ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಲಾಂಗ್ ರೇಂಜ್ ಹೊಂದಿರುವ ಟಾಟಾ ನೆಕ್ಸಾನ್ ಇವಿ
ಟಾಟಾ ಮೋಟಾರ್ಸ್ ಹೊಸ ಆಲ್ಟ್ರೊಜ್ ಡಿಸಿಟಿ ಆಟೋಮ್ಯಾಟಿಕ್ ರೂಪಾಂತರವನ್ನು ದೇಶದಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತು. ಟಾಟಾ ಕಂಪನಿಯು ಅನೇಕ ಹೊಸ ರೂಪಾಂತರಗಳು ಮತ್ತು ಅಸ್ತಿತ್ವದಲ್ಲಿರುವ ಮಾಡೆಲ್‌ಗಳ ಫೇಸ್‌ಲಿಫ್ಟ್‌ಗಳಲ್ಲಿ ಸಹ ಕಾರ್ಯನಿರ್ವಹಿಸುತ್ತಿದೆ.

ಟಾಟಾ ಮೋಟಾರ್ಸ್ ಕಂಪನಿಯು ಬಹುನಿರೀಕ್ಷಿತ 2022 ಟಾಟಾ ನೆಕ್ಸಾನ್ ಇವಿ ಅನ್ನು 2022ರ ಏಪ್ರಿಲ್ 6 ರಂದು ಬಿಡುಗಡೆ ಮಾಡಬಹುದೆಂದು ನಿರೀಕ್ಷಿಸಲಾಗಿದೆ. 2022ರ ಟಾಟಾ ನೆಕ್ಸಾನ್ ಇವಿ ಲಾಂಗ್ ರೇಂಜ್ ಮತ್ತು ಕೆಲವು ಕಾಸ್ಮೆಟಿಕ್ ನವೀಕರಣಗಳಿಗಾಗಿ ದೊಡ್ಡ ಬ್ಯಾಟರಿ ಪ್ಯಾಕ್‌ನೊಂದಿಗೆ ಬರುತ್ತದೆ. ನೆಕ್ಸಾನ್ ಎಲೆಕ್ಟ್ರಿಕ್‌ನ ಲಾಂಗ್ ರೇಂಜ್ ಆವೃತ್ತಿಯು ಈಗಾಗಲೇ ದೇಶದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸುತ್ತಿದೆ. ಹೊಸ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ದೊಡ್ಡ 40kWh ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ ಎಂದು ವರದಿಯಾಗಿದೆ.

2022ರ ಟಾಟಾ ನೆಕ್ಸಾನ್ ಇವಿ ಕಾರು 30.2kWh ಬ್ಯಾಟರಿ ಪ್ಯಾಕ್‌ನೊಂದಿಗೆ ಬರುತ್ತದೆ ಮತ್ತು ARAI ಪ್ರಮಾಣೀಕೃತ ರೇಂಜ್ 312 ಕಿ,ಮೀ ಅನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಇನ್ನು ದೊಡ್ಡ ಬ್ಯಾಟರಿ ಪ್ಯಾಕ್ ಸುಮಾರು 400 ಕಿಮೀ ರೇಂಜ್ ಅನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.

2022ರ ಟಾಟಾ ನೆಕ್ಸಾನ್ ಇವಿ ಹೆಚ್ಚು ಪವರ್ ಫುಲ್ ಚಾರ್ಜರ್‌ನೊಂದಿಗೆ ಬರುತ್ತದೆ. ಇದು ಹೆಚ್ಚು ಪವರ್ ಫುಲ್ 6.6kW ಎಸಿ ಚಾರ್ಜರ್ ಅನ್ನು ಪಡೆಯುವ ಸಾಧ್ಯತೆಯಿದೆ. ಪ್ರಸ್ತುತ ಮಾದರಿಯು 3.3kW ಎಸಿ ಚಾರ್ಜರ್‌ನೊಂದಿಗೆ ಬರುತ್ತದೆ, ಇದು ಬ್ಯಾಟರಿಯನ್ನು ಸಂಪೂರ್ಣವಾಗಿ ಚಾರ್ಜ್ ಮಾಡಲು 10 ಗಂಟೆಗಳನ್ನು ತೆಗೆದುಕೊಂಡಿತು. 6.6kW ಎಸಿ ಚಾರ್ಜರ್ ಆಯ್ಜೆಯಾಗಿ ಬರುವ ಸಾಧ್ಯತೆಯಿದೆ.

ದೊಡ್ಡ ಬ್ಯಾಟರಿ ಪ್ಯಾಕ್ ಅನ್ನು ಸರಿಹೊಂದಿಸಲು ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್‌ನ ಫ್ಹೋರ್ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಇದರ ಎಲ್ಲಾ ನಾಲ್ಕು ವ್ಹೀಲ್ ಗಳಿಗೆ ಡಿಸ್ಕ್ ಬ್ರೇಕ್‌ಗಳೊಂದಿಗೆ ಬರಲಿದೆ. ದೊಡ್ಡ ಬ್ಯಾಟರಿ ಪ್ಯಾಕ್‌ನೊಂದಿಗೆ, ಹೊಸ ನೆಕ್ಸಾನ್ ಇವಿ ಭಾರವಾಗಿರುತ್ತದೆ. ಹೊಸ ಮಾದರಿಯು ರಿಜನರೇಟಿವ್ ಬ್ರೇಕಿಂಗ್, ESP ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್ ಗಳ ತೀವ್ರತೆಯನ್ನು ಸುಧಾರಿಸುವ ವಿವಿಧ ಮೋಡ್ ಗಳನ್ನು ನೀಡಬಹುದು.

