Just In
- 2 hrs ago
ಎಲೆಕ್ಟ್ರಿಕ್, ಹೈಬ್ರಿಡ್ ಕಾರುಗಳಲ್ಲಿ ಮಾತ್ರ ರಿಜನರೇಟಿವ್ ಬ್ರೇಕಿಂಗ್ ಏಕೆ ಲಭ್ಯವಿದೆ: ಇದರ ಉಪಯೋಗವೇನು?
- 3 hrs ago
ಹೊಸ ನವೀಕರಣಗಳೊಂದಿಗೆ ಸಿಎಫ್ಮೋಟೋ 150ಎನ್ಕೆ ಬೈಕ್ ಬಿಡುಗಡೆ
- 5 hrs ago
ಏಪ್ರಿಲ್ ತಿಂಗಳ ಟಿವಿಎಸ್ ವಾಹನ ಮಾರಾಟ ವರದಿ: ರಫ್ತಿನಲ್ಲಿ ದಾಖಲೆ ನಿರ್ಮಾಣ
- 5 hrs ago
ಎಲೆಕ್ಟ್ರಿಕ್ ಕಾರ್ ಆಗಿ ಪರಿವರ್ತನೆಗೊಂಡು ಮಿಂಚುತ್ತಿದೆ 1954ರ ಫಿಯೆಟ್ ಕಾರು
Don't Miss!
- Sports
MI ಆಡುವ 11ರ ಬಳಗದಲ್ಲಿ ಮಗನಿಗೆ ಅವಕಾಶ ಸಿಗದ ಕುರಿತು ಸಚಿನ್ ತೆಂಡೂಲ್ಕರ್ ಹೇಳಿದ್ದೇನು?
- News
ವಿಡಿಯೋ: ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಕಾರು ಅಪಘಾತ
- Lifestyle
ಮೇ. 30ಕ್ಕೆ ಶನಿ ಜಯಂತಿ: ಶನಿ ಧೈಯ್ಯಾ, ಶನಿ ದೋಷವಿದ್ದರೆ ಈ ಪರಿಹಾರಗಳನ್ನು ಮಾಡಿ
- Finance
ಮೇ 24ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
'ಯುಗಾಂತರ' ಧಾರಾವಾಹಿಗೆ ಪ್ರಾಮಾಣಿಕ ಐಎಎಸ್ ಅಧಿಕಾರಿ ಪ್ರೇರಣೆ: ವಾಹಿನಿ ಮುಖ್ಯಸ್ಥರ ಸ್ಪಷ್ಟನೆಯೇನು?
- Technology
ಭಾರತದಲ್ಲಿ ಎಲ್ಜಿ OLED 2022 ಸ್ಮಾರ್ಟ್ ಟಿವಿ ಸರಣಿ ಅನಾವರಣ!
- Education
BSF Recruitment 2022 : 281 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನವರಿ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ
ಟಾಟಾ ಮೋಟಾರ್ಸ್(Tata Motors) ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ತಿಂಗಳಿನಿಂದ ತಿಂಗಳಿಗೆ ಹೆಚ್ಚಿನ ಬೆಳವಣಿಗೆ ಸಾಧಿಸುತ್ತಿದ್ದು, 2022ರ ಜನವರಿ ಅವಧಿಯಲ್ಲಿನ ಪ್ರಯಾಣಿಕರ ಕಾರು ಮಾರಾಟದಲ್ಲಿ ಶೇ.51 ರಷ್ಟು ಬೆಳವಣಿಯೊಂದಿಗೆ 40 ಸಾವಿರಕ್ಕೂ ಹೆಚ್ಚು ಕಾರುಗಳನ್ನು ಮಾರಾಟ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ಸೆಮಿಕಂಡಕ್ಟರ್ ಕೊರತೆ ಮತ್ತು ಕೋವಿಡ್‌ನಿಂದ ಉಂಟಾಗುತ್ತಿರುವ ಆರ್ಥಿಕ ಏರಿಳಿತದ ನಡುವೆಯೂ ಕಳೆದ ಕೆಲ ತಿಂಗಳಿನಿಂದ ಹೊಸ ಕಾರುಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಸಾಧಿಸಿದ್ದು, ಜನವರಿ ಅವಧಿಯ ಕಾರು ಮಾರಾಟದಲ್ಲಿ ಶೇ.51 ರಷ್ಟು ಬೆಳವಣಿಯೊಂದಿಗೆ ಪ್ರಮುಖ ಕಾರು ಕಂಪನಿಗಳಿಗೆ ಭರ್ಜರಿ ಪೈಪೋಟಿ ನೀಡಿದೆ.

