Just In
- 11 min ago Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- 26 min ago 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- 39 min ago ಹೊಸ ಸುಜುಕಿ V-Strom 800 DE ಬೈಕ್ ಬಿಡುಗಡೆ: ಬೆಲೆ ರೂ.10.30 ಲಕ್ಷ
- 1 hr ago ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Movies ಪುಟ್ಟಕ್ಕನ ಮನೆಗೆ ಕುಡಿದು ಬಂದ ಮುರಳಿಗೆ ಶಾಕ್; ಅಮ್ಮ ಅರೆಸ್ಟ್.. ಸಹನಾ ಮೇಲೆ ಗೂಬೆ ಕೂರಿಸಿದ ಪತಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಎಂಟಿಸಿ ಸೇರ್ಪಡೆಯಾಗಲಿವೆ 921 ಎಲೆಕ್ಟ್ರಿಕ್ ಬಸ್: ಟಾಟಾ ಮೋಟಾರ್ಸ್ ಪಾಲಾದ ಹೊಸ ಟೆಂಡರ್!
ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ (CESL) ವಿವಿಧ ರಾಜ್ಯಗಳ ಸಾರಿಗೆ ಸಂಸ್ಥೆಗಳಿಗಾಗಿ ಇವಿ ಬಸ್ ಟೆಂಡರ್ ಘೋಷಿಸಿದೆ.
Recommended Video
ಸಿಇಎಸ್ಎಲ್ ಟೆಂಡರ್‌ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಬಿಎಂಟಿಸಿ ಸಂಸ್ಥೆಗೆ ಒದಗಿಸಲಾಗುವ ಎಲೆಕ್ಟ್ರಿಕ್ ಬಸ್ ಟೆಂಡರ್ ಅನ್ನು ತನ್ನದಾಗಿಸಿಕೊಂಡಿದೆ.
ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯ ಟೆಂಡರ್‌ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಬಿಎಂಟಿಸಿ ಸಾರಿಗೆ ಸಂಸ್ಥೆಗೆ ಒಟ್ಟು 921 ಎಲೆಕ್ಟ್ರಿಕ್ ಬಸ್ ಒದಗಿಸುವ ಟೆಂಡರ್ ಪಡೆದುಕೊಂಡಿದ್ದು, ಹೊಸ ಯೋಜನೆಯಡಿ ಟಾಟಾ ಮೋಟಾರ್ಸ್ ಕಂಪನಿಯು 921 ಸ್ಟಾರ್ ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಿದೆ.
ಟಾಟಾ ಮೋಟಾರ್ಸ್ ಕಂಪನಿಯು ಈಗಾಗಲೇ ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯ ಟೆಂಡರ್‌ನಲ್ಲಿ ದೆಹಲಿ ಸಾರಿಗೆ ಸಂಸ್ಥೆಗಾಗಿ 1500 ಎಲೆಕ್ಟ್ರಿಕ್ ಬಸ್‌ಗಳನ್ನು ಮತ್ತು 1,180 ಎಲೆಕ್ಟ್ರಿಕ್ ಬಸ್‌ಗಳನ್ನು ಪಶ್ಚಿಮ ಬಂಗಾಳ ಸಾರಿಗೆ ಸಂಸ್ಥೆಗೆ ಒದಗಿಸುವ ಟೆಂಡರ್ ಪಡೆದುಕೊಂಡಿದೆ.
ಈ ಮೂಲಕ ಕಳೆದ ಒಂದು ತಿಂಗಳ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಒಟ್ಟು 3,600 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸುವ ಯೋಜನೆಯ ಟೆಂಡರ್ ತನ್ನದಾಗಿಸಿಕೊಂಡಿದ್ದು, ಟೆಂಡರ್ ಅನ್ವಯ ಕಂಪನಿಯು 12 ಮೀಟರ್ ಉದ್ದಳತೆಯ ಸ್ಟಾರ್ ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಿದೆ.
ಜೊತೆಗೆ ಎಲೆಕ್ಟ್ರಿಕ್ ಬಸ್ ಒದಗಿಸುವುದರ ಜೊತೆ 12 ವರ್ಷಗಳ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದು, ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿರುವ ಸ್ಟಾರ್ ಎಲೆಕ್ಟ್ರಿಕ್ ಬಸ್ ಮಾದರಿಗಳು ಅರಾಮದಾಯಕ ಮತ್ತು ಸುರಕ್ಷಿತ ಪ್ರಯಾಣವನ್ನು ಖಾತ್ರಿಪಡಿಸುತ್ತವೆ.
ಎಲೆಕ್ಟ್ರಿಕ್ ಬಸ್ ಮಾದರಿಗಳನ್ನು ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯ ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ ಬೃಹತ್ ಯೋಜನೆ ರೂಪಿಸಿದ್ದು, ವಿವಿಧ ರಾಜ್ಯಗಳಿಗಾಗಿ ಬರೋಬ್ಬರಿ 50 ಸಾವಿರ ಎಲೆಕ್ಟ್ರಿಕ್ ಬಸ್‌ಗಳನ್ನು ಖರೀದಿಸುತ್ತಿದೆ.
