ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಸ್‌ಯುವಿ ಮಾದರಿಗಳಲ್ಲಿ ವಿಶೇಷ ಆವೃತ್ತಿಗಳನ್ನು ಬಿಡುಗಡೆ ಮಾಡಿದೆ.

ನೆಕ್ಸಾನ್, ನೆಕ್ಸಾನ್ ಇವಿ, ಹ್ಯಾರಿಯರ್ ಮತ್ತು ಸಫಾರಿ ಎಸ್‌ಯವಿಗಳಿಗಾಗಿ ಜೆಟ್ ಎಡಿಷನ್ ಪರಿಚಯಿಸಿದೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಹೊಸದಾಗಿ ಬಿಡುಗಡೆಯಾಗಿರುವ ಟಾಟಾ ಜೆಟ್ ಎಡಿಷನ್‌ಗಳು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚಿನ ಫೀಚರ್ಸ್‌ ಮತ್ತು ವಿಶೇಷ ಬಣ್ಣದ ಆಯ್ಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ತಾಂತ್ರಿಕ ಸೌಲಭ್ಯಗಳು ಗ್ರಾಹಕರಿಗೆ ಪ್ರೀಮಿಯಂ ಅನುಭವ ನೀಡಲಿವೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಜೆಟ್ ಆವೃತ್ತಿಯಲ್ಲಿ ಸ್ಟ್ಯಾಂಡರ್ಡ್ ಮಾದರಿಗಿಂತಲೂ ವಿಭಿನ್ನವಾಗಿ ಕಾಣಲು ಹೊರಭಾಗ ಮತ್ತು ಒಳಭಾಗವನ್ನು ನವೀಕರಿಸಲಾಗಿದ್ದು, ನೆಕ್ಸಾನ್ ಇವಿ ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಜೆಡ್ ಮತ್ತು ಎಕ್ಸ್‌ಜೆಡ್ ಪ್ಲಸ್ ಆವೃತ್ತಿಗಳಲ್ಲಿ ಜೆಟ್ ಎಡಿಷನ್ ಬಿಡುಗಡೆ ಮಾಡಲಾಗಿದೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಜೆಟ್ ಎಡಿಷನ್ ಆರಂಭಿಕ ಮಾದರಿಯು ರೂ. 17.50 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ರೂ. 19.54 ಲಕ್ಷ ಬೆಲೆ ಹೊಂದಿದೆ. ಹೊಸ ಮಾದರಿಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ವಿಶೇಷವಾದ ಸ್ಟಾರ್‌ಲೈಟ್ ಡ್ಯುಯಲ್ ಬಣ್ಣದೊಂದಿಗೆ ಪರಿಚಯಿಸಿದ್ದು, ಸ್ಟ್ಯಾಂಡರ್ಡ್ ಮಾದರಿಗಳಲ್ಲಿ ನೀಡಲಾಗಿರುವ ಬ್ಲ್ಯೂ ಆಕ್ಸೆಂಟ್ ಬದಲಾಗಿ ವೈಟ್ ಆಕ್ಸೆಂಟ್ ನೀಡಲಾಗಿದೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಹೊಸ ಆವೃತ್ತಿಯಲ್ಲಿರುವ ಗ್ರಿಲ್‌ನಲ್ಲಿರುವ ಇವಿ ಲೋಗೋವನ್ನು ಹೊಸ ಡಾರ್ಕ್ ಕ್ರೋಮ್ ಫಿನಿಶ್‌ನಲ್ಲಿ ಇರಿಸಲಾಗಿದ್ದು, ಬಂಪರ್‌ನಲ್ಲಿ ಕಂಡುಬರುವ ಟ್ರೈ-ಏರೊ ಮತ್ತು ಫಾಗ್ ಲ್ಯಾಂಪ್‌ಗಳಲ್ಲಿ ಸಿಲ್ವರ್ ಆಕ್ಸೆಂಟ್, 16-ಇಂಚಿನ ಮಿಶ್ರಲೋಹದ ಚಕ್ರಗಳನ್ನ ನೀಡವಾಗಿದೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಒಳಭಾಗದಲ್ಲಿ ಕಪ್ಪು ಬಣ್ಣದ ಥೀಮ್ ಹೊಂದಿದ್ದು, ಇದರ ಡ್ಯಾಶ್‌ಬೋರ್ಡ್ ಮತ್ತು ಡೋರ್ ಪ್ಯಾನೆಲ್‌ಗಳಲ್ಲಿ ಬ್ರೊನ್ಜ್ ಆಕ್ಸೆಂಟ್ ಅನ್ನು ನೀಡಲಾಗಿದೆ. ಹಾಗೆಯೇ ಲೆದರ್ ಡೋರ್ ಪ್ಯಾಡ್‌ಗಳು ಹೊಸ ಗ್ರಾನೈಟ್ ಕಪ್ಪು ಬಣ್ಣದಲ್ಲಿ, ಎಸಿ ವೆಂಟ್‌ಗಳು ಮತ್ತು ಸೆಂಟರ್ ಕನ್ಸೋಲ್‌ನ ಬಳಿ ಬ್ಲ್ಯೂ ಆಕ್ಸೆಂಂಟ್ ಗ್ಲಾಸ್ ಬ್ಲ್ಯಾಕ ಮತ್ತು ಬಿಳಿ ಬಣ್ಣದ ಆಸನಗಳಲ್ಲಿ ಬ್ರೊನ್ಜ್ ಜೆಟ್ ಸ್ಟಿಚಿಂಗ್ ನೀಡಲಾಗಿದೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಪ್ರತಿಸ್ಪರ್ಧಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಕಂಪನಿಯು ಇದೀಗ ತನ್ನ ಪ್ರಮುಖ ಎಸ್‌ಯುವಿ ಮಾದರಿಗಳಲ್ಲಿ ಜೆಟ್ ಎಡಿಷನ್ ಬಿಡುಗಡೆ ಮಾಡಿದೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಇನ್ನು ಹೊಸ ನೆಕ್ಸಾನ್ ಇವಿ ಮಾಕ್ಸ್ ಕಾರು ಮಾದರಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್ ಮತ್ತು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದ್ದು, ಹೊಸ ಕಾರು ಫಾಸ್ಟ್ ಚಾರ್ಜಿಂಗ್ ಮತ್ತು ಸ್ಟ್ಯಾಂಡರ್ಡ್ ಚಾರ್ಜರ್ ಸೌಲಭ್ಯ ಆಧರಿಸಿ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ಎನ್ನುವ ನಾಲ್ಕು ವೆರಿಯೆಂಟ್‌ಗಳನ್ನು ಹೊಂದಿದೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಲಾಗಿದ್ದು, ಇದರಲ್ಲಿ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳು ಸಾಮಾನ್ಯ ಮಾದರಿಗಿಂತಲೂ ತುಸು ಹೆಚ್ಚುವರಿ ಬೆಲೆ ಹೊಂದಿವೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

