ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ದುಬಾರಿ ಇಂಧನಗಳ ಪರಿಣಾಮ ಇವಿ ವಾಹನಗಳು ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಸದ್ಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆ ಪೂರೈಕೆಗಾಗಿ ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸಲು ಸಿದ್ದವಾಗಿದೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ(Nexon EV), ಟಿಗೋರ್ ಇವಿ(Tigor EV) ಮತ್ತು ಎಕ್ಸ್‌ಪ್ರೆಸ್-ಟಿ ಇವಿ(XPres-T EV) ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಹೊಸ ಕಾರುಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿರುವುದರಿಂದ ಕಾಯುವಿಕೆ ಅವಧಿಯನ್ನು ತಗ್ಗಿಸಲು ಕಂಪನಿಯು ಉತ್ಪಾದನಾ ಪ್ರಮಾಣ ಹೆಚ್ಚಳಕ್ಕೆ ಯೋಜನೆ ರೂಪಿಸಿದೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಕಾರು ಮಾದರಿಗಳ ಮೂಲಕ ಪ್ರಯಾಣಿಕರ ಬಳಕೆಯ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯು ಕೂಡಾ ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಪ್ರಸ್ತುತ ಪ್ರತಿ ತಿಂಗಳು 5,500 ರಿಂದ 6,000 ಯುನಿಟ್ ಎಲೆಕ್ಟ್ರಿಕ್ ಕಾರುಗಳಿಗೆ ಬುಕಿಂಗ್ ತೆಗೆದುಕೊಳ್ಳುತ್ತಿದ್ದು, ಉತ್ಪಾದನಾ ಪ್ರಮಾಣ ಕಡಿಮೆ ಹಿನ್ನಲೆಯಲ್ಲಿ ಕಾಯುವಿಕೆ ಅವಧಿಯ ಸಾಕಷ್ಟು ಹೆಚ್ಚಳವಾಗುತ್ತಿದೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಸದ್ಯ ಪ್ರತಿ ತಿಂಗಳು ಮೂರು ಸಾವಿರದಿಂದ ಮೂರುವರೆ ಸಾವಿರ ಯುನಿಟ್ ಮಾತ್ರ ಉತ್ಪಾದನೆ ಮಾಡಿ ವಿತರಣೆಗೊಳಿಸುತ್ತಿರುವ ಟಾಟಾ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಉತ್ಪಾದನಾ ಪ್ರಮಾಣವನ್ನು ಪ್ರತಿ ತಿಂಗಳು ಆರರಿಂದ ಏಳು ಸಾವಿರ ಯುನಿಟ್ ಮೂಲಕ 80 ಸಾವಿರ ಯುನಿಟ್ ಉತ್ಪಾದನಾ ಗುರಿತಲುಪುದಾಗಿ ಭರವಸೆ ನೀಡಿದೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಹೊಸ ಇವಿ ಕಾರುಗಳ ಉತ್ಪಾದನೆ ಹೆಚ್ಚಳ ಕುರಿತಂತೆ ರಾಯಿಟರ್ಸ್ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಟಾಟಾ ಮೋಟಾರ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಅವರು ವಾರ್ಷಿಕ ಉತ್ಪಾದನೆಯನ್ನು 80 ಸಾವಿರ ಯುನಿಟ್‌ಗಳಿಗೆ ಹೆಚ್ಚಿಸುವ ಸಿದ್ದತೆ ನಡೆದಿದ್ದು, ಹೊಸ ಯೋಜನೆಯ ಮೂಲಕ ಗ್ರಾಹಕರ ಕಾಯುವಿಕೆ ಅವಧಿಯನ್ನು ತಗ್ಗಿಸುವುದಾಗಿ ಭರವಸೆ ನೀಡಿದ್ದಾರೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಟಾಟಾ ಇವಿ ಕಾರುಗಳಲ್ಲಿ ಸದ್ಯ 2019ರಲ್ಲಿ ಮೊದಲ ಬಿಡುಗಡೆಯಾದ ನೆಕ್ಸಾನ್ ಇವಿ ಮಾದರಿಯು ಹಲವಾರು ಹೊಸ ಬದಲಾವರಣೆಗಳೊಂದಿಗೆ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದಕೊಂಡಿದ್ದು, ಬಿಡುಗಡೆಯ ನಂತರ ನೆಕ್ಸಾನ್ ಇವಿ ಇದುವರೆಗೆ ಸುಮಾರು 20 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಂತಾಗಿದೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ದಿನೇ ದಿನೇ ದುಬಾರಿಯಾಗುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿ ಯೋಜನೆಯಲ್ಲಿರುವ ಗ್ರಾಹಕರು ಇವಿ ವಾಹನ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮೂಲಕ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ 2022ರ ನೆಕ್ಸಾನ್ ಇವಿ ಆವೃತ್ತಿಯನ್ನು ಹಲವು ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಲು ಸಿದ್ದಗೊಳ್ಳುತ್ತಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಳ್ಳಲಿದೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಸದ್ಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ. ನೆಕ್ಸಾನ್ ಇವಿ ಕಾರಿನಲ್ಲಿ 95kW ಎಲೆಕ್ಟ್ರಿಕ್ ಮೋಟಾರ್ ಮತ್ತು 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಅಳವಡಿಸಲಾಗಿದ್ದು, 2020ರ ಆವೃತ್ತಿಯು 40kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಬಹುದಾಗಿದೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಎಆರ್‌ಎಐ ಸಂಸ್ಥೆಯು ಪ್ರಮಾಣಿಕರಿಸದಂತೆ 30kWh ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರುವ ನೆಕ್ಸಾನ್ ಇವಿ ಕಾರು ಇಕೋ ಡ್ರೈವ್ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, 2022ರ ಆವೃತ್ತಿಯಲ್ಲಿ ಮೈಲೇಜ್ ರೇಂಜ್ ಪ್ರಮಾಣವು ಪ್ರತಿ ಚಾರ್ಜ್ 400 ಕಿ.ಮೀ ಗೆ ಹೆಚ್ಚಳವಾಗುವ ಸಾಧ್ಯತೆಗಳಿವೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಹೊಸ ನೆಕ್ಸಾನ್ ಇವಿ ಮಾದರಿಯಲ್ಲಿ ಹೆಚ್ಚಿನ ಮೈಲೇಜ್ ರೇಂಜ್ ಹೊಂದಿರುವ ಮಾದರಿಗಾಗಿ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಕಂಪನಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಸಿದ್ದಪಡಿಸಿದೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಜೊತೆಗೆ ನೆಕ್ಸಾನ್ ಇವಿ ಕಾರಿನ ಎಲೆಕ್ಟ್ರಿಕ್ ಮೋಟಾರ್ ಉನ್ನತೀಕರಿಸುವ ಮೂಲಕ ಕಾರಿನ ಪರ್ಫಾಮೆನ್ಸ್ ಹೆಚ್ಚಿಸಲಾಗುತ್ತಿದ್ದು, ಉನ್ನತೀಕರಿಸಿದ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ 7 ಬಿಎಚ್‌ಪಿ ಹೆಚ್ಚುವರಿ ಶಕ್ತಿ ಪೂರೈಕೆಯೊಂದಿಗೆ ಕಾರಿನ ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಕಾರಿಯಾಗಲಿದೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ನೆಕ್ಸಾನ್ ಇವಿ ಮಾದರಿಯು 127 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಸುಧಾರಿತ ತಂತ್ರಜ್ಞಾನದೊಂದಿಗೆ ಉನ್ನತೀಕರಿಸಲಾಗುತ್ತಿರುವ ಹೊಸ ಮಾದರಿಯು ಪ್ರಸ್ತುತ ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ 95kW ಎಲೆಕ್ಟ್ರಿಕ್ ಮೋಟಾರ್ ಮೂಲಕವೇ 134 ಬಿಎಚ್‌ಪಿ ಉತ್ಪಾದನಾ ವೈಶಿಷ್ಟ್ಯತೆ ಹೊಂದಿರಲಿದೆ.

ಮುಂದಿನ ಒಂದು ವರ್ಷದೊಳಗೆ 80 ಸಾವಿರ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಇದರೊಂದಿಗೆ ಹೊಸ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಪ್ರಮುಖ ಸೇಫ್ಟಿ ಫೀಚರ್ಸ್‌ಗಳನ್ನು ಉನ್ನತೀಕರಿಸುತ್ತಿದ್ದು, ಹೊಸ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಆಗಿ ಆಲ್ ವ್ಹೀಲ್ ಡಿಸ್ಕ್ ಸೇರಿದಂತೆ ಕೆಲವು ಹೊಸ ತಾಂತ್ರಿಕ ಅಂಶಗಳನ್ನು ಸೇರ್ಪಡೆಗೊಳಿಸಿದೆ.

Article Published On: Friday, April 29, 2022, 15:48 [IST]
English summary
Tata motors plans to 80000 electric vehicles production in next one year
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+