1991ರಲ್ಲಿ ಕಾರು ಮಾರಾಟ ಆರಂಭಿಸಿದ ನಂತರ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಭಾರತದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಕಾರು ಮಾರಾಟ ಆರಂಭಿಸಿದ ನಂತರ ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಟಾಟಾ ಕಂಪನಿಯು 2021ರ ಅವಧಿಯಲ್ಲಿ ಈ ಹಿಂದೆಂದಿಗಿಂತಲೂ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಬದಲಾವಣೆ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಪ್ರಯಾಣಿಕ ಕಾರು ಮಾರಾಟ ವಿಭಾಗದಲ್ಲಿ ತನ್ನ ಪ್ರತಿ ಸ್ಪರ್ಧಿ ಕಂಪನಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಕಂಪನಿಯು 2021ರ ಅವಧಿಯಲ್ಲಿ ಒಟ್ಟು 3.31 ಲಕ್ಷ ಕಾರುಗಳನ್ನು ಮಾರಾಟ ಮಾಡಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಭಾರತದಲ್ಲಿ ಕಾರು ಉತ್ಪಾದನೆಯನ್ನು ಆರಂಭಿಸಿದ 31 ವರ್ಷಗಳ ನಂತರ ಟಾಟಾ ಮೋಟಾರ್ಸ್ ಕಂಪನಿಯು ವಾರ್ಷಿಕವಾಗಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, 2021ರಲ್ಲಿ ಕಂಪನಿಯು 2020ರ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಶೇ. 94.6 ರಷ್ಟು ಬೆಳವಣಿಗೆ ಸಾಧಿಸಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

2020ರಲ್ಲಿ 1,61,031 ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು 2021ರಲ್ಲಿ 3,31,182 ಕಾರುಗಳನ್ನು ಮಾರಾಟ ಮಾಡಿದ್ದು, ಟಾಟಾ ಕಾರುಗಳ ಮಾರಾಟದಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಅಗ್ರಸ್ಥಾನದಲ್ಲಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

