ಮಾರಾಟದಲ್ಲಿ ಜನಪ್ರಿಯ ಮಾರುತಿ ಬ್ರೆಝಾ ಎಸ್‍ಯುವಿಯನ್ನು ಹಿಂದಿಕ್ಕಿದ ಟಾಟಾ ನೆಕ್ಸಾನ್

ಕಳೆದ ಕೆಲವು ವರ್ಷಗಳಿಂದ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಮಾರಾಟದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಕುತೂಹಲಕಾರಿಯಾಗಿ, ದೇಶದ ಒಟ್ಟಾರೆ ಕಾರು ಮಾರಾಟಕ್ಕೆ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗವು ಗಮನಾರ್ಹ ಕೊಡುಗೆಯಾಗಿದೆ. ಹೊಸ ಕಾರು ಖರೀದಿಸಲು ಬಯಸುವ ಗ್ರಾಹಕರು ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಅತ್ಯುತ್ತಮ ಪೀಚರ್ಸ್, ಪ್ರಾಯೋಗಿಕತೆ, ಕಾರ್ಯಕ್ಷಮತೆ ಮತ್ತು ಹೆಚ್ಚಿನ ಸ್ಪೇಸ್ ನಿಂದ ಕೂಡಿರುತ್ತದೆ. ಈ ಕಾರಣದಿಂದ ಕಾಂಪ್ಯಾಕ್ಟ್ ಎಸ್‌ಯುವಿ ಮಾದರಿಗಳು ಹೆಚ್ಚು ಜನಪ್ರಿಯತೆಗಳಿಸುತ್ತಿದೆ, ಇನ್ನು ಸಣ್ಣ ಕಾರುಗಳಿಂದ ಕಾಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ಸೀಟ್ ಎತ್ತರವಿರುವುದರಿಂದ ಲಾಂಗ್ ರೈಡ್ ತೆರಳಲು ಉತ್ತಮವಾಗಿದೆ. ಟಾಟಾ ನೆಕ್ಸಾನ್ ಮಾದರಿಯು ಮಾರುತಿ ಬ್ರೆಝಾ ಕಾರಿಗೆ ಸೆಡ್ಡು ಹೊಡೆದು ಕಳೆದ ತಿಂಗಳಿನಲ್ಲಿ ಈ ಜನಪ್ರಿಯ ವಿಭಾಗದಲ್ಲಿ ಅತಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‌ಯುವಿಯಾಗಿ ಹೊರಹೊಮ್ಮಿದೆ.

ಮಾರಾಟದಲ್ಲಿ ಜನಪ್ರಿಯ ಮಾರುತಿ ಬ್ರೆಝಾ ಎಸ್‍ಯುವಿಯನ್ನು ಹಿಂದಿಕ್ಕಿದ ಟಾಟಾ ನೆಕ್ಸಾನ್

ಟಾಟಾ ನೆಕ್ಸಾನ್ ಕಳೆದ ತಿಂಗಳ ಮಾರಾಟದಲ್ಲಿ ದೇಶದಲ್ಲಿ ಹೆಚ್ಚು ಮಾರಾಟವಾದ ಕಾಂಪ್ಯಾಕ್ಟ್ ಎಸ್‍ಯುವಿಯಾಗಿದೆ. ಕಳೆದ ತಿಂಗಳ ಮಾರಾಟದಲ್ಲಿ ಜನಪ್ರಿಯ ಮಾರುತಿ ಬ್ರೆಝಾ ಎಸ್‍ಯುವಿಯನ್ನು ಹಿಂದಿಕ್ಕಿ ಟಾಟಾ ನೆಕ್ಸಾನ್ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದೆ. ಕಳೆದ ತಿಂಗಳು ನೆಕ್ಸಾನ್ ಕಾಂಪ್ಯಾಕ್ಟ್ ಮಾದರಿಯ 15,871 ಯೂನಿಟ್‌ಗಳು ಮಾರಾಟವಾಗಿತ್ತು. ಇನ್ನು ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 9,831 ಯುನಿಟ್ ಗಳು ಮಾರಾಟವಾಗಿತ್ತು. ಇಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.61 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಈ ಟಾಟಾ ನೆಕ್ಸಾನ್ (Tata Nexon) ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಸ್ವದೇಶಿ ಕಾರು ತಯಾರಕರಾದ ಟಾಟಾ ಮೋಟಾರ್ಸ್ ಈ ಕಾರನ್ನು ಹೆಚ್ಚು ಪೈಪೋಟಿ ಇರುವ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಟಾಟಾ ಮೋಟಾರ್ಸ್ ಹಲವಾರು ಕಾರಣಗಳಿಂದಾಗಿ ನೆಕ್ಸಾನ್ ಅನ್ನು ದೀರ್ಘಕಾಲದಿಂದಲೂ ಹೆಚ್ಚು ಮಾರಾಟವಾಗುತ್ತಿರುವ ಮಾದರಿಗಳಲ್ಲಿ ಒಂದಾಗಿದೆ.

