಾರಾಟ ವಿಭಾಗದಲ್ಲಿ ತನ್ನ ಪ್ರಬಲ ಪೈಪೋಟಿಯಾಗಿರುವ ಹ್ಯುಂಡೈ ಕಂಪನಿಯನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಪಡೆದುಕೊಂಡಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

2021ರ ಡಿಸೆಂಬರ್ ಅವಧಿಯಲ್ಲಿನ ಪ್ರಯಾಣಿಕರ ಕಾರು ಮಾರಾಟ ಪಟ್ಟಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಹ್ಯುಂಡೈ ಕಂಪನಿಯನ್ನು ಹಿಂದಿಕ್ಕಿ ಎರಡನೇ ಸ್ಥಾನ ಪಡೆದುಕೊಂಡಿದ್ದು, ಕಳೆದ ಒಂದು ದಶಕದ ನಂತರ ಟಾಟಾ ಮೋಟಾರ್ಸ್ ಕಂಪನಿಯು ಕಾರು ಮಾರಾಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ಪ್ರಸ್ತುತ ಮಾರುಕಟ್ಟೆಯಲ್ಲಿನ ಪ್ರಯಾಣಿಕರ ಕಾರು ಮಾರಾಟ ವಿಭಾಗದಲ್ಲಿ ಮಾರುತಿ ಸುಜುಕಿಯು ಅಗ್ರಸ್ಥಾನದಲ್ಲಿ ಮುಂದುವರಿದ್ದು, ಎರಡನೇ ಸ್ಥಾನಕ್ಕಾಗಿ ಹ್ಯುಂಡೈ ಮತ್ತು ಟಾಟಾ ಮೋಟಾರ್ಸ್ ಹೆಚ್ಚಿನ ಪೈಪೋಟಿ ನಡೆಸುತ್ತಿವೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ಕಳೆದ ಒಂದು ದಶಕದಿಂದಲೂ ಮೊದಲ ಸ್ಥಾನದಲ್ಲಿ ಮಾರುತಿ ಸುಜುಕಿ ಮತ್ತು ಎರಡನೇ ಸ್ಥಾನದಲ್ಲಿ ಮುಂದುವರಿದ್ದ ಹ್ಯುಂಡೈ ಕಂಪನಿಯು ಕಾರು ಮಾರಾಟದಲ್ಲಿ ಶೇ. 70ರಷ್ಟು ಪಾಲನ್ನು ತಮ್ಮದಾಗಿಸಿಕೊಂಡಿರುವ ಎರಡು ಕಂಪನಿಗಳು ಅಧಿಪತ್ಯ ಮುಂದುವರಿಸಿದ್ದು, ಇದೀಗ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ಒಂದು ದಶಕದ ನಂತರ ಹ್ಯುಂಡೈ ಕಂಪನಿಯನ್ನು ಹಿಂದಿಕ್ಕಿ ಪ್ರಯಾಣಿಕರ ಕಾರು ಮಾರಾಟದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು 2021ರ ಡಿಸೆಂಬರ್ ಅವಧಿಯಲ್ಲಿ ಒಟ್ಟಾರೆ 66,307 ವಾಹನಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 35,299 ಯುನಿಟ್ ಪ್ರಯಾಣಿಕ ಕಾರು ಮಾದರಿಗಳಾಗಿವೆ. ಕಳೆದ ತಿಂಗಳಿನ ಕಾರು ಮಾರಾಟವನ್ನು 2020ರ ಡಿಸೆಂಬರ್ ಅವಧಿಯಲ್ಲಿನ 23,545 ಯನಿಟ್‌ಗಳ ಪ್ರಯಾಣಿಕರ ಕಾರು ಮಾರಾಟಕ್ಕೆ ಹೋಲಿಕೆ ಮಾಡಿದರೆ ಟಾಟಾ ಕಂಪನಿಯು ಶೇ.50ರಷ್ಟು ಬೆಳಣಿಗೆ ಸಾಧಿಸಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

