ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್(Tata Motors) ಕಂಪನಿಯು 2022ರಲ್ಲಿ ತನ್ನ ಪ್ರಮುಖ ಕಾರುಗಳ ಹೊಸ ಆವೃತ್ತಿಗಳ ಬಿಡುಗಡೆಗೆ ಸಿದ್ದವಾಗುತ್ತಿದ್ದು, ವರ್ಷದ ಆರಂಭದಲ್ಲೇ ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಪರಿಚಯಿಸುವ ಸುಳಿವು ನೀಡಿದೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್‌ಗಳ ಅಧಿಕೃತ ಬಿಡುಗಡೆಗೂ ಮುನ್ನ ಹೊಸ ಕಾರುಗಳ ಟೀಸರ್ ಹಂಚಿಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ವರ್ಷದ ಆರಂಭದೊಂದಿಗೆ ಪರಿಸರ ಸ್ನೇಹಿ ವಾಹನಗಳತ್ತ ಮಹತ್ವದ ಹೆಜ್ಜೆಯಿಟ್ಟಿದ್ದು, ದುಬಾರಿ ಇಂಧನಗಳ ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲಾಗುತ್ತಿದೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಪರಿಸರ ಸ್ನೇಹಿ ವಾಹನಗಳತ್ತ ಹೆಚ್ಚಿನ ಗಮನಹರಿಸುತ್ತಿರುವ ಪ್ರಮುಖ ಕಾರು ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಉತ್ಪಾದನೆಯನ್ನು ತಗ್ಗಿಸಿ ಎಲೆಕ್ಟ್ರಿಕ್, ಹೈಬ್ರಿಡ್ ಮತ್ತು ಸಿಎನ್‌ಜಿ ಮಾದರಿಗಳತ್ತ ಗಮನಹರಿಸುತ್ತಿದ್ದಾರೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಭವಿಷ್ಯದ ವಾಹನ ಮಾದರಿಗಳ ಬಗೆಗೆ ಹೆಚ್ಚಿನ ಒತ್ತು ನೀಡುತ್ತಿರುವ ವಾಹನ ಉತ್ಪಾದನಾ ಕಂಪನಿಗಳು ಹೊಸ ಬದಲಾವಣೆ ಕಾರಣವಾಗಿದ್ದು, ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್(Tata Motors) ಕಂಪನಿಯು ಸಹ ತನ್ನ ಪ್ರಮುಖ ಕಾರುಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಗಮನಸೆಳೆಯುತ್ತಿದೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಪ್ರಮುಖ ಕಾರು ಮಾದರಿಗಳಲ್ಲಿ ಈಗಾಗಲೇ ಎಲೆಕ್ಟ್ರಿಕ್ ಆವೃತ್ತಿಯನ್ನು ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಟಿಗೋರ್ ಮತ್ತು ಟಿಯಾಗೋ ಮಾದರಿಗಳಲ್ಲಿ ಸಿಎನ್‌ಜಿ(CNG) ಆವೃತ್ತಿಗಳನ್ನು ಮಾರಾಟ ಮಾಡುವ ಯೋಜನೆಯಲ್ಲಿದೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‍ಜಿ) ತಂತ್ರಜ್ಞಾನವನ್ನು ಅಳವಡಿಸಿ ಈಗಾಗಲೇ ಟಿಗೋರ್ ಮತ್ತು ಟಿಯಾಗೋ ಹೊಸ ಕಾರುಗಳನ್ನು ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಈ ತಿಂಗಳ ಕೊನೆಯಲ್ಲಿ ಬಿಡುಗಡೆ ಮಾಡಬಹುದಾಗಿದೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಹೊಸ ಸಿಎನ್‌ಜಿ ಕಾರು ಆವೃತ್ತಿಗಳು ಅತಿ ಕಡಿಮೆ ಮಾಲಿನ್ಯ ಉತ್ಪತ್ತಿಯೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸಲಿದ್ದು, ಇವು ಸಾಂಪ್ರಾದಾಯಿಕ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳಿಂತಲೂ ಅತಿ ಕಡಿಮೆ ನಿರ್ವಹಣಾ ವೆಚ್ಚ ಹೊಂದಿವೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಸದ್ಯ ಮಾರುಕಟ್ಟೆ ಸಿಎನ್‍ಜಿ ತಂತ್ರಜ್ಞಾನ ಪ್ರೇರಿತ ವಾಹನ ಮಾರಾಟದಲ್ಲಿ ಮಾರುತಿ ಸುಜುಕಿ ಕಂಪನಿಯು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ವಾಹನಗಳಿಗೆ ಪೂರಕವಾಗಿ ಸಿಎನ್‌ಜಿ ಪೂರೈಕೆಯ ಕೇಂದ್ರಗಳನ್ನು ಸಹ ಹೆಚ್ಚಿಸುತ್ತಿರುವುದು ಇತರೆ ಕಂಪನಿಗಳು ಹೊಸ ಕಾರು ಮಾದರಿಗಳತ್ತ ಗಮನಹರಿಸುತ್ತಿವೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಸಹ ತನ್ನ ಎಂಟ್ರಿ ಲೆವಲ್ ಹ್ಯಾಚ್‌ಬ್ಯಾಕ್ ಮಾದರಿಯಾದ ಟಿಯಾಗೋ ಮತ್ತು ಕಂಪ್ಯಾಕ್ಟ್ ಸೆಡಾನ್ ಮಾದರಿಯಾದ ಟಿಗೋರ್ ಆವೃತ್ತಿಗಳಲ್ಲಿ ಸಿಎನ್‌ಜಿ ತಂತ್ರಜ್ಞಾನವನ್ನು ಅಳವಡಿಸಲು ನಿರ್ಧರಿಸಿದ್ದು, ಹೊಸ ಕಾರು ಮಾದರಿಗಳ ಖರೀದಿಗಾಗಿ ಈಗಾಗಲೇ ಕಂಪನಿಯು ಡೀಲರ್ಸ್ ಮಟ್ಟದಲ್ಲಿ ಬುಕ್ಕಿಂಗ್ ಸ್ವಿಕರಿಸುತ್ತಿದೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಹೊಸ ಸಿಎನ್‌ಜಿ ಟಿಯಾಗೋ ಮತ್ತು ಟಿಗೋರ್ ಕಾರುಗಳ ಖರೀದಿಗಾಗಿ ಟಾಟಾ ಪ್ರಮುಖ ಡೀಲರ್ಸ್‌ಗಳಲ್ಲಿ ರೂ. 11 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ದಾಖಲಿಸಬಹುದಾಗಿದ್ದು, ಹೊಸ ಕಾರುಗಳು ಮುಂಬರುವ ಫೆಬ್ರವರಿ ಅಥವಾ ಮಾರ್ಚ್ ವೇಳೆಗೆ ಗ್ರಾಹಕರ ಕೈಸೇರಲಿವೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಸಿಎನ್‌ಜಿ ಮಾದರಿಗಳಿಗಾಗಿ ಕಂಪನಿಯು ಇನ್ನು ಅಧಿಕೃತ ಬುಕ್ಕಿಂಗ್ ಆರಂಭ ಮಾಡಿಲ್ಲವಾದರೂ ಆಸಕ್ತ ಗ್ರಾಹಕರು ಹೊಸ ಕಾರು ಜನವರಿ ಬಿಡುಗಡೆಯಾಗಬಹುದೆಂಬ ನೀರಿಕ್ಷೆಯೊಂದಿಗೆ ಬುಕ್ಕಿಂಗ್ ಸಲ್ಲಿಕೆಯನ್ನು ಮಾಡುತ್ತಿದ್ದು, ಹೊಸ ಆವೃತ್ತಿಗಳು ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ ರೂ. 1 ಲಕ್ಷದಷ್ಟು ದುಬಾರಿಯಾಗಿರಲಿವೆ ಎನ್ನಬಹುದು.