ಟಾಟಾ ಪ್ರಮುಖ ಕಾರುಗಳ ಖರೀದಿ ಮೇಲೆ ಸೆಪ್ಟೆಂಬರ್ ಅವಧಿಯ ಆಫರ್ ಘೋಷಣೆ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಸಂಭಾವ್ಯ ಗ್ರಾಹಕರಿಗೆ ಪ್ರಮುಖ ಕಾರುಗಳ ಖರೀದಿ ಮೇಲೆ ಸೆಪ್ಟೆಂಬರ್ ಅವಧಿಯ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದ್ದು, ಆಯ್ದು ಮಾದರಿಗಳ ಮೇಲೆ ಹೊಸ ಆಫರ್ ಲಭ್ಯವಿರಲಿದೆ.

ಸೆಮಿಕಂಡಕ್ಟರ್ ಕೊರತೆಯ ನಡುವೆಯೂ ಹೊಸ ಕಾರುಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ವಿವಿಧ ಕಾರುಗಳ ಖರೀದಿ ಹೆಚ್ಚಿಸಲು ಆಕರ್ಷಕ ಆಫರ್‌ಗಳನ್ನು ಸಹ ಘೋಷಣೆ ಮಾಡಿದೆ. ಟಿಯಾಗೊ, ಟಿಗೋರ್, ಟಿಗೋರ್ ಸಿಎನ್‌ಜಿ, ಹ್ಯಾರಿಯರ್ ಮತ್ತು ಸಫಾರಿ ಕಾರುಗಳ ಮೇಲೆ ವಿಶೇಷ ಆಫರ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್‌ಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ. 20 ಸಾವಿರದಿಂದ ಗರಿಷ್ಠ ರೂ. 40 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಟಾಟಾ ಹೊಸ ಆಫರ್‌ಗಳಲ್ಲಿ ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ಕಂಪನಿಯು ರೂ. 20 ಸಾವಿರ ತನಕ ಆಫರ್ ಘೋಷಿಸಿದ್ದು, ರೂ. 20 ಸಾವಿರ ಮೌಲ್ಯದ ಆಫರ್‌ನಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 10 ಸಾವಿರ ಎಕ್ಸ್‌ಚೆಂಜ್ ಆಫರ್ ಮತ್ತು ಆಯ್ದ ಮಾದರಿಗಳ ಮೇಲೆ ರೂ. 3 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಸಹ ನೀಡುತ್ತಿದೆ.

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ. ಟಿಗೋರ್ ಕಾರು ಖರೀದಿಯ ಮೇಲೂ ಗ್ರಾಹಕರು ಗರಿಷ್ಠ ರೂ.20 ಸಾವಿರ ತನಕ ಉಳಿತಾಯ ಮಾಡಬಹುದಾಗಿದ್ದು, ರೂ. 20 ಸಾವಿರದಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.10 ಸಾವಿರ ತನಕ ಎಕ್ಸ್‌ಚೆಂಜ್ ಆಫರ್ ಮತ್ತು ಆಯ್ದ ಮಾದರಿಗಳ ಮೇಲೆ ರೂ. 3 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್‌ಗಳಲ್ಲಿ ಟಿಯಾಗೋ ಮತ್ತು ಟಿಗೋರ್ ಮಾದರಿಗಳ ಎಕ್ಸ್ಇ, ಎಕ್ಸ್ಎಂ ಮತ್ತು ಎಕ್ಸ್‌ಟಿ ಮಾದರಿಗಳ ಮೇಲೆ ಕನಿಷ್ಠ ಆಫರ್ ಲಭ್ಯವಿದ್ದರೆ ಎಕ್ಸ್‌ಜೆಡ್ ಮಾದರಿಗಳ ಮೇಲೆ ಹೆಚ್ಚಿನ ಆಫರ್ ನೀಡಲಾಗುತ್ತಿದ್ದು, ಟಿಗೋರ್ ಸಿಎನ್‌ಜಿ ಮಾದರಿಯ ಮೇಲೆ ಕಂಪನಿಯು ರೂ. 25 ಸಾವಿರ ಮೌಲ್ಯದ ಆಫರ್ ನೀಡುತ್ತಿದೆ.

ಇನ್ನು ಟಾಟಾ ಕಂಪನಿಯು ತನ್ನ ಹೊಸ ಆಫರ್‌ಗಳಲ್ಲಿ ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ರೂ.40 ಸಾವಿರ ತನಕ ಆಫರ್ ನೀಡುತ್ತಿದ್ದು, ಎಲ್ಲಾ ವೆರಿಯೆಂಟ್‌ಗಳಿಗೂ ಅನ್ವಯಿಸುವಂತೆ ರೂ.40 ಸಾವಿರ ತನಕ ಎಕ್ಸ್‌ಚೆಂಜ್ ಆಫರ್ ಮತ್ತು ರೂ. 5 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ನೀಡುತ್ತಿದೆ.

ಹೊಸ ಆಫರ್‌ಗಳಲ್ಲಿ ಕಂಪನಿಯು ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಮೇಲೂ ರೂ.40 ಸಾವಿರ ಮೌಲ್ಯದ ಆಫರ್ ಘೋಷಣೆ ಮಾಡಿದ್ದು, ಸಫಾರಿ ಮಾದರಿಗಾಗಿ ಯಾವುದೇ ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗಿಲ್ಲ.