ಹೊಸ ಯೋಜನೆ ಅಡಿ ದೇಶಾದ್ಯಂತ ಪ್ರಮುಖ ರಾಜ್ಯಗಳು ನಗರ ಸಾರಿಗೆ ವಿಭಾಗದಲ್ಲಿ ಇವಿ ಬಸ್‌ಗಳನ್ನು ವೇಗವಾಗಿ ಅವಡಿಸಿಕೊಳ್ಳಲು ಸಹಕಾರಿಯಾಗಲಿದ್ದು, 2030 ರ ವೇಳೆಗೆ ಒಟ್ಟು 50 ಸಾವಿರ ಎಲೆಕ್ಟ್ರಿಕ್ ಬಸ್‌ಗಳ (ಇ-ಬಸ್‌ಗಳು) ನಿಯೋಜನೆಗೊಳಿಸಲು ಬೃಹತ್ ಯೋಜನೆಯನ್ನು ರೂಪಿಸುತ್ತಿದೆ.
ದೇಶಾದ್ಯಂತ ಪ್ರಮುಖ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಕಡಿತಗೊಳಿಸಲು ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಬದಲಾಗಿ ಇವಿ ಮಾದರಿಗಳನ್ನು ಹಂತ-ಹಂತವಾಗಿ ಅಳವಡಿಸಿಕೊಳ್ಳುತ್ತಿದ್ದು, ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ (CESL) ಸಂಸ್ಥೆಯು ವರ್ಲ್ಡ್ ರಿಸೋರ್ಸ್ ಇನ್‌ಸ್ಟಿಟ್ಯೂಟ್ ಇಂಡಿಯಾ (WRI ಇಂಡಿಯಾ) ಜೊತೆಗೂಡಿ ಇವಿ ಬಸ್‌ಗಳನ್ನು ಅಳವಡಿಸುತ್ತಿದೆ.
ಗ್ರ್ಯಾಂಡ್ ಚಾಲೆಂಜ್‌ನ ಯಶಸ್ಸಿನ ನಂತರ CESL ಸಂಸ್ಥೆಯು ಭಾರತದ ಪ್ರಮುಖ 25 ರಾಜ್ಯಗಳಲ್ಲಿ 2030ರ ವೇಳೆಗೆ 50,000 ಎಲೆಕ್ಟ್ರಿಕ್ ಬಸ್‌ಗಳ (ಇ-ಬಸ್‌ಗಳು) ನಿಯೋಜನೆಯನ್ನು ಮಾಡುವ ಗುರಿಹೊಂದಿದ್ದು, ಇದಕ್ಕಾಗಿ ಸುಮಾರು ರೂ. 80 ಸಾವಿರ ಕೋಟಿ ವೆಚ್ಚ ತಗುಲುವುದಾಗಿ ಅಂದಾಜಿಸಲಾಗಿದೆ.
ಹೆಚ್ಚುತ್ತಿರುವ ಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಮೊದಲು ಸಾರ್ವಜನಿಕ ಬಳಕೆಯ ಇವಿ ಬಸ್‌ಗಳನ್ನು ವಿದ್ಯುತ್ ಮಾದರಿಗಳ ಬದಲಿಸುವ ಅವಶ್ಯಕತೆಯನ್ನು ಅರಿತಿರುವ ಕನ್ವರ್ಜೆನ್ಸ್ ಎನರ್ಜಿ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯು ಹೊಸ ಯೋಜನೆಯಡಿ 50 ಸಾವಿರ ಇವಿ ಬಸ್‌ಗಳನ್ನು ಅಳವಡಿಸಿಕೊಳ್ಳಲು ಶಿಫಾರಸ್ಸು ಮಾಡಿದೆ.
ಡೀಸೆಲ್ ಮತ್ತು ಸಿಎನ್‌ಜಿ ಬಸ್‌ಗಳಿಗಿಂತಲೂ ಕ್ರಮವಾಗಿ ಶೇಕಡಾ 27 ಮತ್ತು ಶೇಕಡಾ 23 ಅಗ್ಗವಾಗಿರುವ ಎಲೆಕ್ಟ್ರಿಕ್ ಬಸ್ ಮಾದರಿಗಳು ಮಾಲಿನ್ಯ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಲಿದ್ದು, ಹಂತ-ಹಂತವಾಗಿ ಇವಿ ಬಸ್‌ಗಳ ಅಳವಡಿಕೆಯನ್ನು ಹೆಚ್ಚಿಸುವುದರಿಂದ ಮಾಲಿನ್ಯ ಪ್ರಮಾಣವು ತಗ್ಗುವ ವಿಶ್ವಾಸ ವ್ಯಕ್ತಪಡಿಸಲಾಗಿದೆ.
