ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಫೇಸ್‌ಲಿಫ್ಟ್ ಮಾದರಿಯಾದ ನೆಕ್ಸಾನ್ ಇವಿ ಮ್ಯಾಕ್ಸ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಇವಿ ಕಾರು ಮಾದರಿಯು ವಿಸ್ತರಿತ ಬ್ಯಾಟರಿ ರೇಂಜ್ ಜೊತೆಗೆ ಹಲವಾರು ಹೊಸ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಂಡಿದ್ದು, ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ಕಾರಿಗಾಗಿ ಮ್ಯಾಕ್ಸ್ ನೇಮ್‌ಪ್ಲೆಮ್ ಬಳಕೆ ಮಾಡಲಾಗಿದೆ. ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ಎನ್ನುವ ವೆರಿಯೆಂಟ್‌ಗಳನ್ನು ಹೊಂದಿದ್ದು, ಆರಂಭಿಕವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 17.74 ಲಕ್ಷ ಬೆಲೆ ಹೊಂದಿದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ ಕಂಪನಿಯು ಎರಡು ಮಾದರಿಯ ಚಾರ್ಜಿಂಗ್ ಆಯ್ಕೆಗಳನ್ನು ನೀಡಿದ್ದು, 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಿದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳು ಸಾಮಾನ್ಯ ಮಾದರಿಗಿಂತ ತುಸು ಹೆಚ್ಚುವರಿ ಬೆಲೆ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾಗಿದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

3.3 kW ಚಾರ್ಜಿಂಗ್ ಆಯ್ಕೆ ಹೊಂದಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸೊನ್ನೆಯಿಂದ ಶೇ.100 ರಷ್ಟು ಚಾರ್ಜ್ ಮಾಡಲು ಕನಿಷ್ಠ 14 ರಿಂದ 15 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆಗಲು ಕನಿಷ್ಠ 5 ರಿಂದ 6 ಗಂಟೆಗಳ ಕಾಲ ಸಮಯಾವಕಾಶ ತೆಗದುಕೊಳ್ಳುತ್ತದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ಒಂದೇ ವೇಳೆ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯನ್ನು ಟಾಟಾ ಪವರ್ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಚಾರ್ಜ್ ಮಾಡುವುದಾದರೆ ಸೊನ್ನೆಯಿಂದ ಶೇ.80 ಚಾರ್ಜ್ ಮಾಡಲು ಕೇವಲ 50 ನಿಮಿಷ ತೆಗೆದುಕೊಳ್ಳಲಿದ್ದು, ಹೋಂ ಚಾರ್ಜರ್ ಸೌಲಭ್ಯವು ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುತ್ತದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಇಕೋ ಮೋಡ್‌ನಲ್ಲಿ 437 ಕಿ.ಮೀ ಮೈಲೇಜ್ ಹೊಂದಿದ್ದರೂ ಅದು ವಿವಿಧ ಡ್ರೈವಿಂಗ್ ಮೋಡ್ ಮತ್ತು ರಸ್ತೆ ಸೌಲಭ್ಯಕ್ಕೆ ಅನುಗುಣವಾಗಿ ರಿಯಲ್ ವರ್ಲ್ಡ್ ಮೈಲೇಜ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಲಿದ್ದು, ಇದು ವಿವಿಧ ಡ್ರೈವ್ ಮೋಡ್ ಮತ್ತು ರಸ್ತೆ ಸೌಲಭ್ಯಗಳಿಗೆ ಅನುಗುಣವಾಗಿ ಕನಿಷ್ಠ 300ರಿಂದ 320 ಕಿ.ಮೀ ಮೈಲೇಜ್ ಅನ್ನು ಅರಾಮವಾಗಿ ಪಡೆದುಕೊಳ್ಳಬಹುದು ಎನ್ನಲಾಗಿದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ಹೊಸ ನೆಕ್ಸಾನ್ ಇವಿ ಮಾಕ್ಸ್ ಮಾದರಿಯಲ್ಲಿ ಹೆಚ್ಚಿನ ಮೈಲೇಜ್ ರೇಂಜ್ ಹೊಂದಿರುವ ಮಾದರಿಗಾಗಿ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಕಂಪನಿಯು ಗ್ರಾಹಕರ ಬೇಡಿಕೆ ಅನುಸಾರವಾಗಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಅಭಿವೃದ್ದಿಗೊಳಿಸಿದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ಇದರೊಂದಿಗೆ ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಹೊಂದಿರುವ ನೆಕ್ಸಾನ್ ಇವಿ ಮಾಕ್ಸ್ ಮಾದರಿಯು 95kW ಎಲೆಕ್ಟ್ರಿಕ್ ಮೋಟಾರ್ ಮೂಲಕವೇ ಇದೀಗ 143 ಬಿಎಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, ಇದು ಹಳೆಯ ಮಾದರಿಗಿಂತಲೂ 14 ಬಿಎಚ್‌ಪಿ ಮತ್ತು 5 ಎನ್ಎಂ ಟಾರ್ಕ್ ಹೆಚ್ಚಳವಾಗಿದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ಹೊಸ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ವಿಸ್ತರಿತ ಬ್ಯಾಟರಿ ಪ್ಯಾಕ್ ಜೊತೆಗೆ ಪ್ರಮುಖ ಸೇಫ್ಟಿ ಫೀಚರ್ಸ್‌ಗಳನ್ನು ಸಹ ಉನ್ನತೀಕರಿಸಿದ್ದು, ಹೊಸ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಆಗಿ ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಏರ್ ಪ್ಯೂರಿಫೈರ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ವೆಂಟಿಲೆಟೆಡ್ ಸೀಟುಗಳು ಸೇರಿದಂತೆ ಕೆಲವು ಹೊಸ ತಾಂತ್ರಿಕ ಅಂಶಗಳನ್ನು ಸೇರ್ಪಡೆಗೊಳಿಸಿದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಮಾದರಿಯ ಬಿಡುಗಡೆಯೊಂದಿಗೆ ಸ್ಟ್ಯಾಂಡರ್ಡ್ ನೆಕ್ಸಾನ್ ಇವಿ ಮಾದರಿಯನ್ನು 30kWh ಬ್ಯಾಟರಿ ಪ್ಯಾಕ್‌ನೊಂದಿಗೆ ಮಾರಾಟ ಮುಂದುವರಿಸಲಿದ್ದು, ನೆಕ್ಸಾನ್ ಇವಿ ಮಾದರಿಯನ್ನು ಇದೀಗ ಗ್ರಾಹಕರು ತಮ್ಮ ಬಜೆಟ್‌ಗೆ ಅನುಗುಣವಾಗಿ ನೆಕ್ಸಾನ್ ಇವಿ ಅಥವಾ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಗಳನ್ನು ಖರೀದಿಸಬಹುದಾಗಿದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ನೆಕ್ಸಾನ್ ಇವಿ ಮಾದರಿಯಲ್ಲಿ ಬಳಕೆ ಮಾಡಲಾಗುತ್ತಿರುವ ಹೈ-ವೊಲ್ಟೆಜ್ ಆರ್ಕಿಟೆಕ್ಚರ್ ಪ್ರೇರಿತ ಜಿಪ್‌ಟ್ರಾನ್ ತಂತ್ರಜ್ಞಾನವು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಹೆಚ್ಚು ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳಿಂದ ಕೂಡಿದೆ.

ಪ್ರತಿ ಚಾರ್ಜ್‌ಗೆ 437 ಕಿ.ಮೀ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಇವಿ ಮ್ಯಾಕ್ಸ್ ಬಿಡುಗಡೆ

ಜಿಪ್‌ಟ್ರಾನ್ ತಂತ್ರಜ್ಞಾನವು ರೀಜನರೇಟಿವ್ ಬ್ರೇಕಿಂಗ್ ಸಿಸ್ಟಂ ಅಳವಡಿಕೆ ಹಿನ್ನಲೆಯಲ್ಲಿ ಕಾರು ಚಾಲನೆ ವೇಳೆ ನಿರ್ದಿಷ್ಟ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜಿಂಗ್ ಪ್ರಕ್ರಿಯೆಯು ಮರಳಿ ಪಡೆಯಬಹುದಾಗಿದ್ದು, ಇದೇ ಕಾರಣಕ್ಕೆ ಹೊಸ ತಂತ್ರಜ್ಞಾನವು ಬ್ಯಾಟರಿ ದೀರ್ಘಕಾಲದ ಬಾಳಿಕೆಗೆ ಸಹಕರಿಸಲಿದೆ.

More from DriveSpark

Article Published On: Wednesday, May 11, 2022, 13:24 [IST]
English summary
Tata nexon ev max launched at rs 17 74 lakh with 437km range details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+