ಫೆಬ್ರವರಿ ತಿಂಗಳ ಕಾರು ಮಾರಾಟದಲ್ಲಿ ಶೇ.39 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್(Tata Motors) ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ತಿಂಗಳಿನಿಂದ ತಿಂಗಳಿಗೆ ಹೆಚ್ಚಿನ ಬೆಳವಣಿಗೆ ಸಾಧಿಸುತ್ತಿದ್ದು, 2022ರ ಫೆಬ್ರವರಿ ಅವಧಿಯಲ್ಲಿನ ಪ್ರಯಾಣಿಕರ ಕಾರು ಮಾರಾಟದಲ್ಲಿ ಶೇ.47 ರಷ್ಟು ಬೆಳವಣಿಯೊಂದಿಗೆ ಸುಮಾರು 40 ಸಾವಿರ ಕಾರುಗಳನ್ನು ಮಾರಾಟ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ಸೆಮಿಕಂಡಕ್ಟರ್ ಕೊರತೆ ಮತ್ತು ಕೋವಿಡ್‌ನಿಂದ ಉಂಟಾಗುತ್ತಿರುವ ಆರ್ಥಿಕ ಏರಿಳಿತದ ನಡುವೆಯೂ ಕಳೆದ ಕೆಲ ತಿಂಗಳಿನಿಂದ ಹೊಸ ಕಾರುಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಫೆಬ್ರವರಿ ಅವಧಿಯ ಕಾರು ಮಾರಾಟದಲ್ಲಿ ಶೇ.47 ರಷ್ಟು ಬೆಳವಣಿಯೊಂದಿಗೆ ಪ್ರಮುಖ ಕಾರು ಕಂಪನಿಗಳಿಗೆ ಭರ್ಜರಿ ಪೈಪೋಟಿ ನೀಡಿದೆ.

ಫೆಬ್ರವರಿ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 39,981 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಫೆಬ್ರವರಿ ಅವಧಿಯಲ್ಲಿ ಮಾರಾಟಗೊಂಡಿದ್ದ 27,225 ಯುನಿಟ್‌ಗಿಂತಲೂ ಶೇ.47 ರಷ್ಟು ಹೆಚ್ಚಳವಾಗಿದೆ.

2022ರ ಫೆಬ್ರವರಿ ಅವಧಿಯಲ್ಲಿನ ಒಟ್ಟು ವಾಹನ ಮಾರಾಟದಲ್ಲಿ ಶೇ. 27 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು 73,875 ವಾಹನಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಫೆಬ್ರವರಿ ಅವಧಿಯಲ್ಲಿ ಮಾರಾಟ ಮಾಡಿದ್ದ 58,366 ಯನಿಟ್ ವಾಹನಗಳಿಂತಲೂ ಶೇ.27 ರಷ್ಟು ಹೆಚ್ಚಳವಾಗಿದೆ.

ಕಳೆದ ಕೆಲ ತಿಂಗಳಿನಿಂದ ಸ್ವದೇಶಿ ಕಾರುಗಳಿಗೆ ಹೆಚ್ಚಿನ ಬೇಡಿಕೆ ದಾಖಲಾಗುತ್ತಿರುವುದೇ ಟಾಟಾ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಪ್ರಯಾಣಿಕ ಕಾರು ಮಾರಾಟದಲ್ಲಿ ಮಾತ್ರವಲ್ಲದೆ ಟಾಟಾ ಕಂಪನಿಯು ಈ ಬಾರಿ ವಾಣಿಜ್ಯ ವಾಹನ ಮಾರಾಟದಲ್ಲೂ ಶೇ.11 ರಷ್ಟು ಮುನ್ನಡೆ ಸಾಧಿಸಿದೆ.

ಫೆಬ್ರವರಿ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 37,552 ಯುನಿಟ್ ವಾಣಿಜ್ಯ ವಾಹನಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 3,658 ವಾಣಿಜ್ಯ ವಾಹನಗಳನ್ನು ವಿದೇಶಿ ಮಾರುಕಟ್ಟೆಗೆ ರಫ್ತುಗೊಳಿಸಿದೆ.

ಕೋವಿಡ್ ಪರಿಣಾಮ ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಏರಿಳಿತ ಕಂಡುಬಂದರೂ ಆಟೋ ಉತ್ಪಾದನಾ ಕ್ಷೇತ್ರ ಮಾತ್ರ ಗರಿಷ್ಠ ಮಟ್ಟದ ಬೆಳವಣಿಗೆ ಸಾಧಿಸುತ್ತಿದ್ದು, ಕಳೆದ ಕೆಲ ತಿಂಗಳಿನಿಂದ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿವೆ.