ಜನವರಿ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 40,777 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಜನವರಿ ಅವಧಿಯಲ್ಲಿ ಮಾರಾಟಗೊಂಡಿದ್ದ 26,978 ಯುನಿಟ್‌ಗಿಂತಲೂ ಶೇ.51 ರಷ್ಟು ಹೆಚ್ಚಳವಾಗಿದೆ.

2022ರ ಜನವರಿ ಅವಧಿಯಲ್ಲಿನ ಒಟ್ಟು ವಾಹನ ಮಾರಾಟದಲ್ಲಿ ಶೇ. 26 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು 72,485 ವಾಹನಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಜನವರಿ ಅವಧಿಯಲ್ಲಿ ಮಾರಾಟ ಮಾಡಿದ್ದ 57,649 ಯನಿಟ್ ವಾಹನಗಳಿಂತ ಶೇ.26 ರಷ್ಟು ಹೆಚ್ಚಳವಾಗಿದೆ.

ಕಳೆದ ಕೆಲ ತಿಂಗಳಿನಿಂದ ಸ್ವದೇಶಿ ಕಾರುಗಳಿಗೆ ಹೆಚ್ಚಿನ ಬೇಡಿಕೆ ದಾಖಲಾಗುತ್ತಿರುವುದೇ ಟಾಟಾ ಉತ್ತಮ ಬೆಳವಣಿಗೆ ಸಾಧಿಸುತ್ತಿದ್ದು, ಪ್ರಯಾಣಿಕ ಕಾರು ಮಾರಾಟದಲ್ಲಿ ಮಾತ್ರವಲ್ಲದೆ ಟಾಟಾ ಕಂಪನಿಯು ಈ ಬಾರಿ ವಾಣಿಜ್ಯ ವಾಹನ ಮಾರಾಟದಲ್ಲೂ ಶೇ.7 ರಷ್ಟು ಮುನ್ನಡೆ ಸಾಧಿಸಿದೆ.

ಜನವರಿ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 35,268 ಯುನಿಟ್ ವಾಣಿಜ್ಯ ವಾಹನಗಳನ್ನು ಮಾರಾಟ ಮಾಡಿದ್ದು, 3,560 ವಾಣಿಜ್ಯ ವಾಹನಗಳನ್ನು ವಿದೇಶಿ ಮಾರುಕಟ್ಟೆಗೆ ರಫ್ತುಗೊಳಿಸಿದೆ.

ಕೋವಿಡ್ ಪರಿಣಾಮ ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಏರಿಳಿತ ಕಂಡುಬಂದರೂ ಆಟೋ ಉತ್ಪಾದನಾ ಕ್ಷೇತ್ರ ಮಾತ್ರ ಗರಿಷ್ಠ ಮಟ್ಟದ ಬೆಳವಣಿಗೆ ಸಾಧಿಸುತ್ತಿದ್ದು, ಕಳೆದ ಕೆಲ ತಿಂಗಳಿನಿಂದ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿವೆ.

ಟಾಟಾ ಮೋಟಾರ್ಸ್ ಕಂಪನಿಯು ಸಹ ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಎರಡು ವರ್ಷದಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದೀಗ ವರ್ಷದ ಆರಂಭದಲ್ಲಿಯೇ ಭರ್ಜರಿ ಬೇಡಿಕೆ ಪಡೆದುಕೊಂಡಿದೆ.

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಬದಲಾವಣೆ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಪ್ರಯಾಣಿಕರ ಕಾರು ಮಾರಾಟ ವಿಭಾಗದಲ್ಲಿ ತನ್ನ ಪ್ರತಿಸ್ಪರ್ಧಿ ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಕಂಪನಿಯು 2021ರ ಅವಧಿಯಲ್ಲಿ ಒಟ್ಟು 3.31 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ.

ಭಾರತದಲ್ಲಿ ಕಾರು ಉತ್ಪಾದನೆಯನ್ನು ಆರಂಭಿಸಿದ 31 ವರ್ಷಗಳ ನಂತರ ಟಾಟಾ ಮೋಟಾರ್ಸ್ ಕಂಪನಿಯು ವಾರ್ಷಿಕವಾಗಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, 2021ರಲ್ಲಿ ಕಂಪನಿಯು 2020ರ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಶೇ. 94.6 ರಷ್ಟು ಬೆಳವಣಿಗೆ ಸಾಧಿಸಿದೆ.

