ಇವಿ ಕಾರುಗಳ ಖರೀದಿಗಾಗಿ ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಮುಂಬರುವ ಹಬ್ಬದ ಋತುಗಳಲ್ಲಿ ಹೆಚ್ಚಿನ ಮಟ್ಟದ ಇವಿ ಕಾರು ಮಾರಾಟ ನೀರಿಕ್ಷೆಯಲ್ಲಿದ್ದು, ಹೊಸ ಇವಿ ಕಾರು ಮಾದರಿಗಳ ಖರೀದಿಗಾಗಿ ಸುಲಭ ಹಣಕಾಸು ಸೌಲಭ್ಯಕ್ಕಾಗಿ ಕಂಪನಿಯು ಆಕ್ಸಿಸ್ ಬ್ಯಾಂಕ್ ಜೊತೆಗೂಡಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಹೆಚ್ಚುತ್ತಿರುವ ಇಂಧನ ದರ ಪರಿಣಾಮ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ವಿವಿಧ ಮಾದರಿಗಳೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ಮುಂಚೂಣಿ ಸಾಧಿಸುತ್ತಿದೆ. ಹೀಗಾಗಿ ಕಂರನಿಯು ಎಲೆಕ್ಟ್ರಿಕ್ ಕಾರು ಮಾದರಿಗಳಿಗಾಗಿ ವಿಶೇಷ ಸಾಲಸೌಲಭ್ಯ ಒದಗಿಸುವ ಸಂಬಂಧ ಆಕ್ಸಿಸ್ ಬ್ಯಾಂಕ್ ಜೊತೆಗೂಡಿ ಹೊಸ ಸಾಲಸೌಲಭ್ಯಗಳ ಆಯ್ಕೆ ನೀಡುತ್ತಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಪ್ರಯಾಣಿಕರ ಕಾರು ಮಾದರಿಗಳಿಗಾಗಿ ಟಾಟಾ ಮೋಟಾರ್ಸ್ ಕಂಪನಿಯು ಈಗಾಗಲೇ ಪ್ರಮುಖ ಬ್ಯಾಂಕ್‌ಗಳೊಂದಿಗೆ ಜೊತೆಗೂಡಿ ಸುಲಭ ಹಣಕಾಸು ಸೌಲಭ್ಯಗಳನ್ನು ನೀಡುತ್ತಿದ್ದರೂ ಇದೀಗ ಹೊಸದಾಗಿ ಎಲೆಕ್ಟ್ರಿಕ್ ಕಾರು ಮಾದರಿಗಳಿಗಾಗಿ ಹೊಸ ವಿಧಾನಗಳನ್ನು ಅನುಸರಿಸುವ ಸಾಲಸೌಲಭ್ಯಗಳನ್ನು ಸಿದ್ದಪಡಿಸಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ರೆಪೋ ಲಿಂಕ್ಡ್ ಲೆಂಡಿಂಗ್ ರೇಟ್(RLLR) ಗೆ ಲಿಂಕ್ ಮಾಡಲಾದ ಆಕರ್ಷಕ ಬೆಲೆಯೊಂದಿಗೆ ಹೊಸ ಸಾಲಗಳನ್ನು ಪೂರೈಸಲಿದ್ದು, ಮರುಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡುತ್ತದೆ. ಜೊತೆಗೆ ಎಲ್ಲಾ ಇವಿ ಮಾದರಿಗಳಿಗೂ ಕನಿಷ್ಠ ದಾಖಲೆಗಳೊಂದಿಗೆ ಸಾಲಸೌಲಭ್ಯಗಳನ್ನು ದೃಡಪಡಿಸಲಿದ್ದು, ಹಸಿರು ಚಲನಶೀಲತೆಯ ಗುರಿಯನ್ನು ಸಾಧಿಸಲು ಹೊಸ ಯೋಜನೆಯು ಸಕಾರಾತ್ಮವಾಗಿರಲಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಸದ್ಯ ಇವಿ ಕಾರು ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ, ನೆಕ್ಸಾನ್ ಇವಿ ಮ್ಯಾಕ್ಸ್, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್ಸ್-ಟಿ ಮಾದರಿಗಳೊಂದಿಗೆ ಶೇ. 87 ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್‌ನೊಂದಿಗೆ ಬಜೆಟ್ ಇವಿ ಕಾರುಗಳನ್ನು ಮಾರಾಟ ಮಾಡುತ್ತಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಪ್ರಯಾಣಿಕರ ಕಾರು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಕಂಪನಿಯು ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಹ್ಯುಂಡೈ ಕಂಪನಿಯು ಮುಂದುವರೆದಿದೆ. ತದನಂತರ ಮೂರನೇ ಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಹ್ಯುಂಡೈ ಕಂಪನಿಯ ಕಾರುಗಳ ಮಾರಾಟಕ್ಕೆ ತೀವ್ರ ಪೈಪೋಟಿ ನೀಡುತ್ತಿದ್ದು, ಇವಿ ಕಾರುಗಳ ಮಾರಾಟದಲ್ಲಿ ಇತರೆ ಕಂಪನಿಗಳನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಟಾಟಾ ಕಂಪನಿಯು ನೆಕ್ಸಾನ್ ಇವಿ, ನೆಕ್ಸಾನ್ ಇವಿ ಮ್ಯಾಕ್ಸ್ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕರ ಬಳಕೆಯ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯು ಕೂಡಾ ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಜೂನ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 