2022ರ ಟಾಟಾ ನೆಕ್ಸಾನ್ ಲಾಂಗ್ ರೇಂಜ್ ಇವಿ ಅನ್ನು ಸಾಮಾನ್ಯ ಮಾದರಿಯೊಂದಿಗೆ ಮಾರಾಟ ಮಾಡಲಾಗುತ್ತದೆ. ಇದರ ಬೆಲೆ ಸುಮಾರು ರೂ,17 ಲಕ್ಷವಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಇದು ಪ್ರಸ್ತುತ ಮಾದರಿಗಿಂತ ಸುಮಾರು ರೂ.3 ಲಕ್ಷದಿಂದ ರೂ.4 ಲಕ್ಷ ಪ್ರೀಮಿಯಂ ಆಗಿದೆ

ಟಾಟಾ ಕಂಪನಿಯು 2020ರ ಜನವರಿಯಲ್ಲಿ ಮೊದಲ ಬಾರಿಗೆ ಭಾರತದಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಭಾರತದಲ್ಲಿ ಪರಿಚಯಿಸಿದರು. ಈ ನೆಕ್ಸಾನ್ ಎಲೆಕ್ಟ್ರಿಕ್ ಭಾರತದಲ್ಲಿ ಹೆಚ್ಚು ಮಾರಾಟವಾದ ಪ್ರಯಾಣಿಕರ ಎಲೆಕ್ಟ್ರಿಕ್ ಕಾರು ಆಗಿದೆ. ಅಲ್ಲದೇ ಇದು ಜಿಪ್ಟ್ರಾನ್ ತಂತ್ರಜ್ಞಾನವನ್ನು ಆಧರಿಸಿದ ಮೊದಲ ವಾಹನವಾಗಿದೆ.

ಈ ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಸನ್‌ರೂಫ್, ರೈನ್ ಸೆನ್ಸಾಸಿಂಗ್, ಇಂಟಿಗ್ರೇಟೆಡ್ ಟರ್ನ್ ಇಂಡೀಕೇಟರ್, ಎಲ್ಲಾ ಪವರ್ ವಿಂಡೋಸ್, ಕೀಲೆಸ್ ಎಂಟ್ರಿ ಅಂಡ್ ಗೋ, ಕೂಲ್ಡ್ ಗ್ಲೋವ್ ಬಾಕ್ಸ್, ಹ್ಯಾಂಡ್ಸ್-ಫ್ರೀ ಟೈಲ್‌ಗೇಟ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿವೆ,

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಸುರಕ್ಷತೆಗಾಗಿ ಹೆಚ್ಚಿನ ಪ್ರಮುಖ್ಯತೆಯನ್ನು ನೀಡಿದ್ದು, ಇದಕ್ಕಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ, ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್ ಸಿಸ್ಟಮ್, ರಿಯರ್ ಪಾರ್ಕಿಂಗ್ ಕ್ಯಾಮೆರಾ ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಅನ್ನು ನೀಡಿದ್ದಾರೆ.

ಇನ್ನು ಪ್ರಸ್ತುತ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ ಸಿಂಕ್ರೊನಸ್ ಮೋಟರ್ ಅನ್ನು ಹೊಂದಿದೆ. ಇದರಲ್ಲಿ 30.2 ಕಿಲೋವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿಯನ್ನು ಹೊಂದಿದೆ. ಈ ಇವಿ ಮಾದರಿಯು ಒಟ್ಟು 127 ಬಿಹೆಚ್‌ಪಿ ಮತ್ತು 245 ಎನ್‌ಎಂ ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಲೆಕ್ಟ್ರಿಕ್ ಕಾರು ಕೇವಲ 9.9 ಸೆಕೆಂಡುಗಳಲ್ಲಿ 100 ಕಿ.ಮೀ ವೇಗವನ್ನು ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಆರ್ಎಐ ಪ್ರಕಾರ ಈ ನೆಕ್ಸಾನ್ ಇವಿ ಮಾದರಿಯು 312 ಕಿ.ಮೀ ರೇಂಜ್ ಅನ್ನು ಹೊಂದಿದೆ.

ಇನ್ನು ಭಾರತದಲ್ಲಿ ಇಂಧನ ಬೆಲೆ ಗಗನಕ್ಕೇರಿದೆ. ಇದರಿಂದ ಪಾರಾಗಲು ಹೆಚ್ಚಿನ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯು ಹೆಚ್ಚಾಗುತ್ತಿದೆ. ಇದರ ನಡುವೆ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಕೂಡ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುತ್ತಿದೆ. ಇದರೊಂದಿಗೆ ಹಲವು ಎಲೆಕ್ಟ್ರಿಕ್ ಬ್ರ್ಯಾಂಡ್ ಗಳು ಕೂಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಬಿಡುಗಡೆಗೊಳಿಸುತ್ತಿದೆ. ಇನ್ನು ಈಗಾಗಲೇ ಹಲವು ಜನಪ್ರಿಯ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಾಗಿದೆ.

ಇದರಿಂದ ಟಾಟಾ ಮೊಟಾರ್ಸ್ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಮಾರಾಟವನ್ನು ಮತ್ತಷ್ಟು ಹೆಚ್ಚಿಸಲು ಲಾಂಗ್ ರೇಂಜ್ ನೊಂದಿಗೆ ಬಿಡುಗಡೆಗೊಳಿಸುತಿದೆ. ಭಾರತೀಯ ಮಾರುಕಟ್ಟೆಯಲ್ಲಿ ಈ ನೆಕ್ಸಾನ್ ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‍ಯುವಿಯು ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಮತ್ತು ಎಂಜಿ ಝಡ್ ಎಲೆಕ್ಟ್ರಿಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. ಮುಂದಿನ ದಿನಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತದೆ.


Click it and Unblock the Notifications