2020ರಲ್ಲಿ 1,61,031 ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು 2021ರಲ್ಲಿ 3,31,182 ಕಾರುಗಳನ್ನು ಮಾರಾಟ ಮಾಡಿದೆ. ಟಾಟಾ ಕಾರುಗಳ ಮಾರಾಟದಲ್ಲಿ ಸದ್ಯ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಅಗ್ರಸ್ಥಾನದಲ್ಲಿದೆ.

2021ರಲ್ಲಿ ಟಾಟಾ ಕಂಪನಿಯು ಮಾರಾಟ ಮಾಡಿರುವ 3.31 ಲಕ್ಷ ಕಾರುಗಳಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದೆ 1,08,577 ಯುನಿಟ್ ಒಳಗೊಂಡಿದ್ದು, ತದನಂತರದಲ್ಲಿ ಆಲ್‌ಟ್ರೊಜ್, ಟಿಯಾಗೋ, ಟಿಗೋರ್, ಪಂಚ್, ಹ್ಯಾರಿಯರ್ ಮತ್ತು ಸಫಾರಿ ಕಾರು ಮಾದರಿಗಳು ಸಹ ಉತ್ತಮ ಬೇಡಿಕೆ ಪಡೆದುಕೊಂಡಿವೆ.

2015ರ ನಂತರ ಮಾರುಕಟ್ಟೆಗೆ ಪ್ರವೇಶಿಸಿದ ಟಿಯಾಗೋ, ಟಿಗೋರ್ ತದನಂತರ 2017ರಲ್ಲಿ ಬಿಡುಗಡೆಯಾದ ನೆಕ್ಸಾನ್, 2019ರಲ್ಲಿ ಬಿಡುಗಡೆಯಾದ ಹ್ಯಾರಿಯರ್, 2020ರಲ್ಲಿ ಬಿಡುಗಡೆಯಾದ ಆಲ್‌ಟ್ರೊಜ್, ನೆಕ್ಸಾನ್ ಫೇಸ್‌ಲಿಫ್ಟ್, ನೆಕ್ಸಾನ್ ಇವಿ, 2021ರಲ್ಲಿ ಬಿಡುಗಡೆಯಾದ ನ್ಯೂ ಜನರೇಷನ್ ಸಫಾರಿ, ಪಂಚ್, ಟಿಗೋರ್ ಇವಿ ಕಾರು ಮಾದರಿಗಳು ಟಾಟಾ ಮೋಟಾರ್ಸ್ ಕಂಪನಿಯ ಕಾರು ಮಾರಾಟವನ್ನು ದುಪ್ಪಟ್ಟುಗೊಳಿಸಿವೆ.

ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಟಿಯಾಗೋ, ಟಿಗೋರ್, ಪಂಚ್, ನೆಕ್ಸಾನ್, ಹ್ಯಾರಿಯರ್, ಸಫಾರಿ, ಟಿಗೋರ್ ಇವಿ, ನೆಕ್ಸಾನ್ ಇವಿ, ಟಿಯಾಗೋ ಸಿಎನ್‌ಜಿ ಮತ್ತು ಟಿಗೋರ್ ಸಿಎನ್‌ಜಿ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, ನಿಕಟ ಪ್ರತಿಸ್ಪರ್ಧಿಯಾಗಿರುವ ಹ್ಯುಂಡೈ ಕಂಪನಿಗೆ ಉತ್ತಮ ಪೈಪೋಟಿ ನೀಡುತ್ತಿದೆ.

ಕಳೆದ ತಿಂಗಳು ಡಿಸೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಹ್ಯುಂಡೈ ಕಂಪನಿಗೆ ತೀವ್ರ ಪೈಪೋಟಿ ನೀಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ತಿಂಗಳ ಕಾರು ಮಾರಾಟ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತ್ತು. ಆದರೆ ಜನವರಿ ಅವಧಿಯಲ್ಲಿ ಕಾರು ಮಾರಾಟದಲ್ಲಿ ತೀವ್ರ ಪೈಪೋಟಿಯೊಂದಿಗೆ ಮರಳಿ ಎರಡನೇ ಸ್ಥಾನಕ್ಕೆ ಮರಳಿರುವ ಹ್ಯುಂಡೈ ಕಂಪನಿಯು ಜನವರಿ ಅವಧಿಯ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಮೊದಲ ಸ್ಥಾನದಲ್ಲಿ ಮಾರುತಿ ಸುಜುಕಿ, ಎರಡನೇ ಸ್ಥಾನದಲ್ಲಿ ಹ್ಯುಂಡೈ ಮತ್ತು ಮೂರನೇ ಸ್ಥಾನದಲ್ಲಿ ಟಾಟಾ ಮೋಟಾರ್ಸ್ ಮುಂದುವರೆದಿದೆ.