ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಪ್ರಮುಖ ಪ್ರಯಾಣಿಕರ ಕಾರುಗಳ ಬೆಲೆಯಲ್ಲಿ ಹೆಚ್ಚಳ ಮಾಡಿದ್ದು, ಕಂಪನಿಯು ಇದೀಗ ಎಲೆಕ್ಟ್ರಿಕ್ ಕಾರು ಮಾದರಿಗಳ ಬೆಲೆಯಲ್ಲೂ ಹೆಚ್ಚಳ ಘೋಷಣೆ ಮಾಡಿದೆ. ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳು ಇವಿ ಕಾರು ಮಾರಾಟದಲ್ಲಿ ಉನ್ನತ ಸ್ಥಾನದಲ್ಲಿದ್ದು, ಕಂಪನಿಯು ಇದೀಗ ಎರಡು ಮಾದರಿಗಳ ಬೆಲೆಯಲ್ಲಿ ಪರಿಷ್ಕರಣೆ ಮಾಡಿದೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಹೆಚ್ಚುತ್ತಿರುವ ಬಿಡಿಭಾಗಗಳ ನಿರ್ವಹಣಾ ವೆಚ್ಚ ಸರಿದೂಗಿಸಲು ಪ್ರಮುಖ ಕಾರು ಕಂಪನಿಗಳು ತಮ್ಮ ಪ್ರಮುಖ ವಾಹನಗಳ ಬೆಲೆ ಹೆಚ್ಚಿಸುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಸಹ ತನ್ನ ಪ್ರಮುಖ ಕಾರುಗಳ ಬೆಲೆಯಲ್ಲಿ ಹೆಚ್ಚಳ ಮಾಡಿದೆ. ಹೊಸ ದರ ಪಟ್ಟಿಯಲ್ಲಿ ಎಲೆಕ್ಟ್ರಿಕ್ ಕಾರು ಮಾದರಿಗಳು ಸಹ ಸಾಕಷ್ಟು ದುಬಾರಿ ಬೆಲೆ ಪಡೆದುಕೊಂಡಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಸಾರವಾಗಿ ಶೇ. 1 ರಿಂದ ಶೇ. 3.38 ರಷ್ಟು ದರ ಹೆಚ್ಚಳ ಪಡೆದುಕೊಂಡಿವೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮಧ್ಯಮ ಕ್ರಮಾಂಕದ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಸಹ ಇದೀಗ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯನ್ನು ಹೆಚ್ಚಿಸಿದೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯು ಸಾಕಷ್ಟು ಏರಿಕೆಯಾಗಿದ್ದು, ಇದೀಗ ಟಾಟಾ ಪ್ರಮುಖ ಇವಿ ಕಾರುಗಳ ವಿವಿಧ ವೆರಿಯೆಂಟ್‌ಗಳು ಹೊಸ ದರ ಪಟ್ಟಿಯಲ್ಲಿ ಸಾಕಷ್ಟು ದುಬಾರಿ ಬೆಲೆ ಪಡೆದುಕೊಂಡಿವೆ. ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳು ರೂ. 35 ಸಾವಿರದಿಂದ ರೂ. 60 ಸಾವಿರದಷ್ಟು ದುಬಾರಿಯಾಗಿವೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಸದ್ಯ ನೆಕ್ಸಾನ್ ಸ್ಟ್ಯಾಂಡರ್ಡ್ ಎಲೆಕ್ಟ್ರಿಕ್ ಕಾರು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಮೂರು ವೆರಿಯೆಂಟ್‌ಗಳಲ್ಲೂ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್‌ಗಳಿವೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊಸ ಕಾರು ಆರಂಭಿಕವಾಗಿ ರೂ. 14.99 ಲಕ್ಷದಿಂದ ರೂ. 17.50 ಲಕ್ಷಕ್ಕೆ ಏರಿಕೆಯಾಗಿದ್ದು, ವಿವಿಧ ವೆರಿಯೆಂಟ್‌ಗಳನ್ನು ಆಧರಿಸಿ ರೂ. 35 ಸಾವಿರದಿಂದ ರೂ. 45 ಸಾವಿರದಷ್ಟು ದುಬಾರಿಯಾಗಿದೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಹಾಗೆಯೇ ಕಳೆದ ಎರಡು ತಿಂಗಳು ಹಿಂದೆ ಬಿಡುಗಡೆಯಾಗಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸಹ ಬೆಲೆ ಪರಿಷ್ಕರಣೆ ಪಡೆದುಕೊಂಡಿದ್ದು,ಟಾಟಾ ಕಂಪನಿಯು ಹೊಸ ಕಾರಿನ ಬೆಲೆಯಲ್ಲಿ ಇದೀಗ ಪ್ರತಿ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.60 ಸಾವಿರ ಹೆಚ್ಚಳ ಮಾಡಿದೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಈ ಮೊದಲು ರೂ. 17.74 ಲಕ್ಷ ದಿಂದ ರೂ. 19.24 ಲಕ್ಷ ಬೆಲೆ ಹೊಂದಿದ್ದ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಇದೀಗ ಹೊಸ ದರಪಟ್ಟಿಯಲ್ಲಿ ರೂ. 18.34 ಲಕ್ಷದಿಂದ ರೂ. 19. 84 ಲಕ್ಷ ಬೆಲೆ ಹೊಂದಿದ್ದು, ಸೆಮಿಕಂಡಕ್ಟರ್ ಕೊರತೆಯ ಪರಿಣಾಮ ಹೊಸ ಕಾರುಗಳ ಬೆಲೆಯಲ್ಲಿ ನಿರಂತರವಾಗಿ ಹೆಚ್ಚಳ ಮಾಡಲಾಗುತ್ತಿದೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಇನ್ನು ಹೊಸ ನೆಕ್ಸಾನ್ ಇವಿ ಮಾಕ್ಸ್ ಕಾರು ಮಾದರಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್ ಮತ್ತು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದ್ದು, ಹೊಸ ಕಾರು ಫಾಸ್ಟ್ ಚಾರ್ಜಿಂಗ್ ಮತ್ತು ಸ್ಟ್ಯಾಂಡರ್ಡ್ ಚಾರ್ಜರ್ ಸೌಲಭ್ಯ ಆಧರಿಸಿ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ಎನ್ನುವ ನಾಲ್ಕು ವೆರಿಯೆಂಟ್‌ಗಳನ್ನು ಹೊಂದಿದೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಲಾಗಿದ್ದು, ಇದರಲ್ಲಿ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳು ಸಾಮಾನ್ಯ ಮಾದರಿಗಿಂತಲೂ ತುಸು ಹೆಚ್ಚುವರಿ ಬೆಲೆ ಹೊಂದಿವೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