2021ರಲ್ಲಿ ಟಾಟಾ ಕಂಪನಿಯು ಮಾರಾಟ ಮಾಡಿರುವ 3.31 ಲಕ್ಷ ಕಾರುಗಳಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯೊಂದೆ 1,08,577 ಯುನಿಟ್ ಒಳಗೊಂಡಿದ್ದು, ತದನಂತರದಲ್ಲಿ ಆಲ್‌ಟ್ರೊಜ್, ಟಿಯಾಗೋ, ಟಿಗೋರ್, ಪಂಚ್, ಹ್ಯಾರಿಯರ್ ಮತ್ತು ಸಫಾರಿ ಕಾರು ಮಾದರಿಗಳು ಸಹ ಉತ್ತಮ ಬೇಡಿಕೆ ಪಡೆದುಕೊಂಡಿವೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು 1991ರಲ್ಲಿ ಮೊದಲ ಬಾರಿಗೆ ಬಿಡುಗಡೆ ಮಾಡಲಾದ ಸಿಯೆರಾ ಕಾರು ಮಾದರಿಯ ನಂತರ ಬಿಡುಗಡೆಯಾದ ಎಸ್ಟೇಟ್​, ಸುಮೊ, ಇಂಡಿಕಾ, ನ್ಯಾನೊ, ವಿಸ್ತಾ, ಇಂಡಿಗೋ ಮಾಂಜಾ, ಜೆಸ್ಟ್, ಆರಿಯಾ, ಸಫಾರಿ, ಬೊಲ್ಟ್, ಹೆಕ್ಸಾ ಕಾರುಗಳು ಕೂಡಾ ಟಾಟಾ ಮೋಟಾರ್ಸ್ ಕಂಪನಿಗೆ ಉತ್ತಮ ಬೇಡಿಕೆ ತಂದುಕೊಟ್ಟರೂ ಪ್ರತಿಸ್ಪರ್ಧಿ ಮಾದರಿಗಳಿಂದ ತೀವ್ರ ಪೈಪೋಟಿ ಎದುರಿಸಿತ್ತು.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಆದರೆ 2015ರ ನಂತರ ಮಾರುಕಟ್ಟೆ ಪ್ರವೇಶಿಸಿದ ಟಿಯಾಗೋ, ಟಿಗೋರ್ ತದನಂತರ 2017ರಲ್ಲಿ ಬಿಡುಗಡೆಯಾದ ನೆಕ್ಸಾನ್, 2019ರಲ್ಲಿ ಬಿಡುಗಡೆಯಾದ ಹ್ಯಾರಿಯರ್, 2020ರಲ್ಲಿ ಬಿಡುಗಡೆಯಾದ ಆಲ್‌ಟ್ರೊಜ್, ನೆಕ್ಸಾನ್ ಫೇಸ್‌ಲಿಫ್ಟ್, ನೆಕ್ಸಾನ್ ಇವಿ, 2021ರಲ್ಲಿ ಬಿಡುಗಡೆಯಾದ ನ್ಯೂ ಜನರೇಷನ್ ಸಫಾರಿ, ಪಂಚ್, ಟಿಗೋರ್ ಇವಿ ಕಾರು ಮಾದರಿಗಳು ಟಾಟಾ ಮೋಟಾರ್ಸ್ ಕಂಪನಿಯ ಕಾರು ಮಾರಾಟವನ್ನು ದುಪ್ಪಟ್ಟುಗೊಳಿಸಿವೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ಟಿಯಾಗೋ, ಟಿಗೋರ್, ಪಂಚ್, ನೆಕ್ಸಾನ್, ಹ್ಯಾರಿಯರ್, ಸಫಾರಿ, ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ ಮಾದರಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದು, ನಿಕಟ ಪ್ರತಿಸ್ಪರ್ಧಿಯಾಗಿರುವ ಹ್ಯುಂಡೈ ಕಂಪನಿಗೆ ಉತ್ತಮ ಪೈಪೋಟಿ ನೀಡಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

2021ರಲ್ಲಿ ಅತಿ ಹೆಚ್ಚು ಮಾರಾಟವಾದ ಕಾರು ಕಂಪನಿಗಳ ಪಟ್ಟಿಯಲ್ಲಿ ಮಾರುತಿ ಸುಜುಕಿ ಮತ್ತು ಹ್ಯುಂಡೈ ಮೊದಲೆರಡು ಸ್ಥಾನ ಪಡೆದುಕೊಂಡಿದ್ದು, ಮೂರನೇ ಸ್ಥಾನದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಸ್ಥಾನಪಡೆದುಕೊಂಡಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಆದರೆ ಕಳೆದ ತಿಂಗಳು ಡಿಸೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಹ್ಯುಂಡೈ ಕಂಪನಿಯು ತೀವ್ರ ಪೈಪೋಟಿ ನೀಡಿದ ಟಾಟಾ ಮೋಟಾರ್ಸ್ ಕಂಪನಿಯು ತಿಂಗಳ ಕಾರು ಮಾರಾಟ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರು ಮಾದರಿಗಳೊಂದಿಗೆ ಎರಡನೇ ಸ್ಥಾನವನ್ನು ಕಾಯ್ದುಕೊಳ್ಳುವ ಭರವಸೆಯಲ್ಲಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಮೊದಲ ಸ್ಥಾನದಲ್ಲಿರುವ ಮಾರುತಿ ಸುಜುಕಿಯು ಸದ್ಯ ಕಾರು ಮಾರಾಟ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕಂಪನಿಗಿಂತಲೂ ಹೆಚ್ಚು ಅಂತರದೊಂದಿಗೆ ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಮುಂದುವರಿಕೆಗಾಗಿ ಇದೀಗ ಹ್ಯುಂಡೈ ಮತ್ತು ಟಾಟಾ ಮೋಟಾರ್ಸ್ ಪೈಪೋಟಿ ಜೋರಾಗಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಗಳು ತನ್ನ ಕಾರುಗಳಲ್ಲಿ ಹೊಸ ಬದಲಾವಣೆ ತರುವ ಮೂಲಕ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳುತ್ತಿದ್ದು, ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ, ಎಂಜಿನ್ ಕಾರ್ಯಕ್ಷಮತೆ ಮತ್ತು ಆಕರ್ಷಕ ಬೆಲೆಗಳೊಂದಿಗೆ ಗ್ರಾಹಕರ ವಿಶ್ವಾಸ ಗಳಿಸುತ್ತಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