ಗ್ಲೋಬಲ್ NCAP ಕ್ರ್ಯಾಶ್ ಟೆಸ್ಟ್ ನಲ್ಲಿ ಐದು ಸ್ಟಾರ್ ರೇಟಿಂಗ್ ಅನ್ನು ಪಡೆದ ಮಾದರಿಯಾಗಿದೆ. 2017ರ ಕೊನೆಯಲ್ಲಿ ಬಿಡುಗಡೆಯಾದ ನಂತರ ಸಬ್-ಫೋರ್-ಮೀಟರ್ ಎಸ್‍ಯುವಿಯು ಗ್ರಾಹಕರ ಗಮನ ಸೆಳೆಯಿತು. 2020ರ ಆರಂಭದಲ್ಲಿ ಫೇಸ್ ಲಿಫ್ಟ್ ನೆಕ್ಸಾನ್ ಆಗಮನದಿಂದ ಮಾರಾಟವನ್ನು ಮತ್ತಷ್ಟು ಹೆಚ್ಚಿಸಿತು. ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಬೇಡಿಕೆಯು ಹೆಚ್ಚಾಗುತ್ತಿದೆ. ಈ ಟಾಟಾ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯ ಪ್ಯೂರ್ ಸಿಲ್ವರ್ ಬಣ್ಣದ ಆಯ್ಜೆಯನ್ನು ಇತ್ತೀಚೆಗೆ ಸ್ಥಗಿತಗೊಳಿಸಿತ್ತು ಇದು ಎಲ್ಲಾ ರೂಪಾಂತರಗಳೊಂದಿಗೆ ಲಭ್ಯವಿತ್ತು.

ಈ ನೆಕ್ಸಾನ್ ಕಾಂಪ್ಯಾಕ್ಟ್ ಎಸ್‍ಯುವಿಯಲ್ಲಿ 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 170 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಇದರ ಜೊತೆಗೆ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಕೂಡ ನೀಡಲಾಗಿದೆ. ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 260 ಎನ್ಎಂ ಟಾರ್ಕ್ ಉತ್ಪಾದಿಸುಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಲಭ್ಯವಿದೆ

ಕಳೆದ ತಿಂಗಳ ಮಾರಾಟದಲ್ಲಿ 2022ರ ನವೆಂಬರ್ ತಿಂಗಳಿನಲ್ಲಿ ಮಾರುತಿ ಸುಜುಕಿ ಬ್ರೆಝಾ ಮಾದರಿಯ 11,324 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ 10,760 ಯುನಿಟ್‌ಗಳನ್ನು ಮಾರಾಟ ಮಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.5 ರಷ್ಟು ಬೆಳವಣಿಗೆಯಾಗಿದೆ. ಆದರೆ ಟಾಟಾ ನೆಕಾನ್ಸ್ ಮಾದರಿಗೆ ಭಾರೀ ಬೇಡಿಕೆಯೊಂದಿಗೆ ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದೆ. ಮಾರುತಿ ಸುಜುಕಿಯು 2022ರ ಮಾದರಿಯಲ್ಲಿ ಈ ಹಿಂದೆಂದಿಗಿಂತಲೂ ಹೆಚ್ಚಿನ ಬದಲಾವಣೆಗಳನ್ನು ಬಿಡುಗಡೆಗೊಳಿಸಿತ್ತು.

ಈ ಹೊಸ ಬ್ರೆಝಾ ಎಸ್‍ಯುವಿ ಮಾದರಿಯ ಎಲ್ಎಕ್ಸ್‌ಐ, ವಿಎಕ್ಸ್ಐ, ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ವೆಂಟ್‌ಗಳನ್ನು ಹೊಂದಿದೆ. ಹೊಸ ಮಾರುತಿ ಸುಜುಕಿ ಬ್ರೆಝಾ ಎಸ್‍ಯುವಿ ಮಾದರಿಯು ಈ ಬಾರಿ ಸಾಕಷ್ಟು ನವೀಕೃತ ಸೌಲಭ್ಯಗಳನ್ನು ಹೊಂದಿದೆ. ಇದು ಒಂದೇ ಎಂಜಿನ್ ಆಯ್ಕೆ ಪಡೆದುಕೊಂಡಿದೆ. ಹೊಸ ಕಾರಿನಲ್ಲಿ ಕಂಪನಿಯು 2022ರ ಎರ್ಟಿಗಾ ಮತ್ತು ಎಕ್ಸ್‌ಎಲ್6 ಮಾದರಿಯಲ್ಲಿ ನೀಡಲಾಗಿರುವ 1.5 ಲೀಟರ್ ಕೆ15ಸಿ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.

Most Read Articles

Kannada
English summary
Tata nexon beats maruti brezza in 2022 november sales details
Story first published: Saturday, December 10, 2022, 10:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X