3.3 kW ಚಾರ್ಜಿಂಗ್ ಆಯ್ಕೆ ಹೊಂದಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸೊನ್ನೆಯಿಂದ ಶೇ.100 ರಷ್ಟು ಚಾರ್ಜ್ ಮಾಡಲು ಕನಿಷ್ಠ 14 ರಿಂದ 15 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆಗಲು ಕನಿಷ್ಠ 5 ರಿಂದ 6 ಗಂಟೆಗಳ ಕಾಲ ಸಮಯಾವಕಾಶ ತೆಗದುಕೊಳ್ಳುತ್ತದೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಒಂದೇ ವೇಳೆ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯನ್ನು ಟಾಟಾ ಪವರ್ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜ್ ಮಾಡುವುದಾದರೆ ಸೊನ್ನೆಯಿಂದ ಶೇ.80 ಚಾರ್ಜ್ ಮಾಡಲು ಕೇವಲ 50 ನಿಮಿಷ ತೆಗೆದುಕೊಳ್ಳಲಿದ್ದು, ಹೋಂ ಚಾರ್ಜರ್ ಸೌಲಭ್ಯವು ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುತ್ತದೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಟಾಟಾ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ಸ್ ಬೆಲೆಗಳಲ್ಲಿ ಭಾರೀ ಹೆಚ್ಚಳ

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಇಕೋ ಮೋಡ್‌ನಲ್ಲಿ 437 ಕಿ.ಮೀ ಮೈಲೇಜ್ ಹೊಂದಿದ್ದರೂ ಅದು ವಿವಿಧ ಡ್ರೈವಿಂಗ್ ಮೋಡ್ ಮತ್ತು ರಸ್ತೆ ಸೌಲಭ್ಯಕ್ಕೆ ಅನುಗುಣವಾಗಿ ರಿಯಲ್ ವರ್ಲ್ಡ್ ಮೈಲೇಜ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಲಿದ್ದು, ಇದು ವಿವಿಧ ಡ್ರೈವ್ ಮೋಡ್ ಮತ್ತು ರಸ್ತೆ ಸೌಲಭ್ಯಗಳಿಗೆ ಅನುಗುಣವಾಗಿ ಕನಿಷ್ಠ 300ರಿಂದ 320 ಕಿ.ಮೀ ಮೈಲೇಜ್ ಅನ್ನು ಅರಾಮವಾಗಿ ಪಡೆದುಕೊಳ್ಳಬಹುದು.

Most Read Articles

Kannada
English summary
Tata nexon ev and nexon ev max price hiked up to rs 60000
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X