ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರಿಗೆ ವಿಶೇಷ ಸಾಲ ಸೌಲಭ್ಯಗಳನ್ನು ಘೋಷಣೆ ಮಾಡುತ್ತಿದ್ದು, ಕಂಪನಿಯು ಹೊಸ ಸಾಲ ಸೌಲಭ್ಯಕ್ಕಾಗಿ ಸ್ಟೇಟ್ ಬ್ಯಾಂಕ್ ಇಂಡಿಯಾ ಜೊತೆಗೆ ಪಾಲುದಾರಿಕೆ ಪ್ರಕಟಿಸಿದೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಭಾರತದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ಸ್ಟೇಟ್ ಬ್ಯಾಂಕ್ ಇಂಡಿಯಾ ಜೊತೆಗೂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಸಾಲ ಸೌಲಭ್ಯಗಳನ್ನು ಘೋಷಣೆ ಮಾಡಿದ್ದು, ಡೀಲರ್ ಫೈನಾನ್ಸ್ ಸೊಲ್ಯೂಷನ್ (e-DFS) ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ತನ್ನ ಉತ್ಪನ್ನಗಳಾದ ನೆಕ್ಸಾನ್ ಇವಿ, ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್‌ನೊಂದಿಗೆ ಪ್ಯಾಸೆಂಜರ್ ವೆಹಿಕಲ್‌ಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ತ್ವರಿತಗತಿಯಲ್ಲಿ ಇವಿ ಅಳವಡಿಕೆಗಾಗಿ ಕಂಪನಿಯು ಕಡಿಮೆ ಬಡ್ಡಿದರದೊಂದಿಗೆ ಗರಿಷ್ಠ ಅವಧಿಗಾಗಿ ಸಾಲಗಳನ್ನು ನೀಡುತ್ತಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಮುಂಬರುವ ಹಬ್ಬದ ಋತುಗಳಲ್ಲಿ ಹೆಚ್ಚಿನ ಮಟ್ಟದ ಇವಿ ಕಾರು ಮಾರಾಟ ನೀರಿಕ್ಷೆಯಲ್ಲಿದ್ದು, ಹೊಸ ಇವಿ ಕಾರು ಮಾದರಿಗಳ ಖರೀದಿಗಾಗಿ ಸುಲಭ ಹಣಕಾಸು ಸೌಲಭ್ಯಕ್ಕಾಗಿ ಕಂಪನಿಯು ಆಕ್ಸಿಸ್ ಬ್ಯಾಂಕ್ ಜೊತೆಗೂ ಸಹ ಪಾಲದಾರಿಕೆ ಘೋಷಣೆ ಮಾಡಿದೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಹೆಚ್ಚುತ್ತಿರುವ ಇಂಧನ ದರ ಪರಿಣಾಮ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ವಿವಿಧ ಮಾದರಿಗಳೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ಮುಂಚೂಣಿ ಸಾಧಿಸುತ್ತಿದೆ. ಹೀಗಾಗಿ ಕಂರನಿಯು ಎಲೆಕ್ಟ್ರಿಕ್ ಕಾರು ಮಾದರಿಗಳಿಗಾಗಿ ವಿಶೇಷ ಸಾಲಸೌಲಭ್ಯ ಒದಗಿಸುವ ಸಂಬಂಧ ಆಕ್ಸಿಸ್ ಬ್ಯಾಂಕ್ ಜೊತೆಗೂಡಿ ಹೊಸ ಸಾಲಸೌಲಭ್ಯಗಳ ಆಯ್ಕೆ ನೀಡುತ್ತಿದೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಪ್ರಯಾಣಿಕರ ಕಾರು ಮಾದರಿಗಳಿಗಾಗಿ ಟಾಟಾ ಮೋಟಾರ್ಸ್ ಕಂಪನಿಯು ಈಗಾಗಲೇ ಪ್ರಮುಖ ಬ್ಯಾಂಕ್‌ಗಳೊಂದಿಗೆ ಜೊತೆಗೂಡಿ ಸುಲಭ ಹಣಕಾಸು ಸೌಲಭ್ಯಗಳನ್ನು ನೀಡುತ್ತಿದ್ದರೂ ಇದೀಗ ಹೊಸದಾಗಿ ಎಲೆಕ್ಟ್ರಿಕ್ ಕಾರು ಮಾದರಿಗಳಿಗಾಗಿ ಹೊಸ ವಿಧಾನಗಳನ್ನು ಅನುಸರಿಸುವ ಸಾಲಸೌಲಭ್ಯಗಳನ್ನು ಸಿದ್ದಪಡಿಸಿದೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ರೆಪೋ ಲಿಂಕ್ಡ್ ಲೆಂಡಿಂಗ್ ರೇಟ್‌ಗೆ ಲಿಂಕ್ ಮಾಡಲಾದ ಆಕರ್ಷಕ ಬೆಲೆಯೊಂದಿಗೆ ಹೊಸ ಸಾಲಗಳನ್ನು ಪೂರೈಸಲಿದ್ದು, ಮರುಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡುತ್ತದೆ. ಜೊತೆಗೆ ಎಲ್ಲಾ ಇವಿ ಮಾದರಿಗಳಿಗೂ ಕನಿಷ್ಠ ದಾಖಲೆಗಳೊಂದಿಗೆ ಸಾಲಸೌಲಭ್ಯಗಳನ್ನು ದೃಡಪಡಿಸಲಿದ್ದು, ಹಸಿರು ಚಲನಶೀಲತೆಯ ಗುರಿಯನ್ನು ಸಾಧಿಸಲು ಹೊಸ ಯೋಜನೆಯು ಸಕಾರಾತ್ಮವಾಗಿರಲಿದೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಸದ್ಯ ಇವಿ ಕಾರು ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ, ನೆಕ್ಸಾನ್ ಇವಿ ಮ್ಯಾಕ್ಸ್, ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್ಸ್-ಟಿ ಮಾದರಿಗಳೊಂದಿಗೆ ಶೇ. 