ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ದೇಶಾದ್ಯಂತ ದುಬಾರಿ ಇಂಧನಗಳ ಪರಿಣಾಮ ಇವಿ ವಾಹನಗಳಿಗೆ ಉತ್ತಮ ಬೇಡಿಕೆ ಬರುತ್ತಿದೆಯಾದರೂ ಇತ್ತೀಚೆಗೆ ದಾಖಲಾಗುತ್ತಿರುವ ಎಲೆಕ್ಟ್ರಿಕ್ ವಾಹನಗಳಲ್ಲಿನ ಅಗ್ನಿ ಅವಘಡ ಪ್ರಕರಣಗಳು ಇವಿ ಬಳಕೆದಾರರನ್ನು ಗೊಂದಲಕ್ಕೀಡು ಮಾಡುತ್ತಿವೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಹೌದು, ಪರಿಸರ ಸ್ನೇಹಿ ಇವಿ ವಾಹನಗಳ ಬಳಕೆಗೆ ಗ್ರಾಹಕರಲ್ಲಿ ಆಸಕ್ತಿ ಇದ್ದರೂ ಕೂಡಾ ಕೆಲವು ಅಹಿತಕರ ಘಟನೆಗಳಿಂದ ಹಲವಾರು ಗ್ರಾಹಕರು ಇನ್ನು ಕೂಡಾ ಇಂಧನ ಚಾಲಿತ ವಾಹನಗಳೇ ಉತ್ತಮ ಎನ್ನುವ ಅಭಿಪ್ರಾಯ ಹೊಂದಿದ್ದಾರೆ. ಹೀಗಾಗಿ ದೇಶಾದ್ಯಂತ ಇವಿ ವಾಹನ ಮಾರಾಟ ಪ್ರಮಾಣವು ಇನ್ನು ಕೂಡಾ ತೀರಾ ಕೆಳಮಟ್ಟದಲ್ಲಿದ್ದೂ, ಇವಿ ಸುರಕ್ಷತೆಯನ್ನು ಪ್ರಶ್ನೆ ಮಾಡುವಂತಹ ಕೆಲವು ಘಟನೆಗಳೇ ಇದಕ್ಕೆ ಪ್ರಮುಖ ಕಾರಣವಾಗಿವೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಕೇವಲ ಸ್ಟಾರ್ಟ್ ಅಪ್ ಕಂಪನಿಗಳ ವಾಹನಗಳಲ್ಲಿ ಮಾತ್ರವಲ್ಲ ಪ್ರತಿಷ್ಠಿತ ಕಂಪನಿಗಳ ಇವಿ ಕಾರುಗಳಲ್ಲೂ ತಾಂತ್ರಿಕ ಸಮಸ್ಯೆಗಳು ಕಂಡುಬರುತ್ತಿದ್ದು, ಇತ್ತೀಚೆಗೆ ಟಾಟಾ ನಿರ್ಮಾಣದ ಜನಪ್ರಿಯ ನೆಕ್ಸಾನ್ ಇವಿ ಕಾರಿನಲ್ಲೂ ಕೂಡಾ ಬೆಂಕಿ ಹೊತ್ತಿಕೊಂಡಿದೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಮುಂಬೈ ಉಪನಗರದಲ್ಲಿರುವ ಪಂಚವಟಿ ಹೋಟೆಲ್ ಬಳಿಯ ವಸೈ ವೆಸ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿರುವ ನೆಕ್ಸಾನ್ ಇವಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಕಾರನ್ನು ನಡುರಸ್ತೆಯಲ್ಲಿಯೇ ನಿಲ್ಲಿಸಿರುವ ನೆಕ್ಸಾನ್ ಇವಿ ಮಾಲೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಯು ಬೆಂಕಿ ನಂದಿಸಿದ್ದು, ಘಟನೆಯಲ್ಲಿ ಹೊಸ ಕಾರು ಶೇ.75 ರಷ್ಟು ಸುಟ್ಟು ಕರಕವಾಗಿದೆ. ಬ್ಯಾಟರಿ ಸೆಲ್‌ಗಳಲ್ಲಿ ಕಂಡುಬಂದಿರುವ ಬೆಂಕಿ ಜಾಲ್ವೆಯು ಕೆಲವೇ ನಿಮಿಷಗಳಲ್ಲಿ ಹೊತ್ತಿಉರಿದಿದೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಆದರೆ ಘಟನೆಗೆ ನಿಖರವಾದ ಕಾರಣ ಇದುವರೆಗೆ ಪತ್ತೆಯಾಗಿಲ್ಲ. ಘಟನೆ ಕುರಿತು ಟಾಟಾ ಮೋಟಾರ್ಸ್ ಕಂಪನಿಯು ಕೂಡಾ ಸ್ವಯಂಪ್ರೇರಿತವಾಗಿ ತಾಂತ್ರಿಕ ಸಮಸ್ಯೆಗಳ ಕುರಿತಾಗಿ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಘಟನೆ ನಿಖರ ಕಾರಣವನ್ನು ಪತ್ತೆ ಹಚ್ಚುವುದಾಗಿ ಭರವಸೆ ನೀಡಿದೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಟಾಟಾ ಮೋಟಾರ್ಸ್ ಕಂಪನಿಯು ದೇಶಾದ್ಯಂತ ಇದುವರೆಗೆ ಸುಮಾರು 30 ಸಾವಿರಕ್ಕೂ ಹೆಚ್ಚು ನೆಕ್ಸಾನ್ ಇವಿ ಕಾರುಗಳನ್ನು ಮಾರಾಟ ಮಾಡಿದ್ದು, ಇದುವರೆಗೆ ಯಾವುದೊಂದು ಕಾರಿನಲ್ಲೂ ಇಂತಹ ಸಮಸ್ಯೆಗಳು ಕಂಡುಬಂದಿಲ್ಲ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಇದೇ ಮೊದಲ ಬಾರಿಗೆ ನೆಕ್ಸಾನ್ ಇವಿ ಕಾರು ಮಾದರಿಯೊಂದು ಬೆಂಕಿಗಾಹುತಿಯಾಗಿರುವ ಬಗ್ಗೆ ಟಾಟಾ ಮೋಟಾರ್ಸ್ ಕಂಪನಿಯು ಅಚ್ಚರಿ ವ್ಯಕ್ತಪಡಿಸಿದ್ದು, ಹೊಸ ಇವಿ ಕಾರು ಉತ್ಪಾದನೆಯಲ್ಲಿ ಕಂಪನಿಯು ಗರಿಷ್ಠ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಂಡಿರುವುದಾಗಿ ಹೇಳಿಕೊಂಡಿದೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಸದ್ಯ ಹೊಸ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿನ ಅಗ್ನಿ ಅವಘಡ ಪ್ರಕರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ನೆಕ್ಸಾನ್ ಇವಿ ಗ್ರಾಹಕರಿಗೆ ಯಾವುದೇ ಗೊಂದಲಕ್ಕೀಡಾಗದಂತೆ ಟಾಟಾ ಮೋಟಾರ್ಸ್ ಕಂಪನಿಯು ಮನವಿ ಮಾಡಿದೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಇದುವರೆಗೆ ಮಾರಾಟ ಮಾಡಲಾದ ಸುಮಾರು 30 ಸಾವಿರ ಇವಿ ಕಾರುಗಳಿಂದ ಬರೋಬ್ಬರಿ 10 ಕೋಟಿ ಕಿ.ಮೀ ಸಂಚಾರವನ್ನು ಪೂರ್ಣಗೊಳಿಸಿದ್ದು, ಭವಿಷ್ಯ ವಾಹನ ಮಾದರಿಗಳ ಮೇಲೆ ಕಂಪನಿಯು ವಿಶೇಷ ಗಮನಹರಿಸಿರುವುದಾಗಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಟಾಟಾ ಕಂಪನಿಯು ಇತ್ತೀಚೆಗೆ ನೆಕ್ಸಾನ್ ಫೇಸ್‌ಲಿಫ್ಟ್ ಆವೃತ್ತಿಯಾದ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ ಮಾಡಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಂಡಿದೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ಕಾರಿಗಾಗಿ ಮ್ಯಾಕ್ಸ್ ನೇಮ್‌ಪ್ಲೆಮ್ ಬಳಕೆ ಮಾಡಲಾಗಿದೆ. ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ಎನ್ನುವ ವೆರಿಯೆಂಟ್‌ಗಳನ್ನು ಹೊಂದಿದ್ದು, ಆರಂಭಿಕವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 17.74 ಲಕ್ಷ ಬೆಲೆ ಹೊಂದಿದೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ ಕಂಪನಿಯು ಎರಡು ಮಾದರಿಯ ಚಾರ್ಜಿಂಗ್ ಆಯ್ಕೆಗಳನ್ನು ನೀಡಿದ್ದು, 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಿದೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳು ಸಾಮಾನ್ಯ ಮಾದರಿಗಿಂತ ತುಸು ಹೆಚ್ಚುವರಿ ಬೆಲೆ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾಗಿದೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

3.3 kW ಚಾರ್ಜಿಂಗ್ ಆಯ್ಕೆ ಹೊಂದಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸೊನ್ನೆಯಿಂದ ಶೇ.100 ರಷ್ಟು ಚಾರ್ಜ್ ಮಾಡಲು ಕನಿಷ್ಠ 14 ರಿಂದ 15 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆಗಲು ಕನಿಷ್ಠ 5 ರಿಂದ 6 ಗಂಟೆಗಳ ಕಾಲ ಸಮಯಾವಕಾಶ ತೆಗದುಕೊಳ್ಳುತ್ತದೆ.

ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು!

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

Most Read Articles

Kannada
English summary
Tata nexon ev fire in mumbai to be investigated details
Story first published: Thursday, June 23, 2022, 19:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X