2017ರಿಂದ ಬಿಡುಗಡೆಯಾಗಿ ಪ್ರತಿ ಹೊಸ ಕಾರು ಮಾದರಿಗಳಲ್ಲೂ ಗರಿಷ್ಠ ಸುರಕ್ಷತೆ ಒದಗಿಸುತ್ತಿದ್ದು, ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನೆಕ್ಸಾನ್ ಕಾರು 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ ಪಡೆದ ನಂತರ ಕಾರು ಮಾರಾಟವು ನಿರಂತವಾಗಿ ಏರಿಕೆಯಾಗುತ್ತಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಜೊತೆಗೆ ಸ್ವದೇಶಿ ಕಾರು ಕಂಪನಿ ನಿರ್ಮಿತ ವಾಹನ ಬಳಕೆಗೆ ಗ್ರಾಹಕರ ಹೆಚ್ಚಿನ ಒಲವು ತೋರುತ್ತಿರುವುದು ಕೂಡಾ ಟಾಟಾ ಕಾರುಗಳ ಮಾರಾಟ ಬೆಳವಣಿಗೆ ಮತ್ತೊಂದು ಪ್ರಮುಖ ಕಾರಣವಾಗಿದ್ದು, ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳೊಂದಿಗೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಇದರ ಜೊತೆಗೆ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಅಗ್ರಸ್ಥಾನ ಪಡೆದುಕೊಂಡಿದ್ದು, 2021ರ ಡಿಸೆಂಬರ್ ಅವಧಿಯಲ್ಲಿ ಗರಿಷ್ಠ ಮಟ್ಟದ ಬೇಡಿಕೆಯೊಂದಿಗೆ ಅತ್ಯುತ್ತಮ ಮಾರಾಟ ದಾಖಲೆಯನ್ನ ತನ್ನದಾಗಿಸಿಕೊಂಡಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಕಂಪನಿಯು ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯ ಮುಲಕ ಕ್ಯಾಬ್ ಸೇವಾ ವಿಭಾಗದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಮೊದಲ ಬಾರಿಗೆ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ ನಂತರ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಇವಿ ವಾಹನಗಳ ಮೂಲಕ ಉತ್ತಮ ಬೇಡಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗುತ್ತಿದೆ. 2019ರಲ್ಲಿ ಮೊದಲ ಬಾರಿಗೆ ಪ್ರಯಾಣಿಕ ಬಳಕೆಯ ಎಲೆಕ್ಟ್ರಿಕ್ ಕಾರು ಪರಿಚಯಿಸಿದ ನಂತರ ಟಾಟಾ ಕಂಪನಿಯು ಇದುವರೆಗೆ ಸುಮಾರು 18 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ನೆಕ್ಸಾನ್ ಇವಿ ಕಾರು ಮಾದರಿಯು ಟಾಟಾ ಕಂಪನಿಯ ಇವಿ ವಾಹನ ಉತ್ಪಾದನಾ ಯೋಜನೆಗೆ ಹೊಸ ಆಯಾಮ ನೀಡಿದೆ.

Most Read Articles

Kannada
English summary
Tata motors sales report for 2021 sold more than 3 31 lakh units
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X