87 ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತ್ಯುತ್ತಮ ಫೀಚರ್ಸ್‌ನೊಂದಿಗೆ ಬಜೆಟ್ ಇವಿ ಕಾರುಗಳನ್ನು ಮಾರಾಟ ಮಾಡುತ್ತಿದೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಪ್ರಯಾಣಿಕರ ಕಾರು ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಕಂಪನಿಯು ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಹ್ಯುಂಡೈ ಕಂಪನಿಯು ಮುಂದುವರೆದಿದೆ. ತದನಂತರ ಮೂರನೇ ಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಹ್ಯುಂಡೈ ಕಂಪನಿಯ ಕಾರುಗಳ ಮಾರಾಟಕ್ಕೆ ತೀವ್ರ ಪೈಪೋಟಿ ನೀಡುತ್ತಿದ್ದು, ಇವಿ ಕಾರುಗಳ ಮಾರಾಟದಲ್ಲಿ ಇತರೆ ಕಂಪನಿಗಳನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಕಂಪನಿಯು ನೆಕ್ಸಾನ್ ಇವಿ, ನೆಕ್ಸಾನ್ ಇವಿ ಮ್ಯಾಕ್ಸ್ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕರ ಬಳಕೆಯ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯು ಕೂಡಾ ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಇವಿ ಕಾರು ಮಾರಾಟದಲ್ಲಿ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳೇ 3 ಸಾವಿರಕ್ಕಿಂತಲೂ ಹೆಚ್ಚು ಯುನಿಟ್ ಮಾರಾಟಗೊಂಡಿದ್ದು, ತದನಂತರ ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಎರಡನೇ ಮತ್ತು ಮೂರು ಮತ್ತು ನಾಲ್ಕು ಸ್ಥಾನ ಪಡೆದುಕೊಂಡಿವೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಜುಲೈನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 47,505 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 4,022 ಯುನಿಟ್ ಎಲೆಕ್ಟ್ರಿಕ್ ಕಾರು ಮಾದರಿಗಳಾಗಿವೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ತಿಂಗಳ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಇದೇ ಮೊದಲ ಬಾರಿಗೆ 4 ಸಾವಿರ ಯುನಿಟ್ ದಾಟಿದ್ದು,ಕಳೆದ ವರ್ಷದ ಜುಲೈ ಅವಧಿಯಲ್ಲಿನ 604 ಯುನಿಟ್ ಮಾರಾಟಕ್ಕೆ ಹೋಲಿಕೆ ಮಾಡಿದರೆ ಕಳೆದ ತಿಂಗಳು ಟಾಟಾ ಕಂಪನಿಯು ಇವಿ ಮಾರಾಟದಲ್ಲಿ ಶೇ.566 ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ಎಸ್‌ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ಎನ್ನುವ ವೆರಿಯೆಂಟ್‌ಗಳನ್ನು ಹೊಂದಿದ್ದು, ಆರಂಭಿಕವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 17.74 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 19.24 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Tata motors partnership with state bank of india for ev car loans
Story first published: Friday, August 12, 2022, 18:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X