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಕಂಪನಿಯು ಟಿಯಾಗೋ ಮತ್ತು ಟಿಗೋರ್ ಕಾರುಗಳ ಟಾಪ್ ಎಂಡ್ ಮಾದರಿಗಳಲ್ಲಿ ಹೊಸ ಸಿಎನ್‌ಜಿ ಮಾದರಿಯನ್ನು ಅಳವಡಿಸಬಹುದಾಗಿದ್ದು, ಹೊಸ ಆವೃತ್ತಿಗಳು ಉತ್ತಮ ಮೈಲೇಜ್ ಜೊತೆಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿವೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಿಗೋರ್ ಮತ್ತು ಟಿಯಾಗೋ ಕಾರುಗಳಲ್ಲಿ ಸದ್ಯಕ್ಕೆ ಪೆಟ್ರೋಲ್ ಮಾದರಿಗಳನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದ್ದು, ಬಿಎಸ್ 6 ಜಾರಿ ನಂತರ ಡೀಸೆಲ್ ಎಂಜಿನ್ ಅನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಹೊಸ ಕಾರುಗಳ ಡೀಸೆಲ್ ಎಂಜಿನ್ ಸ್ಥಗಿತದ ನಂತರ ಪೆಟ್ರೋಲ್ ಮಾದರಿಗಳನ್ನು ಸಹ ಮುಂಬರುವ ಕೆಲವೇ ವರ್ಷಗಳಲ್ಲಿ ಹಂತ-ಹಂತವಾಗಿ ಸ್ಥಗಿತಗೊಳಿಸುವ ನಿರ್ಧರಿಸಿರುವ ಕಾರು ಕಂಪನಿಗಳು ಸಂಪೂರ್ಣವಾಗಿ ಎಲೆಕ್ಟ್ರಿಕ್ ಮತ್ತು ನೈಸರ್ಗಿಕ ಅನಿಲಗಳಿಂದ ಚಾಲನೆ ಮಾಡಬಹುದಾದ ವಿವಿಧ ತಂತ್ರಜ್ಞಾನ ಪ್ರೇರಣೆಯ ವಾಹನಗಳನ್ನು ಬಿಡುಗಡೆ ಮಾಡುವ ಇರಾದೆಯಲ್ಲಿವೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಟಾಟಾ ಮೋಟಾರ್ಸ್ ಕಂಪನಿಯು 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರ ನೀಡುತ್ತಿದ್ದು, ಹೊಸದಾಗಿ ಪರಿಚಯಿಸಲಿರುವ ಸಿಎನ್‌ಜಿ ಆಯ್ಕೆಯು ಹೊಸ ಕಾರಿನ ಮಾರಾಟವನ್ನು ಹೆಚ್ಚಿಸಲಿದೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಸಿಎನ್‌ಜಿ ಆವೃತ್ತಿಯನ್ನು ಟಿಗೋರ್ ಮತ್ತು ಟಿಯಾಗೋ ಕಾರಿನ ಮಧ್ಯಮ ಕ್ರಮಾಂಕದ ಮಾದರಿಗಳಲ್ಲಿ ಜೋಡಣೆ ಮಾಡಲಾಗುತ್ತಿದ್ದು, ಹೊಸ ಕಾರು ಮಾದರಿಗಳು ಸ್ಟ್ಯಾಂಡರ್ಡ್ ಮಾದರಿಗಿಂತ ತುಸು ದುಬಾರಿಯಾದರೂ ಉತ್ತಮ ಇಂಧನ ದಕ್ಷತೆಯೊಂದಿಗೆ ನಿರ್ವಹಣಾ ವೆಚ್ಚವನ್ನು ತಗ್ಗಿಸಲಿವೆ.

ಟಿಯಾಗೋ ಮತ್ತು ಟಿಗೋರ್ ಸಿಎನ್‌ಜಿ ವರ್ಷನ್ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಸದ್ಯ ಟಿಯಾಗೋ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.07 ಲಕ್ಷ ಬೆಲೆ ಹೊಂದಿದ್ದರೆ ಟಿಗೋರ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.67 ಲಕ್ಷದಿಂದ ರೂ. 7.84 ಲಕ್ಷ ಬೆಲೆ ಹೊಂದಿದೆ.

Article Published On: Saturday, January 1, 2022, 11:06 [IST]
English summary
Tata motors teased upcoming tiago cng ahead of launch details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+