ಗ್ರ್ಯಾಂಡ್ ಚಾಲೆಂಜ್ ಅಡಿಯಲ್ಲಿ, CESL ಸಂಸ್ಥೆಯು ಮೊದಲ ಹಂತವಾಗಿ ಐದು ಪ್ರಮುಖ ಮಾಹಾನಗರಗಳಲ್ಲಿ 5,450 ಇ-ಬಸ್‌ಗಳನ್ನು ನಿಯೋಜಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಿದ್ದು, ಬೆಂಗಳೂರು, ದೆಹಲಿ, ಹೈದರಾಬಾದ್, ಕೋಲ್ಕತ್ತಾ ಮತ್ತು ಸೂರತ್‌ನಲ್ಲಿ ಹೊಸ ಯೋಜನೆಯ ಮೊದಲ ಹಂತದ ಇ-ಬಸ್‌ಗಳು ರೋಡಿಗಿಳಿಯಲಿವೆ.
ಹೊಸ ಯೋಜನೆ ಕುರಿತಂತೆ ಥಿಂಕ್-ಟ್ಯಾಂಕ್, ನೀತಿ ಆಯೋಗದೊಂದಿಗೂ ಗ್ರ್ಯಾಂಡ್ ಚಾಲೆಂಜ್‌ನ ವ್ಯಾಪ್ತಿಯನ್ನು ವಿಸ್ತರಿಸಿರುವ CESl ಸಂಸ್ಥೆಯು ಮತ್ತು ಮುಂದಿನ ಏಳು ವರ್ಷಗಳಲ್ಲಿ 50,000 ಇ-ಬಸ್‌ಗಳ ಬೇಡಿಕೆಯನ್ನು ಅಭಿವೃದ್ಧಿಪಡಿಸಲು ನಿರ್ದೇಶಿಸಿದೆ.
CESL ಸಂಸ್ಥೆಯ ಮೊದಲ ಹಂತದಲ್ಲಿ ಪರಿಚಯಿಸಲಾಗುತ್ತಿರುವ ಪ್ರಮುಖ ಐದು ರಾಜ್ಯಗಳಲ್ಲಿನ ಹಳೆಯ ಬಸ್‌ಗಳ ಡೇಟಾವನ್ನು ಸಿದ್ಧಪಡಿಸುತ್ತಿದ್ದು, ಹೊಸ ಇವಿ ಬಸ್‌ಗಳು ಸೇರ್ಪಡೆಯಾಗುತ್ತಿದ್ದಂತೆ ಹಳೆಯ ಡೀಸೆಲ್ ಬಸ್‌ಗಳನ್ನು ಹಂತ-ಹಂತವಾಗಿ ಬದಲಾಯಿಸಲಾಗುತ್ತದೆ.
ಇದಕ್ಕಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು 25 ರಾಜ್ಯಗಳಲ್ಲಿ ಸುಮಾರು 30,000 ಹಳೆಯ ಬಸ್‌ಗಳನ್ನು ಸ್ಕ್ರ್ಯಾಪ್ ಮಾಡಲು ಯೋಜನೆ ಸಿದ್ಧಪಡಿಸಲು CESL ಗೆ ವಿನಂತಿಸಿದ್ದು, ಗ್ರ್ಯಾಂಡ್ ಚಾಲೆಂಜ್ ಅಡಿ ಇ-ಬಸ್‌ಗಳ ಖರೀದಿಗಾಗಿ ವಿಶ್ವದ ಅತಿದೊಡ್ಡ ಟೆಂಡರ್ ಕರೆಯಲಾಗುತ್ತಿದೆ.
ಇವಿ ಬಸ್‌ಗಳ ಉತ್ಪಾದನೆಗಾಗಿ ಹೊಸ ಟೆಂಡರ್ ಕರೆಯಲಿರುವ CESL ಸಂಸ್ಥೆಯು ಸ್ಥಳೀಯ ವಾಹನ ಉತ್ಪಾದನಾ ಕಂಪನಿಗಳಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದು, ಇದು ಭಾರತದ ಇವಿ ವಾಹನ ಉತ್ಪಾದನಾ ಕಂಪನಿಗಳಿಗೆ ಇದು ಉತ್ತೇಜನ ಸಿಗಲಿದೆ.
ಎಲೆಕ್ಟ್ರಿಕ್ ವಾಹನಗಳು ವೇಗವಾಗಿ ಬೆಳೆಯುತ್ತಿರುವ ಹಿನ್ನಲೆಯಲ್ಲಿ ಅದಕ್ಕೆ ಪೂರಕವಾಗಿ ಚಾರ್ಜಿಂಗ್ ನಿಲ್ದಾಣಗಳ ಜಾಲವನ್ನು ಸಹ ಅಭಿವೃದ್ಧಿಪಡಿಸಲಾಗುತ್ತಿದ್ದು, ಮುಂದಿನ ಎರಡು ವರ್ಷದೊಳಗಾಗಿ 25 ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಬಳಕೆಯ ಇವಿ ಚಾರ್ಜಿಂಗ್ ನಿಲ್ದಾಣಗಳು ಕಾರ್ಯನಿರ್ವಹಣೆಗೆ ಸಿದ್ದವಾಗುತ್ತಿವೆ.