3.3 kW ಚಾರ್ಜಿಂಗ್ ಆಯ್ಕೆ ಹೊಂದಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸೊನ್ನೆಯಿಂದ ಶೇ.100 ರಷ್ಟು ಚಾರ್ಜ್ ಮಾಡಲು ಕನಿಷ್ಠ 14 ರಿಂದ 15 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆಗಲು ಕನಿಷ್ಠ 5 ರಿಂದ 6 ಗಂಟೆಗಳ ಕಾಲ ಸಮಯಾವಕಾಶ ತೆಗದುಕೊಳ್ಳುತ್ತದೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಒಂದೇ ವೇಳೆ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯನ್ನು ಟಾಟಾ ಪವರ್ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜ್ ಮಾಡುವುದಾದರೆ ಸೊನ್ನೆಯಿಂದ ಶೇ.80 ಚಾರ್ಜ್ ಮಾಡಲು ಕೇವಲ 50 ನಿಮಿಷ ತೆಗೆದುಕೊಳ್ಳಲಿದ್ದು, ಹೋಂ ಚಾರ್ಜರ್ ಸೌಲಭ್ಯವು ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುತ್ತದೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಟಾಟಾ ನೆಕ್ಸಾನ್ ಇವಿ ಜೆಟ್ ಎಡಿಷನ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಇಕೋ ಮೋಡ್‌ನಲ್ಲಿ 437 ಕಿ.ಮೀ ಮೈಲೇಜ್ ಹೊಂದಿದ್ದರೂ ಅದು ವಿವಿಧ ಡ್ರೈವಿಂಗ್ ಮೋಡ್ ಮತ್ತು ರಸ್ತೆ ಸೌಲಭ್ಯಕ್ಕೆ ಅನುಗುಣವಾಗಿ ರಿಯಲ್ ವರ್ಲ್ಡ್ ಮೈಲೇಜ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಲಿದ್ದು, ಇದು ವಿವಿಧ ಡ್ರೈವ್ ಮೋಡ್ ಮತ್ತು ರಸ್ತೆ ಸೌಲಭ್ಯಗಳಿಗೆ ಅನುಗುಣವಾಗಿ ಕನಿಷ್ಠ 300ರಿಂದ 320 ಕಿ.ಮೀ ಮೈಲೇಜ್ ಅನ್ನು ಅರಾಮವಾಗಿ ಪಡೆದುಕೊಳ್ಳಬಹುದು.

Most Read Articles

Kannada
English summary
Tata nexon ev jet edition launched details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X