2021ರ ಡಿಸೆಂಬರ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯಿಂದ ತೀವ್ರ ಪೈಪೋಟಿ ಎದುರಿಸಿದ ಹ್ಯುಂಡೈ ಕಂಪನಿಯು 32,312 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಟಾಟಾ ಕಾರುಗಳ ಮಾರಾಟ ಸಂಖ್ಯೆಗಿಂತಲೂ ಕಡಿಮೆ ಬೇಡಿಕೆಯೊಂದಿಗೆ ಮೂರನೇ ಸ್ಥಾನಕ್ಕೆ ಕುಸಿತ ಕಂಡಿತು.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ಹೊಸ ಕಾರುಗಳ ಮಾರಾಟದಲ್ಲಿ ಹಿನ್ನಡೆ ಕುರಿತಂತೆ ಮಾತನಾಡಿರುವ ಹ್ಯುಂಡೈ ಕಂಪನಿಯು ಹೊಸ ಕಾರುಗಳ ಉತ್ಪಾದನೆ ಅವಶ್ಯವಾಗಿರುವ ಸೆಮಿಕಂಡಕ್ಟರ್ ಪೂರೈಕೆಯಲ್ಲಿ ಕೊರತೆಯಿಂದ ಉತ್ಪಾದನೆಯಲ್ಲಿ ಏರಿಳಿತವಾಗುತ್ತಿರುವ ಬಗೆಗೆ ಬೇಸರ ವ್ಯಕ್ತಪಡಿಸಿದ್ದು, ಮುಂಬರುವ ದಿನಗಳಲ್ಲಿ ಕಾರು ಉತ್ಪಾದನೆ ಹೆಚ್ಚಿಸುವತ್ತ ಅಗತ್ಯ ಕ್ರಮಕೈಗೊಳ್ಳುವ ಬಗೆಗೆ ಮಾಹಿತಿ ಹಂಚಿಕೊಂಡಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ಸೆಮಿ ಕಂಡಕ್ಟರ್ ಕೊರತೆಯ ನಡುವೆಯೂ ಬಿಡಿಭಾಗಗಳ ಸ್ಟಾಕ್‌ನಲ್ಲಿ ಮುಂಚೂಣಿ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಬುಕ್ಕಿಂಗ್ ಮಾಡಿದ ಗ್ರಾಹಕರಿಗೆ ಅತಿ ಕಡಿಮೆ ಅವಧಿಯಲ್ಲಿ ಕಾರುಗಳನ್ನು ವಿತರಣೆ ಮಾಡುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ಭಾರತೀಯ ಆಟೋ ಉದ್ಯಮಕ್ಕೆ ಭಾರೀ ಹೊಡೆತ ನೀಡುತ್ತಿರುವ ಸೆಮಿ ಕಂಡಕ್ಟರ್ ಕೊರತೆಯ ನಡುವೆಯೂ ಟಾಟಾ ಮೋಟಾರ್ಸ್ ಕಂಪನಿಯು ಅಕ್ಟೋಬರ್ ನಿಂದ ಡಿಸೆಂಬರ್ ತನಕ ಒಟ್ಟ 99 ಸಾವಿರ ಕಾರುಗಳನ್ನು ಮಾರಾಟ ಮಾಡಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

2021ರ ಅವಧಿಯಲ್ಲಿ ಒಟ್ಟು 3.31 ಲಕ್ಷ ಕಾರುಗಳನ್ನು ಮಾರಾಟ ಮಾಡಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಪಂಚ್ ಕಾರಿನ ಮೂಲಕ ಮಾರುಕಟ್ಟೆ ಪಾಲು ಹೆಚ್ಚಿಸಿದ್ದು, ಮುಂಬರುವ ದಿನಗಳಲ್ಲಿ ಕಂಪನಿಯು ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ಜೊತೆಗೆ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಪಡೆದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು 2021ರ ಡಿಸೆಂಬರ್ ಅವಧಿಯಲ್ಲಿ ಗರಿಷ್ಠ ಮಟ್ಟದ ಬೇಡಿಕೆ ಪಡೆದುಕೊಂಡಿದ್ದು, ಕಂಪನಿಯು ವಿವಿಧ ಮಾದರಿಯ ಇವಿ ಆವೃತ್ತಿಗಳೊಂದಿಗೆ ಅತ್ಯುತ್ತಮ ಬೇಡಿಕೆ ದಾಖಲಿಸಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ , ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಡಿಸೆಂಬರ್ ಅವಧಿಯಲ್ಲಿ ಕಂಪನಿಯು ಇದುವರೆಗೆ ಇವಿ ಕಾರು ಮಾರಾಟದಲ್ಲಿಯೇ ಹೆಚ್ಚಿನ ಬೇಡಿಕೆ ಪಡೆದುಕೊಂಡಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಕಂಪನಿಯು ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯ ಮುಲಕ ಕ್ಯಾಬ್ ಸೇವಾ ವಿಭಾಗದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ ನಂತರ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಇವಿ ವಾಹನಗಳ ಮೂಲಕ ಉತ್ತಮ ಬೇಡಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗುತ್ತಿದೆ.

ಕಾರು ಮಾರಾಟದಲ್ಲಿ ಹ್ಯುಂಡೈ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಟಾಟಾ ಮೋಟಾರ್ಸ್

2021ರ ಡಿಸೆಂಬರ್ ಅವಧಿಯಲ್ಲಿನ ಒಟ್ಟಾರೆ ಕಾರು ಮಾರಾಟದಲ್ಲಿ ಶೇ. 50ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಇವಿ ಕಾರುಗಳ ಮಾರಾಟದಲ್ಲಿ ಶೇ. 439ರಷ್ಟು ಬೆಳವಣಿಗೆ ಸಾಧಿಸಿದೆ. ಡಿಸೆಂಬರ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಮೊದಲ ಬಾರಿಗೆ 2,255 ಯುನಿಟ್ ಇವಿ ಕಾರುಗಳನ್ನು ಮಾರಾಟ ಮಾಡಿದ್ದು, ಇದು ಟಾಟಾ ಮೋಟಾರ್ಸ್ ಕಂಪನಿಯ ಇದುವರೆಗಿನ ಇವಿ ಕಾರು ಮಾರಾಟದಲ್ಲಿಯೇ ಅತಿದೊಡ್ಡ ಸಂಖ್ಯೆಯಾಗಿದೆ.

Most Read Articles

Kannada
English summary
Tata motors overtakes hyundai in passenger vehicle sales in december 2021
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X