ಟಾಟಾ ಮೋಟಾರ್ಸ್ ಕಂಪನಿಯು ಸಹ ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಎರಡು ವರ್ಷದಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದೀಗ ವರ್ಷದ ಆರಂಭದಲ್ಲಿಯೇ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಬದಲಾವಣೆ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಪ್ರಯಾಣಿಕರ ಕಾರು ಮಾರಾಟ ವಿಭಾಗದಲ್ಲಿ ತನ್ನ ಪ್ರತಿಸ್ಪರ್ಧಿ ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಕಂಪನಿಯು 2021ರ ಅವಧಿಯಲ್ಲಿ ಒಟ್ಟು 3.31 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ.

ಭಾರತದಲ್ಲಿ ಕಾರು ಉತ್ಪಾದನೆಯನ್ನು ಆರಂಭಿಸಿದ 31 ವರ್ಷಗಳ ನಂತರ ಟಾಟಾ ಮೋಟಾರ್ಸ್ ಕಂಪನಿಯು ವಾರ್ಷಿಕವಾಗಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, 2021ರಲ್ಲಿ ಕಂಪನಿಯು 2020ರ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಶೇ. 94.6 ರಷ್ಟು ಬೆಳವಣಿಗೆ ಸಾಧಿಸಿದೆ.

2020ರಲ್ಲಿ 1,61,031 ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು 2021ರಲ್ಲಿ 3,31,182 ಕಾರುಗಳನ್ನು ಮಾರಾಟ ಮಾಡಿದೆ. ಟಾಟಾ ಕಾರುಗಳ ಮಾರಾಟದಲ್ಲಿ ಸದ್ಯ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಅಗ್ರಸ್ಥಾನದಲ್ಲಿದೆ.

2021ರಲ್ಲಿ ಟಾಟಾ ಕಂಪನಿಯು ಮಾರಾಟ ಮಾಡಿರುವ 3.31 ಲಕ್ಷ ಕಾರುಗಳಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದೆ 1,08,577 ಯುನಿಟ್ ಒಳಗೊಂಡಿದ್ದು, ತದನಂತರದಲ್ಲಿ ಆಲ್‌ಟ್ರೊಜ್, ಟಿಯಾಗೋ, ಟಿಗೋರ್, ಪಂಚ್, ಹ್ಯಾರಿಯರ್ ಮತ್ತು ಸಫಾರಿ ಕಾರು ಮಾದರಿಗಳು ಸಹ ಉತ್ತಮ ಬೇಡಿಕೆ ಪಡೆದುಕೊಂಡಿವೆ.

2015ರ ನಂತರ ಮಾರುಕಟ್ಟೆಗೆ ಪ್ರವೇಶಿಸಿದ ಟಿಯಾಗೋ, ಟಿಗೋರ್ ತದನಂತರ 2017ರಲ್ಲಿ ಬಿಡುಗಡೆಯಾದ ನೆಕ್ಸಾನ್, 2019ರಲ್ಲಿ ಬಿಡುಗಡೆಯಾದ ಹ್ಯಾರಿಯರ್, 2020ರಲ್ಲಿ ಬಿಡುಗಡೆಯಾದ ಆಲ್‌ಟ್ರೊಜ್, ನೆಕ್ಸಾನ್ ಫೇಸ್‌ಲಿಫ್ಟ್, ನೆಕ್ಸಾನ್ ಇವಿ, 2021ರಲ್ಲಿ ಬಿಡುಗಡೆಯಾದ ನ್ಯೂ ಜನರೇಷನ್ ಸಫಾರಿ, ಪಂಚ್, ಟಿಗೋರ್ ಇವಿ ಕಾರು ಮಾದರಿಗಳು ಟಾಟಾ ಮೋಟಾರ್ಸ್ ಕಂಪನಿಯ ಕಾರು ಮಾರಾಟವನ್ನು ದುಪ್ಪಟ್ಟುಗೊಳಿಸಿವೆ.

ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಟಿಯಾಗೋ, ಟಿಗೋರ್, ಪಂಚ್, ನೆಕ್ಸಾನ್, ಹ್ಯಾರಿಯರ್, ಸಫಾರಿ, ಟಿಗೋರ್ ಇವಿ, ನೆಕ್ಸಾನ್ ಇವಿ, ಟಿಯಾಗೋ ಸಿಎನ್‌ಜಿ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, ನಿಕಟ ಪ್ರತಿಸ್ಪರ್ಧಿಯಾಗಿರುವ ಹ್ಯುಂಡೈ ಕಂಪನಿಗೆ ಉತ್ತಮ ಪೈಪೋಟಿ ನೀಡುತ್ತಿದೆ.


Click it and Unblock the Notifications