ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ಪ್ರಯಾಣಿಕರ ಕಾರು ಮಾರಾಟದಲ್ಲಿ ಮಹತ್ವದ ಬೆಳವಣಿಗೆ ಸಾಧಿಸುತ್ತಿರುವ ಟಾಟಾ ಮೋಟಾರ್ಸ್(Tata Motors) ಕಂಪನಿಯು ಸಾಮಾನ್ಯ ಕಾರುಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಸಹ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ಜುಲೈ ಅವಧಿಯಲ್ಲಿ ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಮಾರುತಿ ಸುಜುಕಿ ಮತ್ತು ಹ್ಯುಂಡೈ ನಂತರ ಪ್ರಯಾಣಿಕರ ಕಾರು ಮಾರಾಟದಲ್ಲಿ ಸದ್ಯ ಮೂರನೇ ಸ್ಥಾನ ಕಾಯ್ದುಕೊಂಡಿದ್ದು, ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮಾತ್ರ ಇತರೆ ಕಂಪನಿಗಳನ್ನು ಹಿಂದಿಕ್ಕಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ಜುಲೈನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 47,505 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 4,022 ಯುನಿಟ್ ಎಲೆಕ್ಟ್ರಿಕ್ ಕಾರು ಮಾದರಿಗಳಾಗಿವೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ತಿಂಗಳ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಇದೇ ಮೊದಲ ಬಾರಿಗೆ 4 ಸಾವಿರ ಯುನಿಟ್ ದಾಟಿದ್ದು,ಕಳೆದ ವರ್ಷದ ಜುಲೈ ಅವಧಿಯಲ್ಲಿನ 604 ಯುನಿಟ್ ಮಾರಾಟಕ್ಕೆ ಹೋಲಿಕೆ ಮಾಡಿದರೆ ಕಳೆದ ತಿಂಗಳು ಟಾಟಾ ಕಂಪನಿಯು ಇವಿ ಮಾರಾಟದಲ್ಲಿ ಶೇ.566 ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ಜುಲೈ ಅವಧಿಯ ಇವಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳಿಂದಲೇ ಸುಮಾರು 3 ಸಾವಿರಕ್ಕಿಂತಲೂ ಹೆಚ್ಚು ಯುನಿಟ್ ಬೇಡಿಕೆ ಪಡೆದುಕೊಂಡಿದ್ದು, ತದನಂತರ ಟಿಗೋರ್ ಇವಿ ಮತ್ತು ಎಕ್ಸ್‌ಪ್ರೆಸ್-ಟಿ ಇವಿ ಎರಡನೇ ಮತ್ತು ಮೂರು ಮತ್ತು ನಾಲ್ಕನೇ ಸ್ಥಾನ ಪಡೆದುಕೊಂಡಿವೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ, ನೆಕ್ಸಾನ್ ಇವಿ ಮ್ಯಾಕ್ಸ್ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಟಾಟಾ ಕಂಪನಿಯು ಪ್ರಯಾಣಿಕರ ಬಳಕೆಯ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯು ಕೂಡಾ ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ಇನ್ನು ನೆಕ್ಸಾನ್ ಇವಿ ಮಾದರಿಯು 2019ರಲ್ಲಿ ಮೊದಲ ಬಿಡುಗಡೆಯಾದ ನಂತರ ಹಲವಾರು ಹೊಸ ಬದಲಾವರಣೆಗಳೊಂದಿಗೆ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದಕೊಂಡಿದ್ದು, ಬಿಡುಗಡೆಯ ನಂತರ ನೆಕ್ಸಾನ್ ಇವಿ ಇದುವರೆಗೆ ಸುಮಾರು 35 ಸಾವಿರಕ್ಕೂ ಹೆಚ್ಚು ಯುನಿಟ್ ಮಾರಾಟಗೊಂಡಿದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ಇದೀಗ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮಾದರಿಯಲ್ಲಿ ಹೆಚ್ಚುವರಿ ಮೈಲೇಜ್ ಪ್ರೇರಿತ ನೆಕ್ಸಾನ್ ಇವಿ ಮ್ಯಾಕ್ಸ್ ವರ್ಷನ್ ಬಿಡುಗಡೆ ಮಾಡಿದ್ದು, ಗ್ರಾಹಕರು ಇದೀಗ ತಮ್ಮ ಬೇಡಿಕೆಗೆ ಅನುಗುಣವಾಗಿ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸಾಮಾನ್ಯ ನೆಕ್ಸಾನ್ ಇವಿ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಂಡಿದ್ದು, ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ಕಾರಿಗಾಗಿ ಮ್ಯಾಕ್ಸ್ ನೇಮ್‌ಪ್ಲೆಮ್ ಬಳಕೆ ಮಾಡಲಾಗಿದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ಎನ್ನುವ ವೆರಿಯೆಂಟ್‌ಗಳನ್ನು ಹೊಂದಿದ್ದು, ಆರಂಭಿಕವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 17.74 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 19.24 ಲಕ್ಷ ಬೆಲೆ ಹೊಂದಿದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ ಕಂಪನಿಯು ಎರಡು ಮಾದರಿಯ ಚಾರ್ಜಿಂಗ್ ಆಯ್ಕೆಗಳನ್ನು ನೀಡಿದ್ದು, 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಿದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳು ಸಾಮಾನ್ಯ ಮಾದರಿಗಿಂತಲೂ ತುಸು ಹೆಚ್ಚುವರಿ ಬೆಲೆ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾಗಿದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

3.3 kW ಚಾರ್ಜಿಂಗ್ ಆಯ್ಕೆ ಹೊಂದಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸೊನ್ನೆಯಿಂದ ಶೇ.100 ರಷ್ಟು ಚಾರ್ಜ್ ಮಾಡಲು ಕನಿಷ್ಠ 14 ರಿಂದ 15 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆಗಲು ಕನಿಷ್ಠ 5 ರಿಂದ 6 ಗಂಟೆಗಳ ಕಾಲ ಸಮಯಾವಕಾಶ ತೆಗದುಕೊಳ್ಳುತ್ತದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಇವಿ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಇಕೋ ಮೋಡ್‌ನಲ್ಲಿ 437 ಕಿ.ಮೀ ಮೈಲೇಜ್ ಹೊಂದಿದ್ದರೂ ಅದು ವಿವಿಧ ಡ್ರೈವಿಂಗ್ ಮೋಡ್ ಮತ್ತು ರಸ್ತೆ ಸೌಲಭ್ಯಕ್ಕೆ ಅನುಗುಣವಾಗಿ ರಿಯಲ್ ವರ್ಲ್ಡ್ ಮೈಲೇಜ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಲಿದ್ದು, ಇದು ವಿವಿಧ ಡ್ರೈವ್ ಮೋಡ್ ಮತ್ತು ರಸ್ತೆ ಸೌಲಭ್ಯಗಳಿಗೆ ಅನುಗುಣವಾಗಿ ಕನಿಷ್ಠ 300ರಿಂದ 320 ಕಿ.ಮೀ ಮೈಲೇಜ್ ಅನ್ನು ಅರಾಮವಾಗಿ ಪಡೆದುಕೊಳ್ಳಬಹುದಾಗಿದೆ.

Most Read Articles

Kannada
English summary
Tata motors records highest ever monthly ev car sales in july details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X