India
YouTube

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್(Tata Motors) ಕಂಪನಿಯು ಪ್ರಯಾಣಿಕರ ಕಾರು ಮಾರಾಟದಲ್ಲಿ ತಿಂಗಳಿನಿಂದ ತಿಂಗಳಿಗೆ ಹೆಚ್ಚಿನ ಮಟ್ಟದ ಬೆಳವಣಿಗೆ ಸಾಧಿಸುತ್ತಿದ್ದು, 2022ರ ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣಿಯೊಂದಿಗೆ ಸುಮಾರು 42 ಸಾವಿರ ಕಾರುಗಳನ್ನು ಮಾರಾಟ ಮಾಡಿದೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

ಸೆಮಿಕಂಡಕ್ಟರ್ ಕೊರತೆ ಮತ್ತು ಕೋವಿಡ್‌ನಿಂದ ಉಂಟಾಗುತ್ತಿರುವ ಆರ್ಥಿಕ ಏರಿಳಿತದ ನಡುವೆಯೂ ಕಳೆದ ಕೆಲ ತಿಂಗಳಿನಿಂದ ಹೊಸ ಕಾರುಗಳ ಮಾರಾಟವು ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಮಾರ್ಚ್ ಅವಧಿಯಲ್ಲಿ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಶೇ.43 ರಷ್ಟು ಬೆಳವಣಿಯೊಂದಿಗೆ ಪ್ರಮುಖ ಕಾರು ಕಂಪನಿಗಳಿಗೆ ಭರ್ಜರಿ ಪೈಪೋಟಿ ನೀಡಿದೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು 42,293 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿ ಮಾರಾಟಗೊಂಡಿದ್ದ 29,654 ಕಾರು ಮಾರಾಟಕ್ಕಿಂತ ಶೇ.43 ರಷ್ಟು ಹೆಚ್ಚಳವಾಗಿದೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

2022ರ ಮಾರ್ಚ್ ಅವಧಿಯಲ್ಲಿನ ಒಟ್ಟು ವಾಹನ ಮಾರಾಟದಲ್ಲಿ ಶೇ.30 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಬರೋಬ್ಬರಿ 86,718 ವಾಹನಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿ ಮಾರಾಟ ಮಾಡಿದ್ದ 66,462 ಯನಿಟ್ ವಾಹನಗಳಿಂತಲೂ ಶೇ.30 ರಷ್ಟು ಹೆಚ್ಚಳವಾಗಿದೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಕಳೆದ ಒಂದು ವರ್ಷದಿಂದ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಪ್ರಯಾಣಿಕ ಕಾರು ಮಾರಾಟದಲ್ಲಿ ಮಾತ್ರವಲ್ಲದೆ ವಾಣಿಜ್ಯ ವಾಹನ ಮಾರಾಟದಲ್ಲೂ ಶೇ.16 ರಷ್ಟು ಮುನ್ನಡೆ ಸಾಧಿಸಿದೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

ಮಾರ್ಚ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 47,050 ಯುನಿಟ್ ವಾಣಿಜ್ಯ ವಾಹನಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ 2,625 ವಾಣಿಜ್ಯ ವಾಹನಗಳನ್ನು ವಿದೇಶಿ ಮಾರುಕಟ್ಟೆಗೆ ರಫ್ತುಗೊಳಿಸಿದೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

ಈ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು 2021-22ರ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ(ಜನವರಿಯಿಂದ ಮಾರ್ಚ್) ಒಟ್ಟು 2,33,078 ವಾಹನಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿನ ವಾಹನ ಮಾರಾಟಕ್ಕಿಂತ ಶೇ.28 ರಷ್ಟು ಹೆಚ್ಚಳವಾಗಿದೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

ಹಾಗೆಯೇ ಕಂಪನಿಯು 2021-22ರ ಆರ್ಥಿಕ ವರ್ಷದಲ್ಲಿ ಒಟ್ಟು 6,92,554 ವಾಹನಗಳನ್ನು ಮಾರಾಟ ಮಾಡಿ ಶೇ.49 ರಷ್ಟು ಬೆಳವಣಿಗೆ ಸಾಧಿಸಿದ್ದು, ಇದರಲ್ಲಿ 3,70,372 ಪ್ರಯಾಣಿಕ ಕಾರು ಮಾದರಿಗಳ ಮಾರಾಟದ ಮೂಲಕ ಕಳೆದ ವರ್ಷಕ್ಕಿಂತ ಶೇ.67 ರಷ್ಟು ಬೆಳವಣಿಗೆ ಸಾಧಿಸಿದೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

ಕಳೆದ ಎರಡು ವರ್ಷದಿಂದ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದೀಗ ವರ್ಷದ ಆರಂಭದಲ್ಲಿಯೇ ಭರ್ಜರಿ ಬೇಡಿಕೆ ಪಡೆದುಕೊಂಡಿದೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಬದಲಾವಣೆ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಪ್ರತಿಸ್ಪರ್ಧಿ ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಭಾರತದಲ್ಲಿ ಕಾರು ಉತ್ಪಾದನೆಯನ್ನು ಆರಂಭಿಸಿದ 31 ವರ್ಷಗಳ ನಂತರ ಕಂಪನಿಯು ವಾರ್ಷಿಕವಾಗಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿಂತಾಗಿದೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಕಂಪನಿಯ ಕಾರು ಮಾರಾಟದಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಅಗ್ರಸ್ಥಾನದಲ್ಲಿದ್ದು, ತದನಂತರದಲ್ಲಿ ಆಲ್‌ಟ್ರೊಜ್, ಟಿಯಾಗೋ, ಟಿಗೋರ್, ಪಂಚ್, ಹ್ಯಾರಿಯರ್ ಮತ್ತು ಸಫಾರಿ ಕಾರು ಮಾದರಿಗಳು ಸಹ ಉತ್ತಮ ಬೇಡಿಕೆ ಪಡೆದುಕೊಂಡಿವೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

2015ರ ನಂತರ ಮಾರುಕಟ್ಟೆಗೆ ಪ್ರವೇಶಿಸಿದ ಟಿಯಾಗೋ, ಟಿಗೋರ್ ತದನಂತರ 2017ರಲ್ಲಿ ಬಿಡುಗಡೆಯಾದ ನೆಕ್ಸಾನ್, 2019ರಲ್ಲಿ ಬಿಡುಗಡೆಯಾದ ಹ್ಯಾರಿಯರ್, 2020ರಲ್ಲಿ ಬಿಡುಗಡೆಯಾದ ಆಲ್‌ಟ್ರೊಜ್, ನೆಕ್ಸಾನ್ ಫೇಸ್‌ಲಿಫ್ಟ್, ನೆಕ್ಸಾನ್ ಇವಿ, 2021ರಲ್ಲಿ ಬಿಡುಗಡೆಯಾದ ನ್ಯೂ ಜನರೇಷನ್ ಸಫಾರಿ, ಪಂಚ್, ಟಿಗೋರ್ ಇವಿ ಕಾರು ಮಾದರಿಗಳು ಟಾಟಾ ಮೋಟಾರ್ಸ್ ಕಂಪನಿಯ ಕಾರು ಮಾರಾಟವನ್ನು ದುಪ್ಪಟ್ಟುಗೊಳಿಸಿವೆ.

ಮಾರ್ಚ್ ತಿಂಗಳ ಕಾರು ಮಾರಾಟದಲ್ಲಿ ಶೇ.43 ರಷ್ಟು ಬೆಳವಣೆಗೆ ಸಾಧಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಟಿಯಾಗೋ, ಟಿಗೋರ್, ಪಂಚ್, ನೆಕ್ಸಾನ್, ಹ್ಯಾರಿಯರ್, ಸಫಾರಿ, ಟಿಗೋರ್ ಇವಿ, ನೆಕ್ಸಾನ್ ಇವಿ, ಟಿಯಾಗೋ ಸಿಎನ್‌ಜಿ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, ನಿಕಟ ಪ್ರತಿಸ್ಪರ್ಧಿಯಾಗಿರುವ ಹ್ಯುಂಡೈ ಕಂಪನಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

Most Read Articles

Kannada
English summary
Tata motors registered 42 293 car sales in march 2022
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X