ಸೆಮಿಕಂಡಕ್ಟರ್ ಪೂರೈಕೆಯಲ್ಲಿನ ಕೊರತೆ ಮತ್ತು ಆರ್ಥಿಕ ಏರಿಳಿತದ ನಡುವೆಯೂ ಕಾರುಗಳ ಮಾರಾಟದಲ್ಲಿ ಉತ್ತಮ ಮುನ್ನಡೆ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆ ಆಧರಿಸಿ ಮತ್ತಷ್ಟು ಹೊಸ ಆವೃತ್ತಿಗಳನ್ನು ಬಿಡುಗಡೆ ಮಾಡಿದೆ.

ಹೊಸ ಕಾರುಗಳಲ್ಲಿ ನಿರಂತರವಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳ ಉನ್ನತೀಕರಣದೊಂದಿಗೆ ಸಾಕಷ್ಟು ಬೇಡಿಕೆ ಪಡೆದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವಾರವಷ್ಟೇ ತನ್ನ ಪ್ರಮುಖ ಕಾರು ಮಾದರಿಗಳಿಗಾಗಿ ಜೆಟ್ ಎಡಿಷನ್ ಪರಿಚಯಿಸಿತು.

ಹೊಸದಾಗಿ ಮಾರುಕಟ್ಟೆ ಪ್ರವೇಶಿಸಿರುವ ಜೆಟ್ ಎಡಿಷನ್ ಮಾದರಿಗಳು ಸ್ಟ್ಯಾಂಡರ್ಡ್ ಆವೃತ್ತಿಗಿಂತಲೂ ಹೆಚ್ಚಿನ ಫೀಚರ್ಸ್ ಮತ್ತು ವಿಶೇಷ ಬಣ್ಣದ ಆಯ್ಕೆಯೊಂದಿಗೆ ಗ್ರಾಹಕರನ್ನು ಸೆಳೆಯತ್ತಿವೆ.

ನೆಕ್ಸಾನ್, ನೆಕ್ಸಾನ್ ಇವಿ, ಹ್ಯಾರಿಯರ್ ಮತ್ತು ಸಫಾರಿ ಜೆಟ್ ಆವೃತ್ತಿಯಲ್ಲಿ ಸ್ಟ್ಯಾಂಡರ್ಡ್ ಮಾದರಿಗಿಂತಲೂ ವಿಭಿನ್ನವಾಗಿ ಕಾಣಲು ಹೊರಭಾಗ ಮತ್ತು ಒಳಭಾಗವನ್ನು ನವೀಕರಿಸಲಾಗಿದ್ದು, ಹೊಸ ಸೌಲಭ್ಯದೊಂದಿಗೆ ಪ್ರೀಮಿಯಂ ಅನುಭವ ನೀಡಲಿದೆ.

ಹೊಸ ಮಾದರಿಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ವಿಶೇಷವಾದ ಸ್ಟಾರ್‌ಲೈಟ್ ಬಣ್ಣದೊಂದಿಗೆ ಪರಿಚಯಿಸಲಾಗಿದ್ದು, ಜೆಟ್ ಮಾದರಿಯು ಎಲ್ಲಾ ಕಾರುಗಳಲ್ಲೂ ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳುತ್ತವೆ.

ಆರಂಭಿಕ ಮಾದರಿಯಾದ ನೆಕ್ಸಾನ್ ಜೆಟ್ ಎಡಿಷನ್ ಮತ್ತು ನೆಕ್ಸಾನ್ ಇವಿ ಜೆಟ್ ವಿವಿಧ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ನೆಕ್ಸಾನ್ ಜೆಟ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.13 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.08 ಲಕ್ಷ ಬೆಲೆ ಹೊಂದಿದ್ದರೆ ನೆಕ್ಸಾನ್ ಇವಿ ಜೆಟ್ ಆರಂಭಿಕವಾಗಿ ರೂ. 16.50 ಲಕ್ಷದಿಂದ ರೂ. 17.50 ಲಕ್ಷ ಬೆಲೆ ಹೊಂದಿದೆ.

ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಯಾದ ಹ್ಯಾರಿಯರ್ ಜೆಟ್ ಎಡಿಷನ್ ಪ್ರಮುಖ ಎರಡು ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 22.20 ಲಕ್ಷದಿಂದ ರೂ. 22.90 ಲಕ್ಷ ಬೆಲೆ ಹೊಂದಿದೆ.

ಸಫಾರಿ ಎಸ್‌ಯುವಿಯ ಜೆಟ್ ಎಡಿಷನ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 21.35 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 22.75 ಲಕ್ಷ ಬೆಲೆ ಹೊಂದಿವೆ. ಹೊಸ ಮಾದರಿಗಳು ಸ್ಟ್ಯಾಂಡರ್ಡ್ ಮಾದರಿಗಿಂತ ವಿವಿಧ ಎಡಿಷನ್ ಆಧರಿಸಿ ರೂ. 10 ಸಾವಿರದಿಂದ ರೂ. 15 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿರಲಿವೆ.


Click it and Unblock the Notifications