45,197 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 3,507 ಯುನಿಟ್ ಎಲೆಕ್ಟ್ರಿಕ್ ಕಾರು ಮಾದರಿಗಳಾಗಿವೆ. ಜೂನ್ ಅವಧಿಯಲ್ಲಿನ ಇವಿ ಕಾರು ಮಾರಾಟವು ಕಳೆದ ವರ್ಷದ ಜೂನ್ ಅವಧಿಯಲ್ಲಿನ 658 ಯುನಿಟ್ ಮಾರಾಟಕ್ಕೆ ಹೋಲಿಕೆ ಮಾಡಿದರೆ ಕಳೆದ ತಿಂಗಳು ಶೇ.433 ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಜೂನ್ ಅವಧಿಯಲ್ಲಿನ ಇವಿ ಕಾರು ಮಾರಾಟದಲ್ಲಿ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳೇ 3 ಸಾವಿರಕ್ಕಿಂತಲೂ ಹೆಚ್ಚು ಯುನಿಟ್ ಮಾರಾಟಗೊಂಡಿದ್ದು, ತದನಂತರ ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಎರಡನೇ ಮತ್ತು ಮೂರು ಮತ್ತು ನಾಲ್ಕು ಸ್ಥಾನ ಪಡೆದುಕೊಂಡಿವೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಈ ಮೂಲಕ ಕಂಪನಿಯು 2022-23ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಒಟ್ಟು 9,283 ಯುನಿಟ್ ಇವಿ ಕಾರು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಇದೇ ಅವಧಿಯಲ್ಲಿನ ಇವಿ ಕಾರು ಮಾರಾಟಕ್ಕಿಂತ ಶೇ.441 ರಷ್ಟು ಬೆಳವಣಿಗೆ ಸಾಧಿಸಿದಂತಾಗಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಇನ್ನು ನೆಕ್ಸಾನ್ ಇವಿ ಮಾದರಿಯು 2019ರಲ್ಲಿ ಮೊದಲ ಬಿಡುಗಡೆಯಾದ ನಂತರ ಹಲವಾರು ಹೊಸ ಬದಲಾವರಣೆಗಳೊಂದಿಗೆ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದಕೊಂಡಿದ್ದು, ಬಿಡುಗಡೆಯ ನಂತರ ನೆಕ್ಸಾನ್ ಇವಿ ಇದುವರೆಗೆ ಸುಮಾರು 30 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಇದೀಗ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮಾದರಿಯನ್ನು ಹೆಚ್ಚುವರಿ ಮೈಲೇಜ್ ಪ್ರೇರಿತ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ ಮಾಡಿದ್ದು, ಗ್ರಾಹಕರು ಇದೀಗ ತಮ್ಮ ಬೇಡಿಕೆಗೆ ಅನುಗುಣವಾಗಿ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸಾಮಾನ್ಯ ನೆಕ್ಸಾನ್ ಇವಿ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಂಡಿದ್ದು, ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ಕಾರಿಗಾಗಿ ಮ್ಯಾಕ್ಸ್ ನೇಮ್‌ಪ್ಲೆಮ್ ಬಳಕೆ ಮಾಡಲಾಗಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ಎನ್ನುವ ವೆರಿಯೆಂಟ್‌ಗಳನ್ನು ಹೊಂದಿದ್ದು, ಆರಂಭಿಕವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 17.74 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.19.24 ಲಕ್ಷ ಬೆಲೆ ಹೊಂದಿದೆ.

ಆಕ್ಸಿಸ್ ಬ್ಯಾಂಕ್ ಜೊತಗೂಡಿ ವಿಶೇಷ ಸಾಲಸೌಲಭ್ಯ ಪರಿಚಯಿಸಿದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ ಕಂಪನಿಯು ಎರಡು ಮಾದರಿಯ ಚಾರ್ಜಿಂಗ್ ಆಯ್ಕೆಗಳನ್ನು ನೀಡಿದ್ದು, 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಿದೆ. ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

Most Read Articles

Kannada
English summary
Tata motors partnership with axis bank for exclusive electric vehicles finance
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X